Connect with us

ಅಪರಾಧ

ಪ್ರಜ್ವಲ್ ಅಶ್ಲೀಲ ವಿಡಿಯೋ ಪೆನ್ ಡ್ರೆöÊವ್ ಕೇಸ್, ಸಚಿವ ಪರಂ ಸ್ಫೋಟಕ ಹೇಳಿಕೆ

ಬೆಂಗಳೂರು; ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್ ಡ್ರೆöÊವ್ ಗಳನ್ನು ಯಾರು ಹಂಚಿದ್ದಾರೆAದು ಗೊತ್ತಿದೆ ಎಂದು ಸಚಿವ ಡಾ.ಜಿ.ಪರಮೇಶ್ವರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಪ್ರಕರಣವು ತನಿಖೆಯ ಹಂತದಲ್ಲಿದೆ, ಹೀಗಾಗಿ ಮಾಹಿತಿಯನ್ನು ಸಾರ್ವಜನಿಕವಾಗಿ ಬಿಟ್ಟು ಕೊಡಲು ಆಗುವುದಿಲ್ಲ, ಎಸ್‌ಐಟಿ ತನಿಖೆಯ ಚುರುಕಾಗಿ ನಡೆಯುತ್ತಿದ್ದು ತನಿಖೆ ಪೂರ್ಣವಾದ ಬಳಿಕ ಎಲ್ಲವೂ ಸಾರ್ವಜನಿಕವಾಗಿ ಗೊತ್ತಾಗಲಿದೆ ಎಂದರು,
ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಕುರಿತಾದ ಅತ್ಯಾಚಾರ, ಅಶ್ಲೀಲ ವಿಡಿಯೋ ಚಿತ್ರೀಕರಣ ಆರೋಪದ ಈ ಪ್ರಕರಣವು ಹೊರ ಬೀಳುತ್ತಿದ್ದಂತೆ, ಪ್ರಜ್ವಲ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು ತನಿಖೆಯ ಬಿಸಿ ಹೆಚ್ಚಾದಂತೆ ಒಂದು ತಿಂಗಳ ಬಳಿಕ ತಾನಾಗಿಯೇ ಎಸ್‌ಐಟಿಗೆ ಬಂದು ಶರಣಾಗುವುದಾಗಿ ವಿಡಿಯೋ ಮೂಲಕ ಹೇಳಿಕೆ ನೀಡಿದ್ದು ಗೊತ್ತೇ ಇದೆ,

ಅಪರಾಧ

ನಕಲಿ ವೈದ್ಯನ ಚಿಕಿತ್ಸೆಯಿಂದ ಮಗು ಬಲಿ

ರಾಮನಗರ: ರಾಮನಗರದಲ್ಲಿ (Ramanagara news) ನಕಲಿ ವೈದ್ಯನ ಚಿಕಿತ್ಸೆಯಿಂದಾಗಿ (treatment) ಶಿವರಾಜ್ ಎಂಬವರ ಆರು ತಿಂಗಳ ಕಂದಮ್ಮ (child death) ಸಾವನ್ನಪ್ಪಿದೆ. 6 ತಿಂಗಳ ಮಗುವಿನ ಸಾವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಕ್ತ‌ ಕ್ರಮಕ್ಕೂ ಸೂಚನೆ ನೀಡಿದೆ. ಶಿವರಾಜ್ ಎಂಬವರ ಆರು ತಿಂಗಳ ಪ್ರಾಯದ ಮಗು ಶರಣ್ಯ ಮೃತಪಟ್ಟವಳು. ನಕಲಿ ವೈದ್ಯ (Fake Doctor) ಮಹಮ್ಮದ್ ಸೈಫುಲ್ಲ ಎಂಬಾತ ಎಂದು ಗುರುತಿಸಲಾಗಿದೆ.

ಮಹಮ್ಮದ್ ಸೈಫುಲ್ಲ ಎಂಬವನು ವೈದ್ಯಕೀಯ ಕೋರ್ಸ್ ಮಾಡದೇ, ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆಯದೇ ಸಣ್ಣ ಕೋಣೆಯೊಂದರಲ್ಲಿ ಚಿಕಿತ್ಸೆ ನೀಡುತ್ತಿದ್ದ. ಈತನಿಂದಾಗಿ ಮಗು ಮರಳಿ ಬಾರದ ಲೋಕಕ್ಕೆ ತೆರಳಿದೆ. ಇದು ಜಿಲ್ಲೆಯ ಜನರನ್ನು ಸಾಕಷ್ಟು ಆತಂಕಕ್ಕೆ ಒಳಗಾಗುವಂತೆ ಮಾಡಿದೆ. ರಾಮನಗರದಲ್ಲಿ ಸಾಕಷ್ಟು ನಕಲಿ ಕ್ಲಿನಿಕ್​ಗಳು ತಲೆ ಎತ್ತಿದ್ದು ಅವುಗಳ ವಿರುದ್ಧ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

ಬೆಂಗಳೂರು ದಕ್ಷಿಣ ‌ಜಿಲ್ಲೆಯಾದ್ಯಂತ ಒಟ್ಟು 193 ಕ್ಲಿನಿಕ್ ಹಾಗೂ ಆಸ್ಪತ್ರೆಗಳಿಗೆ ಮಾತ್ರ ಆರೋಗ್ಯ ಇಲಾಖೆಯಿಂದ ಅನುಮತಿ ಸಿಕ್ಕಿದೆ. ಆದರೆ ಕೆಲವರು ಹಣದಾಸೆಗೆ ನಕಲಿ ಕ್ಲಿನಿಕ್ ನಡೆಸುತ್ತಿದ್ದಾರೆ. ಆರೋಗ್ಯ ಇಲಾಖೆ ಕಳೆದ ನಾಲ್ಕು ತಿಂಗಳಲ್ಲಿ ಆರು ನಕಲಿ ವೈದ್ಯರನ್ನು ಪತ್ತೆ ಮಾಡಿದೆ. ಇಬ್ಬರ ವಿರುದ್ಧ ಕ್ರಮ ತೆಗೆದುಕೊಂಡಿದ್ದರೂ ಇನ್ನೂ ಕೆಲವರು ಹಣದಾಸೆಗೆ ನಕಲಿ‌ ಕ್ಲಿನಿಕ್ ನಡೆಸುತ್ತಿದ್ದಾರೆ. ನಕಲಿ ಕ್ಲಿನಿಕ್​ಗಳ ಬಗ್ಗೆ ಜನರು ಎಚ್ಚರಿದಿಂದ ಇರಬೇಕು. ಗಮನಕ್ಕೆ ಬಂದ ಕೂಡಲೇ ಅವುಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್ ಮನವಿ ಮಾಡಿದ್ದಾರೆ

Continue Reading

ಅಪರಾಧ

ಎಸ್ಪಿಗೆ ರಿಲೀವ್, ನಿಂಗಪ್ಪನ ಮೊಬೈಲ್‌ನಲ್ಲಿ ರಹಸ್ಯ?

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯ ಮೇಲೆ ಭ್ರಷ್ಟಾಚಾರದ ಆರೋಪದ ಕಳಂಕವೊಡ್ಡಿದೆ. ಸರಕಾರಿ ಅಧಿಕಾರಿಗಳಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ಆರೋಪದಡಿ ಮಾಜಿ ಹೆಡ್ ಕಾನ್ಸ್ಟೆಬಲ್ ನಿಂಗಪ್ಪನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಆದರೆ, ಈ ಪ್ರಕರಣದಲ್ಲಿ ಲೋಕಾಯುಕ್ತದ ಕೆಲ ಪೊಲೀಸರೂ ಭಾಗಿಯಾಗಿರುವ ಆರೋಪ ಗಂಭೀರ ಆತಂಕವನ್ನುಂಟುಮಾಡಿದೆ. ಈ ಬೆಳವಣಿಗೆಯ ನಡುವೆ ಲೋಕಾಯುಕ್ತ ಬೆಂಗಳೂರು ಘಟಕದ ಎಸ್ಪಿ ಮಹದೇವ ಶ್ರೀನಾಥ ಜೋಶಿ ಅವರನ್ನು ಮಂಗಳವಾರ ಸೇವೆಯಿಂದ ರಿಲೀವ್ ಮಾಡಲಾಗಿದೆ. ಈ ಘಟನೆಯಿಂದ ಲೋಕಾಯುಕ್ತ ಸಂಸ್ಥೆಯ ವಿಶ್ವಾಸಾರ್ಹತೆಯೇ ಪ್ರಶ್ನಾರ್ಹವಾಗಿದೆ.

ಹೈಕೋರ್ಟ್ ಆದೇಶದಂತೆ ಮೂರು ವರ್ಷಗಳ ಹಿಂದೆ ಎಫ್‌ಐಆರ್ ದಾಖಲಿಸುವ ಅಧಿಕಾರ ಪಡೆದ ಲೋಕಾಯುಕ್ತ ಪೊಲೀಸ್ ವಿಭಾಗವು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಗುರಿಯನ್ನು ಹೊಂದಿತ್ತು. ಆದರೆ, ಈಗ ಆ ಸಂಸ್ಥೆಯೊಳಗಿನ ಕೆಲವರು ಭ್ರಷ್ಟಾಚಾರದಲ್ಲಿ ತೊಡಗಿರುವ ಆರೋಪ ಕೇಳಿಬಂದಿದೆ. ಬಿಡಿಎ, ಅಬಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಲೋಕಾಯುಕ್ತ ದಾಳಿಯ ಬೆದರಿಕೆ ಹಾಕಿ ಹಣ ಸುಲಿಗೆ ಮಾಡುತ್ತಿದ್ದ ಆರೋಪದಡಿ ನಿಂಗಪ್ಪನನ್ನು ಎಸ್ಪಿ ಕೋನ ವಂಶಿಕೃಷ್ಣ ನೇತೃತ್ವದ ತಂಡ ಕೆಲ ದಿನಗಳ ಹಿಂದೆ ಬಂಧಿಸಿತ್ತು.

ಪೊಲೀಸ್ ಇಲಾಖೆಯಲ್ಲಿ ಹೆಡ್ ಕಾನ್ಸ್ಟೆಬಲ್ ಆಗಿದ್ದ ನಿಂಗಪ್ಪ ಕೆಲ ವರ್ಷಗಳ ಹಿಂದೆ ಸೇವೆಯಿಂದ ವಜಾಗೊಂಡಿದ್ದ. ಬಳಿಕ ಲೋಕಾಯುಕ್ತದ ಹೆಸರಿನಲ್ಲಿ ಸರಕಾರಿ ಅಧಿಕಾರಿಗಳಿಗೆ ಬೆದರಿಕೆ ಹಾಕಿ ಹಣ ಸುಲಿಗೆಯನ್ನೇ ವೃತ್ತಿಯಾಗಿ ಮಾಡಿಕೊಂಡಿದ್ದ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಠಾಣೆಗಳಲ್ಲಿ ಆತನ ವಿರುದ್ಧ ಪ್ರಕರಣಗಳು ದಾಖಲಾಗಿದ್ದು, ಹಲವು ಬಾರಿ ಜೈಲು ಸೇರಿದ್ದ,

ನಿಂಗಪ್ಪನ ಕೃತ್ಯದಲ್ಲಿ ಲೋಕಾಯುಕ್ತದ ಕೆಲವು ಪೊಲೀಸರು ಭಾಗಿಯಾಗಿದ್ದರೆ, ಸುಲಿಗೆಯ ಹಣದಲ್ಲಿ ಪಾಲು ಪಡೆಯುತ್ತಿದ್ದರೆಂಬ ಶಂಕೆಯಿದೆ. ನಿಂಗಪ್ಪನ ಮೊಬೈಲ್‌ನಿಂದ ದೊರೆತ ಸಾಕ್ಷ್ಯಗಳನ್ನು ಆಧರಿಸಿ, ಆತ ಯಾರಿಗೆ ಹಣ ತಲುಪಿಸಿದ್ದ, ಯಾರ ಜೊತೆ ಸಂಪರ್ಕದಲ್ಲಿದ್ದ ಎಂಬುದನ್ನು ತನಿಖೆಯ ಮೂಲಕ ಕಂಡುಹಿಡಿಯಲಾಗುತ್ತಿದೆ. ಈ ಪ್ರಕರಣದಲ್ಲಿ ಎಸ್ಪಿ ಮಹದೇವ ಶ್ರೀನಾಥ ಜೋಶಿಯವರ ರಿಲೀವ್‌ಗೆ ನಿಖರ ಕಾರಣ ತಿಳಿದಿಲ್ಲವಾದರೂ, ಈ ಬೆಳವಣಿಗೆ ಲೋಕಾಯುಕ್ತದೊಳಗಿನ ಆಂತರಿಕ ಸಮಸ್ಯೆಗಳನ್ನು ಎತ್ತಿ ತೋರಿಸಿದೆ.

ಈ ಘಟನೆಯಿಂದ ಲೋಕಾಯುಕ್ತ ಸಂಸ್ಥೆಯ ಕಾರ್ಯವೈಖರಿಯ ಬಗ್ಗೆ ಜನರಲ್ಲಿ ಅನುಮಾನ ಮೂಡಿದೆ. ಭ್ರಷ್ಟಾಚಾರದ ವಿರುದ್ಧ ಹೋರಾಡಬೇಕಾದ ಸಂಸ್ಥೆಯೇ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವುದು ಆಘಾತಕಾರಿಯಾಗಿದೆ. ಈ ಪ್ರಕರಣದ ತನಿಖೆಯಿಂದ ಸತ್ಯ ಹೊರಬಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬುದು ಜನರ ಆಗ್ರಹವಾಗಿದೆ.

Continue Reading

ಅಪರಾಧ

ಮಹಿಳಾ ಪೇದೆಗೆ ಬೂಟುಗಾಲಿನಿಂದ ಒದ್ದ ಹೆಡ್ ಕಾನ್ಸ್‍ಟೇಬಲ್!

ಬೆಂಗಳೂರು: ಪೊಲೀಸ್ ಠಾಣೆಯೊಂದರಲ್ಲೇ ಸಿಬ್ಬಂದಿಗಳು ಹೊಡೆದಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ನಡೆದಿದೆ, ಠಾಣೆಯ ಹೆಡ್ ಕಾನ್ಸ್‍ಟೇಬಲ್ ಮಹಿಳಾ ಪೇದೆಗೆ ಬೂಟುಗಾಲಿನಿಂದ ಒದ್ದ ಆರೋಪ ಹೊರಿಸಲಾಗಿದ್ದು ಈ ಬಗ್ಗೆ ದೂರು ದಾಖಲಾಗಿದೆ,
ಠಾಣೆಯಲ್ಲಿ ಕೆಲಸ ಮಾಡ್ತಿದ್ದ ಮಹಿಳಾ ಪೇದೆಗೆ ಅಲ್ಲೇ ಹೆಡ್ ಕಾನ್ಸ್‍ಟೇಬಲ್ ಆಗಿರುವ ಬಿಜಿ ಗೋವಿಂದರಾಜು ಎಂಬುವವರು ಬೂಟುಗಾಲಿನಲ್ಲಿ ಒದ್ದಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ, ಜೂನ್ 10 ರಂದು ಈ ಘಟನೆ ನಡೆದಿದೆ, ರಾತ್ರಿ ಕಂಪ್ಯೂಟರ್ ವಿಭಾಗದಲ್ಲಿ ಮಹಿಳಾ ಪೇದೆ ರೇಣುಕಾ ಕರ್ತವ್ಯ ನಿರ್ವಹಿಸುತ್ತಿದ್ದರು,
ಈ ವೇಳೆ ರೇಣುಕಾ ಮನೆ ಬಿಟ್ಟು ಹೋಗಿ ಠಾಣೆ ಸೇರಿದ್ದ ಇಬ್ಬರು ಹೆಣ್ಣುಮಕ್ಕಳಿಗೆ ಊಟ ಮಾಡಿಸುತ್ತಿದ್ದರು, ಆಗ ಹೆಡ್ ಕಾನ್ಸ್‍ಟೇಬಲ್ ಗೋವಿಂದರಾಜು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ, ಮಾತ್ರವಲ್ಲದೇ ಮೂರ್ನಾಲ್ಕು ಬಾರಿ ಬೂಟುಗಾಲಿನಿಂದ ಒದ್ದಿದ್ದಾರೆ ಎಂದು ಆರೋಪಸಲಾಗಿದೆ,
ಕಾನ್ಸ್‍ಟೇಬಲ್ ರೇಣುಕಾ ದೂರು ಆಧರಿಸಿ ಹೆಡ್ ಕಾನ್ಸಟೇಬಲ್ ಗೋವಿಂದರಾಜು ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,

Continue Reading

Trending