ದೇಶ

ಫೇಕ್ ನ್ಯೂಸ್‍ಗಳ ಬಗ್ಗೆ ಎಚ್ಚರದಿಂದಿರಿ-ಸಿಎಂ

ಬೆಂಗಳೂರು: ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು,ಪತ್ರಿಕೆ, ಮಾಧ್ಯಮಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಹೇಳಿದರು,
ಬೆಂಗಳೂರು ಪ್ರಸ್ ಕ್ಲಬ್, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು,
ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ, ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಧಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು,
ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ ಫ್ಯಾಕ್ಟ್ ಚೆಕ್ ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ ಎಂದರು.

Trending

Exit mobile version