ರಾಜ್ಯ
ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ; ಐಟಿಬಿಪಿಯಲ್ಲಿ ಹೆಡ್ ಕಾನ್ಸ್ಟೇಬಲ್ ಹುದ್ದೆ ಭರ್ತಿಗೆ ಅಧಿಸೂಚನೆ
ಬೆಂಗಳೂರು: ಇಂಡೋ ಟಿಬೇಟಿಯನ್ ಗಡಿ ಪೊಲೀಸ್ ಪಡೆಯಲ್ಲಿ ಖಾಲಿ ಇರುವ 112 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಶಿಕ್ಷಣ ಮತ್ತು ಒತ್ತಡ ಸಮಾಲೋಚನೆ ಹುದ್ದೆಗಳು ಇವಾಗಿದ್ದು, ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ: 112 ಹೆಡ್ ಕಾನ್ಸ್ಟೇಬಲ್ (ಶಿಕ್ಷಣ ಮತ್ತು ಒತ್ತಡ ಸಮಾಲೋಚಕರು)
- ಪುರುಷ: 96
- ಮಹಿಳೆಯರು : 16
ವಿದ್ಯಾರ್ಹತೆ: ಅಭ್ಯರ್ಥಿಗಳು ಸೈಕಾಲಾಜಿಯಲ್ಲಿ ಪದವಿ ಅಥವಾ ಪದವಿ ಅಥವಾ ಶಿಕ್ಷಣದಲ್ಲಿ ಪದವಿಯನ್ನು ಹೊಂದಿರಬೇಕು.
ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 20, ಗರಿಷ್ಠ ವಯೋಮಿತಿ 25 ವರ್ಷ. ಐಟಿಬಿಪಿ ನಿಯಮದ ಅನುಸಾರ ಮೀಸಲಾತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ಅಭ್ಯರ್ಥಿಗಳು ಮತ್ತು ನಿವೃತ್ತ ಸೇವಾಧಾರರಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ. ಇತರೆ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ನಿಗದಿಸಲಾಗಿದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ದೈಹಿಕ ಸಾಮರ್ಥ್ಯ ಪರೀಕ್ಷೆ, ಲಿಖಿತ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪ್ರವೇಶಾತಿ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಜುಲೈ 7ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನ ಆಗಸ್ಟ್ 5 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು recruitment.itbpolice.nic.in ಭೇಟಿ ನೀಡಿ.
ಬಿಎಸ್ಎಫ್ನಲ್ಲಿ ಹುದ್ದೆ; ಗಡಿ ಭದ್ರತಾ ಪಡೆಯಲ್ಲಿನ 1526 ಸಹಾಯಕ ಸಬ್ ಇನ್ಸ್ಪೆಕ್ಟರ್ (ಮಿನಿಸ್ಟ್ರಿಯಲ್) ಮತ್ತು ಹೆಡ್ ಕಾನ್ಸ್ಟೇಬಲ್ (ಕ್ಲರ್ಕ್) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 243 ಸಹಾಯಕ ಸಬ್ ಇನ್ಸ್ಪೆಕ್ಟರ್ ಮತ್ತು ವಾರೆಂಟ್ ಆಫೀಸರ್, 1283 ಹೆಡ್ ಕಾನ್ಸ್ಟೇಬಲ್ ಮತ್ತು ಹವೀಲ್ದಾರ್ (ಕ್ಲರ್ಕ್) ಹುದ್ದೆಗಳ ನೇಮಕಾತಿ ನಡೆಯಲಿದೆ.
ಅಭ್ಯರ್ಥಿಗಳು ಪಿಯುಸಿ ಪೂರ್ಣಗೊಳಿಸಿರಬೇಕು. ಕ್ಲರ್ಕ್ ಹುದ್ದೆಗಳ ನೇಮಕಾತಿ ಹಿನ್ನೆಲೆ ಅಭ್ಯರ್ಥಿಗಳು ಟೈಪಿಂಗ್ ಅನುಭವ ಹೊಂದಿರಬೇಕು. ಅರ್ಜಿ ಸಲ್ಲಿಕೆಗೆ ಗರಿಷ್ಠ ವಯೋಮಿತಿ 25 ವರ್ಷ.
ಅಭ್ಯರ್ಥಿಗಳನ್ನು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಲಿಖಿತ ಪರೀಕ್ಷೆ, ದೈಹಿಕ ದಾರ್ಢ್ಯತೆ, ಕೌಶಲ್ಯ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಜೂನ್ 9ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 8 ಆಗಿದೆ. ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು rectt.bsf.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.
