ಅಪರಾಧ
ಪವಿತ್ರಾ ಗೌಡ ಕೈದಿ ನಂಬರ್ ಎಷ್ಟು..? ಸಮ ಸಂಖ್ಯೆಗಳನ್ನ ನೀಡಿದ ಜೈಲು ಅಧಿಕಾರಿಗಳು
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಆಗಿರುವ ಪವಿತ್ರಾ ಗೌಡ ಹಾಗೂ ಇನ್ನು ಕೆಲ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿಗೆ ಹಾಕಲಾಗಿದೆ. ಜೈಲಿನಲ್ಲಿ 1 ದಿನ ಕಳೆದಿರುವ ಪವಿತ್ರಾ ಗೌಡ ಹಾಗೂ ಅವರ ಗ್ಯಾಂಗ್ಗೆ ವಿಚಾರಣಾಧೀನ ಕೈದಿ ನಂಬರ್ ಅನ್ನು ಜೈಲು ಅಧಿಕಾರಿಗಳು ನೀಡಿದ್ದಾರೆ.
ಕೊಲೆ ಕೇಸ್ನಲ್ಲಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದು ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿಗೆ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಜೈಲು ಅಧಿಕಾರಿಗಳು ಇಂದು ಪವಿತ್ರಾ ಗೌಡಗೆ ವಿಚಾರಣಾಧೀನ ಕೈದಿ ನಂಬರ್ ಅನ್ನು ನೀಡಿದ್ದಾರೆ. ಪವಿತ್ರಾ ಗೌಡ ವಿಚಾರಣಾಧೀನ (UTP) ಕೈದಿ ನಂಬರ್- 6024 ಅನ್ನು ನೀಡಲಾಗಿದೆ.
ಹೈಫೈ ಲೈಫ್ ಲೀಡ್ ಮಾಡಿದ್ದ ಪವಿತ್ರಾ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ಮುದ್ದೆ ಮುರಿಯೋ ಸ್ಥಿತಿ ಉಂಟಾಗಿದೆ. ಸದ್ಯ ಅವರು ಮಹಿಳಾ ವಿಭಾಗದ ಡಿ- ಬ್ಯಾರಕ್ನಲ್ಲಿ ಸೆರೆವಾಸದಲ್ಲಿದ್ದಾರೆ. ಜೈಲಿನಲ್ಲಿ ಸರಿಯಾಗಿ ಊಟ ಮಾಡದೇ, ರಾತ್ರಿಯಲ್ಲಿ ನಿದ್ರೆ ಕೂಡ ಮಾಡದೆ ಪವಿತ್ರಾ ಚಡಪಡಿಸುತ್ತಿದ್ದಾರೆ. ಇಂದು ಬೆಳಗ್ಗೆ 5 ಗಂಟೆಗೆ ಎದ್ದಿರುವ ಅವರು ಸಿಬ್ಬಂದಿ ನೀಡಿದ ಕಾಫಿ ಕುಡಿದಿದ್ದಾರೆ. ಮಹಿಳಾ ವಿಭಾಗದ ಕೊಠಡಿಯಲ್ಲಿ ಪವಿತ್ರಾ ಮೌನಕ್ಕೆ ಶರಣಾಗಿದ್ದಾರೆ.
ಅಪರಾಧ
ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟ! ಸ್ಟೀರಿಂಗ್ ಮೇಲೆ ಮೊಣಕೈ, ಕೈಯಲ್ಲಿ ಮೊಬೈಲ್; ವೈರಲ್ ವಿಡಿಯೊ
ನವದೆಹಲಿ, ಜು.8: ರಸ್ತೆ ಸುರಕ್ಷತೆ ಕುರಿತು ಸರ್ಕಾರ ಮತ್ತು ಸಾರಿಗೆ ಇಲಾಖೆ ನಿರಂತರ ಜಾಗೃತಿ ಮೂಡಿಸುತ್ತಿದ್ದರೂ ಕೆಲವರ ನಿರ್ಲಕ್ಷ್ಯದಿಂದ ಅಪಘಾತಗಳ ಅಪಾಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೀಗ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇನಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ದೆಹಲಿ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್‌ನ ಚಾಲಕ ಸುಮಾರು 100 ಕಿ.ಮೀ ವೇಗದಲ್ಲಿ ಬಸ್ ಚಲಾಯಿಸುತ್ತಿದ್ದರೂ, ರಸ್ತೆಯತ್ತ ಸಂಪೂರ್ಣ ಗಮನ ಹರಿಸುವ ಬದಲು ತನ್ನ ಮೊಬೈಲ್‌ನಲ್ಲಿ ರೀಲ್ಸ್ ವೀಕ್ಷಿಸುತ್ತಿರುವುದು ವೈರಲ್ ವಿಡಿಯೊದಲ್ಲಿ ಕಾಣಿಸಿದೆ. ಚಾಲಕ ಸ್ಟೀರಿಂಗ್ ಮೇಲೆ ಮೊಣಕೈ ಇಟ್ಟುಕೊಂಡೇ ಮೊಬೈಲ್ ನೋಡುತ್ತಿರುವ ದೃಶ್ಯ ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಗಂಭೀರ ಆತಂಕ ಮೂಡಿಸಿದೆ.
ವೈರಲ್ ವಿಡಿಯೊದಲ್ಲಿ ಚಾಲಕ ಕೆಲ ಕ್ಷಣಗಳಿಗೊಮ್ಮೆ ಮಾತ್ರ ರಸ್ತೆಯತ್ತ ಕಣ್ಣಾಡಿಸಿ ಮತ್ತೆ ಮೊಬೈಲ್‌ಗೆ ಗಮನ ಹರಿಸುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ಇನ್ನೂ ಆತನ ಪಕ್ಕದಲ್ಲಿದ್ದ ಕಂಡಕ್ಟರ್ ಕೂಡ ಚಾಲಕನಿಗೆ ಎಚ್ಚರಿಕೆ ನೀಡುವ ಬದಲು ತನ್ನ ಮೊಬೈಲ್‌ನಲ್ಲೇ ತೊಡಗಿಸಿಕೊಂಡಿರುವುದು ವಿಡಿಯೊದಲ್ಲಿ ದಾಖಲಾಗಿದೆ.
ಬಸ್‌ನಲ್ಲಿದ್ದ ಪ್ರಯಾಣಿಕರೊಬ್ಬರು ಈ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಕೆಲವೇ ಗಂಟೆಗಳಲ್ಲಿ ವಿಡಿಯೊ ವ್ಯಾಪಕವಾಗಿ ವೈರಲ್ ಆಗಿದೆ. ಘಟನೆ ನಡೆದ ನಿಖರ ದಿನಾಂಕ ಹಾಗೂ ಚಾಲಕನ ಗುರುತು ಅಧಿಕೃತವಾಗಿ ದೃಢಪಟ್ಟಿಲ್ಲ. ಆದರೂ ಈ ವಿಡಿಯೊ ರಸ್ತೆ ಸುರಕ್ಷತೆ ಕುರಿತು ಹೊಸ ಚರ್ಚೆಗೆ ಕಾರಣವಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಇಂತಹ ಚಾಲಕನ ಚಾಲನಾ ಪರವಾನಗಿಯನ್ನು ತಕ್ಷಣವೇ ರದ್ದುಪಡಿಸಬೇಕು” ಎಂದು ಹಲವರು ಆಗ್ರಹಿಸಿದ್ದಾರೆ. ಮತ್ತೊಬ್ಬರು “ನೂರಾರು ಪ್ರಯಾಣಿಕರ ಜೀವದೊಂದಿಗೆ ಆಟವಾಡುವುದು ಕ್ಷಮಿಸಲಾಗದ ಅಪರಾಧ. ಚಾಲಕ ಹಾಗೂ ಕರ್ತವ್ಯ ನಿರ್ಲಕ್ಷ್ಯ ತೋರಿದ ಕಂಡಕ್ಟರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ಘಟನೆ ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ ಎಷ್ಟು ಅಪಾಯಕಾರಿ ಎಂಬುದನ್ನು ಮತ್ತೊಮ್ಮೆ ನೆನಪಿಸಿದ್ದು, ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಅಗತ್ಯವನ್ನು ಒತ್ತಿಹೇಳಿದೆ.
ಅಪರಾಧ
ವೈರಲ್ ವಿಡಿಯೋ: ಲಾರಿ ಡಿಕ್ಕಿ ಹೊಡೆದರೂ ಪ್ರಾಣಾಪಾಯದಿಂದ ಪಾರಾದ ವಿದ್ಯಾರ್ಥಿನಿ
ತುಮಕೂರು: ಜಿಲ್ಲೆಯ ತಿಪಟೂರು ನಗರದ ಐಬಿ ಸರ್ಕಲ್‌ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿಯೊಬ್ಬಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನಿಯಂತ್ರಣ ತಪ್ಪಿದ ಲಾರಿಯೊಂದು ಮೊದಲು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಳಿಕ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಗುದ್ದಿದೆ. ಈ ಅಪಘಾತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ವೇಗವಾಗಿ ಬಂದ ಲಾರಿಯು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ನಂತರ ವಿದ್ಯಾರ್ಥಿನಿಯತ್ತ ನುಗ್ಗಿದೆ. ಡಿಕ್ಕಿಯ ತೀವ್ರತೆಗೆ ವಿದ್ಯಾರ್ಥಿನಿ ಲಾರಿಯ ಕೆಳಗೆ ಸಿಲುಕಿದ್ದರೂ, ಅದೃಷ್ಟವಶಾತ್ ವಾಹನದ ಚಕ್ರ ಆಕೆಯ ಮೇಲೆ ಹರಿಯದೆ ಮಧ್ಯಭಾಗದಲ್ಲಿ ಸಿಲುಕಿದ್ದ ಕಾರಣ ದೊಡ್ಡ ಅನಾಹುತ ತಪ್ಪಿದೆ.
ಅಪಘಾತ ಕಂಡ ಸ್ಥಳೀಯರು ಕೂಡಲೇ ಲಾರಿಯನ್ನು ನಿಲ್ಲಿಸಿ ವಿದ್ಯಾರ್ಥಿನಿಯನ್ನು ಸುರಕ್ಷಿತವಾಗಿ ಹೊರತೆಗೆದರು. ಬಳಿಕ ಗಾಯಗೊಂಡ ವಿದ್ಯಾರ್ಥಿನಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಪ್ರಕಾರ ಆಕೆಯ ಆರೋಗ್ಯ ಸ್ಥಿರವಾಗಿದ್ದು ಚಿಕಿತ್ಸೆ ಮುಂದುವರಿದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ತಿಪಟೂರು ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲಾರಿಯನ್ನು ವಶಕ್ಕೆ ಪಡೆದು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಆರಂಭಿಸಲಾಗಿದೆ.
ಈ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಲಾರಿ ಕೆಳಗೆ ಸಿಲುಕಿದ್ದರೂ ವಿದ್ಯಾರ್ಥಿನಿ ಅದೃಷ್ಟವಶಾತ್ ಜೀವಂತವಾಗಿ ಪಾರಾಗಿರುವುದು ಹಲವರಲ್ಲಿ ಆಶ್ಚರ್ಯ ಮೂಡಿಸಿದೆ. ವಾಹನ ಚಾಲಕರು ವೇಗ ಮಿತಿಯನ್ನು ಪಾಲಿಸಬೇಕು ಹಾಗೂ ನಗರ ಪ್ರದೇಶಗಳಲ್ಲಿ ಹೆಚ್ಚಿನ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು ಎಂಬ ಒತ್ತಾಯವೂ ಸಾರ್ವಜನಿಕರಿಂದ ವ್ಯಕ್ತವಾಗಿದೆ.
ಅಪರಾಧ
ಆಸ್ಪತ್ರೆ ದೌರ್ಜನ್ಯ ಪ್ರಕರಣ: ವೈರಲ್ ದೃಶ್ಯಗಳ ನಡುವೆ ಕಾರ್ಪೊರೇಟರ್ ಸ್ಪಷ್ಟನೆ ಏನು?
ನವದೆಹಲಿ: ಮುಂಬೈ ಸಮೀಪದ ಆಸ್ಪತ್ರೆಯೊಂದರಲ್ಲಿ ಮಹಿಳಾ ವೈದ್ಯೆ ಹಾಗೂ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ದೇಶಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಈ ಪ್ರಕರಣದಲ್ಲಿ ಶಿವಸೇನಾ ಕಾರ್ಪೊರೇಟರ್ ರಮೇಶ್ ಮ್ಹಾತ್ರೆ ಹಾಗೂ ಅವರ ಬೆಂಬಲಿಗರ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ.
ಆಸ್ಪತ್ರೆಯ ಮೂಲಗಳ ಪ್ರಕಾರ, ನವಜಾತ ಶಿಶುಗಳ ತೀವ್ರ ನಿಗಾ ಘಟಕ (NICU)ದಲ್ಲಿ ಹಾಸಿಗೆಗಳ ಕೊರತೆಯ ವಿಚಾರದಿಂದ ಆರಂಭವಾದ ಮಾತಿನ ಚಕಮಕಿ ನಂತರ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ವೈದ್ಯರು ಸಂಬಂಧಿಕರಿಗೆ ಆಸ್ಪತ್ರೆಯಲ್ಲಿ ಸದ್ಯ ಯಾವುದೇ NICU ಹಾಸಿಗೆ ಲಭ್ಯವಿಲ್ಲ ಎಂದು ತಿಳಿಸಿದ್ದಾಗಿ ವರದಿಯಾಗಿದೆ. ಬಳಿಕ ಈ ವಿಚಾರಕ್ಕೆ ಸಂಬಂಧಿಸಿ ಕಾರ್ಪೊರೇಟರ್ ಆಸ್ಪತ್ರೆಗೆ ಆಗಮಿಸಿದ್ದು, ಗಲಾಟೆ ನಡೆದಿದೆ ಎನ್ನಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಮಹಿಳಾ ವೈದ್ಯೆಯೊಬ್ಬರು ತಮ್ಮ ಮೊಬೈಲ್ ಬಳಸಲು ಪ್ರಯತ್ನಿಸುವ ವೇಳೆ ಅವರತ್ತ ಧಾವಿಸುವ ವ್ಯಕ್ತಿ ಕಾಣಿಸಿಕೊಂಡಿದ್ದು, ಬಳಿಕ ಆಸ್ಪತ್ರೆಯ ಸಿಬ್ಬಂದಿ ಮತ್ತು ನರ್ಸ್‌ಗಳೊಂದಿಗೆ ತಳ್ಳಾಟ-ನೂಕಾಟ ನಡೆದಿರುವ ದೃಶ್ಯಗಳು ಗೋಚರಿಸುತ್ತವೆ. ಈ ವಿಡಿಯೋ ಆಧರಿಸಿ ವೈದ್ಯರ ಸಂಘಟನೆಗಳು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರಮೇಶ್ ಮ್ಹಾತ್ರೆ, ಮಹಿಳಾ ವೈದ್ಯೆಯ ಮೇಲೆ ಹಲ್ಲೆ ನಡೆಸಿಲ್ಲ ಎಂದು ಹೇಳಿದ್ದಾರೆ. ವೈದ್ಯರು ತಮ್ಮ ದೂರುಗಳಿಗೆ ಸ್ಪಂದಿಸದ ಕಾರಣ ಅವರ ಕೈಯಲ್ಲಿದ್ದ ಮೊಬೈಲ್ ಕೆಳಗೆ ಬೀಳುವಂತೆ ಮಾಡಿದ್ದೇನೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ. ಜೊತೆಗೆ ತಮ್ಮ ಕ್ರಮದಿಂದ ರೋಗಿಯ ಜೀವ ಉಳಿದಿದೆ ಎಂಬ ವಾದವನ್ನೂ ಮುಂದಿಟ್ಟಿದ್ದಾರೆ.
