PM Modi
ಚೀನಾ ಹೇಳಿಕೆ ನಿರಾಕರಿಸಿದ ಭಾರತ ಸರ್ಕಾರ

- /home/u521927855/domains/hosasuddi.in/public_html/wp-content/plugins/mvp-social-buttons/mvp-social-buttons.php on line 27
https://hosasuddi.in/wp-content/uploads/2023/08/63146147_605-1000x600.jpg&description= ಚೀನಾ ಹೇಳಿಕೆ ನಿರಾಕರಿಸಿದ ಭಾರತ ಸರ್ಕಾರ', 'pinterestShare', 'width=750,height=350'); return false;" title="Pin This Post">
- Share
- Tweet /home/u521927855/domains/hosasuddi.in/public_html/wp-content/plugins/mvp-social-buttons/mvp-social-buttons.php on line 72
https://hosasuddi.in/wp-content/uploads/2023/08/63146147_605-1000x600.jpg&description= ಚೀನಾ ಹೇಳಿಕೆ ನಿರಾಕರಿಸಿದ ಭಾರತ ಸರ್ಕಾರ', 'pinterestShare', 'width=750,height=350'); return false;" title="Pin This Post">
ನವದೆಹಲಿ: 15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಕೋರಿಕೆಯ ಮೇರೆಗೆ ಚೀನಾ – ಭಾರತ ಮಾತುಕತೆ ನಡೆದಿವೆ ಎಂದು ಚೀನಾ ನೀಡಿರುವ ಹೇಳಿಕೆಯನ್ನು ಭಾರತ ಸರ್ಕಾರದ ಮೂಲಗಳು ನಿರಾಕರಿಸಿವೆ.
ಚೀನಾದ ವಿದೇಶಾಂಗ ಸಚಿವಾಲಯ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, ”ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಆಗಸ್ಟ್ 23 ರಂದು ಮನವಿ ಮಾಡಿದ್ದು, ಬಳಿಕ ಬ್ರಿಕ್ಸ್ ಶೃಂಗಸಭೆ ಸಂದರ್ಭದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ” ಎಂದು ತಿಳಿಸಿದೆ. ಆದರೆ ದ್ವಿಪಕ್ಷೀಯ ಸಭೆಗಾಗಿ ಚೀನಾ ಕಡೆಯಿಂದ ಕೆಲ ವಿನಂತಿಗಳು ಬಾಕಿ ಉಳಿದಿವೆ ಎಂದು ಭಾರತ ವಿದೇಶಾಂಗ ಇಲಾಖೆ ಮೂಲಗಳು ತಿಳಿಸಿವೆ. ಭಾರತ ಮತ್ತು ಚೀನಾ ನಾಯಕರು ಬ್ರಿಕ್ಸ್ ಶೃಂಗಸಭೆ ಸಂದರ್ಭ ಸಂಭಾಷಣೆ ನಡೆಸಿದ್ದಾರೆ ಎಂದು ಮೂಲಗಳು ದೃಢಪಡಿಸಿವೆ.
ಇಬ್ಬರು ನಾಯಕರು ಪ್ರಸ್ತುತ ಚೀನಾ – ಭಾರತ ಸಂಬಂಧಗಳ ಸುಧಾರಣೆ ಹಾಗೂ ಇನ್ನಿತರ ಸಮಸ್ಯೆಗಳ ಕುರಿತಂತೆ ಪ್ರಾಮಾಣಿಕವಾದ ಸಮಾಲೋಚನೆ ಮಾಡಿದ್ದಾರೆ. ಚೀನಾ-ಭಾರತದ ಸಂಬಂಧಗಳ ಸುಧಾರಣೆ ಉಭಯ ರಾಷ್ಟ್ರಗಳ ನಡುವಣ ಮೊದಲ ಆದ್ಯತೆ ಆಗಿದೆ ಎಂಬುದನ್ನು ಅಧ್ಯಕ್ಷ ಕ್ಸಿ ಒತ್ತಿ ಹೇಳಿದರು. ಎರಡು ದೇಶಗಳ ಜನರ ನಡುವಣ ಶಾಂತಿ- ಸೌಹಾರ್ದತೆ ಕಾಪಾಡುವುದು, ದಕ್ಷಿಣ ಏಷ್ಯಾ ಭಾಗದಲ್ಲಿ ಶಾಂತಿ, ಸ್ಥಿರತೆ ಕಾಪಾಡುವುದು ಮತ್ತು ಜಾಗತಿಕ ದೃಷ್ಟಿಯಿಂದಲೂ ಒಳ್ಳೆಯದು ಎಂಬುದನ್ನ ಚೀನಾ ಅಧ್ಯಕ್ಷರು ಪ್ರತಿಪಾದಿಸಿದರು ಎಂದು ಚೀನಾ ವಿದೇಶಾಂಗ ಸಚಿವಾಲಯ ಹೇಳಿಕೆ ನೀಡಿತ್ತು.
ಇಬ್ಬರು ನಾಯಕರು ಚೀನಾ ಮತ್ತು ಭಾರತ ಸಂಬಂಧ ಹಾಗೂ ಇನ್ನಿತರ ಅಂತಾರಾಷ್ಟ್ರೀಯ ವಿಷಯಗಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ. ಉಭಯ ದೇಶ ದೇಶಗಳ ಸಂಬಂಧ ಸುಧಾರಿಸುವುದಿಂದ ಸಾಮಾನ್ಯ ಹಿತಾಸಕ್ತಿಗಳನ್ನು ಪೂರೈಸಿಕೊಳ್ಳಬಹುದು” ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಪ್ರತಿಪಾದಿಸಿದರು ಎಂದು ಚೀನಾ ವಿದೇಶಾಂಗ ಇಲಾಖೆ ವಕ್ತಾರರು ಹೇಳಿದರು.
ಭಾರತ ವಿದೇಶಾಂಗ ಇಲಾಖೆ ವಕ್ತಾರರು ಹೇಳಿದ್ದೇನು?: ಜೋಹಾನ್ಸ್‌ಬರ್ಗ್‌ನಲ್ಲಿ ಗುರುವಾರ ಮುಕ್ತಾಯಗೊಂಡ 15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಸಂದರ್ಭದಲ್ಲಿ ಭಾರತ – ಚೀನಾ ನಡುವಿನ ಮಾತುಕತೆಯ ವಿವರಗಳನ್ನು ಹಂಚಿಕೊಂಡ ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ, ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗಿನ ಮಾತುಕತೆಯಲ್ಲಿ ಪ್ರಧಾನಿ ಮೋದಿ ಭಾರತದ ಗಡಿ ಕಾಳಜಿಯನ್ನು ಎತ್ತಿ ತೋರಿಸಿದ್ದಾರೆ ಎಂದು ಹೇಳಿದರು.
ಗಡಿ ಸಮಸ್ಯೆ ಕುರಿತು ಭಾರತದ ಕಳವಳ: ಬ್ರಿಕ್ಸ್ ಶೃಂಗಸಭೆಯ ಹೊರತಾಗಿ ಪ್ರಧಾನ ಮಂತ್ರಿ ಮೋದಿ ಅವರು ಇತರ ಬ್ರಿಕ್ಸ್ ನಾಯಕರೊಂದಿಗೂ ಮಾತುಕತೆಗಳನ್ನು ನಡೆಸಿದರು. ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗಿನ ಸಂವಾದದ ಸಂದರ್ಭದಲ್ಲಿ ಭಾರತ – ಚೀನಾದ ಪಶ್ಚಿಮ ವಲಯದ ಗಡಿ ಸಮಸ್ಯೆಗಳ ಕುರಿತು ಭಾರತ ಹೊಂದಿರುವ ಕಳವಳಗಳನ್ನು ಪ್ರಧಾನಿ ಮೋದಿ, ಜಿನ್ಪಿಂಗ್ಗೆ ಎತ್ತಿ ತೋರಿಸಿದರು ಎಂದು ವಿನಯ್ ಕ್ವಾತ್ರಾ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಗಡಿ ಪ್ರದೇಶಗಳಲ್ಲಿ ಶಾಂತಿ ಕಾಪಾಡುವುದು ಮತ್ತು ಭಾರತ – ಚೀನಾ ಸಂಬಂಧವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ LAC ಕಡೆ ಗಮನ ಹರಿಸುವುದು ಅತ್ಯಗತ್ಯ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದ್ದಾರೆ ಎಂದು ವಿದೇಶಾಂಗ ಇಲಾಖೆ ಹೇಳಿದೆ. ಉಭಯ ರಾಷ್ಟ್ರಗಳ ನಡುವಣ ಸಮಸ್ಯೆ ಬಗೆ ಹರಿಸುವ ನಿಟ್ಟಿನಲ್ಲಿ ಇಬ್ಬರು ನಾಯಕರು ತಮ್ಮ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲು ಒಪ್ಪಿಕೊಂಡರು ಎಂದು ವಿನಯ್ ಕ್ವಾತ್ರಾ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
PM Modi
ತೆಲಂಗಾಣದಲ್ಲಿ 56,000 ಕೋಟಿ ರೂ. ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ಆದಿಲಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ತೆಲಂಗಾಣದ ಆದಿಲಾಬಾದ್ ಜಿಲ್ಲೆಯಲ್ಲಿ ಸುಮಾರು 56,000 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು. ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ತೆಲಂಗಾಣದ ಅಭಿವೃದ್ಧಿಯ ಕನಸನ್ನು ನನಸಾಗಿಸಲು ಕೇಂದ್ರ ಎಲ್ಲಾ ಬೆಂಬಲವನ್ನು ನೀಡುತ್ತಿದೆ ಎಂದು ಹೇಳಿದರು. ವಿದ್ಯುತ್, ರೈಲು ಮತ್ತು ರಸ್ತೆಗಳಿಗೆ ಸಂಬಂಧಿಸಿದ ಹೊಸ ಅಭಿವೃದ್ಧಿ ಯೋಜನೆಗಳು ರಾಜ್ಯದ ಅಭಿವೃದ್ಧಿಯ ವೇಗವನ್ನು ಹೆಚ್ಚಿಸುತ್ತಿವೆ ಎಂದರು. ಇದೇ ವೇಳೆ ಇಂಡಿಯಾ ಮೈತ್ರಿಕೂಟದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ, ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ತುಷ್ಟೀಕರಣದಲ್ಲಿ ಆಳವಾಗಿ ಮುಳುಗಿರುವ ಇಂಡಿಯಾ ಮೈತ್ರಿಕೂಟದ ನಾಯಕರು ಆತಂಕಕ್ಕೆ ಒಳಗಾಗುತ್ತಿದ್ದಾರೆ. ನಾನು ಅವರ ‘ಪರಿವಾರವಾದ’ವನ್ನು ಪ್ರಶ್ನಿಸಿದಾಗ, ಅವರು ಮೋದಿಗೆ ಕುಟುಂಬವಿಲ್ಲ ಎಂದು ಹೇಳಲು ಪ್ರಾರಂಭಿಸಿದ್ದಾರೆ” ಎಂದು ಪ್ರಧಾನಿ ತಿರುಗೇಟು ನೀಡಿದರು. “ನನ್ನ ಜೀವನ ಒಂದು ತೆರೆದ ಪುಸ್ತಕ. ದೇಶದ 140 ಕೋಟಿ ಜನ ನನ್ನ ಕುಟುಂಬ ಇದ್ದಂತೆ. ಇಂದು ದೇಶದ ಕೋಟಿ ಹೆಣ್ಣುಮಕ್ಕಳು, ತಾಯಂದಿರು ಮತ್ತು ಸಹೋದರಿಯರು ಮೋದಿಯವರ ಕುಟುಂಬ. ದೇಶದ ಪ್ರತಿಯೊಬ್ಬ ಬಡವರೂ ನನ್ನ ಕುಟುಂಬ, ಯಾರೂ ಇಲ್ಲದವರು ಸಹ ಮೋದಿ ನನ್ನವರು ಎಂದು ಹೇಳುತ್ತಾರೆ ಮತ್ತು ಮೋದಿ ಅವರಿಗೂ ಸೇರಿದ್ದಾರೆ. ‘ನೇನೆ ಮೋದಿ ಕುಟುಂಬ’ (ನಾನು ಮೋದಿ ಕುಟುಂಬ) ಎಂದು ಹೇಳುತ್ತಾರೆ ಎಂದರು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ, ಪ್ರಧಾನಿಯವರು ದೊಡ್ಡಣ್ಣನಿದ್ದಂತೆ. ದೊಡ್ಡ ಸಹೋದರನ ಸಹಾಯದಿಂದ ಮಾತ್ರ ರಾಜ್ಯಗಳು ಮತ್ತಷ್ಟು ಅಭಿವೃದ್ಧಿ ಸಾಧಿಸಲು ಸಾಧ್ಯ” ಎಂದು ಅವರು ಹೇಳಿದರು. ಪ್ರಧಾನಿಯವರ ಬೆಂಬಲದಿಂದ ಮಾತ್ರ ತೆಲಂಗಾಣ ಗುಜರಾತ್‌ನಂತೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮುಖ್ಯಮಂತ್ರಿಗಳು ಹೇಳಿದರು.
PM Modi
ರಾಮಮಂದಿರ ಪ್ರಾಣಪ್ರತಿಷ್ಠೆಗೆ ಶಾಲಾ ಕಾಲೇಜಿಗೆ ರಜೆ, ಮದ್ಯ ಮಾರಾಟ ನಿಷೇಧ; ಸಿಎಂ ಯೋಗಿ ಘೋಷಣೆ!

ರಾಮಮಂದಿರ ಪ್ರಾಣಪ್ರತಿಷ್ಠೆ ಜನವರಿ 22ರಂದು ನಡೆಯಲಿದೆ. ಈ ದಿನ ಉತ್ತರ ಪ್ರದೇಶ ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಇಷ್ಟೇ ಅಲ್ಲ ಈ ದಿನ ಉತ್ತರ ಪ್ರದೇಶದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಈ ಕುರಿತು ಸಿಎಂ ಯೋಗಿ ಆದಿತ್ಯನಾಥ್ ಮಹತ್ವದ ಆದೇಶ ಹೊರಡಿಸಿದ್ದಾರೆ.
ಲಖನೌ ರಾಮ ಮಂದಿರ ಲೋಕಾರ್ಪಣೆಗೆ ತಯಾರಿ ನಡೆಯುತ್ತಿದೆ. ಜನವರಿ 22 ರಂದು ರಾಮಲ್ಲಾ ಪ್ರಾಣಪ್ರತಿಷ್ಠೆ ನಡೆಯಲಿದೆ. ಐತಿಹಾಸಿಕ ದಿನಕ್ಕಾಗಿ ವಿಶ್ವವೇ ಕಾಯುತ್ತಿದೆ. ರಾಮ ಮಂದಿರ ಪ್ರಾಣಪ್ರತಿಷ್ಠೆದಿನ ಉತ್ತರ ಪ್ರದೇಶದ ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಇಷ್ಟೇ ಅಲ್ಲ ಪ್ರಾಣ ಪ್ರತಿಷ್ಠೆ ದಿನ ಉತ್ತರ ಪ್ರದೇಶದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಈ ಮಹತ್ವದ ಆದೇಶವನ್ನು ಸಿಎಂ ಯೋಗಿ ಆದಿತ್ಯನಾಥ್ ಹೊರಡಿಸಿದ್ದಾರೆ. ಇದೇ ವೇಳೆ ಪ್ರಾಣಪ್ರತಿಷ್ಠೆಯ ಐತಿಹಾಸಿಕ ದಿನ ಶಾಂತಿಯುತವಾಗಿ ಸಂಭ್ರಮಿಸಲು ಮನವಿ ಮಾಡಿದ್ದಾರೆ. 500 ವರ್ಷಗಳ ಹೋರಾಟದ ಬಳಿಕ ಶ್ರೀರಾಮ ಮಂದಿರ ನಿರ್ಮಾಣವಾಗಿದೆ. ಈ ಐತಿಹಾಸಿಕ ದಿನ ನಮ್ಮೆಲ್ಲರಿಗೂ ಅತ್ಯಂತ ಮಹತ್ವ ಹಾಗೂ ಸಂಭ್ರಮದ ದಿನವಾಗಿದೆ. ಈ ದಿನವನ್ನು ಆಚರಿಸಲು ಎಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಿಸಿ ಎಂದು ಯೋಗಿ ಆದಿತ್ಯನಾಥ್, ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ. ಶ್ರೀರಾಮ ಪ್ರಾಣಪ್ರತಿಷ್ಠೆ ಅತ್ಯಂತ ಪವಿತ್ರವಾಗಿದೆ. ಹೀಗಾಗಿ ಈ ದಿನ ಉತ್ತರ ಪ್ರದೇಶದಲ್ಲಿ ಮದ್ಯ ಮಾರಾಟ ನಿಷೇಧಿಸಲು ಆದೇಶ ಹೊರಡಿಸಲಾಗಿದೆ. ಸಾರ್ವಜನಿಕರು ರಾಮ ಮಂದಿರ ಪ್ರಾಣಪ್ರತಿಷ್ಠೆಯನ್ನು ಸಂಭ್ರಮಿಸಲು ಕೆಲ ಸೂಚನೆ ನೀಡಲಾಗಿದೆ. ಶಾಂತಿಯುತವಾಗಿ ಸಂಭ್ರಮ ಆಚರಿಸಿ, ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ, ಮನೆಯಲ್ಲೇ ದೀಪ ಬೆಳಗಿ ರಾಮನ ಭವ್ಯ ಮಂದಿರದ ಲೋಕಾರ್ಪಣೆ ಹಾಗೂ ಪ್ರಾಣಪತಿಷ್ಠೆಯಲ್ಲಿ ಪಾಲ್ಗೊಳ್ಳಿ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಶಾಂತಿಯುತವಾಗಿ ಹಾಗೂ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಸಂಭ್ರಮದಲ್ಲಿ ಪಾಲ್ಗೊಳ್ಳಲು ಯೋಗಿ ಆದಿತ್ಯನಾಥ್ ಮನವಿ ಮಾಡಿದ್ದಾರೆ. ರಾಮ ಮಂದಿರ ಪ್ರಾಣಪ್ರತಿಷ್ಟೆಯನ್ನು ಪ್ರಧಾನಿ ನರೇಂದ್ರ ಮೋದಿ ನೇರವೇರಿಸಲಿದ್ದಾರೆ. ಜನವರಿ 22ರ 12.30ರ ಶುಭಮುಹೂರ್ತದಲ್ಲಿ ಪ್ರಾಣಪ್ರತಿಷ್ಠೆ ನಡೆಯಲಿದೆ. ಜನವರಿ 16ರಿಂದ ರಾಮನಗರಿಯಲ್ಲಿ ಪೂಜಾ ಕೈಂಕರ್ಯಗಳು ಆರಂಭಗೊಳ್ಳಲಿದೆ. ಈಗಾಗಲೇ ಮನೆ ಮನೆಗೆ ರಾಮ ಮಂದಿರದ ಮಂತ್ರಾಕ್ಷತೆ ವಿತರಣೆ ಮಾಡಲಾಗುತ್ತಿದೆ. ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಆಹ್ವಾನ ನೀಡಲಾಗುತ್ತಿದೆ. ಬರೋಬ್ಬರಿ 7 ಸಾವಿರ ಗಣ್ಯರಿಗೆ ಆಹ್ವಾನ ನೀಡಲಾಗುತ್ತಿದೆ. ಈಗಾಗಲೇ ಹಲವು ಗಣ್ಯರನ್ನು ಆಹ್ವಾನಿಸಲಾಗಿದೆ. ಪ್ರತಿಯೊಬ್ಬ ಗಣ್ಯರಿಗೂ ಮುಖತಃ ಭೇಟಿ ಮಾಡಿ ಆಹ್ವಾನ ಪತ್ರಿಕೆಗಳನ್ನು ನೀಡಲಾಗುವುದು. ದೇವಾಲಯ ಟ್ರಸ್ಟ್‌ನ ಪ್ರತಿನಿಧಿಗಳು ಹಾಗೂ ಸ್ವಯಂಸೇವಕರು ಗಣ್ಯರನ್ನು ಭೇಟಿ ಮಾಡಿ ಆಹ್ವಾನ ನೀಡಲಿದ್ದಾರೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧಿಕಾರಿಗಳು ಹೇಳಿದ್ದಾರೆ.
PM Modi
ವಿಶ್ವ ಹವಾಮಾನ ಶೃಂಗಸಭೆ: ದುಬೈನಲ್ಲಿ ಪ್ರಧಾನಿ ಮೋದಿಗೆ ಆತ್ಮೀಯ ಸ್ವಾಗತ.

ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ದುಬೈಗೆ ಪ್ರಯಾಣ ಬೆಳೆಸಿದ್ದಾರೆ. ದುಬೈನಲ್ಲಿರುವ ಭಾರತೀಯ ವಲಸಿಗರು ಪ್ರಧಾನಿ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಈ ವೇಳೆ ಜನರು ಮೋದಿ-ಮೋದಿ ಮತ್ತು ಈ ಬಾರಿ ಮೋದಿ ಸರ್ಕಾರ ಎಂಬ ಘೋಷಣೆಗಳನ್ನು ಕೂಗಿದರು. ಜತೆಗೆ 400ಕ್ಕೂ ಅಧಿಕ ಸೀಟುಗಳಿಂದ ಗೆಲ್ಲುವಂತೆ ಶುಭ ಹಾರೈಸಿದರು.ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ದುಬೈಗೆ ಪ್ರಯಾಣ ಬೆಳೆಸಿದ್ದಾರೆ. ದುಬೈನಲ್ಲಿರುವ ಭಾರತೀಯ ವಲಸಿಗರು ಪ್ರಧಾನಿ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಈ ವೇಳೆ ಜನರು ಮೋದಿ-ಮೋದಿ ಮತ್ತು ಈ ಬಾರಿ ಮೋದಿ ಸರ್ಕಾರ ಎಂಬ ಘೋಷಣೆಗಳನ್ನು ಕೂಗಿದರು. ಜತೆಗೆ 400ಕ್ಕೂ ಅಧಿಕ ಸೀಟುಗಳಿಂದ ಗೆಲ್ಲುವಂತೆ ಶುಭ ಹಾರೈಸಿದರು.ಎಎನ್ಐ ಹಂಚಿಕೊಂಡಿರುವ ವಿಡಿಯೋದಲ್ಲಿ, ಮೋದಿ, ಮೋದಿ, ಅಬ್ಕಿ ಬಾರ್ ಮೋದಿ ಸರ್ಕಾರ್ ಮತ್ತು ವಂದೇ ಮಾತರಂ ಎಂಬ ಘೋಷಣೆಗಳನ್ನು ಕೂಗುತ್ತಿರುವುದನ್ನು ಕಾಣಬಹುದು. ಅನಿವಾಸಿ ಭಾರತೀಯರೊಬ್ಬರು ಪ್ರಧಾನಿ ಮೋದಿಯವರನ್ನು ಭೇಟಿಯಾದ ಬಗ್ಗೆ ಸಂತಸ ವ್ಯಕ್ತಪಡಿಸಿ, ನಾನು 20 ವರ್ಷಗಳಿಂದ ಯುಎಇಯಲ್ಲಿ ವಾಸಿಸುತ್ತಿದ್ದೇನೆ, ಆದರೆ ಇಂದು ನನ್ನವರೊಬ್ಬರು ಈ ದೇಶಕ್ಕೆ ಬಂದಂತೆ ಭಾಸವಾಗುತ್ತಿದೆ ಎಂದಿದ್ದಾರೆ.ಮೋದಿ ಭಾರತದ ವಜ್ರ, ಪ್ರಧಾನಿ ಮೋದಿಯನ್ನು ಇಲ್ಲಿ ನೋಡಲು ನಮಗೆ ತುಂಬಾ ಸಂತೋಷವಾಗಿದೆ. ಜಗತ್ತಿಗೆ ಪ್ರಧಾನಿ ಮೋದಿಯಂತಹ ನಾಯಕನ ಅಗತ್ಯವಿದೆ ಎಂದರು.ಶೃಂಗಸಭೆಯಲ್ಲಿ ಜಾಗತಿಕ ನಾಯಕರು ಹಸಿರುಮನೆ ಅನಿಲ ಹೊರಸೂಸುವಿಕೆ ಕಡಿಮೆ ಮಾಡಲು ಮತ್ತು ಹವಾಮಾನ ಬದಲಾವಣೆಯನ್ನು ಪರಿಣಾಮಕಾರಿಯಾಗಿ ನಿಭಾಯಿಸುವ ತಂತ್ರಗಳ ಬಗ್ಗೆ ಚರ್ಚಿಸಲಿದ್ದಾರೆ. ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದಲ್ಲದೆ, ಮೋದಿ ಇತರೆ ಮೂರು ಉನ್ನತ ಮಟ್ಟದ ಕಾರ್ಯಕ್ರಮದಲ್ಲಿ ಕೂಡ ಭಾಗವಹಿಸಲಿದ್ದಾರೆ. ದುಬೈನಲ್ಲಿರುವ ಭಾರತೀಯ ಸಮುದಾಯದ ಆತ್ಮೀಯ ಸ್ವಾಗತದಿಂದ ನಾನು ತುಂಬಾ ಪ್ರಭಾವಿತನಾಗಿದ್ದೇನೆ. ಅವರ ಬೆಂಬಲ ಮತ್ತು ಉತ್ಸಾಹವು ನಮ್ಮ ರೋಮಾಂಚಕ ಸಂಸ್ಕೃತಿ ಮತ್ತು ಬಲವಾದ ಸಂಬಂಧಗಳಿಗೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು1 year ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು8 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