Connect with us

ಬೆಂಗಳೂರು

ರಾಜ್ಯದಲ್ಲಿ ಮತ್ತೆರಡು ‘ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್’ ಸ್ಥಾಪಿಸಲು ಸರ್ಕಾರ ಮುಂದು!

Published

on

ಬೆಂಗಳೂರು: ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಡಿಸೈನ್ ಮತ್ತು ಮ್ಯಾನುಫ್ಯಾಕ್ಚರಿಂಗ್ ವಲಯದಲ್ಲಿ ಹೂಡಿಕೆಗಳನ್ನು ಆಕರ್ಷಿಸಲು ಅಸ್ತಿತ್ವದಲ್ಲಿರುವ ಪರಿಸರ ವ್ಯವಸ್ಥೆಯನ್ನು ನವೀಕರಿಸಲು ರಾಜ್ಯ ಸರ್ಕಾಪ ಎರಡು ಭೂ ಭಾಗಗಳನ್ನು ಅಭಿವೃದ್ಧಿಪಡಿಸುತ್ತಿದ್ದು, ಕ್ಲಸ್ಟರ್ ಸ್ಥಾಪಿಸಲು ಕೇಂದ್ರ ಸರ್ಕಾರದ ಮಾರ್ಪಡಿಸಿದ ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್ ಯೋಜನೆಯಡಿಯಲ್ಲಿ ಮೈಸೂರು ಜಿಲ್ಲೆಯ ಕೋಚನಹಳ್ಳಿ ಕೈಗಾರಿಕಾ ಪ್ರದೇಶ ಮತ್ತು ಧಾರವಾಡ ಜಿಲ್ಲೆಯ ಕೋಟೂರು-ಬೇಲೂರು ಕೈಗಾರಿಕಾ ಪ್ರದೇಶವನ್ನು ಆಯ್ಕೆ ಮಾಡಿದೆ. ಬೆಂಗಳೂರು ಮತ್ತು ಸುತ್ತಮುತ್ತಲು ಇನ್ನೂ ಎರಡು ಇಎಂಸಿಗಳನ್ನು ಸ್ಥಾಪಿಸಲು ಸ್ಥಳ ವೀಕ್ಷಣೆ ಮಾಡಲಾಗುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಶನಿವಾರ ಹೇಳಿದರು.

ನೂತನವಾಗಿ ರಚನೆಗೊಂಡ ಕೇಂದ್ರ ಸರ್ಕಾರದ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಕರ್ನಾಟಕದ ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಐಟಿ, ಎಲೆಕ್ಟ್ರಾನಿಕ್ಸ್ ಮತ್ತು ಐ&ಬಿ ಸಚಿವರಾದ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ, ಇಲಾಖೆಗೆ ಸಂಬಂಧಿಸಿದ ಪ್ರಸ್ತಾವನೆಯನ್ನು ಮುಂದಿಟ್ಟರು.

ಕರ್ನಾಟಕ ರಾಜ್ಯ ಐಟಿ, ಬಿಟಿ, ಏರೋಸ್ಪೇಸ್, ಆಟೋಮೋಟಿವ್, ಜವಳಿ ಮತ್ತು ಭಾರಿ ಕೈಗಾರಿಕಾ ಕ್ಷೇತ್ರದಲ್ಲಿ ಆರ್ಥಿಕವಾಗಿ ಅಭೂತಪೂರ್ವ ಬೆಳವಣಿಗೆ ಕಾಣುತ್ತಿದೆ. ಕರ್ನಾಟಕವು ಈ ಕ್ಷೇತ್ರಗಳ ಅಭಿವೃದ್ಧಿಗೆ ಸೂಕ್ತ ಸ್ಥಳವಾಗಿದ್ದು, ಹೂಡಿಕೆಗೆ ಅಗಾಧ ಅವಕಾಶವಿರುವ ಬಗ್ಗೆ ಉಲ್ಲೇಖಿಸಿದರು.

ಟೆಕ್ ಹಬ್ ಮತ್ತು ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ ಎಂದು ಬೆಂಗಳೂರು ಗುರುತಿಸಿಕೊಂಡಿದೆ. ಬೆಂಗಳೂರು ಸೆಮಿಕಂಡಕ್ಟರ್ ಮತ್ತು ಎಲೆಕ್ಟ್ರಾನಿಕ್ಸ್ ಡೊಮೇನ್, ಫಿನ್ಟೆಕ್ ಸ್ಪೇಸ್, ಎಂಟರ್ಪ್ರೈಸ್ ಟೆಕ್, ಇ-ಕಾಮರ್ಸ್ ಮತ್ತು ಎಡ್-ಟೆಕ್ ಕ್ಷೇತ್ರಗಳಲ್ಲಿ ತೆರೆದ ವೇದಿಕೆಯಾಗಿದೆ. ಕರ್ನಾಟಕದಲ್ಲಿ ಗಿಫ್ಟ್ ಸಿಟಿ ಮಾದರಿಯಲ್ಲಿ ಅವಕಾಶ ತೆರೆದಿಡುವ ಮೂಲಕ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವುದರ ಜೊತೆಗೆ, ಹಲವಾರು ಉದ್ಯೋಗಾವಕಾಶಗಳ ಸೃಷ್ಟಿಗೆ ಅವಕಾಶ ಲಭ್ಯವಾಗಲಿದೆ. ಜೊತೆಗೆ ಯತೇಚ್ಚವಾಗಿ ವಿದೇಶಿ ಹೂಡಿಕೆಗಳನ್ನೂ ಆಕರ್ಷಿಸಬಹುದು ಎಂದು ವಿವರಿಸಿದರು.

ದೇಶ

K. Govindraj ಸೇರಿ ಗಣ್ಯರಿಗೆ ಗೌರವ ಡಾಕ್ಟರೇಟ್ – ಬಿಸಿಯು ಘಟಿಕೋತ್ಸವ ಸಂಭ್ರಮ

Published

on

By

ಬೆಂಗಳೂರು: Bengaluru City University (ಬಿಸಿಯು) 5ನೇ ಘಟಿಕೋತ್ಸವ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ಕುಲಾಧಿಪತಿಗಳಾದ Thawar Chand Gehlot ಚಾಲನೆ ನೀಡಿದರು.

ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಈ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ Dr. Binay Kumar Das, Defence Research and Development Organisation (ಡಿಆರ್‌ಡಿಒ) ಮಹಾ ನಿರ್ದೇಶಕರು (ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಸಿಸ್ಟಮ್ಸ್) ಭಾಗವಹಿಸಿದ್ದರು.

ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 6 ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಸಂಗೀತ ನಿರ್ದೇಶಕ Arjun Janya, ಕ್ರಿಕೆಟರ್ Venkatesh Prasad, ಶಿಕ್ಷಣ ತಜ್ಞ T. K. Narayanappa, ಎಂಎಲ್ಸಿ K. Govindaraj, ಶಿಕ್ಷಣ ಕ್ಷೇತ್ರದ Mohan Alva ಹಾಗೂ ಕೈಗಾರಿಕೋದ್ಯಮಿ Bava Mohammed Farooq ಅವರಿಗೆ ರಾಜ್ಯಪಾಲರು ಗೌರವಿಸಿದರು.

ಉಪ ಚುನಾವಣೆ ಪ್ರಚಾರದ ಹಿನ್ನೆಲೆ, ಉನ್ನತ ಶಿಕ್ಷಣ ಸಚಿವ Dr. C. N. Ashwath Narayan ಗೈರಾಗಿದ್ದರು.

ಘಟಿಕೋತ್ಸವದಲ್ಲಿ 73 ಪ್ರಥಮ ರ‍್ಯಾಂಕ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಪ್ರಮಾಣಪತ್ರ ಮತ್ತು ನಗದು ಬಹುಮಾನ ವಿತರಿಸಲಾಯಿತು. ಒಟ್ಟು 37,370 ವಿದ್ಯಾರ್ಥಿಗಳಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರದಾನವಾಗಿದ್ದು, 23 ವಿದ್ಯಾರ್ಥಿಗಳಿಗೆ ಪಿಎಚ್‌ಡಿ ಪದವಿ ನೀಡಲಾಯಿತು.

ವಿಶೇಷವಾಗಿ, ಸ್ನೇಹಾ ಟಿ (ಎಂಎಸ್‌ಸಿ ರಸಾಯನಶಾಸ್ತ್ರ) 4 ಚಿನ್ನದ ಪದಕಗಳನ್ನು ಪಡೆದು ಸಾಧನೆ ಮಾಡಿದ್ದು, ಅಭಿಷೇಕ್ ಶ್ರೀರಾಮ್ (ಬಿಕಾಂ) 3 ಚಿನ್ನದ ಪದಕ, ದಿವ್ಯಶ್ರೀ ಎಸ್ (ಬಿಬಿಎ) 3 ಚಿನ್ನದ ಪದಕ ಪಡೆದು ಗಮನಸೆಳೆದಿದ್ದಾರೆ.

ಗೌರವ ಡಾಕ್ಟರೇಟ್ ಪಡೆದ ಬಳಿಕ Arjun Janya ಅವರು ಮಾತನಾಡಿ, ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಕೃತಜ್ಞತೆ ಸಲ್ಲಿಸಿದರು.

Continue Reading

ದೇಶ

ಹಳೆಯ ವಾಹನಗಳಿಗೆ HSRP ಕಡ್ಡಾಯವೇ? ಸಾರಿಗೆ ಇಲಾಖೆಯ ಸ್ಪಷ್ಟನೆ ಏನು ಗೊತ್ತಾ?

Published

on

ಬೆಂಗಳೂರು: ಹಳೆಯ ವಾಹನಗಳಿಗೆ ಹೈ ಸಿಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಕೆ ಕಡ್ಡಾಯವಲ್ಲ ಎಂಬ ಸುದ್ದಿಗಳು ಇತ್ತೀಚೆಗೆ ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದರೂ, ಇದಕ್ಕೆ ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. ಇಂತಹ ಸುದ್ದಿಗಳು ಸುಳ್ಳು ಎಂದು ಹೇಳಿ ಸಾರ್ವಜನಿಕರು ಯಾವುದೇ ವದಂತಿಗಳನ್ನು ನಂಬಬಾರದು ಎಂದು ಮನವಿ ಮಾಡಿದೆ.

ಕೇಂದ್ರ ಮೋಟಾರು ವಾಹನಗಳ ನಿಯಮಗಳು 1989ರ ನಿಯಮ 50ರಡಿ, ಕೇಂದ್ರ ಸರ್ಕಾರವು 2018 ಡಿಸೆಂಬರ್ 4ರಂದು ಅಧಿಸೂಚನೆ ಹೊರಡಿಸಿದ್ದು, 2019 ಏಪ್ರಿಲ್ 1ಕ್ಕಿಂತ ಮುಂಚಿತವಾಗಿ ನೋಂದಾಯಿತವಾಗಿರುವ ಎಲ್ಲಾ ವಾಹನಗಳಿಗೆ HSRP ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. ಈ ನಿಯಮವನ್ನು ಅನುಸರಿಸಿ, ಕರ್ನಾಟಕ ಸರ್ಕಾರವು 2023 ಆಗಸ್ಟ್ 17ರಂದು ಅಧಿಸೂಚನೆ ಹೊರಡಿಸಿ ರಾಜ್ಯದಲ್ಲಿಯೂ ಇದೇ ನಿಯಮವನ್ನು ಜಾರಿಗೆ ತಂದಿದೆ.

ಇದಕ್ಕೂ ನಡುವೆ, HSRP ಅಳವಡಿಕೆ ಸಂಬಂಧ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಸರ್ಕಾರವು ಯಾವುದೇ ತರಾತುರಿ ಕ್ರಮ ಕೈಗೊಳ್ಳಬಾರದು ಎಂದು ಸೂಚಿಸಿದೆ. ಆದರೆ, ಈ ಆದೇಶವು HSRP ಕಡ್ಡಾಯ ಆದೇಶವನ್ನು ರದ್ದುಪಡಿಸುವುದಿಲ್ಲ ಎಂಬುದು ಮುಖ್ಯ.

ಸಾರಿಗೆ ಇಲಾಖೆಯ ಪ್ರಕಾರ, ಹೈಕೋರ್ಟ್ ಆದೇಶದಿಂದ ಹೊಸ ಕ್ರಮಗಳನ್ನು ಕೈಗೊಳ್ಳಲು ಅಡ್ಡಿಯಿದ್ದರೂ, HSRP ಅಳವಡಿಕೆ ಕುರಿತ ಅಧಿಸೂಚನೆ ಇನ್ನೂ ಜಾರಿಯಲ್ಲಿಯೇ ಇದೆ. ಆದ್ದರಿಂದ, ಸಾರ್ವಜನಿಕರು ತಮ್ಮ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದೆ.

ವದಂತಿಗಳಿಂದ ಗೊಂದಲಕ್ಕೀಡಾಗಬಾರದು ಎಂದು ಸಾರಿಗೆ ಇಲಾಖೆ ಮತ್ತೊಮ್ಮೆ ಸ್ಪಷ್ಟಪಡಿಸಿದೆ.

Continue Reading

ಕ್ರೀಡೆ

ಗ್ಯಾಸ್‌ಗಾಗಿ ಜನ ಸಾಲು, ಟಿಕೆಟ್‌ಗಾಗಿ ಪಿಎ ಸಾಲು: ಶಾಸಕರಿಗೆ ಟೀಕೆ!

Published

on

ಬೆಂಗಳೂರು: ರಾಜ್ಯದಲ್ಲಿ ಅಡುಗೆ ಅನಿಲ ಕೊರತೆಯಿಂದ ಜನರು ಸಂಕಷ್ಟ ಅನುಭವಿಸುತ್ತಿರುವ ನಡುವೆ, ಜನಪ್ರತಿನಿಧಿಗಳ ವರ್ತನೆ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಒಂದು ಕಡೆ ಆಟೋ ಚಾಲಕರು ಗ್ಯಾಸ್‌ಗಾಗಿ ರಾತ್ರಿಯಿಡೀ ಸಾಲಿನಲ್ಲಿ ನಿಲ್ಲುತ್ತಿರುವಾಗ, ಇನ್ನೊಂದು ಕಡೆ ಶಾಸಕರು IPL 2026 ಟಿಕೆಟ್ ಪಡೆಯಲು ತಮ್ಮ ಪಿಎಗಳನ್ನು ಕ್ಯೂನಲ್ಲಿ ನಿಲ್ಲಿಸಿರುವುದು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಮಾಹಿತಿಯ ಪ್ರಕಾರ, ಸರ್ಕಾರ ಮತ್ತು Karnataka State Cricket Association (KSCA) ನಡುವೆ ಪ್ರತಿ ಐಪಿಎಲ್ ಪಂದ್ಯಕ್ಕೆ ಶಾಸಕರಿಗೆ ಉಚಿತವಾಗಿ 3 ಟಿಕೆಟ್ ನೀಡುವ ಕುರಿತು ಒಪ್ಪಂದವಾಗಿದೆ. ಇದರ ಹಿನ್ನೆಲೆಯಲ್ಲಿ, Royal Challengers Bengaluru ಮತ್ತು Chennai Super Kings ನಡುವಿನ ಪಂದ್ಯಕ್ಕೆ ಟಿಕೆಟ್ ಪಡೆಯಲು ಶಾಸಕರ ಪಿಎಗಳು ಸ್ಪೀಕರ್ ಕಚೇರಿ ಮುಂದೆ ಸಾಲಿನಲ್ಲಿ ನಿಂತಿರುವ ದೃಶ್ಯಗಳು ಗಮನ ಸೆಳೆದಿವೆ.

ಸ್ಪೀಕರ್ ಕಚೇರಿಯಲ್ಲೇ ಟಿಕೆಟ್ ವಿತರಣೆ ನಡೆಯುತ್ತಿರುವುದರಿಂದ, ಶಾಸಕರ ಸೂಚನೆ ಮೇರೆಗೆ ಪಿಎಗಳು ಟಿಕೆಟ್ ಪಡೆಯಲು ಕ್ಯೂನಲ್ಲಿ ನಿಂತಿದ್ದಾರೆ ಎಂದು ತಿಳಿದುಬಂದಿದೆ.

ಇದರಿಂದ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಜನಪ್ರತಿನಿಧಿಗಳು ತಮ್ಮ ವೈಯಕ್ತಿಕ ಆಸಕ್ತಿಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ ಎಂಬ ಟೀಕೆಗಳು ಕೇಳಿಬರುತ್ತಿವೆ. ಗ್ಯಾಸ್ ಕೊರತೆ, ದೈನಂದಿನ ಸಮಸ್ಯೆಗಳ ನಡುವೆ ಈ ರೀತಿಯ ಘಟನೆಗಳು ಸಾರ್ವಜನಿಕರ ಅಸಮಾಧಾನವನ್ನು ಮತ್ತಷ್ಟು ಹೆಚ್ಚಿಸಿವೆ.

ರಾಜಕೀಯ ವಲಯದಲ್ಲಿಯೂ ಈ ಘಟನೆ ಚರ್ಚೆಗೆ ಕಾರಣವಾಗಿದ್ದು, ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿಗಳನ್ನು ಮರೆಯಬಾರದು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

Continue Reading

Trending