ದೇಶ
ಬಿಜೆಪಿಯವರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ತೈಲ ಬೆಲೆ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳುವ ಮೂಲಕ ತೈಲ ಬೆಲೆ ಏರಿಕೆಯನ್ನು ಸಮರ್ಥನೆ ಮಾಡಿಕೊಂಡರು, ಜೊತೆಗೆ ತೈಲ ಬೆಲೆಯನ್ನು ಕಡಿಮೆ ಮಾಡುವುದಾಗಿ ಹೇಳಿಕೊಂಡು ಅಧಿಕಾರಕ್ಕೆ ಬಂದ ನರೇಂದ್ರ ಮೋದಿಯವರು ಪಟ್ರೋಲ್ ಬೆಲೆಯನ್ನು ಹೆಚ್ಚಿಸಿದ್ದಾರೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಕುಸಿದಾಗಲೂ ಇಲ್ಲಿ ತೈಲ ಬೆಲೆ ಹೆಚ್ಚಾಗಿದೆ, ಹೀಗಾಗಿ ಬಿಜೆಪಿಯವರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿ ಎಂದರು,
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂಪಾಯಿ ಏರಿಕೆ ಮಾಡಲಾಗಿದೆ, ಇದನ್ನು ವಿರೋಧಿಸಿ ಬಿಜೆಪಿ ನಾಯಕರು ಇಂದುಇ ಪ್ರತಿಭಟನೆ ಮಾಡುತ್ತಿದ್ದಾರೆ, ರಾಜ್ಯಕ್ಕೆ ಕೇಂದ್ರದಿಂದ ಬರ ಪರಿಹಾರ ನೀಡದಾಗ ಪ್ರತಿಭಟನೆ ಮಾಡದ ಬಿಜೆಪಿ ನಾಯಕರು ಇಂದು ತೈಲ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆಂದರು,