ಅಪರಾಧ
ಕೊಲೆ ಪ್ರಕರಣದಲ್ಲಿ ನಟ ದರ್ಶನ್ಗೆ ಸಂಕಷ್ಟ ಫಿಕ್ಸ್..! ಜೀವಾವಧಿ ಸೇರಿ ಯಾವ್ಯಾವ ಶಿಕ್ಷೆ..?
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣ ನಟ ದರ್ಶನ್ ಮುಳುವಾಗಿ ಪರಿಣಮಿಸುತ್ತಿದೆ. ಪೊಲೀಸರ ಕಸ್ಟಡಿಯಲ್ಲಿರುವ ದರ್ಶನ್ಗೆ ನರಕದರ್ಶನ ಆಗ್ತಿದೆ. ಈಗಾಗ್ಲೇ ಹತ್ಯೆ ಮಾಡಿದ ಆರೋಪ ಸುತ್ಕೊಂಡ ಪಾಪಕ್ಕೆ ಜೀವಾವಧಿ ನೀಡಬಹುದಾದ IPC 302 ಸೆಕ್ಷನ್ ದಾಖಲಾಗಿದೆ. ಪ್ರಾಥಮಿಕವಾಗಿ 302 ಅಂಡ್ 201 ಅಡಿ ಕೇಸ್ ದಾಖಲಾಗಿದೆ. ಮುಂದೆ 364, 120ಬಿ ಸೆಕ್ಷನ್ಗಳು ಸೇರಿಸೋ ಸಾಧ್ಯತೆಯೂ ಇದೆ..
ಯಾವ್ಯಾವ ಶಿಕ್ಷೆ?
- ಶಿಕ್ಷೆ 01 : IPC 201 ಅಡಿ ಸಾಕ್ಷಿ ತಿರುಚುವುದು ಅಥವಾ ನಾಶ ಯತ್ನಕ್ಕೆ ಜೀವಾವಧಿ
- ಶಿಕ್ಷೆ 02 : IPC 364 ಅಡಿ ಜೀವಾವಧಿ ಅಥವಾ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ
- ಶಿಕ್ಷೆ 03 : IPC 120ಬಿ ಸೇರಿಸಿದ್ರೆ ಜೀವಾವಧಿ ಅಥವಾ 10 ವರ್ಷ ಕಠಿಣ ಸೆರೆಯ ಸಜೆ.
- IPC 201 ಅಡಿ ಸಾಕ್ಷಿ ತಿರುಚುವುದು, ಸಾಕ್ಷ್ಯ ನಾಶಕ್ಕೆ ಯತ್ನಿಸಿರೋದು ಜೀವಾವಧಿ ಸಜೆ ಆಗಬಹುದು.. IPC 364 ಅಡಿ ಜೀವಾವಧಿ ಅಥವಾ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆಗೂ ಅವಕಾಶ ಇದೆ.. IPC 120ಬಿ ಸೇರಿಸಿದ್ರೆ ಜೀವಾವಧಿ ಅಥವಾ10 ವರ್ಷ ಕಠಿಣ ಸೆರೆವಾಸ ಆಗಲಿದೆ. ಇದು ಸದ್ಯ ದರ್ಶನ್ ಆ್ಯಂಡ್ ಗ್ಯಾಂಗ್ ವಿರುದ್ಧ ದಾಖಲಾದ ಮತ್ತು ದಾಖಲಾಗಲಿರುವ ಸೆಕ್ಷನ್ಗಳು.. ಹಾಗಾದ್ರೆ, ದರ್ಶನ್ ವಿರುದ್ಧ ಅಷ್ಟು ಬಲವಾದ ಸಾಕ್ಷ್ಯಗಳು ಸಿಕ್ಕಿ ಬಿಟ್ವಾ?
- ದರ್ಶನ್ ಬಗ್ಗೆ ಇರುವ ಸಾಕ್ಷಿ
- ಸಾಕ್ಷಿ 1 : ಶೆಡ್ಗೆ ದರ್ಶನ್ ಬಂದು ಹೋಗಿರುವ ಸಿಸಿಟಿವಿ ದೃಶ್ಯಗಳು
- ಸಾಕ್ಷಿ 2 : ದರ್ಶನ್ನ CDR ರಿಪೋರ್ಟ್ ಸಹ ಸ್ಪಷ್ಟವಾಗಿ ಹೋಲಿಕೆ
- ಸಾಕ್ಷಿ 3 : ದರ್ಶನ್ಗೆ ರೇಣುಕಾಸ್ವಾಮಿ ಕರೆತಂದ ಬಗ್ಗೆ ಫೋನ್ ಕಾಲ್
- ಸಾಕ್ಷಿ 4 : ಆರೋಪಿ ವಿನಯ್ ಕಾಲ್ ಮಾಡಿ ಮಾಹಿತಿ ಕೊಟ್ಟ ಡಿಟೇಲ್ಸ್
- ಸಾಕ್ಷಿ 5 : ಆದಾದ ಬಳಿಕ ಪವಿತ್ರಗೌಡಗೆ ಕರೆ ಮಾಡಿರೋದು ಸಹ ಪತ್ತೆ
- ಸಾಕ್ಷಿ 6 : ಪವಿತ್ರಾ ಮನೆ ಬಳಿ ಹೋಗಿ ದರ್ಶನ್ ಕರೆತಂದ ಸಾಕ್ಷಿ ಲಭ್ಯ
- ಸಾಕ್ಷಿ 7 : ಈ ಬಗ್ಗೆ ಸಿಡಿಆರ್ ಮತ್ತು ಸಿಸಿಟಿವಿ ಸಾಕ್ಷಿಗಳು ಪತ್ತೆಯಾಗಿವೆ
- ಸಾಕ್ಷಿ 8 : ಮಹಜರ್ ವೇಳೆ ಪಂಚರ ಮುಂದೆ ದರ್ಶನ್ ಒಪ್ಪಿದ ಹೇಳಿಕೆ
- ಇವು ಟೆಕ್ನಿಕಲ್ ಎವಿಡೆನ್ಸ್.. ಇದಷ್ಟೇ ಅಲ್ಲ.. ಕೊಲೆಯಲ್ಲಿ ಭಾಗಿಯಾದ ಬಗ್ಗೆಯೂ ಸಾಕ್ಷಿಗಳು ಸಿಕ್ಕಿವೆ.. ಅವು ಕೂಡ ದರ್ಶನ್ ವಿರುದ್ಧವೇ ಸಾಕ್ಷಿ ನುಡಿತಿವೆ.
- ದರ್ಶನ್ ಕೊಲೆಯಲ್ಲಿ ಭಾಗಿಗೆ ಸಾಕ್ಷಿ
ಸ್ವತಃ ದರ್ಶನ್ ಬಗ್ಗೆ ಆತನ ಅಪ್ತ ವಿನಯ್ ಕೊಟ್ಟ ಹೇಳಿಕೆ ಮುಳುವಾಗಿದೆ. ದರ್ಶನ್ ಹೊಡೆದಾಗಲೇ ರೇಣುಕಾ ಸತ್ತಿದ್ದು ಅಂತ ವಿನಯ್ ಹೇಳಿಕೆ ನೀಡಿದ್ದಾನೆ. ಅಲ್ಲದೆ, ದರ್ಶನ್ ಹಲ್ಲೆ ಮಾಡಿರೋ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಲ್ಲದೇ ಆರೋಪಿ ದೀಪಕ್ ಹಲ್ಲೆ ಮಾಡಿದ ವಿಡಿಯೋ ರೆಕಾರ್ಡ್ ಮಾಡ್ಕೊಂಡಿದ್ದಾನೆ. ಸದ್ಯ ಇದೇ ದೀಪಕ್ನಿಂದ 164 ಹೇಳಿಕೆ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ.. ಮಹಜರ್ ವೇಳೆ ಆತನ ಎತ್ತಿ ಎಸೆದ ಬಗ್ಗೆ ಹತ್ಯೆ ಆರೋಪಿ ದರ್ಶನ್ ಒಪ್ಪಿದ್ದು, ಟೆಂಪೋ ಟ್ರಾವೆಲ್ಲರ್ಗೆ ರೇಣುಕಾ ತಲೆ ಬಡಿದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ.. ಅಲ್ಲದೇ ಶೆಡ್ನಲ್ಲಿ ಮೃತನ ಬಯೋಲಾಜಿಕಲ್ ಎವಿಡೆನ್ಸ್ ಸಿಕ್ಕಿವೆ.. ಮೃತನ ರಕ್ತ, ಫಿಂಗರ್ ಪ್ರಿಂಟ್, ಕೂದಲು ಮತ್ತು ಚರ್ಮದ ತುಂಡು ಲಭ್ಯ ಆಗಿವೆ.ಈ ಮೂಲಕ ರೇಣುಕಾಸ್ವಾಮಿ ಶೆಡ್ನಲ್ಲೇ ಸತ್ತಿದ್ದು ಕನ್ಫರ್ಮ್ ಆಗಿದೆ.. ಜತೆಗೆ ಹಲ್ಲೆ ಮಾಡಿದ ವೆಪನ್ಸ್ಗಳು ಸೀಜ್ ಮಾಡ್ಲಾಗಿದೆ. - ಹಲ್ಲೆ ಮಾಡಿದ ವೆಫನ್ಸ್ ಸೀಜ್
- ರಿಪೀಸ್, ಸ್ಟಿಕ್ ಮತ್ತು ಹಗ್ಗದಿಂದ ಹಲ್ಲೆ ಮಾಡಲಾಗಿತ್ತು.. ಸದ್ಯ ಆ ರಿಪೀಸ್, ಸ್ಟಿಕ್ ಮತ್ತು ಹಗ್ಗವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.. ರೇಣುಕಾ ಮೃತದೇಹದಲ್ಲಿ ದರ್ಶನ್ ಪಿಂಗರ್ ಪ್ರಿಂಟ್ ಸಹ ಪತ್ತೆ ಆಗಿದೆ.. ಅಲ್ಲದೇ ವೆಪನ್ ಮೇಲೂ ದರ್ಶನ್ ಪಿಂಗರ್ ಪ್ರಿಂಟ್ ಇದೆ.. ಇನ್ನು, ಟೆಂಪೋ ಟ್ರಾವೆಲ್ಲರ್, ಕೃತ್ಯಕ್ಕೆ ಬಳಸಿದ ವಾಹನಗಳನ್ನ ಸೀಜ್ ಮಾಡ್ಲಾಗಿದೆ. ಈ ಪ್ರಕರಣದಲ್ಲಿ ತುಂಬಾ ಇಂಪಾರ್ಟೆಂಟ್ ಅಂದ್ರೆ ಮರಣೊತ್ತರ ಪರೀಕ್ಷೆ.. ಈ ಪರೀಕ್ಷೆಯಲ್ಲಿ ಅತ್ಯಂತ ಕ್ರೂರವಾಗಿ ಹತ್ಯೆ ಮಾಡ್ಲಾಗಿದೆ ಅಂತ ವರದಿ ನೀಡ್ಲಾಗಿದೆ. ಕುತ್ತಿಗೆ, ಮೂಗು ಕಟ್ ಆಗಿದೆ, ತಲೆ ಒಡೆದಿದೆ. ದೇಹಕ್ಕೆ ಬರೆ ಹಾಕಿರೋ ಬಗ್ಗೆಯೂ ಗೊತ್ತಾಗಿದೆ. ಪೋಸ್ಟ್ಮಾರ್ಟ್ಂ ರಿಪೋರ್ಟ್ನಲ್ಲಿ 15ಕ್ಕೂ ಹೆಚ್ಚು ಕಡೆ ಗಾಯಗಳು ಪತ್ತೆ ಆಗಿವೆ. ಸದ್ಯ ದರ್ಶನ್ನ ಅಟ್ಟಹಾಸ, ಜೈಲು ದರ್ಶನವಾಗಿದೆ.
ಅಪರಾಧ
ಕಾರು ಓಡಿಸುವ ವಿಚಾರಕ್ಕೆ ಮಾರಾಮಾರಿ: ಕೃಷ್ಣ ಮಠದಲ್ಲಿ ಗಲಾಟೆ
ಉಡುಪಿ: ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕೇಂದ್ರವಾಗಿರುವ Sri Krishna Mutt Udupi ಆವರಣದ ಪಾರ್ಕಿಂಗ್ ಸ್ಥಳದಲ್ಲಿ ರಾತ್ರಿ ವೇಳೆ ಪ್ರವಾಸಿಗರು ಮತ್ತು ಸ್ಥಳೀಯ ವ್ಯಕ್ತಿಯ ನಡುವೆ ಭೀಕರ ಮಾರಾಮಾರಿ ನಡೆದಿದೆ.
ಪಾರ್ಕಿಂಗ್ ಏರಿಯಾದಲ್ಲಿ ವಾಹನ ಚಲಾಯಿಸುವ ವಿಚಾರಕ್ಕೆ ಸಂಬಂಧಿಸಿದ ಸಣ್ಣ ತಕರಾರು ಕ್ಷಣಾರ್ಧದಲ್ಲೇ ಗಂಭೀರ ಘರ್ಷಣೆಗೆ ತಿರುಗಿದೆ. ಆಂಧ್ರಪ್ರದೇಶದ ಹೈದರಾಬಾದ್ ಮೂಲದ ಪ್ರವಾಸಿಗರು ಕುಟುಂಬದೊಂದಿಗೆ ಶ್ರೀಕೃಷ್ಣ ಮಠದ ದರ್ಶನಕ್ಕೆ ಬಂದಿದ್ದರು. ಇದೇ ವೇಳೆ ಉಡುಪಿಯ ಕೊರಂಗ್ರಪಾಡಿ ನಿವಾಸಿ ಸುಪ್ರೀತ್ ಎಂಬ ಸ್ಥಳೀಯ ವ್ಯಕ್ತಿಯ ಕಾರು ವೇಗವಾಗಿ ಚಲಾಯಿಸುತ್ತಿದ್ದಾನೆ ಎಂದು ಪ್ರವಾಸಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಮಾತಿನ ಜಗಳ ಹೆಚ್ಚಾಗಿ, “ನಾನು ಲೋಕಲ್ ವ್ಯಕ್ತಿ, ಹೀಗೆ ಕಾರು ಓಡಿಸುವುದು ನನ್ನ ರೀತಿಯೇ” ಎಂದು ಸುಪ್ರೀತ್ ಧಮ್ಕಿ ಹಾಕಿದನೆಂಬ ಆರೋಪ ಕೇಳಿಬಂದಿದೆ. ನಂತರ ಪರಿಸ್ಥಿತಿ ನಿಯಂತ್ರಣ ತಪ್ಪಿ, ಕಾರು ಹಾಯಿಸಲು ಯತ್ನಿಸಿದ ಜೊತೆಗೆ ತನ್ನ ಕಾರಿನಲ್ಲಿದ್ದ ಕಂಬಳದ ಕೋಲಿನಿಂದ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಹೈದರಾಬಾದ್ ಮೂಲದ ಪವನ್ ಉಡುಪಿ ನಗರ ಠಾಣೆಗೆ ದೂರು ನೀಡಿದ್ದಾರೆ. ಈ ಘಟನೆಯಲ್ಲಿ ಪ್ರವಾಸಿಗರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಇದಕ್ಕೆ ಪ್ರತಿಯಾಗಿ ಸುಪ್ರೀತ್ ಕೂಡ ಪ್ರವಾಸಿಗರ ವಿರುದ್ಧ ಪ್ರತಿದೂರು ದಾಖಲಿಸಿದ್ದು, ತಾನು ಪತ್ನಿಯೊಂದಿಗೆ ಇದ್ದಾಗ ಪ್ರವಾಸಿಗರು ಅನಗತ್ಯವಾಗಿ ಜಗಳ ಆರಂಭಿಸಿದ್ದಾರೆ ಎಂದು ಆರೋಪಿಸಿದ್ದಾರೆ. ತನ್ನ ಮೇಲೆ ಚೇರ್ ಹಾಗೂ ಫೋಟೋ ಸ್ಟ್ಯಾಂಡ್‌ನಿಂದ ಹಲ್ಲೆ ನಡೆದಿದ್ದು, ಬಾಯಿಯಿಂದ ರಕ್ತಸ್ರಾವವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಘರ್ಷಣೆಯ ಸಂದರ್ಭದಲ್ಲಿ ಪ್ರವಾಸಿಗರು ತಮ್ಮ ಕಾರಿನ ಗ್ಲಾಸ್‌ಗಳನ್ನು ಜಖಂಗೊಳಿಸಿದ್ದಾರೆ ಎನ್ನಲಾಗಿದ್ದು, ಸ್ಥಳೀಯರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಶಮನಗೊಳಿಸಿದ್ದಾರೆ.
ಈ ಘಟನೆ ಕುರಿತು ಉಡುಪಿ ನಗರ ಠಾಣೆ ಪೊಲೀಸರು ಎರಡು ಪ್ರತ್ಯೇಕ ದೂರುಗಳನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪ್ರವಾಸಿ ತಾಣದಲ್ಲಿ ನಡೆದ ಈ ಗಲಾಟೆ ಇದೀಗ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಅಪರಾಧ
ಆವಲಹಳ್ಳಿ ದಾಳಿ: ಅಕ್ರಮ ಜಿಲೆಟಿನ್ ದಾಸ್ತಾನು ಪತ್ತೆ, 225 ಕಡ್ಡಿ ವಶ
ಬೆಂಗಳೂರು: ರಾಜ್ಯ ರಾಜಧಾನಿಯ ಹೊರವಲಯದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಭಾರಿ ಪ್ರಮಾಣದ ಸ್ಪೋಟಕ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಿಧಾನಸೌಧ ಲೇಔಟ್ ಸಮೀಪದ ಯರಪ್ಪನಹಳ್ಳಿ ಗ್ರಾಮದ ಕ್ವಾರಿ ಮೇಲೆ ದಾಳಿ ನಡೆಸಿದ ಪೊಲೀಸರು ಜಿಲೆಟಿನ್ ಕಡ್ಡಿಗಳು ಹಾಗೂ ಡಿಟೊನೇಟರ್‌ಗಳನ್ನು ಪತ್ತೆಹಚ್ಚಿದ್ದಾರೆ.
ಪೊಲೀಸರ ಪ್ರಕಾರ, ವೆಂಕಟೇಶ್ವರ ಗ್ರಾನೈಟ್ಸ್ ಕ್ರಶರ್‌ಗೆ ಸೇರಿದ ಕ್ವಾರಿಯಲ್ಲಿ ಕಲ್ಲುಬಂಡೆಗಳನ್ನು ಸ್ಫೋಟಿಸಲು ಬಳಸುವ 225 ಜಿಲೆಟಿನ್ ಕಡ್ಡಿಗಳು ಹಾಗೂ 50 ಡಿಟೊನೇಟರ್‌ಗಳನ್ನು ಅಕ್ರಮವಾಗಿ ಸಂಗ್ರಹಿಸಲಾಗಿತ್ತು. ಸ್ಥಳೀಯರಿಂದ ಬಂದ ಮಾಹಿತಿಯ ಆಧಾರದ ಮೇಲೆ ಆವಲಹಳ್ಳಿ ಠಾಣೆ ಪೊಲೀಸರು ದಾಳಿ ನಡೆಸಿ ಈ ಸ್ಪೋಟಕಗಳನ್ನು ವಶಪಡಿಸಿಕೊಂಡಿದ್ದಾರೆ.
ಕ್ವಾರಿ ಮಾಲೀಕರಾದ ವೆಂಕಟರಮಣರೆಡ್ಡಿ ಹಾಗೂ ಉಸ್ತುವಾರಿ ಲೋಕೇಶ್‌ರೆಡ್ಡಿ ಅವರು ಸರ್ಕಾರದಿಂದ ಅಗತ್ಯವಾದ ಪರವಾನಗಿ ಪಡೆಯದೇ ಈ ಸ್ಪೋಟಕಗಳನ್ನು ಸಂಗ್ರಹಿಸಿ ಬಳಸುತ್ತಿದ್ದರೆಂಬ ಆರೋಪವೂ ಕೇಳಿಬಂದಿದೆ. ಜೊತೆಗೆ, ಸುರಕ್ಷತಾ ನಿಯಮಗಳನ್ನು ಪಾಲಿಸದೇ ರಾತ್ರಿ ವೇಳೆ ಕಲ್ಲುಬಂಡೆಗಳನ್ನು ಸ್ಫೋಟಿಸುತ್ತಿದ್ದರಿಂದ ಸ್ಥಳೀಯ ನಿವಾಸಿಗಳಿಗೆ ತೊಂದರೆ ಉಂಟಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ರಶರ್ ಮಾಲೀಕರು, ಉಸ್ತುವಾರಿ ಹಾಗೂ ಕ್ವಾರಿಯಲ್ಲಿ ಸ್ಫೋಟಕ ಬಳಕೆಯಲ್ಲಿ ತೊಡಗಿದ್ದ ವಿಕಾಸ್, ತೋಹಿದ್ ಮತ್ತು ಸಂದೀಪ್ ವಿರುದ್ಧ ನಿರ್ಲಕ್ಷ್ಯ ಆರೋಪ ಹಾಗೂ ಸ್ಫೋಟಕಗಳ ಕಾಯಿದೆ 1884 ಅಡಿ ಪ್ರಕರಣ ದಾಖಲಿಸಿದ್ದಾರೆ.
ಇದೀಗ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಈ ಸ್ಪೋಟಕಗಳನ್ನು ಕೇವಲ ಕಲ್ಲುಬಂಡೆ ಸ್ಫೋಟಕ್ಕೆ ಮಾತ್ರ ಬಳಸಲಾಗಿತ್ತೇ ಅಥವಾ ಬೇರೆ ದುರುದ್ದೇಶವಿದೆಯೇ ಎಂಬುದರ ಕುರಿತು ತನಿಖೆ ಮುಂದುವರೆಸಿದ್ದಾರೆ. ಈ ನಡುವೆ, ವೈಟ್‌ಫೀಲ್ಡ್ ಉಪ ವಿಭಾಗದ ಡಿಸಿಪಿ ಸೈದುಲು ಅಡಾವತ್ ಅವರು ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಸ್ಥಳೀಯ ಪ್ರದೇಶದಲ್ಲಿ ಈ ಘಟನೆ ಆತಂಕ ಮೂಡಿಸಿದ್ದು, ಭದ್ರತಾ ಕ್ರಮಗಳ ಬಗ್ಗೆ ಮತ್ತೆ ಚರ್ಚೆ ಆರಂಭವಾಗಿದೆ.
ಅಪರಾಧ
ಬಿಟ್‌ಕಾಯಿನ್ ಹಗರಣ: ನಲಪಾಡ್‌ಗೆ ಎಸ್‌ಐಟಿ ಚಾರ್ಜ್‌ಶೀಟ್ ಶಾಕ್
ಬೆಂಗಳೂರು: 6 ವರ್ಷಗಳ ಹಿಂದಿನ ಬಿಟ್‌ಕಾಯಿನ್ ಹಗರಣವು (Karnataka Bitcoin Scam) ಮತ್ತೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ಹಾಗೂ ಯುವ ಕಾಂಗ್ರೆಸ್ ಮುಖಂಡ Mohammed Nalapad ಅವರಿಗೆ ಸಂಬಂಧಿಸಿದಂತೆ ಗಂಭೀರ ಆರೋಪಗಳು ಕೇಳಿಬಂದಿವೆ.
ವಿಶೇಷ ತನಿಖಾ ದಳ (SIT) ಇದೀಗ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದು, ನಲಪಾಡ್ ಕೂಡ ಈ ಹಗರಣದಲ್ಲಿ ಪಾಲುದಾರರಾಗಿದ್ದು ಹಣದ ಲಾಭ ಪಡೆದಿದ್ದಾರೆ ಎಂಬುದನ್ನು ಉಲ್ಲೇಖಿಸಿದೆ. ಹಗರಣದ ಪ್ರಮುಖ ಆರೋಪಿ ಎಂದು ಗುರುತಿಸಲ್ಪಟ್ಟಿರುವ ಹ್ಯಾಕರ್ ಶ್ರೀಕೃಷ್ಣ @ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಅವರೊಂದಿಗೆ ನಲಪಾಡ್ ನಂಟು ಹೊಂದಿದ್ದರೆಂಬ ಅಂಶವೂ ಚಾರ್ಜ್‌ಶೀಟ್‌ನಲ್ಲಿ ಸೇರಿಸಲಾಗಿದೆ.
ಎಸ್‌ಐಟಿ ಆರೋಪಗಳ ಪ್ರಕಾರ, ಬಿಟ್‌ಕಾಯಿನ್ ನಗದೀಕರಣಕ್ಕಾಗಿ ನಲಪಾಡ್ ಅವರು ಹ್ಯಾಕರ್ ಶ್ರೀಕಿಯನ್ನು ಸಂಪರ್ಕಿಸಿದ್ದರೆಂದು ತಿಳಿದುಬಂದಿದೆ. ಮುಂಬೈ ಮೂಲದ ಸ್ನೇಹಿತ ಹಾಗೂ ಖಂಡೇವಾಲ ಮೂಲಕ ಹವಾಲಾ ಜಾಲದ ಮೂಲಕ ಹಣವನ್ನು ನಗದೀಕರಿಸಿರುವ ಆರೋಪವೂ ಇದೆ. ಈ ಪ್ರಕ್ರಿಯೆಯಲ್ಲಿ ಕಮಿಷನ್ ರೂಪದಲ್ಲಿ ನಲಪಾಡ್‌ಗೂ ಹಣ ಸಂದಾಯವಾಗಿರುವುದಾಗಿ ತನಿಖಾ ವರದಿಯಲ್ಲಿ ಹೇಳಲಾಗಿದೆ.
ಇದೀಗ ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ಕೂಡ ಸಕ್ರಿಯವಾಗಿ ತನಿಖೆ ನಡೆಸುತ್ತಿದ್ದು, ವಿಚಾರಣೆಗೆ ಹಾಜರಾಗುವಂತೆ ಮೂರನೇ ನೋಟಿಸ್ ಜಾರಿಗೊಳಿಸಿದೆ. ಇದಕ್ಕೂ ಮುನ್ನ ಶ್ರೀಕಿ, ರಾಬಿನ್ ಖಂಡೇವಾಲ ಹಾಗೂ ಸುನೀಶ್ ಹೆಗ್ಡೆ ಅವರನ್ನು ಇಡಿ ಸುಮಾರು 16 ಗಂಟೆಗಳ ಕಾಲ ವಿಚಾರಣೆ ನಡೆಸಿದೆ ಎಂದು ತಿಳಿದುಬಂದಿದೆ. ಈ ಎಲ್ಲಾ ಬೆಳವಣಿಗೆಗಳು ಪ್ರಕರಣವನ್ನು ಮತ್ತಷ್ಟು ಗಂಭೀರಗೊಳಿಸಿದೆ.
ಈ ನಡುವೆ, Enforcement Directorate ಹಾಗೂ Special Investigation Team Karnataka ತನಿಖೆ ಮುಂದುವರೆಸುತ್ತಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರಕರಣದ ಮುಂದಿನ ಬೆಳವಣಿಗೆಗಳತ್ತ ಎಲ್ಲರ ಗಮನ ನೆಟ್ಟಿದೆ.
-
ಅಪರಾಧ22 minutes agoಕಾರು ಓಡಿಸುವ ವಿಚಾರಕ್ಕೆ ಮಾರಾಮಾರಿ: ಕೃಷ್ಣ ಮಠದಲ್ಲಿ ಗಲಾಟೆ
-
ದೇಶ58 minutes ago4,399 ದಿನಗಳ ನಿರಂತರ ಆಡಳಿತ: ಮೋದಿ ಹೊಸ ದಾಖಲೆ ಸ್ಥಾಪನೆ
-
ದೇಶ4 hours agoಕನಕಪುರದಲ್ಲಿ ಡಿಕೆಶಿ ವರ್ತನೆಗೆ ಬಿಜೆಪಿ ತೀವ್ರ ಆಕ್ರೋಶ
-
ಅಪರಾಧ4 hours agoಬಿಟ್‌ಕಾಯಿನ್ ಹಗರಣ: ನಲಪಾಡ್‌ಗೆ ಎಸ್‌ಐಟಿ ಚಾರ್ಜ್‌ಶೀಟ್ ಶಾಕ್
-
ಅಪರಾಧ4 hours agoಆವಲಹಳ್ಳಿ ದಾಳಿ: ಅಕ್ರಮ ಜಿಲೆಟಿನ್ ದಾಸ್ತಾನು ಪತ್ತೆ, 225 ಕಡ್ಡಿ ವಶ
-
ಕ್ರೀಡೆ46 minutes agoಫಿಫಾ ವಿಶ್ವಕಪ್ 2026 ಆರಂಭ: ಜಗತ್ತೆಲ್ಲಾ ಫುಟ್ಬಾಲ್ ಜ್ವರದಲ್ಲಿ
-
ದೇಶ4 hours agoಅಣ್ವಸ್ತ್ರ ಶಕ್ತಿಯಲ್ಲಿ ಭಾರತ ಹೊಸ ಮೈಲಿಗಲ್ಲು? ಅಂತಾರಾಷ್ಟ್ರೀಯ ವರದಿ ಬಹಿರಂಗ
