Connect with us

ಚುನಾವಣೆ

ವಿಧಾನಪರಿಷತ್ ಚುನಾವಣೆ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ಗೆ ಬಿಗ್‌ ಶಾಕ್‌; ಆಗಿದ್ದೇನು?

Published

on

ಬೆಂಗಳೂರು: ಇದೇ ಜೂನ್ 13ಕ್ಕೆ ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಕೊನೆಗೂ ಬಿಜೆಪಿ ಟಿಕೆಟ್‌ ಘೋಷಣೆ ಮಾಡಿದೆ. ವಿಧಾನಸಭೆಯಲ್ಲಿರುವ ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿ ಮೂರು ಸ್ಥಾನವನ್ನು ಗೆಲ್ಲಬಹುದಾಗಿದೆ. ಈ ಹಿನ್ನೆಲೆಯಲ್ಲಿ ಇಂದು ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಟಿಕೆಟ್ ಪ್ರಕಟ ಮಾಡಿದೆ.

ಬಿಜೆಪಿ ಹೈಕಮಾಂಡ್ ಮಾಜಿ ಸಚಿವ ಸಿ.ಟಿ ರವಿ, ಎನ್. ರವಿಕುಮಾರ್ ಹಾಗೂ ಎಂ.ಜಿ ಮುಳೆ ಅವರಿಗೆ ಟಿಕೆಟ್ ನೀಡಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಸಿ.ಟಿ ರವಿ ಸೋತಿದ್ದರು. ಇದೇ ಮೊದಲ ಬಾರಿಗೆ ಸಿ.ಟಿ ರವಿ ಅವರು ವಿಧಾನಪರಿಷತ್‌ಗೆ ಪ್ರವೇಶ ಮಾಡಲಿದ್ದಾರೆ.

.ಟಿ ರವಿಗೆ ವಿಪಕ್ಷ ನಾಯಕ ಸ್ಥಾನ?
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ವಿಧಾನಪರಿಷತ್ ವಿಪಕ್ಷ ನಾಯಕರಾಗಿದ್ದ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಸ್ಪರ್ಧಿಸಿದ್ದಾರೆ. ಕೋಟಾ ಶ್ರೀನಿವಾಸ್ ಪೂಜಾರಿ ಅವರು ಚುನಾವಣೆಯಲ್ಲಿ ಗೆದ್ದರೆ ವಿಪಕ್ಷ ನಾಯಕನ ಸ್ಥಾನ ತೆರವಾಗಲಿದೆ. ಸಿ.ಟಿ ರವಿ ಅವರ ಮೂಲಕ ಆ ಸ್ಥಾನ ತುಂಬಲು ಬಿಜೆಪಿ ಪ್ಲಾನ್ ಮಾಡಿದೆ. ಮೂಲಗಳ ಪ್ರಕಾರ ಸಿ.ಟಿ ರವಿ ಅವರನ್ನು ವಿಧಾನಪರಿಷತ್‌ ವಿಪಕ್ಷ ನಾಯಕನಾಗಿ ಮಾಡುವ ಸಾಧ್ಯತೆ ಇದೆ.
ಒಕ್ಕಲಿಗ ಕೋಟಾದಲ್ಲಿ ಸಿ.ಟಿ ರವಿ ಅವರಿಗೆ ಟಿಕೆಟ್ ನೀಡಿದ್ರೆ ಒಬಿಸಿ ವರ್ಗದಲ್ಲಿ ಎನ್. ರವಿಕುಮಾರ್‌ ಅವರಿಗೆ ಎರಡನೇ ಬಾರಿ ವಿಧಾನಪರಿಷತ್ ಟಿಕೆಟ್ ನೀಡಲಾಗಿದೆ. ರವಿಕುಮಾರ್ ಅವರು ಸದ್ಯ ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕರಾಗಿದ್ದಾರೆ. ಮೂರನೇ ಟಿಕೆಟ್ ಅನ್ನು ಬಿಜೆಪಿ ಹೈಕಮಾಂಡ್‌ ಮರಾಠ ಸಮುದಾಯದ ನಾಯಕ ಎಂ.ಜಿ ಮುಳೆ ಅವರಿಗೆ ನೀಡಿದೆ. ಎಂ.ಜಿ ಮೂಳೆ ಅವರು ಬಸವ ಕಲ್ಯಾಣ ಕ್ಷೇತ್ರದ ಮಾಜಿ ಶಾಸಕ ಮತ್ತು ಮರಾಠಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರು ಆಗಿದ್ದರು. ಮೂಳೆ ಅವರು ಈ ಮೊದಲು ಜೆಡಿಎಸ್‌ನಲ್ಲಿದ್ದು, ಕಳೆದ ಉಪಚುನಾವಣೆಯಲ್ಲಿ ಬಿಜೆಪಿ ಸೇರಿದ್ದರು. ಮರಾಠ ಸಮುದಾಯವನ್ನು ಸೆಳೆಯಲು ಮಾರುತಿರಾವ್ ಮುಳೆಗೆ ಪರಿಷತ್ ಟಿಕೆಟ್ ನೀಡಿದೆ ಎನ್ನಲಾಗಿದೆ.

ಸುಮಲತಾ ಅಂಬರೀಶ್‌ಗೆ ಬಿಗ್‌ ಶಾಕ್‌!
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಗೆ ಒಪ್ಪಿಗೆ ಸೂಚಿಸಿದ್ದ ಸಂಸದೆ ಸುಮಲತಾ ಅಂಬರೀಶ್ ಮಂಡ್ಯ ಚುನಾವಣೆಯ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು. ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರಿಗೆ ಮಂಡ್ಯ ಟಿಕೆಟ್ ನೀಡದೆ ಜೆಡಿಎಸ್‌‌ಗೆ ಬಿಟ್ಟುಕೊಡಲಾಗಿತ್ತು. ಈ ತ್ಯಾಗದ ಹಿನ್ನೆಲೆಯಲ್ಲಿ ವಿಧಾನಪರಿಷತ್‌ಗೆ ಸುಮಲತಾ ಅಂಬರೀಶ್ ಆಯ್ಕೆ ಬಗ್ಗೆ ಚರ್ಚೆಯಾಗಿತ್ತು. ಆದ್ರೆ ಸುಮಲತಾ ಅಂಬರೀಶ್ ಅವರಿಗೆ ವಿಧಾನಪರಿಷತ್ ಚುನಾವಣೆಯ ಟಿಕೆಟ್ ಕೈ ತಪ್ಪಿದೆ.

ಚುನಾವಣೆ

“ಟ್ರಂಪ್ ಅನುಮತಿ ಇಲ್ಲದೆ ತೈಲ ಖರೀದಿ ಸಾಧ್ಯವಿಲ್ಲ”: ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

Published

on

By

ಅಸ್ಸಾಂ ರಾಜ್ಯದ ಗೋಲಾಘಾಟ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕುರಿತು ಉಲ್ಲೇಖಿಸಿದ ಅವರು, “ಟ್ರಂಪ್ ಅನುಮತಿ ಇಲ್ಲದೆ ಭಾರತ ಯಾವುದೇ ದೇಶದಿಂದ ತೈಲ ಖರೀದಿಸಲು ಸಾಧ್ಯವಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಆರೋಪಿಸಿದರು.

ರ‍್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಟ್ರಂಪ್ ಬಹಿರಂಗವಾಗಿ ಮೋದಿ ಬಗ್ಗೆ ಹೇಳಿಕೆ ನೀಡಿದ್ದಾರೆ. ನರೇಂದ್ರ ಮೋದಿ ಭಾರತದ ಇಂಧನ ಭದ್ರತೆ ಮತ್ತು ಪ್ರಮುಖ ಮಾಹಿತಿಯನ್ನು ಅಮೆರಿಕದ ಕೈಗೆ ಒಪ್ಪಿಸಿದ್ದಾರೆ,” ಎಂದು ಗಂಭೀರ ಆರೋಪ ಮಾಡಿದರು.

ಇದೇ ವೇಳೆ ಅವರು ಎಪ್ಸ್ಟೀನ್ ಫೈಲ್ ಕುರಿತು ಉಲ್ಲೇಖಿಸಿ, ಟ್ರಂಪ್ ಬಳಿ ಮೋದಿ ಬಗ್ಗೆ ಮಾಹಿತಿಯಿದೆ ಎಂದು ಹೇಳಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ. ಜೊತೆಗೆ, ಉದ್ಯಮಿ ಅದಾನಿ ವಿರುದ್ಧ ಅಮೆರಿಕದಲ್ಲಿ ಪ್ರಕರಣ ದಾಖಲಾಗಿರುವುದನ್ನೂ ಅವರು ಪ್ರಸ್ತಾಪಿಸಿದರು.

ಈ ನಡುವೆ ದೇಶದ ವಿವಿಧ ರಾಜ್ಯಗಳಲ್ಲಿ ಚುನಾವಣೆ ಸನ್ನಾಹಗಳು ಜೋರಾಗಿದ್ದು, ಅಸ್ಸಾಂ ಸೇರಿದಂತೆ ಹಲವೆಡೆ ರಾಜಕೀಯ ತಾಪಮಾನ ಏರಿಕೆಯಾಗಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಟಿಎಂಸಿ ಪ್ರಚಾರ ತೀವ್ರಗೊಳಿಸಿದ್ದು, ಬಿಜೆಪಿ ಕೂಡ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ತೀವ್ರ ಪ್ರಚಾರ ನಡೆಸುತ್ತಿದೆ.

ಒಟ್ಟಿನಲ್ಲಿ, ಈ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಬಿಜೆಪಿ-ಕಾಂಗ್ರೆಸ್ ನಡುವಿನ ಮಾತಿನ ಸಮರ ಮತ್ತಷ್ಟು ತೀವ್ರಗೊಳ್ಳುವ ಸೂಚನೆ ನೀಡಿದೆ.

Continue Reading

ಚುನಾವಣೆ

TN 2026 ಟೀಸರ್‌ಗೆ ರಾಜಕೀಯ ಕಿಚ್ಚು! ವಿಜಯ್ ಟಾರ್ಗೆಟ್ ಆರೋಪ – ತಮಿಳುನಾಡಿನಲ್ಲಿ ಬಿಗುವಿನ ವಾತಾವರಣ

Published

on

By

ಚೆನ್ನೈ: ಮುಂದಿನ ವಾರ ಬಿಡುಗಡೆಯಾಗಲಿರುವ ತಮಿಳು ಸಿನಿಮಾ TN 2026 – ತಂಗೈ ನಚ್ಚಥಿರಂ ಟೀಸರ್ ಏಪ್ರಿಲ್ 2ರಂದು ಬಿಡುಗಡೆಯಾದ ಬಳಿಕ ಭಾರೀ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಟೀಸರ್‌ನಲ್ಲಿ ನಟ Nataraj (Natti) ಅಭಿನಯಿಸಿರುವ “ಗೋಲ್ಡನ್ ಸ್ಟಾರ್ ಗುಲ್ಕಂದ್ ಕುಮಾರ್” ಎಂಬ ಪಾತ್ರ ರಾಜಕೀಯಕ್ಕೆ ಪ್ರವೇಶಿಸುವುದನ್ನು ತೋರಿಸಲಾಗಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗಿದೆ.

ಟೀಸರ್ ವೈರಲ್ ಆದ ತಕ್ಷಣ, Tamilaga Vettri Kazhagam (ಟಿವಿಕೆ) ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ನಟ Vijay ಅವರನ್ನು ಗುರಿಯಾಗಿಸಿಕೊಂಡು ಟೀಸರ್ ರೂಪಿಸಲಾಗಿದೆ ಎಂಬುದು ಅವರ ಆರೋಪವಾಗಿದೆ.

ಟೀಸರ್‌ನಲ್ಲಿ ಗುಲ್ಕಂದ್ ಕುಮಾರ್ ಪಾತ್ರವು ಬಿಳಿ ಶರ್ಟ್ ಮತ್ತು ಖಾಕಿ ಪ್ಯಾಂಟ್ ಧರಿಸಿ, ವಿಜಯ್ ಅವರಂತೆಯೇ ‘ಸಾಲ್ಟ್ ಅಂಡ್ ಪೆಪ್ಪರ್’ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ಜೊತೆಗೆ ಅವರ ನಡಿಗೆ ಮತ್ತು ಜನರತ್ತ ಕೈ ಬೀಸುವ ಶೈಲಿಯನ್ನು ಅನುಕರಿಸಿರುವುದು ವಿವಾದಕ್ಕೆ ಪ್ರಮುಖ ಕಾರಣವಾಗಿದೆ. ಅಲ್ಲದೆ, ನಟ Redin Kingsley ಅವರ ಪಾತ್ರವೊಂದು ವೇದಿಕೆಯಲ್ಲಿ “ಹೇ ಮೂವಿ-ಬಾಯ್…” ಎಂದು ಗೇಲಿ ಮಾಡುವ ಸಂಭಾಷಣೆ ಕೂಡ ಟೀಕೆಗೆ ಗುರಿಯಾಗಿದೆ.

ಟೀಸರ್ ಕೊನೆಯಲ್ಲಿ ಕೇಳಿಬರುವ “ಓಂ ಶಕ್ತಿ ಪರಾಶಕ್ತಿ” ಘೋಷಣೆ ಕೂಡ ವಿಜಯ್ ಇತ್ತೀಚೆಗೆ ರಾಜಕೀಯ ವೇದಿಕೆಯಲ್ಲಿ ಬಳಸಿದ ನುಡಿಗಟ್ಟನ್ನು ಹೋಲುತ್ತದೆ ಎನ್ನಲಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಟಿವಿಕೆ ನಾಯಕ Aadhav Arjun, “ಇದು ವಿಜಯ್ ವರ್ಚಸ್ಸಿಗೆ ಧಕ್ಕೆ ತರಲು Dravida Munnetra Kazhagam (ಡಿಎಂಕೆ) ಮತ್ತು ಬಿಜೆಪಿ ಜಂಟಿಯಾಗಿ ನಡೆಸಿದ ಪಿತೂರಿ” ಎಂದು ಆರೋಪಿಸಿದ್ದಾರೆ. ಜನರು ಇಂತಹ ಚಿತ್ರಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದೂ ಅವರು ಕಿಡಿಕಾರಿದ್ದಾರೆ.

