ಬೆಂಗಳೂರು
ಬಲು ದುಬಾರಿ ಆಗೋಯ್ತು ಲೈಫು ಶೀಘ್ರದಲ್ಲೇ ಆಟೋದರವೂ ಹೆಚ್ಚಳ!

ಬೆಂಗಳೂರು: ಪೆಟ್ರೋಲ್ ಡೀಸೆಲ್ ದರ ಏರಿಕೆಯಾಗುತ್ತಿದ್ದೆಂತೇ ಆಟೋ ಪ್ರಯಾಣ ದರ ಹೆಚ್ಚಿಸುವ ಬಗ್ಗೆ ಚಾಲಕರ ಮತ್ತು ಮಾಲೀಕರ ಸಂಘಗಳು ರಾಜ್ಯ ಸರ್ಕಾರವನ್ನು ಒತ್ತಾಯಿಸಿವೆ, ಈ ಬಗ್ಗೆ ಶೀಘ್ರವೇ ನಿರ್ಧಾರ ತೆಗೆದುಕೊಳ್ಳುವಂತೆ ಒತ್ತಾಯಿಸಿವೆ,
2021ರ ಡಿಸೆಂಬರ್ 20ರಿಂದ ಆಟೋ ಪ್ರಯಾಣ ದರ ಪರಿಷ್ಕರಣೆ ಮಾಡಿಲ್ಲ, ಹೀಗಾಗಿ ಈ ಕೂಡಲೇ ಆಟೋ ಪ್ರಯಾಣ ದರ ಹೆಚ್ಚಿಸು ವಂತೆ ಆಟೋ ಸಂಘಟನೆಗಳು ಒತ್ತಾಯಿಸಿವೆ, ಸದ್ಯ ಇರುವ ಕನಿಷ್ಠ ಪ್ರಯಾಣ ದರವನ್ನು 40 ರೂ ಗೆ ಹೆಚ್ಚಿಸಬೇಕು, 2 ಕಿ.ಮೀ ನಂತರದ ಪ್ರಯಾಣ ದರವನ್ನು ಪ್ರತಿ ಕಿ.ಮೀ.ಗೆ 15 ಇದ್ದು, ಅದನ್ನು 20 ರೂ ಗೆ ಹೆಚ್ಚಿಸಬೇಕು ಎಂದು ಚಾಲಕರು ಆಗ್ರಹಿಸಿದ್ದಾರೆ,
ಆಟೋ ಪ್ರಯಾಣ ದರ ಹೆಚ್ಚಳಕ್ಕೆ ಸಂಬAಧಿಸಿದAತೆ ಸಾರಿಗೆ ಇಲಾಖೆಗೆ ಹಲವು ಬಾರಿ ಮನವಿ ಮಾಡಿಕೊಳ್ಳಲಾಗಿದೆ, ಅದರೆ ಈವರೆಗೆ ಕ್ರಮ ಕೈಗೊಂಡಿಲ್ಲ, ಬಿಡಿ ಭಾಗಗಳ ದರವೂ ಹೆಚ್ಚಾಗಿದ್ದು, ಆಟೋ ಪ್ರಯಾಣ ದರ ಹೆಚ್ಚಳ ಮಾಡಲು ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿವೆ,