Connect with us

ರಾಜ್ಯ

Darshan: ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್ ವಿಶೇಷ ಮನವಿ!

Published

on

ನಟ ದರ್ಶನ್ ಜೈಲು ಸೇರಿದ ನಂತರ ಅವರ ಅಭಿಮಾನಿಗಳು ಚಿತ್ರರಂಗದ ಗಣ್ಯರು ಜೈಲಿಗೆ ಬಂದು ಅವರನ್ನು ಭೇಟಿ ಮಾಡಿ ಹೋಗುತ್ತಿದ್ದಾರೆ. ಚಿತ್ರರಂಗದ ಸಹುದ್ಯೋಗಿಗಳೂ, ದರ್ಶನ್ ಅವರಿಂದ ನೆರವು ಪಡೆದವರು, ಅವರ ಅಭಿಮಾನಿಗಳು ಅವರನ್ನು ನೋಡುವುದಕ್ಕಾಗಿ ಜೈಲಿನತ್ತ ಬರುತ್ತಿದ್ದಾರೆ.

ಈ ಎಲ್ಲ ಬೆಳವಣಿಗೆಗಳ ಮಧ್ಯೆ ಇತ್ತೀಚೆಗೆ ಅವರ ವಿಶೇಷ ಚೇತನ ಅಭಿಮಾನಿಯೊಬ್ಬರು ಅವರನ್ನು ನೋಡಲು ಬಂದಿದ್ದರು. ಈ ಘಟನೆಯ ನಂತರ ಅಭಿಮಾನಿಗಳಿಗೆ ನಟ ದರ್ಶನ್ ಮನವಿ ಮಾಡಿದ್ದು ಜೈಲಿನಿಂದಲೇ ನಟ ದರ್ಶನ್ ಮನವಿ ತಿಳಿಸಿದ್ದಾರೆ.

ಜೈಲಾಧಿಕಾರಿಗಳ ಮೂಲಕ ಅಭಿಮಾನಿಗಳಿಗೆ ಸಂದೇಶ ನೀಡಿದ ದರ್ಶನ್ ಅಭಿಮಾನಿಗಳು ಯಾರೂ ಜೈಲಿನ ಬಳಿ ಬರಬೇಡಿ. ಜೈಲಿನ ನಿಯಮಗಳ ಪ್ರಕಾರ ಅಭಿಮಾನಿಗಳ ಭೇಟಿ ಸಾಧ್ಯವಾಗುವುದಿಲ್ಲ ಎಂದು ಅವರು ಈ ಮೆಸೇಜ್ ಮೂಲಕ ಹೇಳಿದ್ದಾರೆ.

ಜೈಲಿನ ಬಳಿ ನನ್ನ ಭೇಟಿಗೆ ಬಂದು ನೀವು ಕಾಯುವುದು. ನನ್ನ ಭೇಟಿಗೆ ಅವಕಾಶ ಸಿಗದೆ ನಿರಾಸೆಯಿಂದ ವಾಪಸ್ ಹೋಗುವುದು. ಅದರಲ್ಲಿಯೂ ವಿಶೇಷ ಚೇತನ ಯುವತಿ ಸೌಮ್ಯ ಭೇಟಿಗೆ ಆಗಮಿಸಿದ್ದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ ದರ್ಶನ್.

ಜೈಲಿನ ಬಳಿ ಬಂದು ದರ್ಶನ್ ಭೇಟಿಗೆ ಹಠ ಮಾಡಿದ್ದ ಸೌಮ್ಯ ಅನ್ನ ಆಹಾರ ಸೇವಿಸದೇ ಹಠ ಮಾಡಿದ್ದರು. ದರ್ಶನ್ ಭೇಟಿಗೆ ಆಗಮಿಸಿದ್ದ ಸೌಮ್ಯ ನಟನನ್ನು ನೋಡಲೇಬೇಕು ಎಂದು ಕೇಳಿದ್ದರು.

ನಟ ದರ್ಶನ್ ‌ಕೊಡಿಸಿದ್ದ ಆಟೋದಲ್ಲಿ ಪೋಷಕರ ಜೊತೆ ಆಗಮಿಸಿದ್ದ ಸೌಮ್ಯ ಜೈಲಿನ ಬಳಿ ಆಗಮಿಸಿದ್ದ ವಿಚಾರ ತಿಳಿದು ದರ್ಶನ್ ಬೇಸರಗೊಂಡಿದ್ದರು. ಕಳೆದ ಮೂರು ದಿನಗಳ ಹಿಂದೆ ಸೂರ್ಯಕಾಂತ್ ಎಂಬ ವಿಶೇಷ ಚೇತನ ಕೂಡ ಆಗಮಿಸಿದ್ದರು.

ದೂರದ ಗುಲ್ಬರ್ಗಾದಿಂದ ತ್ರಿ ವೀಲರ್ ಬೈಕ್ ನಲ್ಲಿ ಆಗಮಿಸಿದ್ದರು. ಈ ಎಲ್ಲಾ ವಿಚಾರ ತಿಳಿದು ಅಭಿಮಾನಿಗಳ ಬಳಿ ದರ್ಶನ್ ಮನವಿ ಮಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಅವರನ್ನು ನೋಡಲು ಅಭಿಮಾನಿಗಳು ಬರುತ್ತಲೇ ಇದ್ದಾರೆ.

ದರ್ಶನ್ ಸೆರೆವಾಸ ಏಳನೇ ದಿನಕ್ಕೆ ಕಾಲಿಟ್ಟಿದ್ದು ರಾತ್ರಿ ಮುದ್ದೆ, ಅನ್ನ, ಸಾಂಬಾರ್, ಚಪಾತಿ ಮತ್ತು ಮಜ್ಜಿಗೆ ತಿಂದು ನಟ ತಡವಾಗಿ ನಿದ್ರೆಗೆ ಜಾರಿದ್ದಾರೆ. ಮುಂಜಾನೆ 6 ಗಂಟೆ ಸುಮಾರಿಗೆ ಎಚ್ಚರವಾಗಿದ್ದಾರೆ. ಎಂದಿನಂತೆ ಬಿಸಿನೀರು ಕುಡಿದ ದರ್ಶನ್ ಕೆಲಹೊತ್ತು ಕೊಠಡಿಯಲ್ಲಿ ವಾಕಿಂಗ್ ಮಾಡಿದ್ದಾರೆ.

ಸಂಕಷ್ಟದಲ್ಲಿ ನಟ ದರ್ಶನ್ ಪರ ನಿಂತ ಅಭಿಮಾನಿಗಳಿಗೆ ಸೋಶಿಯಲ್ ಮೀಡಿಯಾ ಪೋಸ್ಟ್ ಮೂಲಕ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕಿವಿಮಾತು ಹೇಳಿದ್ದಾರೆ. ‘ದರ್ಶನ್ ಸೆಲೆಬ್ರೆಟಿಗಳು’ ತಾಳ್ಮೆ, ಶಾಂತಿಯಿಂದ ಇರಿ, ನ್ಯಾಯ ಸಿಕ್ಕೇ ಸಿಗುತ್ತದೆ ಎಂದು ಹೇಳಿದ್ದಾರೆ.

ಅಪರಾಧ

“ಜನಸೇವೆಗೆ ನೇಮಕ, ಭ್ರಷ್ಟಾಚಾರಕ್ಕೆ ಅಲ್ಲ”: ಅಧಿಕಾರಿಗಳಿಗೆ ಉಪಲೋಕಾಯುಕ್ತ ಖಡಕ್ ಸಂದೇಶ

Published

on

ಮಂಡ್ಯ: ರಾಜ್ಯದ ಬಹುತೇಕ ಎಲ್ಲಾ ಇಲಾಖೆಗಳಲ್ಲೂ ಭ್ರಷ್ಟಾಚಾರ ಮಿತಿಮೀರಿದ್ದು, ಕರ್ನಾಟಕ ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಐದನೇ ಸ್ಥಾನದಲ್ಲಿದೆ ಎಂದು ಉಪಲೋಕಾಯುಕ್ತ Justice B. Veerappa ಗಂಭೀರ ಎಚ್ಚರಿಕೆ ನೀಡಿದ್ದಾರೆ.

ಮಂಡ್ಯ ಹಾಗೂ ಮಳವಳ್ಳಿ ತಾಲೂಕುಗಳಲ್ಲಿ ಬಾಕಿ ಉಳಿದಿದ್ದ ಲೋಕಾಯುಕ್ತ ಪ್ರಕರಣಗಳ ವಿಚಾರಣೆ ಪೂರ್ಣಗೊಳಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಭ್ರಷ್ಟಾಚಾರ ನಿಯಂತ್ರಣಕ್ಕೆ ಬರದಿದ್ದರೆ ಭವಿಷ್ಯದಲ್ಲಿ ರಾಜ್ಯಕ್ಕೆ ದೊಡ್ಡ ಅಪಾಯ ಎದುರಾಗಲಿದೆ” ಎಂದು ಹೇಳಿದ್ದಾರೆ.

ಡಾ. B. R. Ambedkar ರಚಿಸಿದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಅವಕಾಶ ಕಲ್ಪಿಸುವ ಉದ್ದೇಶ ಹೊಂದಿದೆ. ಆದರೆ ಭ್ರಷ್ಟಾಚಾರ ಸಂವಿಧಾನದ ಮೂಲ ಉದ್ದೇಶವನ್ನೇ ಹಾಳು ಮಾಡುತ್ತಿದೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ರಾಜ್ಯದ 16 ಜಿಲ್ಲೆಗಳಲ್ಲಿ ಒಟ್ಟು 1,281 ಭ್ರಷ್ಟಾಚಾರ ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದ ನ್ಯಾ. ವೀರಪ್ಪ, Transparency International ಬಿಡುಗಡೆ ಮಾಡಿರುವ ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕವನ್ನು ಉಲ್ಲೇಖಿಸಿದರು. “180 ರಾಷ್ಟ್ರಗಳ ಪೈಕಿ ಭಾರತ 91ನೇ ಸ್ಥಾನದಲ್ಲಿದ್ದು, 100ರಲ್ಲಿ ಕೇವಲ 39 ಅಂಕಗಳನ್ನು ಪಡೆದಿದೆ” ಎಂದು ಹೇಳಿದರು.

“ಅಧಿಕಾರಿಗಳನ್ನು ಜನಸೇವೆಗೆ ನೇಮಿಸಲಾಗಿದೆ. ಅವರು ಪ್ರಾಮಾಣಿಕತೆ ಹಾಗೂ ನಿಷ್ಠೆಯಿಂದ ಕೆಲಸ ಮಾಡಬೇಕು. ಇಲ್ಲವಾದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ” ಎಂದು ಭ್ರಷ್ಟ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

2024ರಲ್ಲಿ ಕಾಂಗ್ರೆಸ್ ಸರ್ಕಾರದಿಂದ ಉಪಲೋಕಾಯುಕ್ತರಾಗಿ ನೇಮಕಗೊಂಡಿದ್ದ ನ್ಯಾಯಮೂರ್ತಿ ಬಿ. ವೀರಪ್ಪ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಮುಖ್ಯಸ್ಥರಾಗಿದ್ದ ವೇಳೆ ಲೋಕ ಅದಾಲತ್‌ಗಳ ಮೂಲಕ ಒಂದು ಕೋಟಿಗೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ರಾಷ್ಟ್ರೀಯ ಮಟ್ಟದಲ್ಲಿ ದಾಖಲೆ ನಿರ್ಮಿಸಿದ್ದರು.

ಭ್ರಷ್ಟಾಚಾರ ನಿರ್ಮೂಲನೆಗೆ ಪ್ರತಿಯೊಬ್ಬ ನಾಗರಿಕರೂ ಜಾಗೃತರಾಗಬೇಕು ಎಂದು ಮನವಿ ಮಾಡಿದ ಅವರು, “ಬದಲಾವಣೆ ಅಧಿಕಾರಿಗಳಿಂದ ಮಾತ್ರವಲ್ಲ, ನಾಗರಿಕರಿಂದಲೂ ಆಗಬೇಕು” ಎಂದು ಹೇಳಿದರು.

Continue Reading

ದೇಶ

‘ನೀಟ್ ಅಕ್ರಮಕ್ಕೆ ಮೋದಿ-ಧರ್ಮೇಂದ್ರ ಪ್ರಧಾನ್ ಹೊಣೆ’: CM ಸಿದ್ದರಾಮಯ್ಯ

Published

on

ಬೆಂಗಳೂರು: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ NEET ವೈದ್ಯಕೀಯ ಪ್ರವೇಶ ಪರೀಕ್ಷೆಯ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಪ್ರಧಾನಿ Narendra Modi ಹಾಗೂ ಕೇಂದ್ರ ಶಿಕ್ಷಣ ಸಚಿವ Dharmendra Pradhan ನೇರ ಹೊಣೆ ಹೊರಬೇಕು ಎಂದು ಮುಖ್ಯಮಂತ್ರಿ Siddaramaiah ಒತ್ತಾಯಿಸಿದರು.

ಬೆಂಗಳೂರಿನ Freedom Park ನಲ್ಲಿ ಯುವ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಸಿಎಂ, “ಈ ಹಿಂದೆ ರಾಜ್ಯಗಳು ತಮ್ಮದೇ CET ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸುತ್ತಿದ್ದರು. ಆದರೆ 2016ರಲ್ಲಿ ಮೋದಿ ಸರ್ಕಾರ ಬಲವಂತವಾಗಿ NEET ಜಾರಿಗೆ ತಂದ ಬಳಿಕ ಅಕ್ರಮಗಳು ಹೆಚ್ಚಾಗಿವೆ” ಎಂದು ಆರೋಪಿಸಿದರು.

“ಶಿಕ್ಷಣ ಸಂವಿಧಾನದ ಸಮವರ್ತಿ ಪಟ್ಟಿಯ ವಿಷಯ. ರಾಜ್ಯಗಳಿಗೆ ಸ್ವಾಯತ್ತತೆ ಇರಬೇಕು. ಆದರೆ ಕೇಂದ್ರ ಸರ್ಕಾರ ಎಲ್ಲಾ ಅಧಿಕಾರವನ್ನು ತನ್ನಲ್ಲೇ ಕೇಂದ್ರೀಕರಿಸಿಕೊಂಡ ಪರಿಣಾಮ ಇಂತಹ ಹಗರಣಗಳು ಮರುಕಳಿಸುತ್ತಿವೆ” ಎಂದು ಅವರು ಹೇಳಿದರು.

ಕಳೆದ ಹತ್ತು ವರ್ಷಗಳಲ್ಲಿ ಐದು ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿದ ಸಿದ್ದರಾಮಯ್ಯ, “ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳು ವರ್ಷವಿಡೀ ಶ್ರಮಪಟ್ಟು ಪರೀಕ್ಷೆಗೆ ಸಿದ್ಧತೆ ನಡೆಸುತ್ತಾರೆ. ಆದರೆ ಪೇಪರ್ ಲೀಕ್ ಮೂಲಕ ಅವರ ಭವಿಷ್ಯದ ಜೊತೆ ಚೆಲ್ಲಾಟವಾಡಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಸಿಎಂ, “ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಹತಾಶರಾಗಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಘಟನೆಗಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಬಿಜೆಪಿ ಆಡಳಿತದಲ್ಲಿ ಅಕ್ರಮಗಳ ಸರಮಾಲೆ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ PSI ನೇಮಕಾತಿ ಹಗರಣವನ್ನೂ ಉಲ್ಲೇಖಿಸಿದರು. “ದೇಶದ ಯುವಜನತೆ ಆಕ್ರೋಶದಲ್ಲಿದ್ದರೂ ಪ್ರಧಾನಿ ಮೋದಿ ವಿದೇಶ ಪ್ರವಾಸದಲ್ಲಿದ್ದಾರೆ” ಎಂದು ಟೀಕಿಸಿದರು.

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ದೊರೆಯುವವರೆಗೂ ಕಾಂಗ್ರೆಸ್ ಹೋರಾಟ ಮುಂದುವರಿಯಲಿದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

Continue Reading

ದೇಶ

ಸಿ.ಟಿ. ರವಿ ಎದುರೇ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಭಾರೀ ಘರ್ಷಣೆ

Published

on

ಚಿಕ್ಕಮಗಳೂರು: ಜಿಲ್ಲೆಯ ರಾಂಪುರ ಗ್ರಾಮದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಭಾರೀ ರಾಜಕೀಯ ಘರ್ಷಣೆ ಸಂಭವಿಸಿದ್ದು, ಕೆಲಕಾಲ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ C. T. Ravi ಅವರ ಸಮ್ಮುಖದಲ್ಲೇ ಈ ಗಲಾಟೆ ನಡೆದಿರುವುದು ವಿಶೇಷ ಗಮನ ಸೆಳೆದಿದೆ.

ಸಿ.ಟಿ. ರವಿ ಗ್ರಾಮಕ್ಕೆ ಭೇಟಿ ನೀಡಿದ್ದ ವೇಳೆ ಸ್ಥಳೀಯ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಆರಂಭವಾದ ಮಾತಿನ ಚಕಮಕಿ ಕೆಲವೇ ಕ್ಷಣಗಳಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿತು. ಉಭಯ ಪಕ್ಷಗಳ ಬೆಂಬಲಿಗರು ಪರಸ್ಪರ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪರಿಸ್ಥಿತಿ ಕೈಮೀರಿದ ಪರಿಣಾಮ ತಳ್ಳಾಟ-ನೂಕಾಟ ನಡೆಯಿತು.

ಮಾತಿನ ವಾಗ್ವಾದ ಹೆಚ್ಚಾಗುತ್ತಿದ್ದಂತೆ ಕಾರ್ಯಕರ್ತರು ಕೈಕೈ ಮಿಲಾಯಿಸುವ ಹಂತಕ್ಕೂ ತಲುಪಿದ್ದು, ಸಿ.ಟಿ. ರವಿ ಅವರ ಸಮ್ಮುಖದಲ್ಲೇ ಹಲ್ಲೆ ನಡೆಸಲು ಯತ್ನಿಸಲಾಗಿದೆ ಎನ್ನಲಾಗಿದೆ. ಸ್ಥಳದಲ್ಲಿದ್ದ ಸಾರ್ವಜನಿಕರು ಹಾಗೂ ಮುಖಂಡರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಲು ಪ್ರಯತ್ನಿಸಿದರು.

ಘಟನೆ ನಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡರು. ಯಾವುದೇ ಅನಾಹುತ ಸಂಭವಿಸದಂತೆ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಈ ಘರ್ಷಣೆಯಿಂದ ಕೆಲಕಾಲ ರಾಂಪುರ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ರಾಜಕೀಯ ವೈಷಮ್ಯದ ಹಿನ್ನೆಲೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ಚಿಕ್ಕಮಗಳೂರು ಜಿಲ್ಲಾ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉದ್ವಿಗ್ನತೆ ಉಂಟಾಗದಂತೆ ಪೊಲೀಸರು ನಿಗಾವಹಿಸಿದ್ದಾರೆ.

Continue Reading

Trending