ಬೆಂಗಳೂರು
ಚನ್ನಪಟ್ಟಣದಿಂದ ಪುತ್ರಿ ಸ್ಪರ್ಧೆ- ಡಿಕೆಶಿ ಹೇಳಿದ್ದೇನು?

ಬೆಂಗಳೂರು: ನಮ್ಮ ಕುಟುಂಬದ ಯಾರು ಕೂಡ ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟ ಪಡಿಸಿದ್ದಾರೆ,
ತಮ್ಮ ಎಕ್ಸ್ ಖಾತೆಯಲ್ಲಿ ಈ ಮಾಹಿತಿ ಹಂಚಿಕೊಂಡಿರುವ ಅವರು ಚನ್ನಪಟ್ಟಣದಿಂದ ತಮ್ಮ ಪುತ್ರಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹರಡಿದ್ದ ಹಿನ್ನೆಲೆಯಲ್ಲಿ ಈ ಸ್ಪಷ್ಟನೆ ನೀಡಿದ್ದಾರೆ ,
ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ, ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ, ಅದರೂ ಈ ಬಗ್ಗೆ ಆಗಾಗ ಸೃಷ್ಟಿಯಾಗುವ ವದಂತಿಗಳಿಗೆ ಯಾರೂ ಕಿಮಿಗೊಡಬಾರದು ಎಂದು ವಿನಂತಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ,