Connect with us

ದೇಶ

ಕಲ್ಕಿ ಪ್ರಭಾಸ್​ಗೆ ವಾರ್ನ್​ ಮಾಡಿದ ರಾಜ್​ ಮೌಳಿ.. 10 ವರ್ಷ ಹಾಕೊಂಡು ತುಳಿಯುತ್ತೇನೆ ಎಂದ ಸ್ಟಾರ್​ ಡೈರೆಕ್ಟರ್​ ಜಕ್ಕಣ್ಣ

ಡಾರ್ಲಿಂಗ್ ಪ್ರಭಾಸ್ ಅಭಿನಯದ ಕಲ್ಕಿ ಮೂವಿ ಇಂದು ವಿಶ್ವದ್ಯಾಂತ ರಿಲೀಸ್ ಆಗಿದೆ. ಸಿನಿ ರಸಿಕರಲ್ಲಿ ಕಲ್ಕಿ 2898 AD ಕ್ರೇಜ್ ಹೆಚ್ಚಾಗಿದ್ದು ಸಿನಿಮಾ ಚೆನ್ನಾಗಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಥಿಯೇಟರ್​​ಗಳು ಹೌಸ್​ಫುಲ್ ಆಗುತ್ತಿದ್ದು ಮೂವಿಯಲ್ಲಿ ದಿಗ್ಗಜ ನಟರ ನಟನೆ ಅದ್ಭುತವಾಗಿ ಎನ್ನಲಾಗ್ತಿದೆ. ಇದರ ಜೊತೆಗೆ ಇನ್ನೊಂದು ವಿಶೇಷ ಎಂದರೆ, ಬಾಹುಬಲಿ ಸಿನಿಮಾದಂಥ ಹಿಟ್ ಮೂವಿ ಮಾಡಿದ ಸ್ಟಾರ್​ ಡೈರೆಕ್ಟರ್ ರಾಜ್​ಮೌಳಿ ಕೂಡ ಕಲ್ಕಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಪ್ಯಾನ್​ ಇಂಡಿಯಾ ಮೂವಿ ಕಲ್ಕಿ 2898 AD ವಿಶ್ಯದಾದ್ಯಂತ ರಿಲೀಸ್ ಆಗಿದ್ದು ಸಿನಿಮಾ ಬಗ್ಗೆ ಭರ್ಜರಿ ಪಾಸಿಟಿವ್​ ರೆಸ್ಪಾನ್ಸ್ ಕೇಳಿ ಬರುತ್ತಿದೆ. ಕಲ್ಕಿಯಲ್ಲಿ ಪ್ರಭಾಸ್ ಜೊತೆ ಒಂದು ಸೀನ್​​ನಲ್ಲಿ ಸ್ಟಾರ್ ನಿರ್ದೇಶಕ ರಾಜ್​​ಮೌಳಿಯವರು ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ಪ್ರಭಾಸ್​, ರಾಜ್​ಮೌಳಿಯವರು ವಾಹನವೊಂದರಲ್ಲಿ ಪ್ರಯಾಣಿಸುತ್ತಿರುತ್ತಾರೆ. ಈ ವೇಳೆ ರಾಜ್​ಮೌಳಿ ನನ್ನತ್ರ ಕೆಲಸ ಮಾಡುತ್ತೀಯಾ ಎಂದು ತಪ್ಪಿಸಿಕೊಂಡು ಹೋಗಿದ್ದೀಯಾ? ಎಷ್ಟು ದಿನ ತಪ್ಪಿಸಿಕೊಂಡು ಓಡಾಡ್ತೀಯಾ ಎಂದು ಕೇಳುತ್ತಾರೆ. ಇದಕ್ಕೆ ಸಾಂಗ್​ಗಳೇ ಅಲ್ವಾ ಮಾಡಿಕೊಡುತ್ತೇನೆ ಅಂತ ಪ್ರಭಾಸ್ ಹೇಳುತ್ತಾರೆ. ಇದಕ್ಕೆ ರಾಜ್​ಮೌಳಿ ಹಾಡುಗಳಿಗಾಗಿ ನಾನು ನಾ ಬಂದಿಲ್ಲ. ನೀನಗಾಗಿ ಬಂದಿದ್ದೇನೆ. ಎ.. ಭೈರವ ಮತ್ತೆ ಸಿಗ್ತಿಯಲ್ಲ, ಆವಾಗ 10 ವರ್ಷ ಹಾಕಿ ತುಳಿಯುತ್ತೇನೆ ಅಂತ ಹೇಳುತ್ತಾರೆ.

ಸದ್ಯ ಕಲ್ಕಿ ಮೂವಿಯಲ್ಲಿ ರಾಜ್​ಮೌಳಿ, ಪ್ರಭಾಸ್​ ನಡುವಿನ ಈ ಸಂಭಾಷಣೆಯ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ಸಖತ್ ವೈರಲ್ ಆಗ್ತಿದೆ. ಒಂದೇ ಬಾರಿಗೆ ಸಿನಿಮಾದಲ್ಲಿ ರಾಜ್​ಮೌಳಿಯನ್ನು ನೋಡಿ ಫ್ಯಾನ್ಸ್​ ಶಾಕ್ ಆಗಿದ್ದು ಥಿಯೇಟರ್​ನಲ್ಲಿ ಶಿಳ್ಳೆ ಹಾಕಿ ಸಂಭ್ರಮಿಸಿದ್ದಾರೆ. ಸಿನಿಮಾವನ್ನು ನಾಗ್ ಅಶ್ವಿನ್ ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ಕಮಾಲ್ ಹಾಸನ್, ಅಮಿತಾಬ್ ಬಚ್ಚನ್, ದೀಪಿಕಾ ಪಡುಕೋಣೆ, ದಿಶಾ ಪಟಾನಿ, ದುಲ್ಕರ್ ಸಲ್ಮಾನ್ ಮತ್ತು ವಿಜಯ್ ದೇವರಕೊಂಡ, ರಾಜ್​ಮೌಳಿ ಸೇರಿದಂತೆ ದೊಡ್ಡ ತಾರಗಣವೇ ಸಿನಿಮಾದಲ್ಲಿದೆ. ವೈಜಯಂತಿ ಮೂವೀಸ್ ಬ್ಯಾನರ್​ ಅಡಿ ಈ ಚಿತ್ರ ನಿರ್ಮಾಣವಾಗಿದೆ.

ಕ್ರೀಡೆ

IND vs PAK ಹೈವೋಲ್ಟೇಜ್ ಪಂದ್ಯಕ್ಕೆ ಮುನ್ನ ಉಸ್ಮಾನ್ ತಾರಿಕ್ ಎಚ್ಚರಿಕೆ: “ಭಾರತೀಯರು ನನ್ನ ಬೌಲಿಂಗ್‌ಗೆ ಹೆದರುತ್ತಿದ್ದಾರೆ!”

ಟಿ20 ವಿಶ್ವಕಪ್ ಟೂರ್ನಿಯ ಬಹು ನಿರೀಕ್ಷಿತ ಭಾರತ–ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ ಫೆಬ್ರವರಿ 15ರಂದು ಶ್ರೀಲಂಕಾದ ಕೊಲಂಬೊದಲ್ಲಿ ನಡೆಯಲಿದೆ. ಶಿವರಾತ್ರಿ ಹಬ್ಬದಂದೇ ನಡೆಯಲಿರುವ ಈ ನಿರ್ಣಾಯಕ ಸಮರಕ್ಕಾಗಿ ಎರಡೂ ತಂಡಗಳು ಭರ್ಜರಿ ಸಿದ್ಧತೆಯಲ್ಲಿ ತೊಡಗಿವೆ.

ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ, ಫೆ.12ರಂದು ನಮೀಬಿಯಾ ವಿರುದ್ಧ ಕಣಕ್ಕಿಳಿದು ಗೆಲುವಿನ ಆತ್ಮವಿಶ್ವಾಸದೊಂದಿಗೆ ಪಾಕಿಸ್ತಾನ ಎದುರಿಸಲು ಸಜ್ಜಾಗಿದೆ.

ಈ ಮಧ್ಯೆ, ಪಾಕಿಸ್ತಾನದ ನಿಗೂಢ ಸ್ಪಿನ್ನರ್ ಉಸ್ಮಾನ್ ತಾರಿಕ್ ಭಾರತಕ್ಕೆ ಬಲವಾದ ಎಚ್ಚರಿಕೆ ನೀಡಿದ್ದಾರೆ. “ಭಾರತೀಯರು ನನ್ನ ಬೌಲಿಂಗ್‌ಗೆ ಹೆದರುತ್ತಿದ್ದಾರೆ. ಅದಕ್ಕಾಗಿ ನನ್ನ ಬೌಲಿಂಗ್ ಶೈಲಿಯ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ” ಎಂದು ಸಂಚಲನಕಾರಿ ಹೇಳಿಕೆ ನೀಡಿದ್ದಾರೆ.


ಮಾತಿನ ಸಮರ ಜೋರಾಗಿದೆ

ಟಿ20 ವಿಶ್ವಕಪ್ ಈಗ ರೋಚಕ ಹಂತ ತಲುಪಿದ್ದು, ಈಗಾಗಲೇ 15ಕ್ಕೂ ಹೆಚ್ಚು ಪಂದ್ಯಗಳು ಪೂರ್ಣಗೊಂಡಿವೆ. ಭಾರತ–ಪಾಕಿಸ್ತಾನ ಪಂದ್ಯ ನಡೆಯುತ್ತದೆಯೇ? ಎಂಬ ಅನುಮಾನಕ್ಕೆ ತೆರೆಬಿದ್ದಿದ್ದು, ಪಾಕಿಸ್ತಾನ ಪಂದ್ಯಕ್ಕೆ ಒಪ್ಪಿಗೆ ನೀಡಿದೆ.

ಪಂದ್ಯ ಖಚಿತವಾದ ಬೆನ್ನಲ್ಲೇ ಎರಡೂ ತಂಡಗಳ ನಡುವೆ ಮಾತಿನ ಸಮರ ಜೋರಾಗಿದೆ. ಪಾಕಿಸ್ತಾನಿ ಆಟಗಾರರು ಭಾರತವನ್ನು ಸೋಲಿಸುತ್ತೇವೆ ಎಂದು ಹೇಳುತ್ತಿದ್ದರೆ, ಭಾರತೀಯರು ಪಾಕಿಸ್ತಾನವನ್ನು ಮಣಿಸುತ್ತೇವೆ ಎಂದು ತಿರುಗೇಟು ನೀಡುತ್ತಿದ್ದಾರೆ.


ತಾರಿಕ್ ಸಮರ್ಥನೆ

ಭಾರತೀಯರು ನನ್ನ ಬೌಲಿಂಗ್ ಕುರಿತು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಐಸಿಸಿ ನಿಯಮಗಳ ಪ್ರಕಾರ ನನ್ನ ಬೌಲಿಂಗ್ ಶೈಲಿ ಮಾನ್ಯವಾಗಿದೆ ಎಂದು ಉಸ್ಮಾನ್ ತಾರಿಕ್ ಸಮರ್ಥಿಸಿಕೊಂಡಿದ್ದಾರೆ.

“ಭಾರತೀಯ ಆಟಗಾರರಿಗೆ ನನ್ನ ಬೌಲಿಂಗ್‌ನಿಂದ ಹೆಚ್ಚುವರಿ ಒತ್ತಡ ಇದೆ. ಅದಕ್ಕಾಗಿಯೇ ಆರೋಪ ಮಾಡುತ್ತಿದ್ದಾರೆ. ಫೆಬ್ರವರಿ 15ರಂದು ಭಾರತದ ಅಗ್ರ ಕ್ರಮಾಂಕವನ್ನು ಕೆಡವುತ್ತೇನೆ” ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ನನ್ನ ಬಗ್ಗೆ ಏನು ಚರ್ಚೆ ನಡೆಯುತ್ತಿದೆ ಎಂಬುದನ್ನು ನಾನು ಪರಿಗಣಿಸುವುದಿಲ್ಲ. ನನ್ನ ಗಮನ ಪಂದ್ಯದಲ್ಲೇ ಇದೆ” ಎಂದು ತಾರಿಕ್ ಹೇಳಿದ್ದಾರೆ.

Continue Reading

ದೇಶ

ಜೈರಾಮ್ ರಮೇಶ್‌ಗೆ ಸುಪ್ರೀಂಕೋರ್ಟ್ ಕಿಡಿ: “ಮಾಧ್ಯಮ ಪ್ರಚಾರಕ್ಕೇ ಅರ್ಜಿ?”

ಹೊಸದಿಲ್ಲಿ: ಪರಿಸರ ಪರವಾನಿಗೆಗೆ ಸಂಬಂಧಿಸಿದ ರಿಟ್ ಅರ್ಜಿಯ ವಿಚಾರಣೆ ವೇಳೆ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ವಿರುದ್ಧ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. “ಇದೆಲ್ಲವನ್ನೂ ನೀವು ಕೇವಲ ಮಾಧ್ಯಮ ಪ್ರಚಾರಕ್ಕಾಗಿ ಮಾಡುತ್ತಿದ್ದೀರಾ?” ಎಂದು ತ್ರಿಸದಸ್ಯ ಪೀಠ ಕಿಡಿಕಾರಿತು.

ಭಾರತದ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠದಲ್ಲಿ ನ್ಯಾ. ಸೂರ್ಯಕಾಂತ್, ನ್ಯಾ. ಜಾಯ್‌ಮಾಲ್ಯ ಬಾಗ್ಚಿ ಹಾಗೂ ನ್ಯಾ. ಉಜ್ಜಲ್ ಭುಯಾನ್ ಇದ್ದರು. ಪರಿಸರ ಪರವಾನಿಗೆಯನ್ನು ಪೂರ್ವ ಅನ್ವಯವಾಗುವಂತೆ (Retrospective Environmental Clearance) ನೀಡುವ ಕ್ರಮವನ್ನು ಪ್ರಶ್ನಿಸಿ ಜೈರಾಮ್ ರಮೇಶ್ ರಿಟ್ ಅರ್ಜಿ ಸಲ್ಲಿಸಿದ್ದರು.

ರಿಟ್ ಅರ್ಜಿ ಸ್ವೀಕರಿಸಲು ನಿರಾಕರಣೆ

ವಿಚಾರಣೆ ವೇಳೆ ಪೀಠ, ಈ ಅರ್ಜಿ ಕೇಂದ್ರ ಸರ್ಕಾರದ ಕುಂದುಕೊರತೆಯನ್ನು ಹೈಲೆಟ್ ಮಾಡುವ ಬದಲು ಸಾರ್ವಜನಿಕ ಗಮನ ಸೆಳೆಯಲು ಸಲ್ಲಿಸಿದಂತಿದೆ ಎಂದು ಅಭಿಪ್ರಾಯಪಟ್ಟಿತು. ನವೆಂಬರ್ 2025ರ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ ರಿಟ್ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ (ಫೆ.12) ಸ್ವೀಕರಿಸಲು ನಿರಾಕರಿಸಿತು.

“ದಂಡ ಎದುರಿಸಲು ಸಿದ್ದರಾಗಿ” ಎಚ್ಚರಿಕೆ

“ತೀರ್ಪಿನ ವಿರುದ್ಧ ರಿಟ್ ಅರ್ಜಿ ಯಾಕೆ? ಮರುಪರಿಶೀಲನಾ ಅರ್ಜಿ (Review Petition) ಸಲ್ಲಿಸಬಹುದು ಅಲ್ಲವೇ? ರಿಟ್ ಮೂಲಕ ಮರುಪರಿಶೀಲನೆ ಸಾಧ್ಯವಿಲ್ಲ ಎಂಬುದು ತಿಳಿದಿಲ್ಲವೇ? ದಂಡ ಎದುರಿಸಲು ಸಿದ್ದರಾಗಿ” ಎಂದು ನ್ಯಾ. ಸೂರ್ಯಕಾಂತ್ ಎಚ್ಚರಿಸಿದರು.

ನ್ಯಾಯಾಲಯದ ಎಚ್ಚರಿಕೆಯ ಬಳಿಕ ಜೈರಾಮ್ ರಮೇಶ್ ಪರ ವಕೀಲರು ಅರ್ಜಿಯನ್ನು ಹಿಂಪಡೆಯಲು ವಿನಂತಿಸಿಕೊಂಡರು. ನ್ಯಾಯಪೀಠ ಅದಕ್ಕೆ ಅನುಮತಿ ನೀಡಿ, ಕಾನೂನಿನ ಪ್ರಕಾರ ಲಭ್ಯವಿರುವ ಪರಿಹಾರವನ್ನು ಪಡೆಯುವಂತೆ ಸೂಚಿಸಿತು.


ಪ್ರಕರಣದ ಹಿನ್ನೆಲೆ

ಜೈರಾಮ್ ರಮೇಶ್ ಯಾವುದೇ ಯೋಜನೆ ಆರಂಭವಾದ ನಂತರ ಪರಿಸರ ಪರವಾನಿಗೆ ನೀಡುವ ಕ್ರಮವನ್ನು ಪ್ರಶ್ನಿಸಿದ್ದರು. ಈ ರೀತಿಯ ಅನುಮತಿ ಕಾನೂನುಬಾಹಿರ ಚಟುವಟಿಕೆಗಳಿಗೆ ದಾರಿ ಮಾಡಿಕೊಡುತ್ತದೆ ಮತ್ತು ಸಾರ್ವಜನಿಕ ಆರೋಗ್ಯಕ್ಕೆ ಹಾನಿಕಾರಕವಾಗಬಹುದು ಎಂದು ಅವರು ವಾದಿಸಿದ್ದರು.

ಕೇಂದ್ರ ಸರ್ಕಾರದ ನಿಯಮ ಏನು?

  • 2006ರಲ್ಲಿ ಯೋಜನೆ ಆರಂಭಿಸುವ ಮೊದಲು ಪರಿಸರ ಪರವಾನಿಗೆ ಕಡ್ಡಾಯಗೊಳಿಸಲಾಗಿತ್ತು.
  • 2017 ಮತ್ತು 2021ರ ಅಧಿಸೂಚನೆಗಳ ಮೂಲಕ ಕೆಲವು ಯೋಜನೆಗಳಿಗೆ ಷರತ್ತುಬದ್ದ ಪೂರ್ವಾನ್ವಯ ಅನುಮತಿ ಅವಕಾಶ ನೀಡಲಾಗಿತ್ತು.
  • ಮೇ 2025ರಲ್ಲಿ ಈ ಕ್ರಮವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿತ್ತು.
  • ಆದರೆ ನವೆಂಬರ್ 2025ರಲ್ಲಿ CREDAI ಅರ್ಜಿಯ ವಿಚಾರಣೆ ವೇಳೆ ಹಿಂದಿನ ತೀರ್ಪಿನಲ್ಲಿ ಸಡಿಲಿಕೆ ನೀಡಲಾಗಿತ್ತು.

ಈ ಮರುಪರಿಶೀಲಿತ ತೀರ್ಪನ್ನೇ ಜೈರಾಮ್ ರಮೇಶ್ ಪ್ರಶ್ನಿಸಿದ್ದರು.

Continue Reading

ದೇಶ

HAL ಠಾಣೆ ಇನ್ಸ್‌ಪೆಕ್ಟರ್ ವಿರುದ್ಧ ಗಂಭೀರ ಆರೋಪ: ಅರವಿಂದ್ ರೆಡ್ಡಿ ಕಾಲಿಗೆ ಬೀಳಲು ಬೆದರಿಕೆ?

ಬೆಂಗಳೂರು: ತನಗೆ ಹಾಗೂ ಸ್ನೇಹಿತೆಯಾಗಿರುವ ನಟಿಗೆ ಉದ್ಯಮಿ ಅರವಿಂದ್ ರೆಡ್ಡಿಯ ಕಾಲು ಹಿಡಿಯುವಂತೆ ಎಚ್‌ಎಎಲ್ ಠಾಣೆಯ ಇನ್ಸ್‌ಪೆಕ್ಟರ್ ಬೆದರಿಸಿದ್ದಾರೆ ಎಂದು ಆರೋಪಿಸಿ ಬಿ.ಕೆ. ವೈಶಾಕ್ ಕರ್ನಾಟಕ ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿದ್ದಾರೆ.

ಉದ್ಯಮಿ ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ ಕಳುಹಿಸಿದ ಪ್ರಕರಣದಲ್ಲಿ ಎಚ್‌ಎಎಲ್ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಬೇಕು ಹಾಗೂ ಇನ್ಸ್‌ಪೆಕ್ಟರ್ ಅಜರುದ್ದೀನ್ ವಿರುದ್ಧ ವಿಚಾರಣೆ ನಡೆಸಲು ಸಕ್ಷಮ ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ವೈಶಾಕ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಇನ್ಸ್‌ಪೆಕ್ಟರ್ ಅಜರುದ್ದೀನ್ ಹಾಗೂ ಅರವಿಂದ್ ರೆಡ್ಡಿಯನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಕಾಲಿಗೆ ಬೀಳುವಂತೆ ಸೂಚನೆ?

ಗುರುವಾರ ಅರ್ಜಿ ವಿಚಾರಣೆಗೆ ಬಂದಾಗ, ವೈಶಾಕ್ ಪರ ವಕೀಲರು ಹಾಜರಾಗಿ ಮಹತ್ವದ ಆರೋಪ ಮಂಡಿಸಿದರು. ಫೆಬ್ರವರಿ 6ರಂದು ಅರ್ಜಿದಾರರನ್ನು ಬಿಡುಗಡೆ ಮಾಡಲು ಹೈಕೋರ್ಟ್ ಸೂಚಿಸಿದ್ದರೂ, ಠಾಣೆಗೆ ಪ್ರಕರಣದಲ್ಲಿ ಹೆಸರು ಕೇಳಿಬಂದ ನಟಿಯನ್ನೂ ಕರೆಸಲಾಗಿತ್ತು. ಅಲ್ಲದೆ, ಅರವಿಂದ್ ರೆಡ್ಡಿಯ ಕಾಲಿಗೆ ಬೀಳುವಂತೆ ವೈಶಾಕ್‌ಗೆ ಸೂಚನೆ ನೀಡಲಾಗಿದೆ ಎಂದು ಪ್ರಮಾಣಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಈ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಪ್ರಕರಣದ ಕುರಿತು ತೀರ್ಮಾನ ಕೈಗೊಳ್ಳುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿ, ವಿಚಾರಣೆಯನ್ನು ಫೆಬ್ರವರಿ 17ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ

ಜನವರಿಯಲ್ಲಿ ವೈಶಾಕ್ ಕೊರಿಯರ್ ಮೂಲಕ ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ ಕಳುಹಿಸಿ, ನಟಿಯೊಂದಿಗೆ ಇರುವ ಜಗಳ ಬಗೆಹರಿಸಿಕೊಳ್ಳಬೇಕು. ಇಲ್ಲದಿದ್ದರೆ 6ರಿಂದ 7 ಕೋಟಿ ರೂ. ಹಣವನ್ನು ಕಳುಹಿಸಬೇಕು ಎಂದು ಒತ್ತಾಯಿಸಿದ್ದರು ಎಂಬ ಆರೋಪ ಇದೆ. ಬೇಡಿಕೆ ಈಡೇರಿಸದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸೂಚಿಸಿದ್ದಾಗಿ ದೂರಿನಲ್ಲಿ ಹೇಳಲಾಗಿದೆ.

ಈ ಕುರಿತು ಅರವಿಂದ್ ರೆಡ್ಡಿ ದೂರು ನೀಡಿದ್ದು, ಎಚ್‌ಎಎಲ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಫೆಬ್ರವರಿ 2ರಂದು ನಟಿಯ ಮನೆಯಲ್ಲಿ ವೈಶಾಕ್ ಅವರನ್ನು ಬಂಧಿಸಲಾಗಿತ್ತು.

ಪ್ರಕರಣ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದು, ಮುಂದಿನ ವಿಚಾರಣೆ ಫೆಬ್ರವರಿ 17ರಂದು ನಡೆಯಲಿದೆ.

Continue Reading

Trending