ದೇಶ
“ಯತೀಂದ್ರಗೆ ಮಿನಿಮಮ್ ಕಾಮನ್ ಸೆನ್ಸ್ ಇಲ್ಲ” – ಶಾಸಕ ಬಾಲಕೃಷ್ಣ ತೀವ್ರ ವಾಗ್ದಾಳಿ
ಬೆಳಗಾವಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಮಾಗಡಿ ಶಾಸಕ ಬಾಲಕೃಷ್ಣ ಕಿಡಿಕಾರಿದ್ದಾರೆ. “ಯತೀಂದ್ರ ಅವರಿಗೆ ಮಿನಿಮಮ್ ಕಾಮನ್ ಸೆನ್ಸ್ ಕೂಡ ಇಲ್ಲ” ಎಂದು ಅವರು ನೇರ ವಾಗ್ದಾಳಿ ನಡೆಸಿದರು.
ಹೈಕಮಾಂಡ್‌ನಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಯತೀಂದ್ರ ನೀಡಿದ್ದ ಹೇಳಿಕೆಗೆ ಸುವರ್ಣ ಸೌಧದಲ್ಲಿ ಪ್ರತಿಕ್ರಿಯಿಸಿದ ಬಾಲಕೃಷ್ಣ, “ದೊಡ್ಡವರಿಗೆ ಒಂದು ನ್ಯಾಯ, ಚಿಕ್ಕವರಿಗೆ ಒಂದು ನ್ಯಾಯ ಆಗುತ್ತಿದೆ. ಯತೀಂದ್ರಗೆ ನೋಟಿಸ್ ನೀಡದೇ ಇದ್ದದ್ದು ಅಸಮಾಧಾನಕಾರಿ” ಎಂದರು.
“ಈ ರೀತಿ ನಡೆಯುತ್ತಿರುವುದಕ್ಕೆ ನಮ್ಮ ಇಕ್ಬಾಲ್ ಹುಸೇನ್ ಮಾತಾಡಿದ್ರೆ ಬಲಾತ್ಕಾರ, ಯತೀಂದ್ರ ಮಾತಾಡಿದ್ರೆ ಚಮತ್ಕಾರ… ಅದನ್ನು ಅದ್ಭುತವಾಗಿ ಹೇಳಿದ್ದಾರೆ” ಎಂದು ಬಾಲಕೃಷ್ಣ ಮತ್ತಷ್ಟು ತಿರುಗೇಟು ನೀಡಿದರು.
ಇದಕ್ಕೂ ಮುಂಚೆ ಸಚಿವ ಡಿ.ಕೆ. ಶಿವಕುಮಾರ್ ಪರವಾಗಿ ಕೆಲವು ಶಾಸಕರು ನೀಡಿದ ಹೇಳಿಕೆಗಳಿಗೆ ಕೆಪಿಸಿಸಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿತ್ತು. ಆದರೆ ಈಗ ಸಿಎಂ ಪುತ್ರ ಯತೀಂದ್ರ ನೇರವಾಗಿ ತಂದೆಯ ಪರ ಬ್ಯಾಟ್ ಬೀಸಿದರೂ ಇನ್ನೂ ನೋಟಿಸ್ ನೀಡಿಲ್ಲ ಎಂಬ ಪ್ರಶ್ನೆಯನ್ನು ಡಿಕೆ ಬೆಂಬಲಿಗ ಶಾಸಕರು ಎತ್ತಿದ್ದಾರೆ.
ಬೆಳಗಾವಿ ಅಧಿವೇಶನದ ರಾಜಕೀಯ ವಾತಾವರಣ ಈ ಆರೋಪ-ಪ್ರತ್ಯಾರೋಪಗಳಿಂದ ಮತ್ತಷ್ಟು ಕಾವು ಪಡೆದಿದೆ.
ರಾಜಕೀಯ
“ಡಿಕೆ ಶಿವಕುಮಾರ್ ಸಿಎಂ ಆಗಲೇಬೇಕು” : ಶಾಸಕ ಎಸ್.ಟಿ. ಸೋಮಶೇಖರ್
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಪದೇ ಪದೇ ಚರ್ಚೆಗೆ ಗ್ರಾಸವಾಗುತ್ತಿರುವ ಮುಖ್ಯಮಂತ್ರಿ ಬದಲಾವಣೆ ವಿಷಯ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಈ ಬಾರಿ ಶಾಸಕರಾದ ಎಸ್.ಟಿ. ಸೋಮಶೇಖರ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಪರವಾಗಿ ಬಲವಾಗಿ ಮಾತಾಡಿದ್ದು, ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಸೋಮಶೇಖರ್, “ಡಿಕೆ ಶಿವಕುಮಾರ್ ಏಕೆ ಮುಖ್ಯಮಂತ್ರಿಯಾಗಬಾರದು? ಪಕ್ಷವನ್ನು ಕಟ್ಟಿಕೊಂಡವರು, ಪಕ್ಷದ ಶಕ್ತಿ ಹೆಚ್ಚಿಸಿದವರು. ಅವರ ಹಣೆಯಲ್ಲಿ ಸಿಎಂ ಸ್ಥಾನ ಬರೆದಿದ್ದರೆ, ಅವರು ಖಚಿತವಾಗಿ ಸಿಎಂ ಆಗುತ್ತಾರೆ” ಎಂದು ಸ್ಪಷ್ಟಪಡಿಸಿದರು. ಅವರು ನಿನ್ನೆ ನಡೆದ ಡಿನ್ನರ್ ಬಗ್ಗೆ ಹೇಳುವಾಗ, “ಶಿವಕುಮಾರ್ ಅವರು ಊಟಕ್ಕೆ ಕರೆದಿದ್ದರು, ಅಲ್ಲಿ ಸುಮಾರು 70 ಶಾಸಕರು ಇದ್ದರು” ಎಂದು ಮಾಹಿತಿ ಹಂಚಿಕೊಂಡರು.
ಡಿನ್ನರ್ ಬಳಿಕ ಮತ್ತೊಬ್ಬ ಪ್ರಮುಖ ನಾಯಕ ಮತ್ತು ಡಿಕೆ ಶಿವಕುಮಾರ್ ಅವರ ಆಪ್ತನಾದ ಇಕ್ಬಾಲ್ ಹುಸೇನ್ ಕೂಡಾ ತೀವ್ರ ಹೇಳಿಕೆ ನೀಡಿ, “ಸಂಕ್ರಾಂತಿ ಅಲ್ಲ, ಅಧಿವೇಶನ ಮುಗಿಯುತ್ತಲೇ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ” ಎಂದು ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿದರು.
ತಡರಾತ್ರಿ ಪ್ರವೀಣ್ ದೊಡ್ಡಣ್ಣನವರ್ ತೋಟದ ಮನೆಯಲ್ಲಿ ನಡೆದ ಈ ಭರ್ಜರಿ ಸಭೆಯಲ್ಲಿ ಎಸ್.ಟಿ. ಸೋಮಶೇಖರ್, ಶಿವರಾಂ ಹೆಬ್ಬಾರ್, ಹ್ಯಾರಿಸ್, ಮಾಗಡಿ ಬಾಲಕೃಷ್ಣ ಸೇರಿದಂತೆ 55–70 ಶಾಸಕರು ಭಾಗಿಯಾಗಿದ್ದರು. ಸಭೆಯ ನಂತರವೇ DKShi ಪರವಾಗಿ ನೀಡಲಾದ ಹೇಳಿಕೆಗಳು ಸಿದ್ಧರಾಮಯ್ಯ ಬಣಕ್ಕೆ ಆತಂಕ ತರಿಸಿದೆ.
ಈ ನಡುವೆ ಹೈಕಮಾಂಡ್ ಕೂಡಾ ಪರಿಸ್ಥಿತಿ ಗಂಭೀರವಾಗುತ್ತಿರುವುದರಿಂದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ್ ಖರ್ಗೆ ಅವರೊಂದಿಗೆ ಆಂತರಿಕ ಚರ್ಚೆ ನಡೆಸಿದೆ ಎಂಬ ಮಾಹಿತಿ ಹರಿದಾಡುತ್ತಿದೆ. ಅಧಿವೇಶನ ಮುಗಿದ ನಂತರ ತೀರ್ಮಾನ ಸಂಭವನೀಯ ಎಂಬ ಇಕ್ಬಾಲ್ ಹುಸೇನ್ ಹೇಳಿಕೆ ರಾಜಕೀಯದಲ್ಲಿ ಬೆಂಕಿಗೆ ಎಣ್ಣೆ ಸುರಿದಂತಾಗಿದೆ.
ಇನ್ನೊಂದೆಡೆ, ಸಿಎಂ ಸಿದ್ದರಾಮಯ್ಯ ಅವರ ಪುತ್ರ ಮತ್ತು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಬದಲಾವಣೆ ಕುರಿತು ಪ್ರಸಕ್ತ ಗಾಳಿಚರ್ಚೆಗಳಿಗೆ ತೆರೆ ಬಿದ್ದಂತೆ ಮಾತನಾಡಿ, “ಮುಖ್ಯಮಂತ್ರಿ ಬದಲಾವಣೆ ಇಲ್ಲ. ಹೈಕಮಾಂಡ್ ಇದನ್ನು ಸ್ಪಷ್ಟಪಡಿಸಿದೆ” ಎಂದು ಹೇಳಿದ್ದಾರೆ. ಕೇವಲ ಎರಡು ದಿನಗಳೊಳಗೆ ಅವರು ಎರಡನೇ ಬಾರಿ ಇದೇ ಹೇಳಿಕೆ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಬಲವಾದ ಸಂದೇಶ ನೀಡಿದಂತಾಗಿದೆ.
ದೇಶ
ಅಧಿವೇಶನದ ನಂತರ ಡಿಕೆಶಿ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಬೆಳಗಾವಿ: “ಸಂಕ್ರಾಂತಿಯಲ್ಲ, ಅಧಿವೇಶನ ಮುಗಿದ ಕೂಡಲೇ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆ” ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಬೆಳಗಾವಿ ಸುವರ್ಣಸೌಧದಲ್ಲಿ ಸ್ಪಷ್ಟಪಡಿಸಿದ್ದಾರೆ.
“ನನ್ನ ಹಣೆಯಲ್ಲಿ ಬರೆದಿದ್ದಕ್ಕೆ ನಾನು ಶಾಸಕನಾಗಿದ್ದೇನೆ. ಹಾಗೆಯೇ ಡಿ.ಕೆ. ಶಿವಕುಮಾರ್ ಅವರ ಹಣೆಯಲ್ಲಿ ಸಿಎಂ ಸ್ಥಾನ ಬರೆದಿದೆ. ಅವರು ಖಚಿತವಾಗಿ ಸಿಎಂ ಆಗುತ್ತಾರೆ” ಎಂದು ಇಕ್ಬಾಲ್ ಹುಸೇನ್ ಹೇಳಿದರು. “ನಿನ್ನೆ 55 ಜನ ಶಾಸಕರು ಒಟ್ಟಿಗೆ ಊಟ ಮಾಡಿದ್ದೇವೆ. ಅದರಲ್ಲಿ ಯಾವ ರಾಜಕೀಯ ಚರ್ಚೆಯೂ ನಡೆಯಲಿಲ್ಲ. ನಮಗೆ ಡಿ.ಕೆ. ಶಿವಕುಮಾರ್ ಸಿಎಂ ಆಗಬೇಕು, ಆಗಲೇಬೇಕು” ಎಂದರು.
“ಡಿ.ಕೆ. ಶಿವಕುಮಾರ್ ಕಷ್ಟಪಟ್ಟಿದ್ದಾರೆ, ಅದರ ಫಲ ಅವರು ಪಡೆಯಲೇಬೇಕು. ಅಧಿವೇಶನ ಮುಗಿದ ತಕ್ಷಣ ಬದಲಾವಣೆ ಸಾಧ್ಯ. ಸಂಖ್ಯಾಬಲ ಮುಖ್ಯವಲ್ಲ, ಹೈಕಮಾಂಡ್ ನಿರ್ದೇಶನೆಯೇ ಅಂತಿಮ” ಎಂದು ಅವರು ಹೇಳಿದರು.
ಡಿನ್ನರ್ ಸಭೆಯಲ್ಲಿ 50–60 ಮಂದಿ ಸೇರಿದ್ದರೂ, ಇದು ರಾಜಕೀಯ ಚರ್ಚೆಗೆ ವೇದಿಕೆ ಆಗಲಿಲ್ಲ ಎಂದು ಸ್ಪಷ್ಟಪಡಿಸಿದರು. “ಡಿ.ಕೆ. ಶಿವಕುಮಾರ್ ಕರೆದರೆ ಯಾವ ಪಕ್ಷದವರಾದರೂ ಬರುತ್ತಾರೆ. ವಿಶ್ವಾಸ, ಪ್ರೀತಿ, ಬಾಂಧವ್ಯ – ಪಕ್ಷವೇನೂ matter ಆಗೋದಿಲ್ಲ. ಕಾಂಗ್ರೆಸ್ ಶಿಸ್ತಿನ ಪಕ್ಷ” ಎಂದರು.
ಮುಖ್ಯಮಂತ್ರಿಯ ಪರವಾಗಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿ, “ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ನೀಡಿರುವ ಮಾರ್ಗದರ್ಶನವೇ ನಮಗೆ ಅಂತಿಮ. ನಾಯಕತ್ವ ಬದಲಾವಣೆ ಬಗ್ಗೆ ನನಗೆ ಮಾಹಿತಿ ಇಲ್ಲ; ನಾನು ಡಿನ್ನರ್‌ಗೆ ಹೋಗಿರಲಿಲ್ಲ” ಎಂದು ಹೇಳಿದರು.
-
ಬಿಬಿಎಂಪಿ7 months agoತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years agoವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years agoಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years agoಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years agoGruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು2 years agoನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು1 year agoಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years agoದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ
