ದೇಶ
ಮಾಡೋದೆಲ್ಲ ಮಾಡಿ ಕೇಂದ್ರದ ಕಡೆ ಬೆಟ್ಟು ಮಾಡುತ್ತಿದೆ: ಹೆಚ್‍ಡಿಕೆ ಕಿಡಿ

- /home/u521927855/domains/hosasuddi.in/public_html/wp-content/plugins/mvp-social-buttons/mvp-social-buttons.php on line 27
https://hosasuddi.in/wp-content/uploads/2024/06/Screenshot-2024-06-18-5.27.06-PM.png&description=ಮಾಡೋದೆಲ್ಲ ಮಾಡಿ ಕೇಂದ್ರದ ಕಡೆ ಬೆಟ್ಟು ಮಾಡುತ್ತಿದೆ: ಹೆಚ್‍ಡಿಕೆ ಕಿಡಿ', 'pinterestShare', 'width=750,height=350'); return false;" title="Pin This Post">
- Share
- Tweet /home/u521927855/domains/hosasuddi.in/public_html/wp-content/plugins/mvp-social-buttons/mvp-social-buttons.php on line 72
https://hosasuddi.in/wp-content/uploads/2024/06/Screenshot-2024-06-18-5.27.06-PM.png&description=ಮಾಡೋದೆಲ್ಲ ಮಾಡಿ ಕೇಂದ್ರದ ಕಡೆ ಬೆಟ್ಟು ಮಾಡುತ್ತಿದೆ: ಹೆಚ್‍ಡಿಕೆ ಕಿಡಿ', 'pinterestShare', 'width=750,height=350'); return false;" title="Pin This Post">
ಹುಬ್ಬಳ್ಳಿ: ಕಳೆದ ಕೆಲ ತಿಂಗಳಿಂದ ರಾಜ್ಯ ಸರ್ಕಾರದ ಖಜಾನೆ ಸಂಪೂರ್ಣ ಬರಿದಾಗಿದೆ, ಇದರಿಂದ ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡಿದೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ,
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಸರ್ಕಾರದ ಪರಿಸ್ಧಿತಿ ಹೇಗಿದೆ ಎಂಬುದು ಇದರಿಂದಲೇ ಗೊತ್ತಾಗುತ್ತಿದೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಮಾಡಿ ಈಗ ಕೇಂದ್ರದ ಕಡೆ ಬೆಟ್ಟು ತೋರಿಸುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ,
ತೈಲ ಬೆಲೆ ಏರಿಕೆ ಕೇಂದ್ರದಲ್ಲಿ ಯಾಕೆ ಆಗಿಲ್ಲ, ಬರೀ ರಾಜ್ಯದಲ್ಲಿ ಮಾತ್ರ ಯಾಕೆ ಆಗಿರೋದು ಅಂತ ಕುಮಾರಸ್ವಾಮಿ ಪ್ರಶ್ನಿಸಿದರು, ಈಗಾಗಲೇ ಗ್ಯಾರಂಟಿಗೆ ಹಣ ಬೇಕು ಅಂತ ಬೆಲೆ ಏರಿಕೆ ಮಾಡಿದ್ದೇವೆ ಎಂದು ಸ್ವತಃ ಎಂಬಿ ಪಾಟೀಲ್ ಹೇಳಿದ್ದಾರೆ ಎಂದು ಹೆಚ್‍ಡಿಕೆ ಟೀಕಿಸದರು.
ಈಗಾಗಲೇ ಸಿದ್ದರಾಮಯ್ಯ ಅವರ ಸರ್ಕಾರ ಕಳೆದ ಎಂಟು ತಿಂಗಳಿಂದ ಹಾಲಿನ ಪ್ರೋತ್ಸಾಹ ಧನ ನೀಡಿಲ್ಲ, ಹೀಗೆ ಒಂದೊಂದಿಗೆ ಯೋಜನೆಗಳನ್ನು ಸರ್ಕಾರ ನಿಲ್ಲಿಸಲಿದೆ ಎಂದು ಕಿಡಿಕಾರಿದರು,
ಪ್ರಧಾನಿ ಮೋದಿ ನನ್ನ ಮೇಲೆ ನಂಬಿಕೆಯಿಟ್ಟು ಪ್ರಮುಖವಾದ ಎರಡು ಖಾತೆ ನೀಡಿದ್ದಾರೆ, ನನ್ನ ಇಲಾಖೆಯನ್ನು ಅರ್ಥ ಮಾಡಿಕೊಳ್ಳಲು ಸ್ವಲ್ಪ ಸಮಯ ಬೇಕು, ಆ ನಂತರ ಜನರಿಗೆ ಅನುಕೂಲವಾಗುವ ಕೆಲಸ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು,
ದೇಶ
ಪಿಎಂ ಮೋದಿ ಆಗಸ್ಟ್ 10ರಂದು ಬೆಂಗಳೂರಿಗೆ: ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ

ಬೆಂಗಳೂರು: ನಮ್ಮ ಮೆಟ್ರೋ (Namma Metro) ಹಳದಿ ಮಾರ್ಗದ (Yellow Line) ಉದ್ಘಾಟನೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Modi) ಆಗಸ್ಟ್ 10ರಂದು ಬೆಂಗಳೂರಿಗೆ ಬರುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಧಾನಿಯವರು ಆಗಸ್ಟ್ 10ರಂದು ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟನೆ ಮಾಡುವ ಉದ್ದೇಶದಿಂದ ಬರುತ್ತಿದ್ದಾರೆ. ಅವರ ಭೇಟಿಗೆ ಸಿದ್ಧತೆಗಳು ನಡೆಯುತ್ತಿವೆ. ಟೈಮ್ ಟು ಟೈಮ್ ಕಾರ್ಯಕ್ರಮಗಳ ಬಗ್ಗೆ ಇನ್ನೂ ವಿವರ ಬಾಕಿಯಿದೆ,” ಎಂದು ಹೇಳಿದರು.
ವೈಭವದಿಂದ ಕಾರ್ಯಕ್ರಮ?
ಆದರೆ, ಮೂಲ ಯೋಜನೆಗೆ ಬದಲಾವಣೆ ಆಗಿದೆ. ಈಗ ಪ್ರಧಾನಿಯವರು ಕೇವಲ ಹಳದಿ ಮಾರ್ಗದ ಮೆಟ್ರೋ ಮತ್ತು ವಂದೇ ಭಾರತ್ ರೈಲು ಉದ್ಘಾಟನೆಗೆ ಮಾತ್ರ ಭಾಗಿಯಾಗಲಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ರೋಡ್ ಶೋ ಕಾರ್ಯಾಚರಣೆಗಳು ರದ್ದುಪಡಿಸಲಾಗಿದೆ.
ಇದರ ಪರಿಣಾಮವಾಗಿ, ಒಂದು ವರ್ಷದಿಂದ ಮೋದಿಯವರ ಆಗಮನದ ನಿರೀಕ್ಷೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರು ನಿರಾಸೆಗೊಳಗಾಗಿದ್ದಾರೆ ಎಂದು ವರದಿಯಾಗಿದೆ.
ದೇಶ
ಭಾರತ vs ಅಮೆರಿಕ: ರಷ್ಯಾದ ತೈಲದ ಬಗ್ಗೆ ಉದ್ವಿಗ್ನತೆ, ಸೇನೆಯಿಂದ ತಿರುಗೇಟು

ಬೆಂಗಳೂರು: ರಷ್ಯಾದಿಂದ ಕಚ್ಚಾ ತೈಲ ಖರೀದಿಯ ಕುರಿತು ಭಾರತ-ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತಾಗಿದೆ. ಭಾರತ ರಷ್ಯಾದಿಂದ ತೈಲ ಆಮದು ಮಾಡುತ್ತಿರುವುದಕ್ಕೆ ಅಮೆರಿಕ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ಭಾರತೀಯ ಸೇನೆ ಅಮೆರಿಕದ ದ್ವೇಧಾಚರಣೆ ವಿರುದ್ಧ ತಿರುಗೇಟು ನೀಡಿದೆ.
ಸೋಷಿಯಲ್ ಮೀಡಿಯಾದಲ್ಲಿ “ಈ ದಿನ ಆ ವರ್ಷ – ಯುದ್ಧದ ನಿರ್ಮಾಣ – 05 ಆಗಸ್ಟ್ 1971” ಎಂಬ ಶೀರ್ಷಿಕೆಯಡಿ ಸೇನೆಯು 1971ರ ಯುದ್ಧದ ಕಾಲದ ಪತ್ರಿಕಾ ಕಟಿಂಗ್ ಹಂಚಿಕೊಂಡಿದೆ. 1954ರಿಂದ 1971ರವರೆಗೆ ಅಮೆರಿಕ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಪೂರೈಸಿದ ಬಗ್ಗೆ ಪೇಪರ್ ಕಟಿಂಗ್ ಉಲ್ಲೇಖಿಸುತ್ತಾ, “ಅಮೆರಿಕ ಪಾಕ್ ಪರ ಕೆಲಸ ಮಾಡಿತ್ತಲ್ಲವೆ?” ಎಂದು ಪ್ರಶ್ನಿಸಿದೆ.
ಇದು ಉಕ್ರೇನ್ ವಿರುದ್ಧದ ಯುದ್ಧಕ್ಕೆ ಭಾರತ ಹಣ ಒದಗಿಸುತ್ತಿದೆ ಎಂಬ ಅಮೆರಿಕದ ಆರೋಪಕ್ಕೆ ಪ್ರತಿಕ್ರಿಯೆಯಾಗಿದೆ. ಭಾರತವು ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದ ಟೀಕೆಗಳನ್ನು ‘ಅಸಮರ್ಥನೀಯ ಹಾಗೂ ಅಸಮಂಜಸ’ವೆಂದು ತಿರಸ್ಕರಿಸಿದೆ. ಭಾರತ ತನ್ನ ತೈಲ ನೀತಿಯನ್ನು ಆರ್ಥಿಕ ಶಕ್ತಿಯ ದೃಷ್ಟಿಯಿಂದ ಮುಂದುವರಿಸುತ್ತಿದೆ.
ದೇಶ
ಸೇನೆ ಕುರಿತ ಹೇಳಿಕೆ: ಸುಪ್ರೀಂ ಕೋರ್ಟ್ ಟೀಕೆಗೆ ಪ್ರಿಯಾಂಕಾ ಗಾಂಧಿಯಿಂದ ಕಠಿಣ ಪ್ರತಿಕ್ರಿಯೆ

ನವದೆಹಲಿ: ಭಾರತೀಯ ಸೇನೆ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಇದೀಗ ಅವರ ಸಹೋದರಿ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.
ರಾಹುಲ್ ಗಾಂಧಿಯ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ಟೀಕೆಗೆ ಪ್ರತಿಕ್ರಿಯಿಸಿ ಪ್ರಿಯಾಂಕಾ ಗಾಂಧಿ,
“ಯಾರು ನಿಜವಾದ ಭಾರತೀಯರು ಎಂಬುದನ್ನು ನಿರ್ಧರಿಸಲು ನ್ಯಾಯಾಧೀಶರು ಯೋಗ್ಯರಲ್ಲ. ರಾಹುಲ್ ಗಾಂಧಿಗೆ ಭಾರತೀಯ ಸೇನೆಯ ಬಗ್ಗೆ ಅಪಾರ ಗೌರವವಿದೆ. ಅವರು ಎಂದಿಗೂ ಸೇನೆಯ ವಿರುದ್ಧ ಕೆಟ್ಟ ಮಾತುಗಳನ್ನು ಮಾತನಾಡಲ್ಲ,” ಎಂದು ತಿಳಿಸಿದ್ದಾರೆ.
ಗಲ್ವಾನ್ ಕಣಿವೆ ಸಂಘರ್ಷ ಕುರಿತು ಮಾತನಾಡಿದ ವೇಳೆ ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ‘ಅನುಚಿತ’ ಎಂದು ಖಂಡಿಸಿದ್ದು, “ನಿಜವಾದ ಭಾರತೀಯರು ಈ ರೀತಿ ಮಾತನಾಡುವುದಿಲ್ಲ” ಎಂದು ಹೇಳಿದ್ದಾರೆ. ಇದನ್ನು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದು, “ವಿರೋಧ ಪಕ್ಷದ ನಾಯಕರಾಗಿ ಸರ್ಕಾರವನ್ನು ಪ್ರಶ್ನಿಸುವುದು ರಾಹುಲ್ ಅವರ ಕರ್ತವ್ಯ. ನ್ಯಾಯಮೂರ್ತಿಗಳು ಇಂತಹ ಹೇಳಿಕೆ ನೀಡುವುದು ಸರಿಯಲ್ಲ,” ಎಂದಿದ್ದಾರೆ.
ಅದೇ ರೀತಿ, ಪ್ರಿಯಾಂಕಾ ಗಾಂಧಿ ಸರ್ಕಾರದ ನಡೆಗೆ ಶಂಕೆ ವ್ಯಕ್ತಪಡಿಸಿ,
“ರಾಹುಲ್ ಗಾಂಧಿಯ ಪ್ರಶ್ನೆಗಳಿಗೆ ಸರ್ಕಾರದ ಬಳಿ ಉತ್ತರಗಳಿಲ್ಲ. ಅವರು ಚರ್ಚೆಗೆ ತಯಾರಿಲ್ಲ. ಸಂಸತ್ತನ್ನು ಸರಿಯಾಗಿ ನಡೆಸಲಾಗುತ್ತಿಲ್ಲ. ಇದನ್ನೆಲ್ಲಾ ಮರೆಮಾಚಲು ಈ ರೀತಿಯ ತಂತ್ರಗಳನ್ನು ಬಳಸುತ್ತಿದ್ದಾರೆ,” ಎಂದು ವಾಗ್ದಾಳಿ ನಡೆಸಿದ್ದಾರೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