ದೇಶ
ಬೆಂಗಳೂರು, ಮೈಸೂರಿನ ಪ್ರತಿಷ್ಠಿತ ಬಿಲ್ಡರ್‌ಗಳ ಮನೆ, ಕಚೇರಿಗಳ ಮೇಲೆ ಇಡಿ ದಾಳಿ

ಬೆಂಗಳೂರು: ಪ್ರತಿಷ್ಠಿತ ಬಿಲ್ಡರ್‌ಗಳ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಯುಬಿ ಸಿಟಿಯ ಕಿಂಗ್ಫಿಶರ್ ಟವರ್, ಮಲ್ಲೇಶ್ವರಂ, ಬಸವೇಶ್ವರನಗರ, ಬನ್ನೇರುಘಟ್ಟ ರೋಡ್, ಹನುಮಂತನಗರ ಹಾಗೂ ಮೈಸೂರಿನ ಎರಡು ಸ್ಥಳಗಳು ಸೇರದಂತೆ 11 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಸೈಟ್ ಕೊಡಿಸುವುದಾಗಿ ವಂಚನೆ, ಅಕ್ರಮ ವ್ಯವಹಾರ, ಆಸ್ತಿ ತೆರಿಗೆ ಪಾವತಿಯಲ್ಲಿ ವಂಚನೆ ಸೇರಿದಂತೆ ಬಿಲ್ಡರ್‌ಗಳು ಮತ್ತು ಕೆಲ ಕಂಪನಿಗಳ ವಿರುದ್ಧ ಅನೇಕ ಅವ್ಯವಹಾರಗಳು ಕುರಿತು ದೂರು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಕ್ರಮ ಹಣ ಲೇವಾದೇವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ 8 ಸ್ಥಳಗಳಲ್ಲಿ ಇತ್ತೀಚಿಗೆ ದಾಳಿ ನಡೆಸಿದ್ದ ಇಡಿ 11.5 ಕೋಟಿ ರೂ ಹಣ, ಕೆಲ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿತ್ತು.