Connect with us

ಬೆಂಗಳೂರು

ಕಬ್ಬನ್​ಪಾರ್ಕ್​​ ವೀಕೆಂಡ್​ ಸಂಸ್ಕೃತ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

Published

on

ಬೆಂಗಳೂರು: ವಿವಿಧ ಚಟುವಟಿಕೆಗಳ ಮೂಲಕ ಪ್ರಾಚೀನ ಭಾಷೆಯಾದ ಸಂಸ್ಕೃತವನ್ನು ಎತ್ತಿ ಹಿಡಿಯಲು ಮಕ್ಕಳು, ಯುವಕರು ಮತ್ತು ಹಿರಿಯರಿಗೆ ಸಹಾಯ ಮಾಡುವ ಬೆಂಗಳೂರಿನ ಸಮಷ್ಠಿ ಗುಬ್ಬಿ ಅವರ ವೀಕೆಂಡ್​ ಸಂಸ್ಕೃತ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನಲ್ಲಿ ಭಾನುವಾರ ಮಾತನಾಡಿದ ಮೋದಿಯವರು. ಕಬ್ಬನ್​ಪಾರ್ಕ್ ನಲ್ಲಿ ವಾರಾಂತ್ಯದ ವೇಳೆ ನಡೆಯುವ ಸಂಸ್ಕೃತ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಾಚೀನ ಭಾರತೀಯ ಜ್ಞಾನ ಮತ್ತು ವಿಜ್ಞಾನದ ಪ್ರಕ್ರಿಯೆಯಲ್ಲಿ ಸಂಸ್ಕೃತವು ದೊಡ್ಡ ಪಾತ್ರವನ್ನು ವಹಿಸಿದೆ. ಇಂದು ನಾವು ಸಂಸ್ಕೃತಕ್ಕೆ ಸರಿಯಾದ ಗೌರವವನ್ನು ನೀಡಬೇಕು ಮತ್ತು ಅದನ್ನು ನಮ್ಮ ದೈನಂದಿನ ಜೀವನದೊಂದಿಗೆ ಅಳವಡಿಸಿಕೊಳ್ಳಬೇಕು. ಪ್ರತಿ ಭಾನುವಾರ ಕಬ್ಬನ್ ಪಾರ್ಕ್‌ನಲ್ಲಿ ಸೇರುವ ಜನರು ಸಂಸ್ಕೃತಿದಲ್ಲಿಯೇ ಮಾತನಾಡುತ್ತಾರೆ. ಹಿರಿಯರು ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳ ಬಗ್ಗೆ ಇಲ್ಲಿಗೆ ಬಂದು ಸಂಸ್ಕೃತ ಭಾಷೆಯಲ್ಲಿಯೇ ಚರ್ಚೆ ನಡೆಸುತ್ತಾರೆ. ನಮ್ಮ ಭಾಷೆ ಉಳಿಸುವ ನಿಟ್ಟಿನಲ್ಲಿ ಇದು ದೊಡ್ಡಮಟ್ಟದ ಕೆಲಸವಾಗಿದೆ. ಜನರು ಸ್ವಯಂ ಪ್ರೇರಿತವಾಗಿ ಇಲ್ಲಿಗೆ ಬಂದು ಸಂಸ್ಕೃತ ಭಾಷೆಯನ್ನು ಆನಂದಿಸುತ್ತಾರೆಂದು ಹೇಳಿದರು.

ಈ ಕಾರ್ಯಕ್ರಮವನ್ನು ಸಮಷ್ಟಿ ಗುಬ್ಬಿ ಜಿಯವರು ವೆಬ್‌ಸೈಟ್ ಮೂಲಕ ಪ್ರಾರಂಭಿಸಿದ್ದಾರೆ. ಕೆಲವೇ ದಿನಗಳ ಹಿಂದೆ ಆರಂಭವಾದ ಈ ಪ್ರಯತ್ನ ಬೆಂಗಳೂರಿನ ಜನರಲ್ಲಿ ಬಹುಬೇಗ ಜನಪ್ರಿಯವಾಗಿದೆ.

ನಾವೆಲ್ಲರೂ ಇಂತಹ ಪ್ರಯತ್ನಕ್ಕೆ ಕೈಜೋಡಿಸಿದರೆ, ಪ್ರಪಂಚದ ಇಂತಹ ಪ್ರಾಚೀನ ಮತ್ತು ವೈಜ್ಞಾನಿಕ ಭಾಷೆಯಿಂದ ನಾವು ಬಹಳಷ್ಟು ಕಲಿಯಬಹುದು ಎಂದು ಶ್ಲಾಘಿಸಿದ್ದಾರೆ. ಇಲ್ಲಿ ಸಂಸ್ಕೃತದಲ್ಲಿಯೇ ಹಲವು ಚರ್ಚಾ ಗೋಷ್ಠಿಗಳನ್ನು ಆಯೋಜಿಸಲಾಗುತ್ತದೆ.

ಮೋದಿಯವರು ತಮ್ಮ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತವಡಿಸಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಸಮಷ್ಠಿ ಅವರು, ಪ್ರಧಾನ ಮಂತ್ರಿಯವರು ನಮ್ಮ ಕಾರ್ಯಕ್ರಮದ ಬಗ್ಗೆ ಉಲ್ಲೇಖಿಸುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ. ಈ ಬೆಂಬಲ ಸಾಕಷ್ಟು ಸಂತಸ ತಂದಿದೆ ಎಂದು ಹೇಳಿದ್ದಾರೆ.

ಸಂಸ್ಕೃತವು ತರಗತಿಗಳಿಗೆ ಅಥವಾ ದೇವಾಲಯಗಳಿಗೆ ಸೀಮಿತವಾಗಬಾರದು. ನಾವು ಅದನ್ನು ನಮ್ಮ ದೈನಂದಿನ ಜೀವನದಲ್ಲಿ ಬಳಸಬಹುದು. ಎಲ್ಲಾ ಸಮುದಾಯದ ಜನರು ಭಾನುವಾರ ನಡೆಯುವ ಕಾರ್ಯಕ್ರಮಕ್ಕೆ ಆಗಮಿಸುತ್ತಾರೆ. ಅದನ್ನು ನಾವು ಪ್ರೋತ್ಸಾಹಿಸುತ್ತೇವೆಂದು ತಿಳಿಸಿದ್ದಾರೆ.

ದೇಶ

SIR ಎಂದರೇನು? ಕರ್ನಾಟಕದ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಸಂಪೂರ್ಣ ಮಾಹಿತಿ

Published

on

ಬೆಂಗಳೂರು: ಕರ್ನಾಟಕದಲ್ಲಿ Special Intensive Revision (SIR) ಅಥವಾ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಆರಂಭವಾಗಿದ್ದು, ಮತದಾರರ ಪಟ್ಟಿಯನ್ನು ಹೆಚ್ಚು ನಿಖರಗೊಳಿಸುವ ಉದ್ದೇಶದಿಂದ ಚುನಾವಣಾ ಆಯೋಗ (ECI) ರಾಜ್ಯಾದ್ಯಂತ ಮನೆ-ಮನೆ ಪರಿಶೀಲನೆ ನಡೆಸುತ್ತಿದೆ.

ಈ ಪ್ರಕ್ರಿಯೆಯ ಪ್ರಮುಖ ಉದ್ದೇಶ ಸತ್ತವರು, ಶಾಶ್ವತವಾಗಿ ಸ್ಥಳಾಂತರಗೊಂಡವರು, ನಕಲಿ ಹಾಗೂ ಅನರ್ಹ ಮತದಾರರ ಹೆಸರುಗಳನ್ನು ತೆಗೆದುಹಾಕುವುದು ಮತ್ತು ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದಾಗಿದೆ. ಕರ್ನಾಟಕದಲ್ಲಿ 5.54 ಕೋಟಿಗೂ ಅಧಿಕ ಮತದಾರರು ನೋಂದಾಯಿತರಾಗಿದ್ದು, ಅವರಲ್ಲಿ ಸುಮಾರು 91.61% ಮತದಾರರ ವಿವರಗಳು ಈಗಾಗಲೇ ಮ್ಯಾಪ್ ಆಗಿವೆ. ಉಳಿದ ಮತದಾರರ ಮಾಹಿತಿಯನ್ನು ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ-ಮನೆಗೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಸಾವಿರಾರು ಅಧಿಕಾರಿಗಳು ಹಾಗೂ 5,950 BLOಗಳು ಈ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಮತದಾರರಿಗೆ ಅಗತ್ಯ ದಾಖಲೆಗಳು ಹಾಗೂ ಪ್ರಮಾಣಪತ್ರಗಳನ್ನು ಸೇವಾ ಸಿಂಧು, ನಾಡಕಚೇರಿ, ಬೆಂಗಳೂರು ಒನ್, ಕರ್ನಾಟಕ ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳ ಮೂಲಕ ಪಡೆಯುವ ವ್ಯವಸ್ಥೆಯನ್ನೂ ಸರ್ಕಾರ ಕಲ್ಪಿಸಿದೆ.

ಇದೀಗ SIR ಪ್ರಕ್ರಿಯೆ ರಾಜಕೀಯ ವಿವಾದಕ್ಕೂ ಕಾರಣವಾಗಿದೆ. ಕೆಲವು ರಾಜಕೀಯ ಪಕ್ಷಗಳು ಮನೆ-ಮನೆ ಪರಿಶೀಲನೆಯ ಬದಲು ಸಾರ್ವಜನಿಕ ಸ್ಥಳಗಳಲ್ಲಿ ಅರ್ಜಿ ವಿತರಣೆ, ನಿಯಮ ಉಲ್ಲಂಘನೆ ಹಾಗೂ ರಾಜಕೀಯ ಹಸ್ತಕ್ಷೇಪದ ಆರೋಪಗಳನ್ನು ಮಾಡಿವೆ. ಆದರೆ, ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು, ಇನ್ನೂ ಮ್ಯಾಪ್ ಆಗದ ಮತದಾರರ ಹೆಸರುಗಳು ತಕ್ಷಣವೇ ಪಟ್ಟಿಯಿಂದ ಕೈಬಿಡಲಾಗುವುದಿಲ್ಲ. ಕರಡು ಪಟ್ಟಿ ಪ್ರಕಟವಾದ ಬಳಿಕ ದಾಖಲೆ ಸಲ್ಲಿಸಲು ಮತ್ತು ಆಕ್ಷೇಪಣೆ ಸಲ್ಲಿಸಲು ಸೂಕ್ತ ಅವಕಾಶ ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಮತದಾರರ ಪಟ್ಟಿಯನ್ನು ಪಾರದರ್ಶಕ ಹಾಗೂ ನಿಖರವಾಗಿಡುವ ಉದ್ದೇಶದಿಂದ ನಡೆಯುತ್ತಿರುವ ಈ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮತದಾರರು ತಮ್ಮ ವಿವರಗಳನ್ನು ಪರಿಶೀಲಿಸಿ ಅಗತ್ಯ ದಾಖಲೆಗಳನ್ನು ಸಮಯಕ್ಕೆ ಸರಿಯಾಗಿ ಸಲ್ಲಿಸುವಂತೆ ಚುನಾವಣಾ ಆಯೋಗ ಮನವಿ ಮಾಡಿದೆ.

Continue Reading

ದೇಶ

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅವ್ಯವಸ್ಥೆ? ಬಿಎಲ್‌ಒಗಳ ಮೇಲೆ ಒತ್ತಡ ಆರೋಪಿಸಿದ ವಿಜಯೇಂದ್ರ

Published

on

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯಲ್ಲಿ ಗಂಭೀರ ಅವ್ಯವಸ್ಥೆ ನಡೆಯುತ್ತಿದ್ದು, ರಾಜ್ಯ ಸರ್ಕಾರ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಬೂತ್ ಮಟ್ಟದ ಅಧಿಕಾರಿಗಳ (BLO) ಮೇಲೆ ಒತ್ತಡ ಹೇರುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಧಿಕಾರಿಗಳು ಮನೆ ಮನೆಗೆ ತೆರಳಿ ನಮೂನೆಗಳನ್ನು ವಿತರಿಸುವ ಬದಲು ಕಲ್ಯಾಣ ಮಂಟಪ, ಚೌಲ್ಟ್ರಿ ಹಾಗೂ ಮಸೀದಿಗಳಲ್ಲಿ ಕುಳಿತು ಅರ್ಜಿಗಳನ್ನು ಹಂಚುತ್ತಿರುವುದು ನಿಯಮ ಉಲ್ಲಂಘನೆಯಾಗಿದೆ ಎಂದು ದೂರಿದರು. ಕೆಲವು ಶಾಸಕರ ಕಚೇರಿಗಳಲ್ಲೇ ಬಿಎಲ್‌ಒಗಳನ್ನು ಕೂರಿಸಿ ಕೆಲಸ ಮಾಡಿಸಲಾಗುತ್ತಿದೆ ಎಂದು ಆರೋಪಿಸಿ, ಈ ಕುರಿತು ಸಾಕ್ಷ್ಯ ಸಮೇತ ದೂರು ಸಲ್ಲಿಸಿರುವುದಾಗಿ ತಿಳಿಸಿದರು.

ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ವಿತರಿಸಲಾಗುತ್ತಿರುವ ಅರ್ಜಿಗಳ ಮೇಲೆ ಕಾಂಗ್ರೆಸ್ ಮುಖಂಡರ ಫೋಟೋಗಳು ಮುದ್ರಣಗೊಂಡಿರುವ ವಿಚಾರವನ್ನೂ ಚುನಾವಣಾ ಆಯೋಗದ ಗಮನಕ್ಕೆ ತಂದಿರುವುದಾಗಿ ವಿಜಯೇಂದ್ರ ಹೇಳಿದರು. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಗೊಂದಲ ಉಂಟಾಗಿರುವ ಎಲ್ಲೆಡೆ ಮರುಪರಿಷ್ಕರಣೆ ನಡೆಸುವಂತೆ ಆಗ್ರಹಿಸಿದರು.

ಮೈಸೂರು ಸಂಸದ ಯದುವೀರ್ ಒಡೆಯರ್ ಮಾತನಾಡಿ, ನರಸಿಂಹರಾಜ ಕ್ಷೇತ್ರದಲ್ಲಿ ಮತದಾರರ ಸಂಖ್ಯೆಯಲ್ಲಿ ಅಸಹಜ ಏರಿಕೆ ಕಂಡುಬಂದಿದ್ದು, ಮನೆಗಳ ಸಂಖ್ಯೆ ಹೆಚ್ಚಳವಾಗದೆ ಮತದಾರರ ಸಂಖ್ಯೆ ಮಾತ್ರ ಹೆಚ್ಚಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದರು. ಅಕ್ರಮ ಮತದಾರರನ್ನು ತಡೆಯಲು ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸುವುದು ಅಗತ್ಯ ಎಂದು ಒತ್ತಾಯಿಸಿದರು.

ಇದೇ ವೇಳೆ, ಬರ ಪರಿಸ್ಥಿತಿಯಲ್ಲಿ ಮೈಸೂರು ದಸರಾ ಸಂದರ್ಭದಲ್ಲಿ ಕಂಬಳ ಆಯೋಜನೆಗೆ ಕೋಟಿ ಕೋಟಿ ರೂಪಾಯಿ ವೆಚ್ಚ ಮಾಡುವ ಬದಲು ಸರಳ ಹಾಗೂ ಸಾಂಪ್ರದಾಯಿಕ ದಸರಾ ಆಚರಣೆ ನಡೆಸುವುದು ಸೂಕ್ತ ಎಂದು ಯದುವೀರ್ ಒಡೆಯರ್ ಅಭಿಪ್ರಾಯಪಟ್ಟರು.

Continue Reading

ಅಪರಾಧ

ಸಿಲಿಕಾನ್ ಸಿಟಿಯಲ್ಲಿ ಶಾಕ್: ಫ್ಲ್ಯಾಟ್‌ನಲ್ಲಿ ಕಾರ್ಡ್‌ಬೋರ್ಡ್ ಬಾಕ್ಸ್‌ನಲ್ಲಿ ಹೆಬ್ಬಾವುಗಳು ಪತ್ತೆ

Published

on

ಬೆಂಗಳೂರು: ಸಿಲಿಕಾನ್ ಸಿಟಿಯ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ವೊಂದರಲ್ಲಿ ಅಕ್ರಮವಾಗಿ ಹೆಬ್ಬಾವುಗಳನ್ನು ಸಾಕಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಅರಣ್ಯ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಹಲವು ಹೆಬ್ಬಾವುಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ.

ಅಪಾರ್ಟ್‌ಮೆಂಟ್‌ನಲ್ಲಿ ಕಳೆದ ಕೆಲವು ದಿನಗಳಿಂದ ಅನುಮಾನಾಸ್ಪದ ಚಟುವಟಿಕೆಗಳು ನಡೆಯುತ್ತಿರುವುದನ್ನು ಗಮನಿಸಿದ್ದ ನಿವಾಸಿಗಳು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ದೂರಿನ ಮೇರೆಗೆ ಅಧಿಕಾರಿಗಳು ಶುಕ್ರವಾರ ರಾತ್ರಿ ಫ್ಲ್ಯಾಟ್ ಮೇಲೆ ದಾಳಿ ನಡೆಸಿದಾಗ, ಯಾವುದೇ ಕಾನೂನುಬದ್ಧ ಅನುಮತಿ ಇಲ್ಲದೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಸಂರಕ್ಷಿತ ಹೆಬ್ಬಾವುಗಳನ್ನು ಇಟ್ಟುಕೊಂಡಿರುವುದು ಪತ್ತೆಯಾಗಿದೆ.

ಪರಿಶೀಲನೆ ವೇಳೆ ಕಾರ್ಡ್‌ಬೋರ್ಡ್ ಬಾಕ್ಸ್‌ನಲ್ಲಿ ಹೆಬ್ಬಾವುಗಳನ್ನು ಇರಿಸಲಾಗಿದ್ದು, ಅವುಗಳನ್ನು ಅಪಾಯಕಾರಿ ಪರಿಸ್ಥಿತಿಯಲ್ಲಿ ವಸತಿ ಪ್ರದೇಶದೊಳಗೆ ಸಾಕಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಳಿಕ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಫ್ಲ್ಯಾಟ್‌ನಲ್ಲಿದ್ದ ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಹೆಬ್ಬಾವುಗಳನ್ನು ಇಟ್ಟುಕೊಂಡಿದ್ದ ಪ್ರಮುಖ ವ್ಯಕ್ತಿ ಆಂಧ್ರಪ್ರದೇಶ ಮೂಲದವನಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ (Non-Cognizable Report) ದಾಖಲಾಗಿದೆ.

ಈ ಹೆಬ್ಬಾವುಗಳನ್ನು ಎಲ್ಲಿಂದ ತರಲಾಗಿತ್ತು, ವನ್ಯಜೀವಿಗಳ ಅಕ್ರಮ ಸಾಗಣೆ ಅಥವಾ ಮಾರಾಟ ಜಾಲದೊಂದಿಗೆ ಯಾವುದೇ ಸಂಬಂಧವಿದೆಯೇ ಹಾಗೂ ಅವುಗಳನ್ನು ಅಪಾರ್ಟ್‌ಮೆಂಟ್‌ನಲ್ಲಿ ಇಟ್ಟುಕೊಳ್ಳಲು ಉದ್ದೇಶವೇನು ಎಂಬ ಕುರಿತು ಅರಣ್ಯ ಇಲಾಖೆ ಮತ್ತು ಪೊಲೀಸರು ಜಂಟಿಯಾಗಿ ತನಿಖೆ ನಡೆಸುತ್ತಿದ್ದಾರೆ. ವನ್ಯಜೀವಿಗಳನ್ನು ಅನುಮತಿಯಿಲ್ಲದೆ ಸಾಕುವುದು ಕಾನೂನುಬಾಹಿರವಾಗಿದ್ದು, ಇಂತಹ ಪ್ರಕರಣಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Continue Reading

Trending