ಚುನಾವಣೆ
ಪವನ್ ಕಲ್ಯಾಣ್ ಎದುರಾಳಿ.. ಪೀಠಾಪುರಂ ಕ್ಷೇತ್ರದಲ್ಲಿ ಸೋತವರಿಗೆ ಇನ್ನೂ ತಪ್ಪದ ಸಂಕಷ್ಟ; ಫ್ಯಾನ್ಸ್ ಮಾಡಿದ್ದೇನು?
ಟಾಲಿವುಡ್ನ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಈಗ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ. ಸತತ ಸೋಲಿನ ರುಚಿಯನ್ನೇ ಕಂಡಿದ್ದ ಪವನ್ ಕಲ್ಯಾಣ್, ನಿರಂತರ ಪ್ರಯತ್ನಗಳಿಂದ 2024ರ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದಾರೆ. ಜನಸೇನಾ ಪಾರ್ಟಿ ಅಭ್ಯರ್ಥಿಗಳು ದೇಶದೆಲ್ಲೇ ಮೊದಲ ಬಾರಿಗೆ ಒಂದು ಪಕ್ಷ ಸ್ಪರ್ಧಿಸಿದ್ದ ಟೈಂ 100 ಔಟ್ ಆಫ್ 100 ರಿಸಲ್ಟ್ ತಂದು ಕೊಂಡಿದ್ದಾರೆ.
ಪವನ್ ಕಲ್ಯಾಣ್ ಜನಸೇನಾ ಪಕ್ಷಕ್ಕೆ ಈ ಬಾರಿಯೂ ಪಕ್ಕಾ ಸೋಲೇ ಆಗುತ್ತೆ ಅಂತ ಎದುರಾಳಿಗಳು ಕಾಯುತ್ತಾ ಇದ್ದರು. ಆದ್ರೆ ಮಿಂಚಿನ ವೇಗದಂತೆ ಪವನ್ ಕಲ್ಯಾಣ್ ಅಂಡ್ ಟೀಂನ ರಣತಂತ್ರಕ್ಕೆ ಪ್ರತಿಸ್ಪರ್ಧಿಗಳು ದಿಗ್ಬ್ರಮೆಯಾಗುವಂತೆ ಗೆದ್ದು ತೋರಿಸಿದ್ದಾರೆ.
ಪವನ್ ಕಲ್ಯಾಣ್ ಅವರು ಪೀಠಾಪುರಂ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಈ ಕ್ಷೇತ್ರದಲ್ಲಿ ಪವನ್ ಕಲ್ಯಾಣ್ ಅವರಿಗೆ ಎದುರಾಳಿಯಾಗಿದ್ದು, ವೈಎಸ್‌ಆರ್ ಕಾಂಗ್ರೆಸ್ನ ಹಿರಿಯ ನಾಯಕ ಮುದ್ರಗಡ ಪದ್ಮನಾಭಂ ಅವರು. ಪದ್ಮನಾಭಂ ಅವರು ಚುನಾವಣೆಯಲ್ಲಿ ಪವನ್ ಕಲ್ಯಾಣ್ ಗೆದ್ರೆ ನನ್ನ ಹೆಸರನ್ನೇ ಚೇಂಜ್ ಮಾಡಿಕೊಳ್ತೀನಿ ಅಂತ ಸವಾಲು ಹಾಕಿದ್ದರು. ಆ ಸವಾಲಿನಂತೆ ವೈಎಸ್‌ಆರ್ ಕಾಂಗ್ರೆಸ್ನ ಹಿರಿಯ ನಾಯಕ ಮುದ್ರಗಡ ಪದ್ಮನಾಭಂ ಈಗ ತಮ್ಮ ಹೆಸರನ್ನೇ ಬದಲಿಸಿಕೊಳ್ಳಲು ಒತ್ತಡ ಹಾಕಲಾಗಿದೆ.
ಹೆಸರು ಬದಲಾಯಿಸಿಕೊಂಡ ಕಾಪು ನಾಯಕ!
ಪವನ್ ಕಲ್ಯಾಣ್ ಅವರು ಪೀಠಾಪುರಂ ಕ್ಷೇತ್ರದಲ್ಲಿ ಸ್ಪರ್ಧೆ ಮಾಡ್ತಾರೆ ಅಂತ ಯಾವಾಗ ಘೋಷಣೆಯಾಯ್ತೋ, ಆಗಿನಿಂದಲೇ ಮಾತಿನ ಯುದ್ಧವೇ ಶುರುವಾಗಿತ್ತು. ಪವನ್ ಕಲ್ಯಾಣ್ ಅವರ ಕಾಪು ಸಮುದಾಯ ಮುಖಂಡ ಹಾಗೂ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಪಕ್ಷದ ಮುದ್ರಗಡ ಪದ್ಮನಾಭಂ ವಾಕ್ ಪ್ರಹಾರವೇ ಮಾಡ್ತಿದ್ರು. ಜೊತೆಗೆ ಪೀಠಾಪುರಂ ವಿಧಾನಸಭಾ ಕ್ಷೇತ್ರದಲ್ಲಿ ಪವನ್ ಕಲ್ಯಾಣ್ ಗೆದ್ರೆ, ನನ್ನ ಹೆಸರನ್ನು ತೆಗೆದು, ರೆಡ್ಡಿ ಅಂತ ಬದಲಾವಣೆ ಮಾಡಿಕೊಳ್ತೀನಿ ಅಂತ ಸವಾಲು ಹಾಕಿದ್ದರು.
ವಿಧಾನಸಭಾ ಚುನಾವಣೆ ವೇಳೆ ಪದ್ಮನಾಭಂ ಅವರಿಗೆ ಆಘಾತ ಎದುರಾಗಿತ್ತು. ಪವನ್ ಕಲ್ಯಾಣ್ ವಿರುದ್ಧ ವಾಗ್ದಾಳಿ ನಡೆಸಿದ್ದ ಪದ್ಮನಾಭಂ ಅವರ ಸ್ವಂತ ಮಗಳೇ ಪವನ್‌ಗೆ ಬೆಂಬಲ ಕೊಟ್ಟು, ತಂದೆಯ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಾ ಇದ್ದರು. ಅಲ್ಲದೇ ಜನಸೇನಾ ಪಕ್ಷದ ಪ್ರಚಾರ ಸಭೆಗಳಲ್ಲೂ ಭಾಗಿಯಾಗಿ ಪವನ್ ಕಲ್ಯಾಣ್ ಅವರಿಗೆ ಗೆಲುವು ಖಚಿತ ಅಂತ ಮಗಳೇ ಘೋಷಣೆ ಮಾಡಿದ್ದರು. ಪದ್ಮನಾಭಂ ಅವರು ಪವನ್ ಕಲ್ಯಾಣ್ ಅವರನ್ನು ಸೋಲಿಸೋದೇ ನನ್ನ ಗುರಿ ಅಂತ ಸುದ್ದಿಗೋಷ್ಟಿಯಲ್ಲಿ ಅಬ್ಬರದಲ್ಲೇ ಮಾತನಾಡಿದ್ದರು. ಆದರೆ ಚುನಾವಣೆಯ ಫಲಿತಾಂಶದಲ್ಲಿ ಪವನ್ ಕಲ್ಯಾಣ್ ಅವರು 70 ಸಾವಿರ ಮತಗಳ ಅಂತರದಿಂದ ಗೆದ್ದು ಬೀಗಿದ್ದರು.
