ಅಪರಾಧ
ಪವಿತ್ರಗೌಡ ಇನ್ಸ್ಟಾದಿಂದ Phone Number ಶೇರ್ ಆಗಿದ್ದೇಗೆ.. ಮೊದಲ ಮೆಸೇಜ್ ಏನಾಗಿತ್ತು..
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ತೀವ್ರಗೊಂಡಿದೆ. ನಿನ್ನೆಯವರೆಗೆ ಒಟ್ಟು 19 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಒಂದೊಂದೇ ಮಾಹಿತಿಗಳು ಹೊರ ಬರುತ್ತಿವೆ.
ಅಶ್ಲೀಲ ಮೆಸೇಜ್ ಶುರುವಾಗಿದ್ದು ಯಾವಾಗ..?
ತನಿಖೆಯಿಂದ ತಿಳಿದುಬಂದಿದೆ ಎನ್ನಲಾಗಿರುವ ಮಾಹಿತಿಗಳ ಪ್ರಕಾರ.. ಫೆಬ್ರವರಿ ತಿಂಗಳಲ್ಲಿ ಪವಿತ್ರ ಗೌಡಗೆ ರೇಣುಕಾಸ್ವಾಮಿ ಕಡೆಯಿಂದ ಮೊದಲ ಮೆಸೇಜ್ ಬರುತ್ತದೆ. ರೆಡ್ಡಿ ಅನ್ನೋ Instagram ಅಕೌಂಟ್ನಿಂದ ಮೊದಲ ಸಂದೇಶ ಬರುತ್ತದೆ. ಪವಿತ್ರ ಗೌಡಗೆ ಮೆಸೇಜ್ನಲ್ಲೇ ರೇಣುಕಾಸ್ವಾಮಿ ಬೈಯ್ಯುತ್ತಿದ್ದ. ಈ ವಿಚಾರವನ್ನು ದರ್ಶನ್ ಮನೆಯಲ್ಲಿ ಕೆಲಸ ಮಾಡ್ತಿದ್ದ ಪವನ್ಗೆ ಪವಿತ್ರಾ ತಿಳಿಸಿದ್ದಳು. ಪವನ್ ಜೊತೆಗೆ ಮಾತನಾಡಿದ ಬಳಿಕ ಇಬ್ಬರು ಸೇರಿ ಒಂದು ಪ್ಲಾನ್ ಮಾಡಿದ್ದರು. ನೀನು Instagramನಲ್ಲಿ ಮೆಸೇಜ್ ಮಾಡ್ಬೇಡ. ನಂಗೂ ನಿನ್ನ ಜೊತೆ ಮಾತನಾಡಬೇಕು ಅನಿಸುತ್ತಿದೆ. ಒಂದು ವಾಟ್ಸ್ಆ್ಯಪ್ ನಂಬರ್ ಕೊಡ್ತೀನಿ ಎಂದು ಪವಿತ್ರ ಹೆಸರಲ್ಲಿ ಮೆಸೇಜ್ ಹೋಗಿದೆ ಎನ್ನಲಾಗಿದೆ.
ಕೊನೆಗೆ ಪವನ್ ಅವರ ನಂಬರ್ ಅನ್ನು ರೇಣುಕಾಸ್ವಾಮಿಗೆ ನೀಡಲಾಗಿತ್ತು. ಜೂನ್ ಆರಂಭದಿಂದ ರೇಣುಕಾಸ್ವಾಮಿ ಫೋನ್ಗೆ ಚಾಟಿಂಗ್ ಮಾಡ್ತಿದ್ದ. ನಿನ್ನ ಊರು ಯಾವುದು? ಎಲ್ಲಿ ಕೆಲಸ ಮಾಡೋದು ಅನ್ನೋದೆಲ್ಲ ಕೇಳಿದ್ದ? ಪವಿತ್ರಾ ಅವಳೇ ಕೇಳ್ತಿದ್ದಾಳೆ ಅನ್ನೋ ರೀತಿಯಲ್ಲಿ ಪವನ್ ರೇಣುಕಾಸ್ವಾಮಿಗೆ ಮೆಸೇಜ್ ಮಾಡಿದ್ದ. ಇದು ನಿಜ ಎಂದು ನಂಬಿದ್ದ ರೇಣುಕಾಸ್ವಾಮಿ, ಜೋರಾಗಿ ಚಾಟ್ ಮಾಡಲು ಶುರುಮಾಡಿದ್ದಾನೆ. ತಾನು ಕೆಲಸ ಮಾಡ್ತಿದ್ದ ಮೆಡಿಕಲ್ ಶಾಪ್ ಫೋಟೋವನ್ನೂ ಕಳುಹಿಸಿದ್ದಾನೆ.
ಜೊತೆಗೆ ವಾಟ್ಸ್ಆ್ಯಪ್ನಲ್ಲಿ ಲೋಕೇಷನ್ ಕೂಡ ಶೇರ್ ಮಾಡಿದ್ದ. ಪವಿತ್ರ ಹೆಸರಿನಲ್ಲಿ ಪವನ್ ತುಂಬಾ ಆತ್ಮೀಯವಾಗಿ ರೇಣುಕಾಸ್ವಾಮಿಗೆ ಮೆಸೇಜ್ ಮಾಡಲು ಶುರುಮಾಡಿದ್ದಾನೆ. ತನ್ನ ಅಂಗಾಂಗದ ಫೋಟೋ ತೆಗೆದು ಕಳಿಸಿ ಹೀಗಿದೆ ನೋಡು ಎಂದು ರೇಣುಕಾಸ್ವಾಮಿ ಹೇಳಿದ್ದನಂತೆ. ಕೊನೆಗೆ ಈ ವಿಚಾರವನ್ನು ಪವನ್ ದರ್ಶನ್ಗೆ ಮಾಹಿತಿ ನೀಡಿದ್ದಾನೆ. ಅಕ್ಕನಿಗೆ ರೇಣುಕಾಸ್ವಾಮಿ ಎಂಬಾತ ಕೆಟ್ಟದಾಗಿ ಮೆಸೇಜ್ ಮಾಡ್ತಿದ್ದಾನೆ. ಅವನು ಮೆಡಿಕಲ್ ಶಾಪ್ನಲ್ಲಿ ಕೆಲಸ ಮಾಡೋದು, ಚಿತ್ರದುರ್ಗದಲ್ಲಿ ಇದ್ದಾನೆ ಎಂದು ದರ್ಶನ್ಗೆ ತಿಳಿಸಿದ್ದ. ಈ ಎಲ್ಲಾ ವಿಚಾರಗಳು ದರ್ಶನ್ ಜೊತೆಗೆ ಚರ್ಚೆ ಆಗಿದ್ದು ಜೂನ್ 5 ರಂದು. ಇದರ ಬೆನ್ನಲ್ಲೇ ಚಿತ್ರದುರ್ಗದ ರಾಘವೇಂದ್ರನಿಗೆ ದರ್ಶನ್ ಕರೆ ಮಾಡಿದ್ದ. ರೇಣುಕಾಸ್ವಾಮಿ ಎಂಬಾತನ ಎತ್ತಾಕೊಂಡು ಬರುವಂತೆ ಸೂಚನೆ ನೀಡಿದ್ದ.
ದರ್ಶನ್ ಹೇಳಿದ್ದೇ ತಡ ರಾಘವೇಂದ್ರ ತನ್ನ ಸಹಚರರ ಜೊತೆಗೆ ಸಜ್ಜಾಗಿದ್ದ. ರೇಣುಕಾಸ್ವಾಮಿಯನ್ನು ಕಾರಿನಲ್ಲಿ ಎತ್ತಾಕೊಂಡು ಬೆಂಗಳೂರು ಕಡೆಗೆ ಹೊರಟಿದ್ದ. ಇತ್ತ ಪವನ್ ರಾಘವೇಂದ್ರನಿಗೆ ಪಟ್ಟಣಗೆರೆಯ ಶೆಡ್ನ ಲೊಕೇಶನ್ ಕಳುಹಿಸಿದ್ದ. ಇದೇ ಲೊಕೇಶನ್ಗೆ ರೇಣುಕಾಸ್ವಾಮಿಯನ್ನು ಕರ್ಕೊಂಡು ಬರೋಕೆ ಹೇಳಿದ್ದ. ಪವನ್ ಸೂಚನೆ ಪ್ರಕಾರ ಪಟ್ಟಣಗೆರೆ ಶೆಡ್ಗೆ ರೇಣುಕಾಸ್ವಾಮಿಯನ್ನು ಕರ್ಕೊಂಡು ಬರಲಾಗಿತ್ತು. ಇದಾದ ಬಳಿಕ ಪವನ್ ದರ್ಶನ್ ಇದ್ದಲ್ಲಿಗೆ ಹೋಗಿ ರೇಣುಕಾಸ್ವಾಮಿನ ಕರ್ಕೊಂಡು ಬಂದಿರುವ ವಿಚಾರವನ್ನು ತಿಳಿಸಿದ್ದ. ಆಗ ದರ್ಶನ್ ಸ್ನೇಹಿತ ವಿನಯ್ಗೆ ಸೇರಿದ್ದ ಪಬ್ನಲ್ಲಿ ಸ್ನೇಹಿತರ ಜೊತೆಗಿದ್ದ. ನಂತರ ನಡೆದಿದ್ದೇ ಭೀಕರ ಹತ್ಯೆ ಎಂದು ತಿಳಿದುಬಂದಿದೆ.
ಅಪರಾಧ
ಬಿಕ್ಲು ಶಿವ ಕೊಲೆ ಪ್ರಕರಣ: ಸುಪ್ರೀಂಕೋರ್ಟ್ ಮೊರೆ ಹೋದ ಶಾಸಕ ಬೈರತಿ ಬಸವರಾಜ್
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ (Bairati Basavaraj) ಇದೀಗ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಅವರು ಅರ್ಜಿ ಸಲ್ಲಿಸಿದ್ದಾರೆ.
ನಿನ್ನೆ ಮಾತ್ರ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆದ ವಿಚಾರಣೆಯಲ್ಲಿ ನ್ಯಾಯಮೂರ್ತಿ ನ್ಯಾಸುನೀಲ್ ದತ್ ಯಾದವ್ ಅವರು ಅರ್ಜಿಯನ್ನು ತಿರಸ್ಕರಿಸಿದರು. ಈ ಬೆಳವಣಿಗೆಯ ಬೆನ್ನಲ್ಲೇ ಬೈರತಿ ಬಸವರಾಜ್ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬಿಕ್ಲು ಶಿವ ಭೀಕರ ಹತ್ಯೆ ಪ್ರಕರಣದಲ್ಲಿ ಈಗಾಗಲೇ 20 ಆರೋಪಿಗಳ ಪೈಕಿ ಎ-1 ಆರೋಪಿ ಜಗದೀಶ್ ಸೇರಿ 18 ಮಂದಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಡೀಫಾಲ್ಟ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ತಿರಸ್ಕರಿಸಿತ್ತು.
ಇದಕ್ಕೂ ಮುನ್ನ ಬೆಳಗಾವಿ ಅಧಿವೇಶನದ ಸಮಯದಲ್ಲಿ ನಾಪತ್ತೆಯಾಗಿದ್ದ ಬೈರತಿ ಬಸವರಾಜ್ ಬಂಧನಕ್ಕೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಮಧ್ಯಂತರ ಜಾಮೀನು ಮಂಜೂರಾದರೂ, ನಂತರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬೇಲ್ ರದ್ದುಪಡಿಸಿತ್ತು.
ಇದೀಗ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಯಾವಾಗ ನಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.
ಅಪರಾಧ
BENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಶಾಲಾ ಬಸ್ ಹರಿದು ಇಬ್ಬರು ಪುಟ್ಟ ಮಕ್ಕಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ (Bengaluru Accident) ಹೆಣ್ಣೂರು ಸಂಚಾರ ಠಾಣಾ ವ್ಯಾಪ್ತಿಯ ಥಣಿಸಂದ್ರದಲ್ಲಿ ನಡೆದಿದೆ.
ಮೃತರನ್ನು ನಗರದ ಸಿಎಆರ್ ವಿಭಾಗದ ಕಾನ್ಸ್‌ಟೇಬಲ್ ನಾಗನಗೌಡ ಅವರ ಮಕ್ಕಳಾದ ವರ್ಷ (2) ಮತ್ತು ಭಾನು (4) ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ ನಾಗನಗೌಡ ಅವರು ಸ್ಕೂಟರ್‌ನಲ್ಲಿ ಇಬ್ಬರು ಮಕ್ಕಳನ್ನು ಕೂರಿಸಿಕೊಂಡು ಹಾಲು ತರಲು ತೆರಳಿದ್ದರು. ಥಣಿಸಂದ್ರ ಮುಖ್ಯರಸ್ತೆಯ ಬಳಿ ಎದುರುಗಡೆಯಿಂದ ಬಂದ ಅಜ್ ಮೋನಿ ಶಾಲೆಯ ಬಸ್ ಏಕಾಏಕಿ ತಿರುವು ಪಡೆದುಕೊಂಡಿದೆ. ಈ ವೇಳೆ ಸ್ಕೂಟರ್ ಮೇಲೆ ಬಸ್ ಹರಿದ ಪರಿಣಾಮ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ನಂತರ ಸ್ಥಳಕ್ಕೆ ಉತ್ತರ ವಿಭಾಗದ ಸಂಚಾರ ಪೊಲೀಸ್ ಡಿಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಣ್ಣೂರು ಸಂಚಾರ ಪೊಲೀಸರು ಮಹಜರು ನಡೆಸಿ, ಶಾಲಾ ಬಸ್ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಅಜಾಗರೂಕತೆಯಿಂದ ಬಸ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.
ನಗರದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದು, ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿಯ ಅವಶ್ಯಕತೆ ಮತ್ತೆ ಒತ್ತಿ ಹೇಳಲಾಗಿದೆ.
ಅಪರಾಧ
ಮನುಷ್ಯತ್ವ ಹೂತುಹೋದ ಎಪ್‌ಸ್ಟೀನ್ ದ್ವೀಪ: ಜಗತ್ತಿನ ಎಲೈಟ್‌ಗಳನ್ನು ನಡುಗಿಸುತ್ತಿರುವ ‘ಲೋಲಿಟಾ ಎಕ್ಸ್‌ಪ್ರೆಸ್’ ರಹಸ್ಯ
ನವದೆಹಲಿ/ವಾಷಿಂಗ್ಟನ್:
ಮನುಷ್ಯತ್ವವೇ ಮರಳಲ್ಲಿ ಹೂತುಹೋದ ದ್ವೀಪವೊಂದು ವರ್ಷಗಳ ಕಾಲ ಜಗತ್ತಿನ ಕಣ್ಣು ತಪ್ಪಿಸಿ ಅನಾಚಾರದ ಸ್ವರ್ಗವಾಗಿ ಬೆಳೆದಿತ್ತು. ‘ಲೋಲಿಟಾ ಎಕ್ಸ್‌ಪ್ರೆಸ್’ ಎಂಬ ಖಾಸಗಿ ಜೆಟ್ ವಿಮಾನ ದಿನವೂ ಲಿಟಲ್ ಸೇಂಟ್ ಜೇಮ್ಸ್ ದ್ವೀಪಕ್ಕೆ ಹಾರಾಟ ನಡೆಸುತ್ತಿತ್ತು. ಹದಿಹರೆಯದ ಹುಡುಗಿಯರನ್ನು ಲೈಂಗಿಕ ದೌರ್ಜನ್ಯಕ್ಕೆ ಬಲಿಕೊಡುತ್ತಿದ್ದ ಈ ದ್ವೀಪವನ್ನು ಇಂದು ಜಗತ್ತು ‘ಎಪ್‌ಸ್ಟೀನ್ ದ್ವೀಪ’ ಅಥವಾ ‘ಪೆಡೋಪೈಲ್ ಐಲ್ಯಾಂಡ್’ ಎಂದೇ ಕರೆಯುತ್ತಿದೆ.
1998ರಲ್ಲಿ ಅಮೆರಿಕದ ಶತಕೋಟ್ಯಧಿಪತಿ ಜೆಫ್ರಿ ಎಪ್‌ಸ್ಟೀನ್ 8 ಮಿಲಿಯನ್ ಡಾಲರ್ ನೀಡಿ ಖರೀದಿಸಿದ 71 ಎಕರೆ ವಿಸ್ತೀರ್ಣದ ಈ ದ್ವೀಪದಲ್ಲಿ ಐಷಾರಾಮಿ ರೆಸಾರ್ಟ್‌ಗಳು, ವಿಲ್ಲಾಗಳು, ಹೆಲಿಪ್ಯಾಡ್‌ಗಳು ನಿರ್ಮಾಣವಾಗಿದ್ದವು. ಹೊರಜಗತ್ತಿನಿಂದ ಸಂಪೂರ್ಣ ಕಡಿದುಹಾಕಲ್ಪಟ್ಟ ಈ ಪ್ರದೇಶದಲ್ಲಿ ನೂರಾರು ಅಪ್ರಾಪ್ತ ಬಾಲಕಿಯರನ್ನು ಬಂಧಿಸಿ, ಜಗತ್ತಿನ ಎಲೈಟ್‌ಗಳಿಗೆ ಪೂರೈಸಲಾಗುತ್ತಿತ್ತು ಎಂಬ ಆರೋಪಗಳು ತನಿಖೆಯಲ್ಲಿ ಬಹಿರಂಗವಾದವು.
2005ರಲ್ಲಿ ಫ್ಲೋರಿಡಾದ 14 ವರ್ಷದ ಬಾಲಕಿಯ ತಾಯಿಯೊಬ್ಬರು ನೀಡಿದ ದೂರು ಈ ಮಹಾ ಲೈಂಗಿಕ ಹಗರಣದ ಮೊದಲ ಕಿಡಿಯಾಗಿತ್ತು. ಬಳಿಕ 50ಕ್ಕೂ ಹೆಚ್ಚು ಅಪ್ರಾಪ್ತೆಯರು ದೂರು ದಾಖಲಿಸಿದರು. 2008ರಲ್ಲಿ ಎಪ್‌ಸ್ಟೀನ್ ತಪ್ಪಿತಸ್ಥನಾಗಿದ್ದರೂ, ಕೇವಲ 13 ತಿಂಗಳ ಜೈಲು ಶಿಕ್ಷೆ ಅನುಭವಿಸಿ ಹೊರಬಂದಿದ್ದನು. 2019ರಲ್ಲಿ ಪುನಃ ಮಕ್ಕಳ ಕಳ್ಳಸಾಗಣೆ ಆರೋಪದ ಮೇಲೆ ಬಂಧನಕ್ಕೊಳಗಾದ ಎಪ್‌ಸ್ಟೀನ್, ವಿಚಾರಣೆಗೆ ಮುನ್ನವೇ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅಮೆರಿಕ ಸರ್ಕಾರ ಘೋಷಿಸಿತು. ಆದರೆ, ಈ ಸಾವಿನ ಸುತ್ತ ಇನ್ನೂ ಹಲವು ಅನುಮಾನಗಳಿವೆ.
ಜನವರಿ 30ರಂದು ಅಮೆರಿಕದ ನ್ಯಾಯಾಂಗ ಇಲಾಖೆ ಬಿಡುಗಡೆ ಮಾಡಿದ ಸುಮಾರು 30 ಲಕ್ಷ ಪುಟಗಳ ದಾಖಲೆಗಳು ಜಗತ್ತನ್ನೇ ಬೆಚ್ಚಿಬೀಳುವಂತೆ ಮಾಡಿವೆ. ರಾಜಕೀಯ ನಾಯಕರು, ಬಿಲಿಯನೇರ್‌ಗಳು, ರಾಜಮನೆತನದವರು, ವಿಜ್ಞಾನಿಗಳು, ಉದ್ಯಮಿಗಳೆಂದರೆ ಯಾರೂ ಹೊರತಲ್ಲ. 80ಕ್ಕೂ ಹೆಚ್ಚು ಪ್ರಭಾವಿ ವ್ಯಕ್ತಿಗಳು ತನಿಖೆಗೆ ಒಳಗಾಗಿದ್ದು, ಯುರೋಪ್‌ನ ಹಲವೆಡೆ ರಾಜೀನಾಮೆ ಅಲೆ ಎದ್ದಿದೆ.
ಆದರೆ, ಎಪ್‌ಸ್ಟೀನ್ ಫೈಲ್‌ನಲ್ಲಿ ಹೆಸರು ಕಾಣಿಸಿಕೊಂಡ ಮಾತ್ರಕ್ಕೆ ಅಪರಾಧ ಸಾಬೀತಾಗುವುದಿಲ್ಲ ಎಂದು ಅಮೆರಿಕದ ನ್ಯಾಯಾಲಯ ಸ್ಪಷ್ಟಪಡಿಸಿದೆ. ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಫೋಟೊ, ವಿಡಿಯೋ ಅಥವಾ ಹಣಕಾಸು ದಾಖಲೆಗಳಿದ್ದಾಗ ಮಾತ್ರ ಕಾನೂನು ಕ್ರಮ ಸಾಧ್ಯವೆಂದು ಹೇಳಿದೆ.
ಈ ಎಲ್ಲದ ನಡುವೆ, ಈ ಮಹಾ ಹಗರಣದ ನಿಜವಾದ ಬಲಿಪಶುಗಳು ನೂರಾರು ಅಪ್ರಾಪ್ತ ಬಾಲಕಿಯರು ಎಂಬ ಸತ್ಯ ಮಾತ್ರ ಬದಲಾಗಿಲ್ಲ. ಅಧಿಕಾರ, ಹಣ ಮತ್ತು ಪ್ರಭಾವದ ಅಡ್ಡೆಗೋಡೆಯ ಹಿಂದೆ ನಡೆದ ಈ ಅಮಾನುಷ ಕೃತ್ಯಗಳು ಇಂದು ಜಗತ್ತಿನ ಅಂತರಾತ್ಮವನ್ನೇ ಪ್ರಶ್ನಿಸುತ್ತಿವೆ.
-
ದೇಶ14 hours agoರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಹಾಡುವುದು ಕಡ್ಡಾಯ
-
ದೇಶ21 hours agoಬಿ.ಕೆ. ಹರಿಪ್ರಸಾದ್ ಅವರನ್ನು ತಕ್ಷಣವೇ ರಾಜ್ಯ ಸಂಪುಟಕ್ಕೆ ಸೇರಿಸಿ ಉಪ ಮುಖ್ಯಮಂತ್ರಿ ಮಾಡಬೇಕು: ರಾಷ್ಟ್ರೀಯ ಅಹಿಂದ ಸಂಘಟನೆ ಆಗ್ರಹ
-
ಚುನಾವಣೆ21 hours agoBENGALURU : ವಾರ್ಡ್ ಮರುವಿಂಗಡಣೆ ವಿರೋಧಿಸಿ ಶಾಸಕ ಎಂ. ಕೃಷ್ಣಪ್ಪ ಹೈಕೋರ್ಟ್ ಅರ್ಜಿ
-
ದೇಶ13 hours agoBIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ
-
ದೇಶ21 hours agoDigital Services Tax: ಡಿಜಿಟಲ್ ತೆರಿಗೆಗೆ ಅಮೆರಿಕದ ವಿರೋಧ ಏಕೆ?
-
ದೇಶ21 hours agoಚರ್ಚೆ ಮುಗಿಯುವವರೆಗೆ ಸದನಕ್ಕೆ ಹಾಜರಾಗಲ್ಲ ಎಂದ ಲೋಕಸಭಾ ಸ್ಪೀಕರ್
-
ಕ್ರೀಡೆ14 hours agoT20 WORLD CUP : ಡಬಲ್ ಸೂಪರ್ ಓವರ್ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು
-
ಅಪರಾಧ13 hours agoBENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
