ಅಪರಾಧ

ದರ್ಶಣ್ ಅಂಡ್ ಗ್ಯಾಂಗ್ ಪೊಲೀಸ್ ವಿಚಾರಣೆ ಲೈವ್ ಸ್ಟ್ರೀಮಿಂಗ್ ಆಗಲಿ ನಟ ಉಪೇಂದ್ರ

ಬೆಂಗಳೂರು: ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕೆಂದು ನಟ ಉಪೇಂದ್ರ ಹೇಳಿದ್ದಾರೆ,
ಈ ಕುರಿತು ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯೆ ನೀಡಿರುವ ಅವರು ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ, ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರಿದಿದ್ದು ಎಲ್ಲವನ್ನೂ ವಿಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು ಎಂದು ಬರೆದುಕೊಂಡಿದ್ದಾರೆ,
ದರ್ಶನ್-ರೇಣುಕಾಸ್ವಾಮಿ-ಪಾರದರ್ಶಕ ವಿಚಾರಣೆ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶಣ್ ಬಂಧನ ರೇಣುಕಾಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲಿ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ, ಈ ಹೈಪ್ರೊಫೈಲ್ ಪ್ರಕರಣ ವಿಚಾರಣೆಯಲ್ಲಿ ನಿಶ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ, ರೇಣುಕಾಸ್ವಾಮಿ ಕುಟುಂಬದಲ್ಲಿ ಜನರಲ್ಲಿ ಟಿ.ವಿ.ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ, ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ,
ಏಕೆಂದರೆ ಯಾವುದೇ ಪ್ರಕರಣ ಆದರೂ ಆ ಕೇಸ್‍ನ ವಿಚಾರಣೆಯ ವಿಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನಿಉ ಆಗಾಗ ಪೊಲೀಸರು ಸಂಬಂಧ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಕಾನೂನಾಗಬೇಕು.

Trending

Exit mobile version