ಈ ಘಟನೆ ವೈದ್ಯರ ಸುರಕ್ಷತೆ, ಆಸ್ಪತ್ರೆಗಳಲ್ಲಿ ಭದ್ರತಾ ವ್ಯವಸ್ಥೆ ಹಾಗೂ ಸಾರ್ವಜನಿಕ ಪ್ರತಿನಿಧಿಗಳ ವರ್ತನೆ ಕುರಿತು ಮತ್ತೆ ಚರ್ಚೆಗೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ವೈರಲ್ ವಿಡಿಯೋ ಸೇರಿದಂತೆ ಲಭ್ಯವಿರುವ ಸಾಕ್ಷ್ಯಗಳನ್ನು ಪರಿಶೀಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.
-
ದೇಶ24 hours agoಅಂಜನಾದ್ರಿ ಹುಂಡಿ ಎಣಿಕೆ ಬಳಿಕ 4 ದಿನ ಮೌನ! ಈಗ ಪ್ರಕಟಣೆ ಹೊರಬಿದ್ದಿದ್ದು ಏಕೆ?
-
ದೇಶ5 hours agoರಸ್ತೆ ಮಧ್ಯೆ ಹೆಡೆ ಎತ್ತಿ ನಿಂತ ನಾಗರಹಾವು: ಪ್ಯಾಲೇಸ್ ರಸ್ತೆಯಲ್ಲಿ ಅರ್ಧ ಗಂಟೆ ಸಂಚಾರ ಅಸ್ತವ್ಯಸ್ತ
-
ದೇಶ9 hours agoಬ್ಯಾಂಕ್ ಅಕೌಂಟ್ ಕ್ಲೋಸ್ ಮಾಡಿದರೆ ಕ್ರೆಡಿಟ್ ಕಾರ್ಡ್ ಬಂದ್ ಆಗುತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ
-
ದೇಶ23 hours ago‘ಕಿಂಗ್100’ನಲ್ಲಿ ಟಬು ವಿಲನ್! ನಾಗಾರ್ಜುನ ವಿರುದ್ಧ ಹೊಸ ಅವತಾರ
-
ಅಪರಾಧ4 hours agoಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಮತ್ತೆ ರೌಡಿಗಳ ದಾಳಿ: ಫ್ಲೈ ಬಸ್ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ
-
ದೇಶ5 hours ago‘ಮೋದಿ ಒಂದೂವರೆ ಗಂಟೆ ನನಗೆ ಬುದ್ಧಿ ಹೇಳಿದರು’ : ಎಚ್.ಡಿ.ಕುಮಾರಸ್ವಾಮಿ
-
ಅಪರಾಧ3 hours agoಆಸ್ಪತ್ರೆ ದೌರ್ಜನ್ಯ ಪ್ರಕರಣ: ವೈರಲ್ ದೃಶ್ಯಗಳ ನಡುವೆ ಕಾರ್ಪೊರೇಟರ್ ಸ್ಪಷ್ಟನೆ ಏನು?
-
ಅಪರಾಧ2 hours agoವೈರಲ್ ವಿಡಿಯೋ: ಲಾರಿ ಡಿಕ್ಕಿ ಹೊಡೆದರೂ ಪ್ರಾಣಾಪಾಯದಿಂದ ಪಾರಾದ ವಿದ್ಯಾರ್ಥಿನಿ
