ದೇಶ
ದಸರಾ ಖ್ಯಾತಿಯ ಅಶ್ವತ್ಧಾಮ ಇನ್ನಿಲ್ಲ

ಮೈಸೂರು: ಎರಡು ಬಾರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ 38 ವರ್ಷದ ಅಶ್ವತ್ಧಾಮ ಆನೆಯು ಸೋಲಾರ್ ಬೇಲಿಯ ವಿದ್ಯುತ್ ಪ್ರವಹಿಸಿ ಮಂಗಳವಾರ ಮೃತಪಟ್ಟಿದೆ, ಹುಣಸೂರು-ಪಿರಿಯಾಪಟ್ಟಣ ತಾಲ್ಲೂಕಿನ ಗಡಿ ಭಾಗದ ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದ ಆನೆಯು ಆಹಾರ ಅರಸಿ ಕಾಡಿಗೆ ತೆರಳಿತ್ತು,
ಈ ವೇಳೆ ಸೋಲಾರ್ ಬೇಲಿ ಮೇಲೆ ವಿದ್ಯುತ್ ತಂತಿಯು ಬಿದ್ದಿದ್ದರಿಂದ ವಿದ್ಯುತ್ ಆಘಾತದಿಂದ ಮೃತಪಟ್ಟಿದೆ ಎಂದು ಅರಣ್ಯ ಇಲಾಕೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ,