ಬೆಂಗಳೂರು
ಹಾಲನ್ನೇ ಕಡಿಮೆ ಖರೀದಿಸುತ್ತೇವೆ, ಟೀ-ಕಾಫಿ ಬೆಲೆ ಏರಿಕೆ ಮಾಡಲ್ಲ: ಹೋಟೆಲ್ ಮಾಲೀಕರು
ಬೆಂಗಳೂರು: ಕಾಫಿ-ಟೀ ಬೆಲೆ ಏರಿಕೆ ಮಾಡುವುದಿಲ್ಲ. ಹಾಲನ್ನೇ ಕಡಿಮೆ ಖರೀದಿ ಮಾಡುತ್ತೇವೆಂದು ಬೆಂಗಳೂರು ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳ ಸಂಘದ ಸದಸ್ಯರು ಹೇಳಿದ್ದಾರೆ.
ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳ ಸಂಘದ ಅಧ್ಯಕ್ಷ ಪಿಸಿ.ರಾವ್ ಅವರು ಮಾತಾಡಿ, ಕೆಎಂಎಫ್ ಹಾಲಿನ ದರವನ್ನು ಹೆಚ್ಚಿಸಿಲ್ಲ ಎಂದು ಹೇಳಿದೆ. ಅರ್ಧ/ಒಂದು ಲೀಟರ್ ಪ್ಯಾಕೆಟ್‌ಗೆ 50ಎಂಎಲ್ ಹಾಲನ್ನು ಹೆಚ್ಚು ಸೇರಿಸಿದ್ದು, ಹೆಚ್ಚಿನ ಹಾಲು ಹಿನ್ನೆಲೆಯಲ್ಲಿ ಅದಕ್ಕೆ ಶುಲ್ಕ ವಿಧಿಸಿದೆ. ಇದರಿಂದ ಹೆಚ್ಚಿನ ವ್ಯತ್ಯಾಸವಾಗುದಿಲ್ಲ. ವಾಸ್ತವವಾಗಿ, ನಾವು ಕಡಿಮೆ ಹಾಲು ಖರೀದಿಸುತ್ತೇವೆ. ಉದಾಹರಣೆಗೆ, ಒಂದು ಹೋಟೆಲ್ 100 ಲೀಟರ್ ಖರೀದಿಸುತ್ತಿದ್ದ ಹೋಟೆಲ್ ಇದೀಗ ಕೇವಲ 95 ಲೀಟರ್ ಖರೀದಿಸಲಿದೆ. ಹೀಗಾಗಿ ಬೆಲೆ ಏರಿಕೆ ಮಾಡುವುದಿಲ್ಲ ಎಂದು ಹೇಳಿದರು.
ಈ ನಡುವೆ 500 ಎಂಎಲ್ ಮತ್ತು 1000 ಎಂಎಲ್ ಪ್ಯಾಕೆಟ್‌ಗಳಿಗೆ ಇನ್ನೂ 2 ರೂಪಾಯಿ ನೀಡುವಂತೆ ಹಲವು ಕೇಳಿದ ಹಾಲು ಮಾರಾಟಗಾರರೊಂದಿಗೆ ಗ್ರಾಹಕರು ವಾಗ್ವಾದಕ್ಕಿಳಿದ ಘಟನೆಗಳು ಕೂಡ ಹಲವೆಡೆ ಕಂಡು ಬಂದಿತ್ತು.
ಗ್ರಾಹಕರಾದ ರೂಪಾ ಪಿ ಎಂಬುವವರು ಮಾತನಾಡಿ, ಕೆಎಂಎಫ್ ಪ್ರತಿ ಪ್ಯಾಕೆಟ್‌ನಲ್ಲಿ ಹೆಚ್ಚುವರಿ 50 ಎಂಎಲ್ ಘೋಷಿಸಿದೆ. ಆದರೆ, ಪ್ಯಾಕೆಟ್‌ನಲ್ಲಿ ಅದರ ಉಲ್ಲೇಖವಿಲ್ಲ. ಪ್ಯಾಕೆಟ್ ಗಳ ಮೇಲೆ 500ml ಅಥವಾ 1000ml ಅನ್ನೇ ಮುದ್ರಿಸಲಾಗಿದೆ. ಹಾಗಿರುವಾಗ ಹೆಚ್ಚುವರಿ ಹಾಲಿದೆ ಎಂದು ನಂಬುವುದು ಹೇಗೆ? ಬದಲಾವಣೆ ಮಾಡಿರುವುದಾದರೆ, ಪ್ಯಾಕೆಟ್ ಮೇಲೆ ಹೊಸ ಬೆಲೆ ಮತ್ತು ಪ್ರಮಾಣವನ್ನು ಮುದ್ರಿಸಬೇಕು ಎಂದು ಹೇಳಿದ್ದಾರೆ.
ಮತ್ತೋರ್ವ ಗ್ರಾಹಕ ನವೀನ್ ಎಲ್ ಎಂಬುವವರು ಮಾತನಾಡಿ, ‘ಹೆಚ್ಚು ಶುಲ್ಕ ವಿಧಿಸಿ ಹೆಚ್ಚುವರಿ ಹಾಲು ಖರೀದಿಸುವಂತೆ ಸರಕಾರ ಒತ್ತಾಯಿಸುತ್ತಿದೆ. ನಮ್ಮಲ್ಲಿ ಹಲವರು ಹೆಚ್ಚುವರಿ ಹಾಲು ಬಯಸುವುದಿಲ್ಲ. ಸರ್ಕಾರ ತನ್ನ ನಿರ್ಧಾರಗಳನ್ನು ನಮ್ಮ ಮೇಲೆ ಹೇರುವಂತಿಲ್ಲ. ಇದೀಗ ಅಪಾರ್ಟ್ಮೆಂಟ್ ಸಮುಚ್ಚಯದ ಜನರು ಹಾಲಿನ ಬ್ರಾಂಡ್ ಅನ್ನು ಬದಲಾಯಿಸಲು ನಿರ್ಧರಿಸಿದ್ದಾರೆಂದು ಹೇಳಿದ್ದಾರೆ.
ಕೇಶವ ಎಲ್ ಎಂಬುವವರು ಮಾತನಾಡಿ, ಹೆಚ್ಚುವರಿ ಹಾಲು ಸಂಗ್ರಹಣೆ ಸಮಸ್ಯೆ ನಿವಾರಣೆಗೆ ಕೆಎಂಎಫ್ ಮತ್ತು ಸರಕಾರ ಪರ್ಯಾಯ ಪರಿಹಾರಕ್ಕೆ ಮುಂದಾಗಬೇಕಿತ್ತು. ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಹಣ ಬೇಕಾಗಿರುವುದಾದರೆ ನೇರವಾಗಿ ಮಾತನಾಡಬೇಕು. ಇದರಿಂದ ಜನರು ಪರದಾಡುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಏತನ್ಮಧ್ಯೆ, ಬುಧವಾರ ಬೆಳಿಗ್ಗೆಯಿಂದ ಅರ್ಧ / ಒಂದು ಲೀಟರ್ ಪ್ಯಾಕೆಟ್‌ಗಳಿಗೆ 50 ಮಿಲಿ ಹೆಚ್ಚು ಹಾಲನ್ನು ಸೇರಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷರು ತಿಳಿಸಿದ್ದಾರೆ.
ಬೆಳಗ್ಗೆ 10 ಗಂಟೆಯವರೆಗೆ ಬಳಸುತ್ತಿದ್ದ ಪ್ಯಾಕಿಂಗ್ ರೋಲ್‌ಗಳು ಹಳೆಯವು. ಪ್ಯಾಕೆಟ್‌ಗಳ ಮೇಲೆ 500ml ಮತ್ತು 1000ml ಎಂದು ಮುದ್ರಿಸಲಾಗಿತ್ತು. ಆದರೆ, ಅವುಗಳಲ್ಲಿನ ಹಾಲಿನ ಪ್ರಮಾಣವು 550 ಮಿಲಿ ಮತ್ತು 1050 ಮಿಲಿ ಹೊಂದಿತ್ತು ಎಂದು ಸ್ಪಷ್ಟಪಡಿಸಿದ್ದಾರೆ.
ದೇಶ
K. Govindraj ಸೇರಿ ಗಣ್ಯರಿಗೆ ಗೌರವ ಡಾಕ್ಟರೇಟ್ – ಬಿಸಿಯು ಘಟಿಕೋತ್ಸವ ಸಂಭ್ರಮ
ಬೆಂಗಳೂರು: Bengaluru City University (ಬಿಸಿಯು) 5ನೇ ಘಟಿಕೋತ್ಸವ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ಕುಲಾಧಿಪತಿಗಳಾದ Thawar Chand Gehlot ಚಾಲನೆ ನೀಡಿದರು.
ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಈ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ Dr. Binay Kumar Das, Defence Research and Development Organisation (ಡಿಆರ್‌ಡಿಒ) ಮಹಾ ನಿರ್ದೇಶಕರು (ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಸಿಸ್ಟಮ್ಸ್) ಭಾಗವಹಿಸಿದ್ದರು.
ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 6 ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಸಂಗೀತ ನಿರ್ದೇಶಕ Arjun Janya, ಕ್ರಿಕೆಟರ್ Venkatesh Prasad, ಶಿಕ್ಷಣ ತಜ್ಞ T. K. Narayanappa, ಎಂಎಲ್ಸಿ K. Govindaraj, ಶಿಕ್ಷಣ ಕ್ಷೇತ್ರದ Mohan Alva ಹಾಗೂ ಕೈಗಾರಿಕೋದ್ಯಮಿ Bava Mohammed Farooq ಅವರಿಗೆ ರಾಜ್ಯಪಾಲರು ಗೌರವಿಸಿದರು.
ಉಪ ಚುನಾವಣೆ ಪ್ರಚಾರದ ಹಿನ್ನೆಲೆ, ಉನ್ನತ ಶಿಕ್ಷಣ ಸಚಿವ Dr. C. N. Ashwath Narayan ಗೈರಾಗಿದ್ದರು.
ಘಟಿಕೋತ್ಸವದಲ್ಲಿ 73 ಪ್ರಥಮ ರ‍್ಯಾಂಕ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಪ್ರಮಾಣಪತ್ರ ಮತ್ತು ನಗದು ಬಹುಮಾನ ವಿತರಿಸಲಾಯಿತು. ಒಟ್ಟು 37,370 ವಿದ್ಯಾರ್ಥಿಗಳಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರದಾನವಾಗಿದ್ದು, 23 ವಿದ್ಯಾರ್ಥಿಗಳಿಗೆ ಪಿಎಚ್‌ಡಿ ಪದವಿ ನೀಡಲಾಯಿತು.
ವಿಶೇಷವಾಗಿ, ಸ್ನೇಹಾ ಟಿ (ಎಂಎಸ್‌ಸಿ ರಸಾಯನಶಾಸ್ತ್ರ) 4 ಚಿನ್ನದ ಪದಕಗಳನ್ನು ಪಡೆದು ಸಾಧನೆ ಮಾಡಿದ್ದು, ಅಭಿಷೇಕ್ ಶ್ರೀರಾಮ್ (ಬಿಕಾಂ) 3 ಚಿನ್ನದ ಪದಕ, ದಿವ್ಯಶ್ರೀ ಎಸ್ (ಬಿಬಿಎ) 3 ಚಿನ್ನದ ಪದಕ ಪಡೆದು ಗಮನಸೆಳೆದಿದ್ದಾರೆ.
ಗೌರವ ಡಾಕ್ಟರೇಟ್ ಪಡೆದ ಬಳಿಕ Arjun Janya ಅವರು ಮಾತನಾಡಿ, ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಕೃತಜ್ಞತೆ ಸಲ್ಲಿಸಿದರು.
ದೇಶ
ಹಳೆಯ ವಾಹನಗಳಿಗೆ HSRP ಕಡ್ಡಾಯವೇ? ಸಾರಿಗೆ ಇಲಾಖೆಯ ಸ್ಪಷ್ಟನೆ ಏನು ಗೊತ್ತಾ?
ಬೆಂಗಳೂರು: ಹಳೆಯ ವಾಹನಗಳಿಗೆ ಹೈ ಸಿಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಕೆ ಕಡ್ಡಾಯವಲ್ಲ ಎಂಬ ಸುದ್ದಿಗಳು ಇತ್ತೀಚೆಗೆ ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದರೂ, ಇದಕ್ಕೆ ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. ಇಂತಹ ಸುದ್ದಿಗಳು ಸುಳ್ಳು ಎಂದು ಹೇಳಿ ಸಾರ್ವಜನಿಕರು ಯಾವುದೇ ವದಂತಿಗಳನ್ನು ನಂಬಬಾರದು ಎಂದು ಮನವಿ ಮಾಡಿದೆ.
ಕೇಂದ್ರ ಮೋಟಾರು ವಾಹನಗಳ ನಿಯಮಗಳು 1989ರ ನಿಯಮ 50ರಡಿ, ಕೇಂದ್ರ ಸರ್ಕಾರವು 2018 ಡಿಸೆಂಬರ್ 4ರಂದು ಅಧಿಸೂಚನೆ ಹೊರಡಿಸಿದ್ದು, 2019 ಏಪ್ರಿಲ್ 1ಕ್ಕಿಂತ ಮುಂಚಿತವಾಗಿ ನೋಂದಾಯಿತವಾಗಿರುವ ಎಲ್ಲಾ ವಾಹನಗಳಿಗೆ HSRP ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. ಈ ನಿಯಮವನ್ನು ಅನುಸರಿಸಿ, ಕರ್ನಾಟಕ ಸರ್ಕಾರವು 2023 ಆಗಸ್ಟ್ 17ರಂದು ಅಧಿಸೂಚನೆ ಹೊರಡಿಸಿ ರಾಜ್ಯದಲ್ಲಿಯೂ ಇದೇ ನಿಯಮವನ್ನು ಜಾರಿಗೆ ತಂದಿದೆ.
ಇದಕ್ಕೂ ನಡುವೆ, HSRP ಅಳವಡಿಕೆ ಸಂಬಂಧ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಸರ್ಕಾರವು ಯಾವುದೇ ತರಾತುರಿ ಕ್ರಮ ಕೈಗೊಳ್ಳಬಾರದು ಎಂದು ಸೂಚಿಸಿದೆ. ಆದರೆ, ಈ ಆದೇಶವು HSRP ಕಡ್ಡಾಯ ಆದೇಶವನ್ನು ರದ್ದುಪಡಿಸುವುದಿಲ್ಲ ಎಂಬುದು ಮುಖ್ಯ.
ಸಾರಿಗೆ ಇಲಾಖೆಯ ಪ್ರಕಾರ, ಹೈಕೋರ್ಟ್ ಆದೇಶದಿಂದ ಹೊಸ ಕ್ರಮಗಳನ್ನು ಕೈಗೊಳ್ಳಲು ಅಡ್ಡಿಯಿದ್ದರೂ, HSRP ಅಳವಡಿಕೆ ಕುರಿತ ಅಧಿಸೂಚನೆ ಇನ್ನೂ ಜಾರಿಯಲ್ಲಿಯೇ ಇದೆ. ಆದ್ದರಿಂದ, ಸಾರ್ವಜನಿಕರು ತಮ್ಮ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದೆ.
ವದಂತಿಗಳಿಂದ ಗೊಂದಲಕ್ಕೀಡಾಗಬಾರದು ಎಂದು ಸಾರಿಗೆ ಇಲಾಖೆ ಮತ್ತೊಮ್ಮೆ ಸ್ಪಷ್ಟಪಡಿಸಿದೆ.
ಕ್ರೀಡೆ
ಗ್ಯಾಸ್‌ಗಾಗಿ ಜನ ಸಾಲು, ಟಿಕೆಟ್‌ಗಾಗಿ ಪಿಎ ಸಾಲು: ಶಾಸಕರಿಗೆ ಟೀಕೆ!
ಬೆಂಗಳೂರು: ರಾಜ್ಯದಲ್ಲಿ ಅಡುಗೆ ಅನಿಲ ಕೊರತೆಯಿಂದ ಜನರು ಸಂಕಷ್ಟ ಅನುಭವಿಸುತ್ತಿರುವ ನಡುವೆ, ಜನಪ್ರತಿನಿಧಿಗಳ ವರ್ತನೆ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಒಂದು ಕಡೆ ಆಟೋ ಚಾಲಕರು ಗ್ಯಾಸ್‌ಗಾಗಿ ರಾತ್ರಿಯಿಡೀ ಸಾಲಿನಲ್ಲಿ ನಿಲ್ಲುತ್ತಿರುವಾಗ, ಇನ್ನೊಂದು ಕಡೆ ಶಾಸಕರು IPL 2026 ಟಿಕೆಟ್ ಪಡೆಯಲು ತಮ್ಮ ಪಿಎಗಳನ್ನು ಕ್ಯೂನಲ್ಲಿ ನಿಲ್ಲಿಸಿರುವುದು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಮಾಹಿತಿಯ ಪ್ರಕಾರ, ಸರ್ಕಾರ ಮತ್ತು Karnataka State Cricket Association (KSCA) ನಡುವೆ ಪ್ರತಿ ಐಪಿಎಲ್ ಪಂದ್ಯಕ್ಕೆ ಶಾಸಕರಿಗೆ ಉಚಿತವಾಗಿ 3 ಟಿಕೆಟ್ ನೀಡುವ ಕುರಿತು ಒಪ್ಪಂದವಾಗಿದೆ. ಇದರ ಹಿನ್ನೆಲೆಯಲ್ಲಿ, Royal Challengers Bengaluru ಮತ್ತು Chennai Super Kings ನಡುವಿನ ಪಂದ್ಯಕ್ಕೆ ಟಿಕೆಟ್ ಪಡೆಯಲು ಶಾಸಕರ ಪಿಎಗಳು ಸ್ಪೀಕರ್ ಕಚೇರಿ ಮುಂದೆ ಸಾಲಿನಲ್ಲಿ ನಿಂತಿರುವ ದೃಶ್ಯಗಳು ಗಮನ ಸೆಳೆದಿವೆ.
ಸ್ಪೀಕರ್ ಕಚೇರಿಯಲ್ಲೇ ಟಿಕೆಟ್ ವಿತರಣೆ ನಡೆಯುತ್ತಿರುವುದರಿಂದ, ಶಾಸಕರ ಸೂಚನೆ ಮೇರೆಗೆ ಪಿಎಗಳು ಟಿಕೆಟ್ ಪಡೆಯಲು ಕ್ಯೂನಲ್ಲಿ ನಿಂತಿದ್ದಾರೆ ಎಂದು ತಿಳಿದುಬಂದಿದೆ.
ಇದರಿಂದ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಜನಪ್ರತಿನಿಧಿಗಳು ತಮ್ಮ ವೈಯಕ್ತಿಕ ಆಸಕ್ತಿಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ ಎಂಬ ಟೀಕೆಗಳು ಕೇಳಿಬರುತ್ತಿವೆ. ಗ್ಯಾಸ್ ಕೊರತೆ, ದೈನಂದಿನ ಸಮಸ್ಯೆಗಳ ನಡುವೆ ಈ ರೀತಿಯ ಘಟನೆಗಳು ಸಾರ್ವಜನಿಕರ ಅಸಮಾಧಾನವನ್ನು ಮತ್ತಷ್ಟು ಹೆಚ್ಚಿಸಿವೆ.
ರಾಜಕೀಯ ವಲಯದಲ್ಲಿಯೂ ಈ ಘಟನೆ ಚರ್ಚೆಗೆ ಕಾರಣವಾಗಿದ್ದು, ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿಗಳನ್ನು ಮರೆಯಬಾರದು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
-
ದೇಶ21 hours agoಹಳೆಯ ವಾಹನಗಳಿಗೆ HSRP ಕಡ್ಡಾಯವೇ? ಸಾರಿಗೆ ಇಲಾಖೆಯ ಸ್ಪಷ್ಟನೆ ಏನು ಗೊತ್ತಾ?
-
ದೇಶ23 hours agoಕಾಂಗ್ರೆಸ್ ಒಳಜಗಳ ಬಯಲು: ರಾಹುಲ್ ನಿಲುವಿಗೆ ಹಿರಿಯರ ವಿರೋಧ
-
ಚುನಾವಣೆ21 hours agoTN 2026 ಟೀಸರ್ಗೆ ರಾಜಕೀಯ ಕಿಚ್ಚು! ವಿಜಯ್ ಟಾರ್ಗೆಟ್ ಆರೋಪ – ತಮಿಳುನಾಡಿನಲ್ಲಿ ಬಿಗುವಿನ ವಾತಾವರಣ
-
ದೇಶ23 hours agoಇರಾನ್-ಅಮೆರಿಕಾ ಮಾತುಕತೆ ವಿಫಲ: ಪಾಕಿಸ್ತಾನಕ್ಕೆ ಮುಖಭಂಗ!
-
ಅಪರಾಧ23 hours agoಐಪಿಎಲ್ ಟಿಕೆಟ್ ಕ್ರೇಜ್ ನಡುವೆ ದೊಡ್ಡ ಮೋಸ: ಟೆಕ್ಕಿಗೆ ₹1.46 ಲಕ್ಷ ನಷ್ಟ!
-
ಕ್ರೀಡೆ22 hours agoಗ್ಯಾಸ್‌ಗಾಗಿ ಜನ ಸಾಲು, ಟಿಕೆಟ್‌ಗಾಗಿ ಪಿಎ ಸಾಲು: ಶಾಸಕರಿಗೆ ಟೀಕೆ!
-
ದೇಶ21 hours agoK. Govindraj ಸೇರಿ ಗಣ್ಯರಿಗೆ ಗೌರವ ಡಾಕ್ಟರೇಟ್ – ಬಿಸಿಯು ಘಟಿಕೋತ್ಸವ ಸಂಭ್ರಮ
