Connect with us

ಬೆಂಗಳೂರು

ಎಸ್ ಟಿ ಎಸ್ ಗೆ ಬಿಜೆಪಿ ನಾಯಕರ ತರಾಟೆ

ಬೆಂಗಳೂರು: ಯಶವಂತಪುರಕ್ಕೆ ಡಬಲ್ ಧಮಕಾ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಹೊಸಪಾಳ್ಯದ ಮದುವೆ ಮನೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ನೂತನವಾಗಿ ಆಯ್ಕೆಯಾದ ಲೋಕಸಭಾ ಹಾಗೂ ನೂತನವಾಗಿ ವಿಧಾನ ಪರಿಷತ್ ಗೆ ಸದಸ್ಯರಾಗಿರುವ ಜವರಾಯಿಗೌಡರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಸಂಸದೆ ಶೋಭ ಅವರು ಮಾತನಾಡುತ್ತ 2013 ರಲ್ಲಿ ನಾನು ಯಶವಂತಪುರ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿದಿದ್ದರೆ ನಾನು ಅಥವಾ ಜನತದಾಳದ ಅಭ್ಯರ್ಥಿ ಜವರಾಯಿಗೌಡರು ಗೆಲ್ಲಬೇಕಿತ್ತು. ಅದರೆ ನಾನು ನಿಂತಿಲ್ಲ ಆ ಕಾರಣದಿಂದ ಎಸ್ ಟಿ ಸೋಮಶೇಖರ್ ಅವರಿಗೆ ಲಾಭವಾಯಿತು. ಕಳೆದ ಬಾರಿ ಎಸ್ ಟಿ ಸೋಮಶೇಖರ್ ಅವರು ಬಿಜೆಪಿ ಚಿಹ್ನೆಯಿಂದ ಸ್ಪರ್ಧಿಸಿದ್ದಾಗ ನಮ್ಮ ಬಿಜೆಪಿ ಕಾರ್ಯಕರ್ತರು ಅವರೊಂದಿಗೆ ಕೆಲಸ ಮಾಡಲು ಸಿದ್ದರಿರಲಿಲ್ಲ. ಆದರೆ ಪಾರ್ಟಿಯ ಸೂಚನೆ ಮೇರೆಗೆ ಕಾರ್ಯಕರ್ತರು ಕೆಲಸ ಮಾಡಿ ಅವರಿಗೆ ಗೆಲುವುನ್ನು ತಂದಿಕೊಟ್ಟಿದ್ದೇವೆ. ಗೆದ್ದ ಮೇಲೆ ಅವರು ಪಾರ್ಟಿ ಹಾಗೂ ಕಾರ್ಯಕರ್ತರಿಗೆ ಮೋಸ ಮಾಡಿದ್ದಾರೆ ಎಂದು ವಾಗ್ದಾಳಿಯನ್ನು ನಡೆಸಿದರು. ಇಂದು ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಯಶವಂತಪುರದಲ್ಲಿ 1,13,000 ಮತಗಳು ಲೀಡ್‍ನ್ನು ನೀಡಿ ಮತದಾರರು ಗೆಲ್ಲಿಸಿದ್ದಿರಿ. ಈ ಲೀಡ್‍ನ್ನು ನೀಡಿದ ಮತದಾರರು ಎಸ್ ಟಿ ಸೋಮಶೇಖರ್ ಅವರಿಗೆ ತಕ್ಕ ಉತ್ತರ ನೀಡಿದ್ದಾರೆ ಎಂದು ನಾನು ಭಾವಿಸಿದ್ದೇನೆ. ಎರಡು ದೋಣಿಯಲ್ಲಿ ನೀವು ಪ್ರಯಾಣ ಮಾಡುತ್ತಿದ್ದೀರಿ ಎಂದು ಎಚ್ಚರಿಕೆಯನ್ನು ನೀಡುತ್ತಿದ್ದೇನೆ ಎಂದರು. ಯಶವಂತಪುರ ಕ್ಷೇತ್ರದ ಬಿಜೆಪಿ ಜನರ ಸಮಸ್ಯೆಗಳನ್ನು ಪರಿಷ್ಕರಿಸಲು ನಾನು ಕೆಲಸ ಮಾಡುತ್ತೇನೆ. ಕಾರ್ಯಕರ್ತರೊಂದಿಗೆ ನಿಂತು ಎಸ್ ಟಿ ಸೋಮಶೇಖರ್ ಅವರು ಮಾಡುತ್ತಿರುವ ದಬ್ಬಾಳಿಕೆಯನ್ನು ತಡೆಯುತ್ತೇನೆ. ಕೆಂಗೇರಿ ನಾಗರೀಕರು ಎದುರುಸುತ್ತಿರುವ ರೈಲ್ವೆ ಬ್ರಿಡ್ಜ್ ಸಮಸ್ಯೆಯನ್ನು ಮೊದಲು ಬಗೆಹರಿಸುತ್ತೇನೆ ಎಂದರು. ಕಾರ್ಯಕ್ರಮದಲ್ಲಿ ನೂತನ ವಿಧಾನ ಪರಿಷತ್ ಸದಸ್ಯ ಟಿ ಎನ್ ಜವರಾಯಿಗೌಡರು ಮಾತನಾಡುತ್ತ ಈ ಗೆಲುವು ಹಾಗೂ ಪದವಿ ನನ್ನದಲ್ಲ. ನನ್ನ ಜೊತೆ ಕೆಲಸ ಮಾಡಿರುವ ಜೆಡಿಎಸ್ ಕಾರ್ಯಕರ್ತರಿಗೆ ಸಲ್ಲಬೇಕು. ಸಂಸದೆ ಶೋಭ ಅವರು ಇಂದು ಬರೇ ಯಶವಂತಪುರ ಕ್ಷೇತ್ರದಲ್ಲೇ 1,13,000 ನಿಮ್ಮಗೆ ಲೀಡ್ ಸಿಕ್ಕಿರುವುದು ಇದಕ್ಕೆ ಮುಖ್ಯ ಕಾರಣ. ನೀವು ಅಂದು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸ ಎಂದರು. ಬಿಜೆಪಿ ಪಕ್ಷದಲ್ಲಿ ಗೆದ್ದ ಎಸ್ ಟಿ ಸೋಮಶೇಖರ್ ಅವರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಕೆಲಸ ಮಾಡಿದ್ದೀರಿ. ನಿಮಗೆ ಜನ ತಕ್ಕ ಪಾಠವನ್ನು ಕಲಿಸಿದ್ದಾರೆ. ಸೋಮಶೇಖರ್ ಅವರೇ ನಿಮಗೆ ಏನು ಹೇಳಬೇಕು ಪಕ್ಷಕ್ಕೆ ದ್ರೋಹ ಮಾಡಿರುವ ನೀವು ನಿಮಗೆ ಕ್ಷೇತ್ರದಲ್ಲಿ ಗೆಲುವು ನೀಡಿರುವುದು ಶೋಭಾ ಅವರು ಒಂದು ರೀತಿಯಲ್ಲಿ ಇಂದು ನಿಮಗೆ ಶಾಸಕ ಸ್ಧಾನಕ್ಕೆ ಜನ್ಮ ನೀಡಿರುವುದು ಶೋಭ ಅವರೇ ಎಂದು ಅವರ ವಿರುದ್ಧ ವಾಗ್ದಾಳಿಯನ್ನು ನಡೆಸಿದರು. ಕೆಂಪೇಗೌಡ ಬಡಾವಣೆಯಲ್ಲಿ ಅನೇಕ ಅವ್ಯವಹರಗಳು ಆಗಿದೆ. ಎಂದು ಎಸ್ ಟಿ ಸೋಮಶೇಖರ್ ಅವರ ಮೇಲೆ ಆರೋಪಿಸಿದರು. ಎಸ್ ಟಿ ಸೋಮಶೇಖರ್ ಅವರೇ ನಿಮಗೆ ಪಶ್ಚಾತ್ತಾಪ ಇಲ್ಲವೇ ಎಂದರು. ನಿಮ್ಮ ರಾಜೀನಾಮೆ ನಾವು ಕೇಳಲ್ಲ, ಶಾಸಕರೇ ನೀವು ಬಡವರಿಗೆ ತೊಂದರೆ ಕೊಡದೆ ಕೆಲಸ ಮಾಡಿ ಎಂದರು.

ಕಾರ್ಯಕ್ರಮದಲ್ಲಿ ನಗರಮಂಡಲಾಧ್ಯಕ್ಷ ಅನಿಲ್ ಚಳಗೇರಿ, ಬೆಂಗಳೂರು ಗ್ರಾಮಾಂತರ ಅಧ್ಯಕ್ಷ ರಂಗರಾಜ್, ಬೆಂಗಳೂರು ಜಿಲ್ಲಾಧ್ಯಕ್ಷ ಹರೀಶ್, ಪ್ರಧಾನ ಕಾರ್ಯದರ್ಶಿ ವಾಜರಹಳ್ಳಿ ಶಶಿ, ಬಿಜೆಪಿ ಮುಖಂಡರಾದ ಜಂಗಮ ರಮೇಶ್, ಆರ್ ಪಿ ಪ್ರಕಾಶ್, ಮಾಜಿ ಪಾಲಿಕೆ ಸದಸ್ಯ ರ.ಅಂಜನಪ್ಪ, ವಿ.ವಿ.ಸತ್ಯನಾರಾಯಣ, ಮಾಜಿ ನಗರಮಂಡಲಾಧ್ಯಕ್ಷ ಮಾರೇಗೌಡ, ವಾರ್ಡ್ ಅಧ್ಯಕ್ಷರುಗಳಾದ ಸಂತೋಷ್, ಕಿಟ್ಟಿ, ಪ್ರಸಾದ್ ಹಾಗೂ ಹಲವಾರು ಮುಖಂಡರುಗಳು ಉಪಸ್ಥಿತರಿದ್ದರು.

ಬೆಂಗಳೂರು

ಕಾಲ್ತುಳಿತ ದುರಂತ ಬಗ್ಗೆ ಮಾಹಿತಿ ನೀಡುವ ಸಾರ್ವಜನಿಕರಿಗೆ ಜೂ.​ 24 ಕೊನೆಯ ದಿನ: ನಿವೃತ್ತ ನ್ಯಾಯಾಧೀಶರಿಂದ ಜಾಹೀರಾತು

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವು ಸಂಬಂಧ ನಿವೃತ್ತ ನ್ಯಾಯಮೂರ್ತಿ ಜಾನ್​ ಮೈಕಲ್​ ಕುನ್ಹಾ ನೇತೃತ್ವದ ಏಕಸದಸ್ಯ ಆಯೋಗವು ವಿಚಾರಣೆ ಚುರುಕುಗೊಳಿಸಿದೆ. ಈ ನಿಟ್ಟಿನಲ್ಲಿ ದುರ್ಘಟನೆ ಬಗ್ಗೆ ಮಾಹಿತಿ ನೀಡಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿದೆ.

ಜೂನ್ 4ರಂದು ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದರೆ ಹಾಗೂ 50ಕ್ಕಿಂತ ಹೆಚ್ಚು ಮಂದಿ ಗಾಯಗೊಂಡಿದ್ದರು. ರಾಜ್ಯ ಸರ್ಕಾರವು ಮ್ಯಾಜಿಸ್ಟ್ರೇಟ್, ಸಿಐಡಿ ಹಾಗೂ ನಿವೃತ್ತ ನ್ಯಾಯಾಧೀಶರಾದ ಕುನ್ನಾ ಅವರ ನೇತೃತ್ವದ ಆಯೋಗ ರಚಿಸಿದೆ. ಈ ಸಂಬಂಧ ಪ್ರತ್ಯೇಕ ತನಿಖೆ ನಡೆಸುತ್ತಿದೆ. ದುರ್ಘಟನೆ ವೇಳೆ ಘಟನೆಯ ವಾಸ್ತವಾಂಶದ ವಿವರಗಳು, ಮಾಹಿತಿ ಹಾಗೂ ಸತ್ಯ ಸಂಗತಿಗಳ ತಿಳಿದಿರುವ ಸಾರ್ವಜನಿಕರು ಆಯೋಗಕ್ಕೆ ತಿಳಿಸಬಹುದಾಗಿದೆ.

ತನಿಖಾ ಆಯೋಗಕ್ಕೆ ಹೇಳಿಕೆ ನೀಡಲು ಹಾಗೂ ಸಾಕ್ಷ್ಯ ದಾಖಲೆಗಳನ್ನು ಒದಗಿಸಲು ಇಚ್ಛಿಸುವವರು ಎರಡು ಪ್ರತಿಗಳಲ್ಲಿ ದೃಢೀಕೃತ ಪ್ರಮಾಣ ಪತ್ರದೊಂದಿಗೆ ಸಲ್ಲಿಸಬಹುದಾಗಿದೆ. ಜೂನ್ 24ರ ಒಳಗೆ ಸಹಿ ಮಾಡಿದ ಹಾಗೂ ಸ್ಕ್ಯಾನ್ ಮಾಡಿದ ಪ್ರಮಾಣಪತ್ರ ಹಾಗೂ ದಾಖಲೆಗಳೊಂದಿಗೆ cdinqcom@gmail.com ಕಳುಹಿಸಬೇಕು.

ಅಲ್ಲದೇ ಕೊಠಡಿ ಸಂಖ್ಯೆ 12, ಒಂದನೇ ಮಹಡಿ, ಹಳೆಕಟ್ಟಡ, ಕುಮಾರಕೃಪಾ ಅತಿಥಿ ಗೃಹ, ಬೆಂಗಳೂರು-560001. ಈ ಕಚೇರಿ ವಿಳಾಸಕ್ಕೆ ಕೊರಿಯರ್ ಮಾಡಬಹುದಾಗಿದೆ ಎಂದು ದಿನಪತ್ರಿಕೆಗಳಲ್ಲಿ ಒಳಾಡಳಿತ ಇಲಾಖೆಯು ಜಾಹೀರಾತು ನೀಡಿದೆ

Continue Reading

ಬೆಂಗಳೂರು

 ಇಂದು ಶ್ರೀನಿವಾಸಪುರ ತಾಲೂಕು ಬಂದ್

ಕೋಲಾರ: ಹಣ್ಣುಗಳ ರಾಜ ಮಾವಿನ ಹಣ್ಣಿಗೆ (Mango) ಬೆಲೆ ಕುಸಿದ ಹಿನ್ನೆಲೆ ಇಂದು ಕೋಲಾರದ (Kolar) ಶ್ರೀನೀವಾಸಪುರ (Srinivaspur) ತಾಲೂಕು ಬಂದ್‌ಗೆ ಕರೆ ನೀಡಲಾಗಿದೆ.

ಮಾವು ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಬಂದ್‌ಗೆ ಕರೆ ನೀಡಿದ್ದು, ಮಾವು ಬೆಳೆಗಾರರರು ಸೇರಿದಂತೆ ವಿವಿಧ ಸಂಘಟನೆಗಳು ಬಂದ್‌ಗೆ ಸಾಥ್ ಕೊಟ್ಟಿವೆ. ಮಾವು ಬೆಳೆಗೆ ಬೆಲೆ ಕುಸಿತ ಹಿನ್ನೆಲೆ ಕಂಗಾಲಾಗಿರುವ ಮಾವು ಬೆಳೆಗಾರರು, ಆಂದ್ರಪ್ರದೇಶ ಮಾದರಿಯಲ್ಲಿ ರಾಜ್ಯ ಸರ್ಕಾರ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಬಂದ್‌ಗೆ ಕರೆ ಕೊಡಲಾಗಿದೆ. ಮಾವು ಬೆಳೆಗಾರರ ಬಂದ್‌ಗೆ ಬಿಜೆಪಿ, ಜೆಡಿಎಸ್ ಸೇರಿ ಹಲವು ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ. ಒಂದು ಟನ್ ಮಾವು 3 ರಿಂದ 4 ಸಾವಿರ ರೂ.ಗೆ ಮಾರಾಟ ಮಾಡಲಾಗುತ್ತಿದೆ. ಸರ್ಕಾರ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಲಾಗಿದೆ.

ಇನ್ನು ಶ್ರೀನಿವಾಸಪುರದಲ್ಲಿ ಮಾವು ರಸ್ತೆಯಲ್ಲಿ ಸುರಿದು ರೈತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ರೀನಿವಾಸಪುರದ ಬಸ್ ನಿಲ್ದಾಣದಲ್ಲಿ ಮಾವು ರಸ್ತೆಯಲ್ಲಿ ಸುರಿದು ಪ್ರತಿಭಟನೆ ನಡೆಸಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

Continue Reading

ಬಿಬಿಎಂಪಿ

ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತಾ ಕಡ್ಡಾಯ: ಜು.1ರಿಂದ ಹೊಸ ನಿಯಮ ಜಾರಿಗೆ..!

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಸ್ವತ್ತುಗಳು ಇ-ಖಾತಾ ಪಡೆದಿರುವುದನ್ನು ಕಡ್ಡಾಯಗೊಳಿಸಿ ಬಿಬಿಎಂಪಿ ಆದೇಶಿಸಿದೆ.

ಈ ಸಂಬಂಧ ಸೋಮವಾರ ಆದೇಶ ಹೊರಡಿಸಿರುವ ಮುಖ್ಯ ಆಯುಕ್ತ ಮಹೇಶ್ವರ್ ರಾವ್‌ ಅವರು, ಕಂದಾಯ ವಿಭಾಗದಿಂದ ಇ-ಆಸ್ತಿ ತಂತ್ರಾಂಶವನ್ನು ಜಾರಿ ಮಾಡಲಾಗಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಈಗಾಗಲೇ ಇ-ಖಾತಾ ನೀಡಲಾಗುತ್ತಿದೆ. ಆದುದರಿಂದ ಸ್ವತ್ತುಗಳ ದತ್ತಾಂಶವು ಇ-ಆಸ್ತಿ ತಂತ್ರಾಂಶದಲ್ಲಿ ಲಭ್ಯವಿರುತ್ತದೆ ಎಂದು ಹೇಳಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮತ್ತು ವಿತರಣೆ ವ್ಯವಸ್ಥೆ ಮಾಡಲಾಗಿದೆ. ಅದರ ಜತೆಗೆ ಸ್ವತ್ತುಗಳಿಗೆಇ-ಖಾತಾವನ್ನು ಆನ್‌ಲೈನ್‌ಮೂಲಕ ನೀಡಲಾಗುತ್ತಿದೆ. ಇದೀಗ ಎರಡೂ ತಂತ್ರಾಂಶವನ್ನು ಏಕೀಕರಣಗೊಳಿಸಲಾಗುತ್ತಿದೆ. ಹೀಗಾಗಿ ಕಟ್ಟಡನಕ್ಷೆ ಮಂಜೂರಾತಿಗೆ ಅರ್ಜಿಸಲ್ಲಿ ಸುವವರು ಮೊದಲು ಇ- ಖಾತಾವನ್ನು ಪಡೆದಿರಬೇಕಿದೆ.

ಹೀಗಾಗಿ ಜು. 1ರಿಂದ ನಕ್ಷೆ ಮಂಜೂರಾತಿಗೆ ಅರ್ಜಿ ಸಲ್ಲಿಸುವವರುಇ-ಖಾತಾ ಅಥವಾ ಇಪಿಐಡಿ ಸಂಖ್ಯೆಯನ್ನು ತಂತ್ರಾಂಶದಲ್ಲಿ ನಮೂದಿಸುವುದು ಹಾಗೂ ಇ- ಖಾತಾ ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇ-ಖಾತಾ ಸಲ್ಲಿಸದ ಅರ್ಜಿಗಳನ್ನು ಕಟ್ಟಡ ನಕ್ಷೆ ಮಂಜೂರಾತಿಗೆ ಪರಿಗಣಿಸದಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇನ್ನು, ನಂಬಿಕೆಯೊಂದಿಗೆ ಪರಿಶೀಲನೆ ವ್ಯವಸ್ಥೆ ಅಡಿಯಲ್ಲಿ ನಿಗದಿತ ಕಾಲಮಿತಿಯಲ್ಲಿ ತಾತ್ಕಾಲಿಕ ನಕ್ಷೆ ಮಂಜೂರಾತಿ ಹೊಣೆಯನ್ನು ಸಂಬಂಧಪಟ್ಟ ಸಹಾಯಕ ನಿರ್ದೇಶಕ (ನಗರ ಯೋಜನೆ) ಅವರಿಗೆ ನೀಡಲಾಗಿದೆ. ಒಂದು ವೇಳೆ ಸಹಾಯಕ ನಿರ್ದೇಶಕ (ನಗರ ಯೋಜನೆ) ನಿಗದಿತ ಕಾಲ ಮಿತಿಯಲ್ಲಿ ಅರ್ಜಿಗಳನ್ನು ಪರಿಶೀಲಿಸದಿದ್ದರೆ ತಂತ್ರಾಶದಲ್ಲಿ ಅರ್ಜಿಗಳಿಗೆ ಸ್ವಯಂಚಾಲಿತವಾಗಿ ಡೀಮ್ಡ್ ಅನುಮೋದನೆ ದೊರೆಯಲಿದೆ.

ಒಂದು ವೇಳೆ ನಕ್ಷೆ ಮಂಜೂರಾತಿ ಅರ್ಜಿಗಳು ಇ-ಖಾತಾ ಸೇರಿದಂತೆ ಇನ್ನಿತರ ದಾಖಲೆಗಳನ್ನು ಸಲ್ಲಿಸದೇ ಡೀಮ್ ಅನುಮೋದನೆ ದೊರೆತರೆ, ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆ ಮಾಡಿ ನಿಯಮದ ಪ್ರಕಾರ ಶಿಸ್ತು ಕ್ರಮಕೈಗೊಳ್ಳುವುದಾಗಿ ಆದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ.

5 ಲಕ್ಷ ನಾಗರಿಕರಿಗೆ ಅಂತಿಮ ಇ-ಖಾತಾ ವಿತರಣೆ

ಬಿಬಿಎಂಪಿ ಪಾಲಿಕೆ ವ್ಯಾಪ್ತಿಯಲ್ಲಿ ಈವರೆಗೂ 5 ಲಕ್ಷ ನಾಗರಿಕರು ಅಂತಿಮ ಇ-ಖಾತಾ ಪಡೆದಿದ್ದಾರೆ ಎಂದು ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್‌ ಮೌದ್ಗಿಲ್ ತಿಳಿಸಿದ್ದಾರೆ.

25 ಲಕ್ಷಕ್ಕಿಂತ ಹೆಚ್ಚು ಕರಡು ಇ-ಖಾತಾಗಳು ಆನ್‌ಲೈನ್‌ನಲ್ಲಿ ಲಭ್ಯವಿದೆ. ನಾಗರಿಕರು ತಮ್ಮ ಆಧಾರ್‌ ಸಂಖ್ಯೆ, ಮಾರಾಟ ದಸ್ತಾವೇಜಿನ ಸಂಖ್ಯೆ, ಆಸ್ತಿಯ ತೆರಿಗೆ ಐ.ಡಿ, ಬೆಸ್ಕಾಂ ಸಂಖ್ಯೆ (ಖಾಲಿ ಜಾಗಕ್ಕೆ ಐಚ್ಛಿಕ) ಮತ್ತು ಆಸ್ತಿಯ ಫೋಟೋ ಹಾಕಬೇಕು. ಈ ಮಾಹಿತಿಗಳನ್ನು ನೀಡಿದ ನಂತರ ನಾಗರಿಕರಿಗೆ ಅಂತಿಮ ಇ-ಖಾತಾ ಕನಿಷ್ಠ 1 ರಿಂದ 2 ದಿನಗಳಲ್ಲಿ ಲಭ್ಯವಾಗಲಿದೆ ಎಂದು ಹೇಳಿದ್ದಾರೆ.

ಪ್ರತಿದಿನ ಸುಮಾರು 3,000 ಜನರು ಈ ಪ್ರಕ್ರಿಯೆ ನಡೆಸುತ್ತಿದ್ದಾರೆ. ಮತ್ತು ಇಷ್ಟೇ ಸಂಖ್ಯೆಯವರಿಗೆ ಇ-ಖಾತಾ ಅನುಮೋದನೆ ದೊರೆಯುತ್ತಿದೆ. ಈವರೆಗೆ ಸುಮಾರು 5 ಲಕ್ಷ ನಾಗರಿಕರು ತಮ್ಮ ಇ-ಖಾತಾ ಪಡೆದುಕೊಂಡಿದ್ದಾರೆ. ಅರ್ಜಿ ಸಲ್ಲಿಕೆಯಾದ 1 ರಿಂದ 2 ದಿನಗಳಲ್ಲಿ ಇ-ಖಾತಾ ಅನುಮೋದಿತವಾಗಲಿದೆ. ನಾಗಕರಿರು ಇ-ಖಾತಾವನ್ನು ಆನ್‌ಲೈನ್‌ BBMPeAasthi.karnataka.gov.in ಮೂಲಕ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ

Continue Reading

Trending