ದೇಶ
GST ಪ್ರವಾಸೋದ್ಯಮವನ್ನು ಕೊಲ್ಲುತ್ತಿದೆ: Tourism ಗೆ ರಾಜ್ಯದಲ್ಲಿ ಶೀಘ್ರವೇ ಹೊಸ ನೀತಿ; ಡಿ.ಕೆ ಶಿವಕುಮಾರ್
ಬೆಂಗಳೂರು: ಕರ್ನಾಟಕ ಸರ್ಕಾರ ಪ್ರವಾಸೋದ್ಯಮದ ಅಭಿವೃದ್ದಿಗೆ ಬದ್ದವಾಗಿದ್ದು, ಹೆಚ್ಚು ಬಂಡವಾಳ ಹೂಡಿಕೆದಾರರ ಆಕರ್ಷಣೆಗೆ ಪ್ರವಾಸೋದ್ಯಮ ನೀತಿ ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ ಕೆಸಿಸಿಐ) ಮತ್ತು ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ದಕ್ಷಿಣ ಭಾರತ ಉತ್ಸವ ಕಾರ್ಯಕ್ರಮದಲ್ಲಿ ಶನಿವಾರ ಭಾಗವಹಿಸಿ ಮಾತನಾಡಿದ ಅವರು, ಶೇ.18 ಕ್ಕೂ ಹೆಚ್ಚಿನ ಜಿಎಸ್ ಟಿ ಪ್ರವಾಸೋದ್ಯಮವನ್ನು ಕೊಲ್ಲುತ್ತಿದೆ. ದಕ್ಷಿಣ ಭಾರತೀಯರಾದ ನಾವು ಇದರ ಬಗ್ಗೆ ಸರ್ಕಾರ ಎಚ್ಚೆತ್ತುಕೊಳ್ಳುವಂತೆ ಮಾಡಬೇಕು. ಬ್ಯಾಂಕ್ ಬಡ್ಡಿ ದರ, ಇತರೇ ತೆರಿಗೆಗಳು ಸೇರಿ ಅರ್ಧಕ್ಕೂ ಹೆಚ್ಚು ಹಣ ಕಳೆದುಕೊಂಡರೆ ಹೂಡಿಕೆದಾರರು ಪ್ರವಾಸೋದ್ಯಮದ ಕಡೆ ಗಮನ ಹರಿಸುವುದಿಲ್ಲ. ಆದ ಕಾರಣ ಹೂಡಿಕೆದಾರ ಸ್ನೇಹಿ ವಾತಾವರಣ ನಿರ್ಮಾಣ ಮಾಡಬೇಕು.
ಪ್ರವಾಸೋಧ್ಯಮ ಕ್ಷೇತ್ರಕ್ಕೆ ಹೂಡಿಕೆ ಮಾಡುವವರು ತಮ್ಮ ಬೇಡಿಕೆಗಳನ್ನುಲಿಖಿತ ರೂಪದಲ್ಲಿ ಸರ್ಕಾರಕ್ಕೆ ಸಲ್ಲಿಸಿ. ನಿಮ್ಮ ಜೊತೆ ಸರ್ಕಾರ ಇರುತ್ತದೆ. ಹೂಡಿಕೆದಾರರಿಗೆ ಕೇವಲ ಸಹಾಯಧನ ನೀಡಿದರೆ ಸಾಲುವುದಿಲ್ಲ. ಉದಾಹರಣೆಗೆ ಕರಾವಳಿ ಪ್ರದೇಶದ ಹೋಟೆಲ್ ಗಳಿಗೆ 10 ವರ್ಷಗಳ ಕಾಲ ಆಸ್ತಿ ತೆರಿಗೆ ವಿನಾಯಿತಿ ನೀಡಿದರೆ ಒಂದಷ್ಟು ಬೆಂಬಲ ನೀಡಿದಂತೆ ಆಗುತ್ತದೆ. ಒಟ್ಟಿಗೆ ಸೇರಿ ಹೆಜ್ಜೆ ಗುರುತು ನಿರ್ಮಾಣ ಮಾಡೋಣ ಎಂದರು. ಪ್ರವಾಸೋದ್ಯಮ ನೀತಿಯಿಂದ ಹೆಚ್ಚು ಬಂಡವಾಳ ಹೂಡಿಕೆದಾರರನ್ನು ಸೆಳೆಯಬಹುದು. ಕೈಗಾರಿಕೋದ್ಯಮಿಗಳು ಬಲಗೊಂಡಷ್ಟು ಸರ್ಕಾರವು ಬಲಗೊಳ್ಳುತ್ತದೆ. ಏಕೆಂದರೆ ನಿಮ್ಮಿಂದ ಉದ್ಯೋಗ ಸೃಷ್ಟಿಯಾಗುತ್ತದೆ. ಆಂಧ್ರ ತಮಿಳುನಾಡು, ಪಾಂಡಿಚೇರಿ, ತೆಲಂಗಾಣದಿಂದ ಬಂದಿರುವ ಪ್ರತಿನಿಧಿಗಳು ನಿಮ್ಮ ಅನುಭವಗಳನ್ನು ಇಲ್ಲಿ ಹಂಚಿಕೊಳ್ಳಬೇಕು. ಕರ್ನಾಟಕ ರಾಜ್ಯ 300 ಕಿ.ಮೀ ಹೆಚ್ಚು ಕರಾವಳಿ ಪ್ರದೇಶ ಹೊಂದಿದೆ. ಈ ಮೂಲಕ ಸಾಗರೋತ್ತರ ಉದ್ದಿಮೆಯ ಅಭಿವೃದ್ಧಿಗೆ ನಿಮ್ಮ ಸಲಹೆ ನೀಡಿ ಎಂದು ಕರೆ ನೀಡಿದರು.
ನೀರಾವರಿ ಹಾಗೂ ಬೆಂಗಳೂರು ಅಭಿವೃದ್ದಿ ಸಚಿವನಾಗಿ ನನ್ನ ಕಾರ್ಯಕ್ಷೇತ್ರಗಳ ಅಭಿವೃದ್ದಿಗೆ ಸಲಹೆ ಸೂಚನೆಗಳನ್ನು ನಾನು ನಿರೀಕ್ಷೆ ಮಾಡುತ್ತೇನೆ. ಬೆಂಗಳೂರು ಐಟಿ, ಬಿಟಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಸದೃಢವಾಗಿದೆ. ಇದರ ಜೊತೆಗೆ ಬೆಂಗಳೂರು ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರನ್ನು ಸೆಳೆಯಲು ಕಾರ್ಯಸೂಚಿ ಸಿದ್ಧಪಡಿಸಬೇಕು ಎಂದು ತಿಳಿಸಿದರು.
ಈ ಹಿಂದೆ ಕಬ್ಬನ್ ಪಾರ್ಕ್, ಲಾಲ್ ಬಾಗ್ ಪ್ರವಾಸಿಗರನ್ನು ಸೆಳೆಯುತ್ತಿದ್ದವು. ಈಗ ಹೊಸ ಪೀಳಿಗೆಗೆ ಹೊಸತನ್ನು ನೀಡಬೇಕಿದೆ. ಈ ಕಾರಣಕ್ಕೆ ಸ್ಕೈ ಡೆಕ್ ನಿರ್ಮಾಣಕ್ಕೆ ಯೋಜನೆ ಹಾಕಿಕೊಂಡಿದ್ದೇವೆ. ಪ್ರಸಿದ್ಧವಾದ ಅನೇಕ ನಗರಗಳಲ್ಲಿ ಎತ್ತರವಾದ ಗೋಪುರಗಳು ಆಕರ್ಷಣೀಯ ಕೇಂದ್ರಗಳಿವೆ. ಅದರಂತೆ ಬೆಂಗಳೂರಿನಲ್ಲೂ ಇರಲಿ ಎಂದು ಈ ಯೋಜನೆ ಮಾಡಲಾಗಿದೆ. ಮುಂದಿನ 8- 10 ದಿನಗಳಲ್ಲಿ ಟೆಂಡರ್ ಕರೆಯಲಾಗುವುದು.
ಬೃಂದಾವನ ಉದ್ಯಾನವನ್ನು ಡಿಸ್ನಿ ಲ್ಯಾಂಡ್ ಮಾದರಿಯಲ್ಲಿ ಅಭಿವೃದ್ದಿ ಪಡಿಸಲಾಗುವುದು. ಇದಕ್ಕೆ ಕಳೆದ ಬಜೆಟ್ ಅಲ್ಲೂ ಅನುದಾನ ನೀಡಲು ತೀರ್ಮಾನ ಮಾಡಲಾಗಿದೆ.
ಬೆಂಗಳೂರು ಅಂತರರಾಷ್ಟ್ರೀಯ ಮಟ್ಟಕ್ಕೆ ಬೆಳೆಯುತ್ತದೆ ಎಂದು ಊರು ಕಟ್ಟಿದ ಕೆಂಪೇಗೌಡರಿಗೆ ಗೊತ್ತಿರಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬ್ರಾಂಡ್ ಬೆಂಗಳೂರು ಯೋಜನೆಯ ಅಡಿ ಕಸ, ನೀರು, ರಸ್ತೆ, ಮೂಲ ಸೌಕರ್ಯ, ಟ್ರಾಫಿಕ್ ಸೇರಿದಂತೆ ಅನೇಕ ಸಮಸ್ಯೆಗಳ ನಿವಾರಣೆಗೆ ಸಾಕಷ್ಟು ಯೋಜನೆ ಹಾಕಿಕೊಂಡಿದ್ದೇವೆ.
ಕ್ರೀಡೆ
ICC Men’s T20 World Cup: ಸಲ್ಮಾನ್ ಆಘಾ ನಿಗೂಢ ಉತ್ತರ: ಕೈಕುಲುಕುವರಾ ಆಟಗಾರರು?
ಕೊಲೊಂಬೋ: ಮಹಾಶಿವರಾತ್ರಿಯ ದಿನ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಟಿ20 ವಿಶ್ವಕಪ್ ಲೀಗ್ ಹಂತದ ಮಹತ್ವದ ಪಂದ್ಯ ನಡೆಯಲಿದೆ. R. Premadasa Stadium ನಲ್ಲಿ ನಡೆಯಲಿರುವ ಈ ಹೈವೊಲ್ಟೇಜ್ ಸಮರಕ್ಕೂ ಮುನ್ನ, ಎರಡು ತಂಡಗಳ ಆಟಗಾರರು ಹ್ಯಾಂಡ್‌ಶೇಕ್ ಮಾಡುತ್ತಾರೆಯೇ ಎಂಬ ಪ್ರಶ್ನೆ ಕುತೂಹಲ ಹುಟ್ಟಿಸಿದೆ.
ಪ್ರೀಮ್ಯಾಚ್ ಕಾನ್ಫರೆನ್ಸ್‌ನಲ್ಲಿ ಮಾತನಾಡಿದ ಪಾಕಿಸ್ತಾನ ತಂಡದ ನಾಯಕ Salman Ali Agha, ಹ್ಯಾಂಡ್‌ಶೇಕ್ ವಿಚಾರಕ್ಕೆ ಸ್ಪಷ್ಟ ಉತ್ತರ ನೀಡಲಿಲ್ಲ. “ನಾಳೆಯ ಪಂದ್ಯವನ್ನು ಕ್ರೀಡಾಸ್ಫೂರ್ತಿಯಿಂದ ಆಡುತ್ತೇವೆ. ವೈಯಕ್ತಿಕ ವಿಚಾರ ಮುಖ್ಯವಲ್ಲ” ಎಂದು ಹೇಳುವ ಮೂಲಕ ಅವರು ನಿಗೂಢ ಉತ್ತರ ನೀಡಿದ್ದಾರೆ.
ಭಾರತ–ಪಾಕಿಸ್ತಾನ ಪಂದ್ಯವೆಂದರೆ ಕೇವಲ ಕ್ರಿಕೆಟ್ ಮಾತ್ರವಲ್ಲ, ಭಾವನೆಗಳ ಹೋರಾಟವೂ ಹೌದು. ಹೀಗಾಗಿ ಹ್ಯಾಂಡ್‌ಶೇಕ್‌ನಂತಹ ಸಣ್ಣ ವಿಷಯವೂ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗುತ್ತದೆ.
ಇದಕ್ಕೂ ಮುನ್ನ ನಡೆದ Asia Cup ವೇಳೆ, ಭಾರತೀಯ ಆಟಗಾರರು ಪಾಕ್ ಆಟಗಾರರೊಂದಿಗೆ ಹ್ಯಾಂಡ್‌ಶೇಕ್ ಮಾಡಲು ನಿರಾಕರಿಸಿದ್ದರೆಂಬ ವಿಚಾರ ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೇ, ಪಿಸಿಬಿ ಅಧ್ಯಕ್ಷ Mohsin Naqvi ಅವರಿಂದ ಟ್ರೋಫಿ ಸ್ವೀಕರಿಸದ ಘಟನೆಗೂ ವಿವಾದ ಸೃಷ್ಟಿಯಾಗಿತ್ತು.
ಇದೀಗ ಕೊಲೊಂಬೋದಲ್ಲಿ ಎರಡು ತಂಡಗಳ ಅಭ್ಯಾಸ ವೇಳಾಪಟ್ಟಿಯೂ ಪ್ರಕಟವಾಗಿದೆ. ಮಧ್ಯಾಹ್ನ 2ರಿಂದ 5ರವರೆಗೆ ಪಾಕಿಸ್ತಾನ ತಂಡ ಅಭ್ಯಾಸ ನಡೆಸಲಿದ್ದು, ಸಂಜೆ 6ರಿಂದ 9ರವರೆಗೆ ಭಾರತ ತಂಡ ಅಭ್ಯಾಸ ನಡೆಸಲಿದೆ. ಭಾರತ ತಂಡಕ್ಕೆ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ಲಭಿಸಿದ್ದು, ಅಭಿಮಾನಿಗಳ ಉತ್ಸಾಹ ಗಮನ ಸೆಳೆದಿದೆ.
ಹ್ಯಾಂಡ್‌ಶೇಕ್ ಆಗುತ್ತದೆಯೇ ಎಂಬುದಕ್ಕಿಂತ ಮೈದಾನದಲ್ಲಿನ ಪ್ರದರ್ಶನವೇ ಅಂತಿಮ ಉತ್ತರ ನೀಡಲಿದೆ
ದೇಶ
ಸಾಧನಾ ಸಮಾವೇಶದಲ್ಲಿ ಸಿಎಂ ಗರ್ಜನೆ: ಕರ್ನಾಟಕ ಜಿಡಿಪಿ ದೇಶದಲ್ಲೇ ನಂಬರ್ ಒನ್
ಹಾವೇರಿ, ಫೆ.14: ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷಾಂತರ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡುತ್ತಿದ್ದೇವೆ. ಈಗಾಗಲೇ 2.20 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಿ ದಾಖಲೆ ನಿರ್ಮಿಸಿದ್ದೇವೆ ಎಂದು ಮುಖ್ಯಮಂತ್ರಿ Siddaramaiah ಘೋಷಿಸಿದರು.
ಜಿಲ್ಲಾಡಳಿತ ಮತ್ತು ಕಂದಾಯ ಇಲಾಖೆ ಸಹಯೋಗದಲ್ಲಿ ನಡೆದ ಸರ್ಕಾರದ ಸಹಸ್ರ ದಿನಾಚರಣೆ ಹಾಗೂ ಸಾಧನಾ ಸಮಾವೇಶದಲ್ಲಿ 1 ಲಕ್ಷ ಮಂದಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಮಾತನಾಡಿದ ಅವರು, ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್ ಸ್ಥಾನದಲ್ಲಿದೆ ಎಂದು ಹೇಳಿದರು.
ಕಂದಾಯ ಸಚಿವ Krishna Byre Gowda ನೇತೃತ್ವದಲ್ಲಿ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ ಕಂಡಿದೆ ಎಂದು ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು. ಜಿಎಸ್‌ಟಿ ಸಂಗ್ರಹದಲ್ಲೂ ರಾಜ್ಯ ವೇಗವಾಗಿ ಮುನ್ನಡೆಯುತ್ತಿದೆ ಎಂದು ಅಂಕಿಅಂಶಗಳನ್ನು ಉಲ್ಲೇಖಿಸಿದರು.
ಕೇಂದ್ರ ಸರ್ಕಾರದಿಂದ ಅನ್ಯಾಯವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಸಿಎಂ, ಮಾಜಿ ಮುಖ್ಯಮಂತ್ರಿ Basavaraj Bommai ಹಾಗೂ ಕೇಂದ್ರ ಸಚಿವ Pralhad Joshi ಸೇರಿದಂತೆ ಬಿಜೆಪಿ ನಾಯಕರು ರಾಜ್ಯದ ಪರವಾಗಿ ಧ್ವನಿ ಎತ್ತುತ್ತಿಲ್ಲ ಎಂದು ಆರೋಪಿಸಿದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ 9 ತಿಂಗಳು ಕಳೆದಿದ್ದು, 243 ಭರವಸೆಗಳನ್ನು ಈಡೇರಿಸಿದ್ದೇವೆ. ಗ್ಯಾರಂಟಿ ಯೋಜನೆಗಳ ಮೂಲಕ ₹1,18,000 ಕೋಟಿ ನೇರವಾಗಿ ಜನರ ಖಾತೆಗೆ ಜಮಾ ಮಾಡಲಾಗಿದೆ ಎಂದು ಹೇಳಿದರು.
ಆರ್ಥಿಕ ತಜ್ಞರಾದ Amartya Sen ಮತ್ತು Abhijit Banerjee ಸೇರಿದಂತೆ ಹಲವರು ರಾಜ್ಯದ ಜನಪರ ಯೋಜನೆಗಳಿಗೆ ಸದಾಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಸಿಎಂ ಹೇಳಿದರು.
ಕೇಂದ್ರದಿಂದ ಜಿಎಸ್‌ಟಿ ಪಾಲಿನಲ್ಲಿ 12–15 ಸಾವಿರ ಕೋಟಿ ರೂ. ನಷ್ಟವಾಗಿದ್ದು, ಜಲ ಜೀವನ್ ಮಿಷನ್ (JJM) ಅನುದಾನದಲ್ಲೂ ಸುಮಾರು 15 ಸಾವಿರ ಕೋಟಿ ಬಾಕಿ ಇದೆ. ನ್ಯಾಯಯುತ ಪಾಲು ದೊರೆತರೆ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ಸಿಗಲಿದೆ ಎಂದು ತಿಳಿಸಿದರು.
“ನುಡಿದಂತೆ ನಡೆದು” ಆಡಳಿತ ನೀಡಿರುವುದು ಕಾಂಗ್ರೆಸ್ ಸರ್ಕಾರ ಮಾತ್ರ. ಎಲ್ಲ ಜಾತಿ, ಧರ್ಮ, ಭಾಷೆಯ ಜನರನ್ನು ಒಳಗೊಂಡ ಸಮಾನತೆಯ ಅಭಿವೃದ್ಧಿಗೆ ನಮ್ಮ ಬದ್ಧತೆ ಮುಂದುವರಿಯಲಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು ಹಾಗೂ ಮುಖಂಡರು ಉಪಸ್ಥಿತರಿದ್ದರು.
ದೇಶ
ಹಂಪಿ ಉತ್ಸವದಲ್ಲಿ ಮಕ್ಕಳ ಕನಸು ನನಸು: Zameer Ahmed Khan ಉಚಿತ ಹೆಲಿಕಾಪ್ಟರ್ ರೈಡ್ ವ್ಯವಸ್ಥೆ
ಬಳ್ಳಾರಿ: ವಿಶ್ವ ಪ್ರಸಿದ್ಧ Hampi Utsav ವೇಳೆ ಸರ್ಕಾರಿ ಶಾಲಾ ಮಕ್ಕಳಿಗೆ ಅಚ್ಚರಿ ಉಡುಗೊರೆಯಾಗಿ ಜಿಲ್ಲಾ ಉಸ್ತುವಾರಿ ಸಚಿವ Zameer Ahmed Khan ಉಚಿತ ಹೆಲಿಕಾಪ್ಟರ್ ರೈಡ್ ವ್ಯವಸ್ಥೆ ಮಾಡಿದರು. 60ಕ್ಕೂ ಹೆಚ್ಚು ವಿದ್ಯಾರ್ಥಿಗಳ ಹೆಲಿಕಾಪ್ಟರ್ ಪ್ರಯಾಣದ ಕನಸು ಈ ಮೂಲಕ ಸಾಕಾರವಾಯಿತು.
ಕಮಲಾಪುರದ Mayura Hotel ಆವರಣದಲ್ಲಿ ‘ಬೈ ಸ್ಕೈ’ ವೀಕ್ಷಣೆಗೆ ಬಂದಿದ್ದ ಮಕ್ಕಳ ಆಸೆ ಗಮನಿಸಿದ ಸಚಿವರು, “ನೀವೂ ಹೆಲಿಕಾಪ್ಟರ್‌ನಲ್ಲಿ ಹೋಗಬೇಕಾ?” ಎಂದು ಪ್ರಶ್ನಿಸಿದರು. ಮಕ್ಕಳು ಉತ್ಸಾಹದಿಂದ “ಹೌದು ಸರ್” ಎಂದು ಪ್ರತಿಕ್ರಿಯಿಸಿದರು.
ತಕ್ಷಣವೇ ತಮ್ಮ ಸ್ವಂತ ಖರ್ಚಿನಲ್ಲಿ ಯೂನಿಫಾರ್ಮ್‌ನಲ್ಲಿದ್ದ ಎಲ್ಲಾ ಮಕ್ಕಳಿಗೆ ಹೆಲಿಕಾಪ್ಟರ್ ರೈಡ್ ವ್ಯವಸ್ಥೆ ಮಾಡಿಸಿದರು. ಆಕಾಶಕ್ಕೆ ಹಾರಿದ ಮಕ್ಕಳ ಸಂಭ್ರಮ, ಕೆಳಗಡೆ ನಿಂತಿದ್ದ ಪೋಷಕರ ಕಣ್ಣೀರಿನ ಸಂತೋಷ ಕ್ಷಣಗಳನ್ನು ಸೃಷ್ಟಿಸಿತು.
ಹಂಪಿ ಉತ್ಸವದ ಸಾಂಸ್ಕೃತಿಕ ವೈಭವದ ನಡುವೆ ನಡೆದ ಈ ಮಾನವೀಯ ಕೃತ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
-
ಅಪರಾಧ13 hours agoಚಿಕ್ಕಬಳ್ಳಾಪುರದಲ್ಲಿ ಆರ್ಟಿಓ ಇನ್ಸ್ಪೆಕ್ಟರ್ ಎಡವಟ್ಟು: ಅಧಿಕಾರ ವ್ಯಾಪ್ತಿ ಮೀರಿ ಪರಿಶೀಲನಾ ವರದಿ?
-
ದೇಶ13 hours agoPM Narendra Modi ಉದ್ಘಾಟಿಸಿದ ದೇಶದ ಮೊದಲ ಹೆದ್ದಾರಿ ತುರ್ತು ಲ್ಯಾಂಡಿಂಗ್ ಸೌಲಭ್ಯ
-
ದೇಶ13 hours agoImran Khan ಜೈಲು ವಿವಾದ: ದೃಷ್ಟಿ ಕಳೆದುಕೊಂಡರೆಂಬ ಆರೋಪ, ಸ್ಥಳಾಂತರಕ್ಕೆ ಘೋಷಣೆ
-
ದೇಶ9 hours agoBJP : ಮಹದೇಶ್ವರನ ಆಶೀರ್ವಾದಕ್ಕೆ ಹೆಜ್ಜೆ: ಶಶಿ ಕುಮಾರ್ ಕರೆ – ಯಶವಂತಪುರದಿಂದ ನೂರಾರು ಕಾರ್ಯಕರ್ತರು
-
ಕ್ರೀಡೆ13 hours agoTCS WORLD 10K ಬೆಂಗಳೂರು ಏಪ್ರಿಲ್ 26ರಂದು: ನೋಂದಣಿ ಆರಂಭ, USD 2.1 ಲಕ್ಷ ಬಹುಮಾನ
-
ಕ್ರೀಡೆ13 hours agoಕರ್ನಾಟಕ ಗ್ರಾಮೀಣ ಲೀಗ್ ಬಾಸ್ಕೆಟ್ಬಾಲ್ ಚಾಂಪಿಯನ್ಶಿಪ್: ಮರಿಯನ್ಸ್ ಬಿಸಿ ಚಿಕ್ಕಮಗಳೂರು ಚಾಂಪಿಯನ್
-
ಅಪರಾಧ14 hours ago‘ನಾನ್ ರುದ್ರನ್’ ವಿವಾದ: ಧನುಷ್ಗೆ ₹20 ಕೋಟಿ ಪರಿಹಾರ ಬೇಡಿಕೆ, ತೆನಾಂಡಲ್ ಫಿಲ್ಮ್ಸ್ ಕಾನೂನು ನೋಟಿಸ್
-
ದೇಶ8 hours agoಹಂಪಿ ಉತ್ಸವದಲ್ಲಿ ಮಕ್ಕಳ ಕನಸು ನನಸು: Zameer Ahmed Khan ಉಚಿತ ಹೆಲಿಕಾಪ್ಟರ್ ರೈಡ್ ವ್ಯವಸ್ಥೆ