ಪದ್ಮನಾಭಂ ಅವರು ಪವನ್ ಕಲ್ಯಾಣ್ಗೆ ಚಾಲೆಂಜ್ ಹಾಕಿದ್ದ ಬಗ್ಗೆ ಅಭಿಮಾನಿಗಳು ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ಟ್ರೋಲ್ ಮಾಡ್ತಿದ್ರು. ಪವನ್ ಗೆದ್ದರೆ ಮುದ್ರಗಡ ಪದ್ಮನಾಭಂ ಅನ್ನೋ ಹೆಸರು ಬದಲು, ಪದ್ಮನಾಭ ರೆಡ್ಡಿ ಅಂತಾ ಹೆಸರು ಇಟ್ಟುಕೊಳ್ಳಲು ಒತ್ತಾಯಿಸಿದ್ದರು. ಪವನ್ ಕಲ್ಯಾಣ್ ಫ್ಯಾನ್ಸ್ ಒತ್ತಾಯದಂತೆ ಪದ್ಮನಾಭಂ ಅವರು ಕೊನೆಗೆ ತಮ್ಮ ಹೆಸರನ್ನು ಚೇಂಜ್ ಮಾಡಿಕೊಂಡಿದ್ದಾರೆ. ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ಮುಗಿಸಿ ಗೆಜೆಟ್ ದಾಖಲೆಗಳನ್ನು ಬಿಡುಗಡೆ ಮಾಡಿ ಪದ್ಮನಾಭ ರೆಡ್ಡಿ ಅವರು ಅಚ್ಚರಿ ಮೂಡಿಸಿದ್ದಾರೆ. ಇಷ್ಟಾದ್ರೂ ಪದ್ಮನಾಭ ರೆಡ್ಡಿ ವಿರುದ್ಧ ಪವನ್ ಕಲ್ಯಾಣ್ ಫ್ಯಾನ್ಸ್ ಆಕ್ರೋಶ ತಣ್ಣಗಾಗಿಲ್ಲ.
ಚುನಾವಣೆ
Bhabanipur Shock: 700 ಮತದಾರರ ಬೂತ್‌ನಲ್ಲಿ ಮಮತಾ ಬ್ಯಾನರ್ಜಿ ಪಡೆದದ್ದು ಕೇವಲ 28 ಮತ!
ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿರುವ ಭವಾನಿಪುರ ವಿಧಾನಸಭಾ ಕ್ಷೇತ್ರದ ಫಲಿತಾಂಶದಲ್ಲಿ ಮುಖ್ಯಮಂತ್ರಿ Mamata Banerjee ಅವರಿಗೆ ಭಾರೀ ಹಿನ್ನಡೆಯಾಗಿದೆ. ಟಿಎಂಸಿಯ ಭದ್ರಕೋಟೆ ಎಂದೇ ಗುರುತಿಸಿಕೊಂಡಿದ್ದ ಭವಾನಿಪುರ ಕ್ಷೇತ್ರದಲ್ಲಿ ಬಿಜೆಪಿ ನಾಯಕ Suvendu Adhikari ಐತಿಹಾಸಿಕ ಜಯ ಸಾಧಿಸಿದ್ದು, ಮಮತಾ ಬ್ಯಾನರ್ಜಿ ಅವರ ಸ್ವಂತ ವಾರ್ಡ್‌ನಲ್ಲಿಯೇ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ.
ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಬೂತ್‌ವಾರು ಅಂಕಿ-ಅಂಶಗಳ ಪ್ರಕಾರ, ಭವಾನಿಪುರ ಕ್ಷೇತ್ರದ 267 ಬೂತ್‌ಗಳ ಪೈಕಿ 207 ಬೂತ್‌ಗಳಲ್ಲಿ ಸುವೇಂದು ಅಧಿಕಾರಿ ಮುನ್ನಡೆ ಪಡೆದಿದ್ದಾರೆ. ಮಮತಾ ಬ್ಯಾನರ್ಜಿ ಅವರ ಕಾಲಿಘಾಟ್ ನಿವಾಸವಿರುವ ವಾರ್ಡ್ ನಂಬರ್ 73ರಲ್ಲಿ ಸುವೇಂದು ಅಧಿಕಾರಿ 8,932 ಮತಗಳನ್ನು ಪಡೆದರೆ, ಮಮತಾ ಬ್ಯಾನರ್ಜಿ ಕೇವಲ 4,284 ಮತಗಳಿಗೆ ಸೀಮಿತರಾಗಿದ್ದಾರೆ.
ಚುನಾವಣೆಗೆ ಮುನ್ನ Amit Shah ಬಿಜೆಪಿ ಕಾರ್ಯಕರ್ತರಿಗೆ “ಮಮತಾ ಬ್ಯಾನರ್ಜಿಯನ್ನು ಅವರದೇ ಕೋಟೆಯಲ್ಲಿ ಸೋಲಿಸಿ” ಎಂದು ಕರೆ ನೀಡಿದ್ದರು. ಇದೀಗ ಸುವೇಂದು ಅಧಿಕಾರಿ ಆ ಸವಾಲನ್ನು ಯಶಸ್ವಿಯಾಗಿ ಈಡೇರಿಸಿದ್ದಾರೆ ಎಂದು ಬಿಜೆಪಿ ಪಾಳಯದಲ್ಲಿ ಸಂಭ್ರಮ ವ್ಯಕ್ತವಾಗಿದೆ.
ಸುವೇಂದು ಅಧಿಕಾರಿಗೆ ದಕ್ಷಿಣ ಕೋಲ್ಕತ್ತಾದ ಭವಾನಿಪುರ ಕ್ಷೇತ್ರದಲ್ಲಿ ಮೊದಲಿನಿಂದ ರಾಜಕೀಯ ನೆಲೆ ಕಡಿಮೆ ಇತ್ತು. ಆದರೂ ಕ್ಷೇತ್ರದಲ್ಲಿ ಶೇಕಡಾ 63 ಮತಗಳನ್ನು ಪಡೆದು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಮಮತಾ ಬ್ಯಾನರ್ಜಿ ಕೇವಲ ಶೇಕಡಾ 30 ಮತಗಳನ್ನು ಪಡೆಯಲು ಮಾತ್ರ ಸಾಧ್ಯವಾಗಿದೆ.
ಇನ್ನು ಹಲವು ಬೂತ್‌ಗಳಲ್ಲಿ ಮಮತಾ ಬ್ಯಾನರ್ಜಿ 50 ಮತಗಳ ಗಡಿ ದಾಟಲೂ ವಿಫಲರಾಗಿರುವುದು ಟಿಎಂಸಿ ಪಾಳಯಕ್ಕೆ ದೊಡ್ಡ ಆಘಾತವಾಗಿದೆ. 2021ರ ಉಪಚುನಾವಣೆಯಲ್ಲಿ ಏಳು ವಾರ್ಡ್‌ಗಳಲ್ಲೂ ಗೆದ್ದಿದ್ದ ದೀದಿ, ಈ ಬಾರಿ ತಮ್ಮ ಹಿಡಿತವನ್ನು ಸಂಪೂರ್ಣ ಕಳೆದುಕೊಂಡಿದ್ದಾರೆ. ಅಂತಿಮವಾಗಿ ಮಮತಾ ಬ್ಯಾನರ್ಜಿ 58,812 ಮತಗಳನ್ನು ಪಡೆದರೆ, ಸುವೇಂದು ಅಧಿಕಾರಿ 73,917 ಮತಗಳನ್ನು ಪಡೆದು ಟಿಎಂಸಿ ಕೋಟೆಯನ್ನು ಧೂಳೀಪಟ ಮಾಡಿದ್ದಾರೆ.
ಚುನಾವಣೆ
ಜಿಬಿಎ ಚುನಾವಣೆಗೆ ಕೌಂಟ್‌ಡೌನ್ ಶುರು! ಜೂನ್‌ನಲ್ಲಿ ಡೇಟ್ ಫಿಕ್ಸ್
ಬೆಂಗಳೂರು: ಬಹುನಿರೀಕ್ಷಿತ Greater Bengaluru Authority (GBA) ಚುನಾವಣೆಗೆ ಕೊನೆಗೂ ಮುಹೂರ್ತ ಕೂಡಿಬಂದಿದೆ. ಜೂನ್ 14ರಿಂದ 24ರೊಳಗೆ ಚುನಾವಣಾ ದಿನಾಂಕ ಘೋಷಣೆ ಮಾಡುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ G. A. Sangreshi ಸೂಚನೆ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಇಂದು ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ Maheshwar Rao ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಆದರೆ ಜಿಬಿಎ ಅಧ್ಯಕ್ಷರಾಗಿರುವ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಭೆಗೆ ಗೈರಾಗಿದ್ದರು.
ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿ.ಎ ಸಂಗ್ರೇಶಿ, “ರಾಜ್ಯ ಚುನಾವಣಾ ಆಯೋಗ ಮತ್ತು ಜಿಬಿಎ ಸಮಾಲೋಚನೆ ನಡೆಸಿ ದಿನಾಂಕ ನಿಗದಿಪಡಿಸುವುದು ಕಾನೂನುಬದ್ಧ ಪ್ರಕ್ರಿಯೆ. ಚುನಾವಣೆ ನಡೆಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ. ದಿನಾಂಕ ನಿಗದಿ ಮಾತ್ರ ಬಾಕಿಯಿದೆ” ಎಂದು ತಿಳಿಸಿದರು.
ಜನಗಣತಿ, ಮನೆ ಸಮೀಕ್ಷೆ ಸೇರಿದಂತೆ ಹಲವು ಆಡಳಿತಾತ್ಮಕ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆ ಸಮಯ ಪರಿಶೀಲಿಸಿ ದಿನಾಂಕ ಘೋಷಿಸುವಂತೆ ಜಿಬಿಎಗೆ ಸೂಚಿಸಲಾಗಿದೆ. ಆದರೆ ಜೂನ್ 30ರೊಳಗೆ ಚುನಾವಣೆ ದಿನಾಂಕ ನಿಗದಿಪಡಿಸಲೇಬೇಕು ಎಂದು ಆಯೋಗ ಸ್ಪಷ್ಟಪಡಿಸಿದೆ. ಈ ಕುರಿತು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಬೇಕಿರುವುದಾಗಿ ಆಯುಕ್ತರು ಹೇಳಿದರು.
ಇನ್ನೂ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಮಾತನಾಡಿ, ವಾರ್ಡ್ ವಿಂಗಡಣೆ, ಮತದಾರರ ಪಟ್ಟಿ ಹಾಗೂ ಮೀಸಲಾತಿ ಪ್ರಕ್ರಿಯೆಗಳು ಪೂರ್ಣಗೊಂಡಿವೆ ಎಂದು ಮಾಹಿತಿ ನೀಡಿದರು. ಚುನಾವಣಾ ಕಾರ್ಯಕ್ಕಾಗಿ RO, AERO ಮತ್ತು BLOಗಳ ನೇಮಕಾತಿಗೂ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಚುನಾವಣೆ
‘ನೀವು ಸೋತಿಲ್ಲ, ಗೆದ್ದಿದ್ದೀರಿ’ – ಮಮತಾ ಭೇಟಿ ಬಳಿಕ ಅಖಿಲೇಶ್ ಯಾದವ್ ಹೇಳಿಕೆ
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಹೀನಾಯ ಸೋಲು ಅನುಭವಿಸಿದ ಬೆನ್ನಲ್ಲೇ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ Akhilesh Yadav ಕೋಲ್ಕತ್ತಾಗೆ ಭೇಟಿ ನೀಡಿ Mamata Banerjee ಅವರಿಗೆ ಬೆಂಬಲ ಸೂಚಿಸಿದ್ದಾರೆ.
ಗುರುವಾರ ಕಾಲಿಘಾಟ್‌ನಲ್ಲಿರುವ ಮಮತಾ ಬ್ಯಾನರ್ಜಿ ನಿವಾಸದಲ್ಲಿ ನಡೆದ ಭೇಟಿಯ ವೇಳೆ ಅಖಿಲೇಶ್ ಯಾದವ್, “ನೀವು ಸೋತಿಲ್ಲ, ಗೆದ್ದಿದ್ದೀರಿ” ಎಂದು ಹೇಳಿ ಮಮತಾಗೆ ಸನ್ಮಾನ ಸಲ್ಲಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಈ ವೇಳೆ ಮಾತನಾಡಿದ ಅಖಿಲೇಶ್ ಯಾದವ್, ಬಂಗಾಳದಲ್ಲಿ ಚುನಾವಣೆಗಳನ್ನು ಉತ್ತರ ಪ್ರದೇಶ ಮಾದರಿಯಲ್ಲಿ ನಡೆಸಲಾಗಿದ್ದು, ಬೆದರಿಕೆ ಹಾಗೂ ಕುತಂತ್ರದ ರಾಜಕಾರಣ ಬಳಸಲಾಗಿದೆ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ, ಚುನಾವಣಾ ಆಯೋಗ ಹಾಗೂ ಭೂಗತ ಶಕ್ತಿಗಳ ಸಂಚುಗಳಿಂದ ಚುನಾವಣೆ ಪ್ರಭಾವಿತವಾಗಿದೆ ಎಂದು ಆರೋಪಿಸಿದರು.
ಅಲ್ಲದೇ, ಮಮತಾ ಬ್ಯಾನರ್ಜಿ ಮತ್ತು Abhishek Banerjee ಅವರ ಸುರಕ್ಷತೆ ಕುರಿತು ಆತಂಕ ವ್ಯಕ್ತಪಡಿಸಿದ ಅವರು, ಬಿಜೆಪಿ ಮಹಿಳಾ ವಿರೋಧಿ ಪಕ್ಷ ಎಂದು ಟೀಕಿಸಿದರು. ದೇಶದ ಪ್ರಜಾಪ್ರಭುತ್ವ ಶಕ್ತಿಗಳು ಒಂದಾಗಬೇಕೆಂದು ಕರೆ ನೀಡಿದರು.
ಏಪ್ರಿಲ್ 23 ಮತ್ತು 29ರಂದು ಎರಡು ಹಂತಗಳಲ್ಲಿ ನಡೆದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ 294 ಸ್ಥಾನಗಳ ಪೈಕಿ ಟಿಎಂಸಿ ಕೇವಲ 80 ಸ್ಥಾನಗಳಲ್ಲಿ ಜಯ ಸಾಧಿಸಿತು. ಬಿಜೆಪಿ 207 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರ ರಚಿಸಲು ಸಜ್ಜಾಗಿದೆ.
ಟಿಎಂಸಿ ಸೋಲಿನ ಬಳಿಕ ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ನಾಯಕರು ಮಮತಾ ಬ್ಯಾನರ್ಜಿ ಬೆಂಬಲಕ್ಕೆ ನಿಂತಿರುವುದು ಇದೀಗ ದೇಶದ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
-
ದೇಶ23 hours agoBig News : ಸಂಪುಟದಲ್ಲಿ ಮೊದಲ ವಿಕೆಟ್ ಪತನ? ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ ಘೋಷಣೆ
-
ದೇಶ20 hours agoಡಿಕೆಶಿ ಸರ್ಕಾರಕ್ಕೆ ಮತ್ತೊಂದು ಶಾಕ್! ರಾಮಲಿಂಗಾ ರೆಡ್ಡಿ ಬಳಿಕ ಕೆ.ಹೆಚ್. ಮುನಿಯಪ್ಪ ಅಸಮಾಧಾನ ಸ್ಫೋಟ
-
ಬೆಂಗಳೂರು21 hours agoವಾಹನ ಸವಾರರಿಗೆ ಬಂಪರ್ ಆಫರ್! ಟ್ರಾಫಿಕ್ ಫೈನ್ಗೆ 50% ರಿಯಾಯಿತಿ
-
ಕ್ರೀಡೆ19 hours agoಮುಂಬೈ ಗಲ್ಲಿಯಲ್ಲಿ ಕ್ರಿಕೆಟ್ ಆಡಿದ ಎಬಿ ಡಿ ವಿಲಿಯರ್ಸ್! ಅಭಿಮಾನಿಗಳ ಹೃದಯ ಗೆದ್ದ RCB ದಿಗ್ಗಜ
-
ದೇಶ20 hours agoಹೊಸ ಪಕ್ಷ, ಹೊಸ ಹೋರಾಟ! ತಮಿಳುನಾಡಿನಲ್ಲಿ ಅಣ್ಣಾಮಲೈ ರಾಜಕೀಯ ಕ್ರಾಂತಿ
-
ದೇಶ16 hours agoಶೈಕ್ಷಣಿಕ ಜಾಗ ದುರ್ಬಳಕೆ ಆರೋಪ: ಕೆಂಗೇರಿ ಟ್ರಸ್ಟ್ ವಿರುದ್ಧ PIL ವಿಚಾರಣೆ
-
ದೇಶ21 hours agoರಾಮಲಿಂಗಾರೆಡ್ಡಿ ರಾಜೀನಾಮೆ: ಕಾರಿನ ಚಕ್ರದಡಿ ಮಲಗಿ ಅಭಿಮಾನಿಗಳ ಕಣ್ಣೀರು!
-
ದೇಶ21 hours agoತಮಿಳುನಾಡು ಬಿಜೆಪಿಯಲ್ಲಿ ಭೂಕಂಪ: ಕೆ. ಅಣ್ಣಾಮಲೈ ಪಕ್ಷಕ್ಕೆ ಗುಡ್ಬೈ