Umapathy Ramaiah ನಿರ್ದೇಶನದ ಈ ಚಿತ್ರದಲ್ಲಿ Thambi Ramaiah, M. S. Bhaskar, Ilavarasu, Yashika Aannand ಸೇರಿದಂತೆ ಹಲವು ನಟರು ಅಭಿನಯಿಸಿದ್ದಾರೆ. ಏಪ್ರಿಲ್ 10ರಂದು ಬಿಡುಗಡೆಯಾಗಲಿರುವ ಈ ಚಿತ್ರ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತದೆಯೇ ಎಂಬ ಕುತೂಹಲ ಹೆಚ್ಚಾಗಿದೆ.

Continue Reading

ಚುನಾವಣೆ

“ನಾಲ್ಕು ಮದುವೆಗೆ ಬ್ರೇಕ್” – ಶಾ ಘೋಷಣೆ ಸಂಚಲನ

Published

on

ಗುವಾಹಟಿ: ಅಸ್ಸಾಂ ವಿಧಾನಸಭೆ ಚುನಾವಣೆಯ ಕಾವು ತೀವ್ರಗೊಳ್ಳುತ್ತಿದ್ದಂತೆ, ಕೇಂದ್ರ ಗೃಹ ಸಚಿವ Amit Shah ಮಹತ್ವದ ಘೋಷಣೆ ಮಾಡಿದ್ದಾರೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ (UCC) ಜಾರಿಗೊಳಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಗೋಲ್ಪಾರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಶಾ, “ಅಕ್ರಮ ನುಸುಳುಕೋರರು ನಾಲ್ಕು ಮದುವೆಯಾಗುವುದನ್ನು ತಡೆಯಲು ಯುಸಿಸಿ ಅಗತ್ಯ. ನಾವು ಮತ್ತೆ ಅಧಿಕಾರಕ್ಕೆ ಬಂದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದರು. ಪ್ರಧಾನಿ Narendra Modi ಮತ್ತು ಅಸ್ಸಾಂ ಮುಖ್ಯಮಂತ್ರಿ Himanta Biswa Sarma ಬುಡಕಟ್ಟು ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಿದ್ದಾರೆ ಎಂದರು.

ಬುಡಕಟ್ಟು ಪ್ರದೇಶಗಳಲ್ಲಿ ಯುಸಿಸಿ ಜಾರಿಯಾಗುವುದಿಲ್ಲ ಎಂಬುದನ್ನು ಶಾ ಸ್ಪಷ್ಟಪಡಿಸಿ, ಕಾಂಗ್ರೆಸ್ ಹರಡುತ್ತಿರುವ ಗಾಳಿಸುದ್ದಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. “ಬುಡಕಟ್ಟು ಪ್ರದೇಶಗಳನ್ನು ಯುಸಿಸಿಯಿಂದ ಹೊರಗಿಡಲಾಗುತ್ತದೆ” ಎಂದು ಹೇಳಿದರು.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, “70 ವರ್ಷ ಆಡಳಿತ ನಡೆಸಿದರೂ ಬುಡಕಟ್ಟು ಮಹಿಳೆಯನ್ನು ರಾಷ್ಟ್ರಪತಿಯಾಗಿಸಲು ಸಾಧ್ಯವಾಗಲಿಲ್ಲ. ಆದರೆ ಮೋದಿ ನಾಯಕತ್ವದಲ್ಲಿ ಅದು ಸಾಧ್ಯವಾಯಿತು” ಎಂದು ಟೀಕಿಸಿದರು.

Assam ವಿಧಾನಸಭಾ ಚುನಾವಣೆ ಏಪ್ರಿಲ್ 9ರಂದು ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ. ಎರಡು ಅವಧಿಗೆ ಮುಖ್ಯಮಂತ್ರಿ ಆಗಿರುವ ಹಿಮಂತ ಬಿಸ್ವಾ ಶರ್ಮಾ ಮತ್ತೆ ಅಧಿಕಾರಕ್ಕೇರಲು ಯತ್ನಿಸುತ್ತಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರ ಮರುಪಡೆಯಲು ಹೋರಾಟ ನಡೆಸುತ್ತಿದೆ.

ಒಟ್ಟಿನಲ್ಲಿ, ಯುಸಿಸಿ ವಿಚಾರ ಚುನಾವಣೆಯಲ್ಲಿ ಪ್ರಮುಖ ಅಸ್ತ್ರವಾಗಿದ್ದು, ಅಸ್ಸಾಂ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

Continue Reading

Trending