ದೇಶ
ಭ್ರೂಣ ಲಿಂಗ ಪತ್ತೆ ಮಾಹಿತಿ ನೀಡಿದರೆ ಒಂದು ಲಕ್ಷ ಬಹುಮಾನ!

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಭ್ರೂಣ ಲಿಂಗ ಪತ್ತೆ ಮಾಡುತ್ತಿರುವುದು ಹೆಚ್ಚುತ್ತಿರುವುದರಿಂದ ಆರೋಗ್ಯ ಇಲಾಖೆಯವರು ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದು ಮಾಹಿತಿ ನೀಡಿದವರಿಗೆ ಬಹುಮಾನದ ಮೊತ್ತ ಹೆಚ್ಚಿಸಿದೆ,
ಆರೋಗ್ಯ ಸಚಿವರು ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮೇಲ್ವಿಚಾರಣಾ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ, ಭ್ರೂಣದ ಲಿಂಗವನ್ನು ಪತ್ತೆ ಮಾಡುವುದು ಕಾನೂನು ಪ್ರಕಾರ ಅಪರಾಧವಾಗಿದ್ದು, ಈ ರೀತಿ ಮಾಡುತ್ತಿರುವವರ ಬಗ್ಗೆ ಮಾಹಿತಿ ನೀಡಿದವರಿಗೆ 50,000 ರೂ ದಿಂದ 1,00,000 ರೂಗೆ ಬಹುಮಾನದ ಮೊತ್ತವನ್ನು ಹೆಚ್ಚಿಸಿದೆ,
ಗರ್ಭಪೂರ್ವ ಮತ್ತು ಪುಸವಪೂರ್ವ ಲಿಂಗ ಪತ್ತೆ ತಂತ್ರವಿಧಾನಗಳು ಕಾಯ್ದೆ 1994 ಅನುಷ್ಠಾನಕ್ಕೆ ಸಂಬಂಧಿಸಿದಂತೆ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ,