ಅಪರಾಧ

ಬಾಳಿ, ಬದುಕಬೇಕಿದ್ದ ರೇಣುಕಾಸ್ವಾಮಿ ಕೊಲೆ ಆಗಿದ್ದಾನೆ, ನ್ಯಾಯ ಸಿಗಲಿ: Darshan ವಿಚಾರವಾಗಿ ಕಿಚ್ಚ ಸುದೀಪ್ ಮೊದಲ ಪ್ರತಿಕ್ರಿಯೆ…

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 13ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ಅಲ್ಲದೆ ಈ ವಿಚಾರ ರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಚರ್ಚೆಗೂ ಗ್ರಾಸವಾಗಿದೆ.

ಈ ಮಧ್ಯೆ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸುದೀಪ್ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಬಾಳಿ ಬದುಕಬೇಕಿದ್ದ ರೇಣುಕಾಸ್ವಾಮಿ ಕೊಲೆಯಾಗಿದ್ದಾನೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ. ಸತ್ಯ ಹೊರತರಲು ಮಾಧ್ಯಮ ಮತ್ತು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ತನಿಖೆ ನಿಸ್ಪಕ್ಷಪಾತವಾಗಿ ನಡೆಯಲಿ. ಕಾನೂನಿನ ಮೇಲೆ ಜನರಿಗೆ ನಂಬಿಕೆ ಬರುವಂತೆ ಆಗಲಿ ಎಂದು ಹೇಳಿದರು.

Trending

Exit mobile version