ದೇಶ
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಬಿಗ್ ರಿಲೀಫ್; ಕೋರ್ಟ್ನಿಂದ ಜಾಮೀನು

ನವದೆಹಲಿ: ಅಬಕಾರಿ ನೀತಿ ಪರಿಷ್ಕರಣೆ ಅಕ್ರಮದಲ್ಲಿ ಜೈಲುಪಾಲಾಗಿರುವಂತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಬ್ರಿವಾಲ್ ಅವರಿಗೆ ದೆಹಲಿಯ ರೋಸ್ ಅವನೆನ್ಯೂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಅರವಿಂದ್ ಕೇಬ್ರಿವಾಲ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಇಂದು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ನಲ್ಲಿ ಸಿಎಂ ಅರವಿಂದ್ ಕೇಜಿವಾಲ್ ಸಲ್ಲಿಸಿದ್ದಂತೆ ಅಬಕಾರಿ ನೀತಿ ಪರಿಷ್ಕರಣೆ ಅಕ್ರಮ ಪ್ರಕರಣದ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ಆ ಬಳಿಕ ದೆಹಲಿ ಸಿಎಂ ಅರವಿಂದ್ ಕೇಜಿವಾಲ್ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಬ್ರಿವಾಲ್ ಅವರಿಗೆ ದೆಹಲಿ ನ್ಯಾಯಾಲಯ ಗುರುವಾರ ಜಾಮೀನು ನೀಡಿದೆ.