Connect with us

ಅಪರಾಧ

ನಾನು ನೋಡಿದ ದರ್ಶನ್ ಬೇರೆ.. ಅಭಿಮಾನಿಗಳಿಗೆ ಕ್ಲಾರಿಟಿ ಕೊಟ್ಟ ಸುಮಲತಾ ಅಂಬರೀಶ್; ಹೇಳಿದ್ದೇನು?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾದ ಬಳಿಕ ಮೊದಲ ಬಾರಿಗೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು. ನಾವೆಲ್ಲರೂ ಶಾಕ್‌ನಲ್ಲಿದ್ದು ನೋವನ್ನು ಅನುಭವಿಸುತ್ತಿದ್ದೇವೆ. ನನ್ನ ಮೌನವನ್ನು ಬೇರೆ ರೀತಿ ಬಿಂಬಿಸುತ್ತಿದ್ದಾರೆ. ಅಭಿಮಾನಿಗಳು ಬೇರೆ ರೀತಿ ತಿಳಿದುಕೊಳ್ಳುತ್ತಿದ್ದಾರೆ. ಅದಕ್ಕಾಗಿಯೇ ನನ್ನ ಅಭಿಪ್ರಾಯ ಹೊರಗೆ ಹಾಕಿದ್ದೇನೆ ಎಂದಿದ್ದಾರೆ.

ಕೊಲೆ ಕೇಸ್‌ ಕೋರ್ಟ್‌ನಲ್ಲಿ ಇರುವ ಕಾರಣ ನಾನು ಹೆಚ್ಚಾಗಿ ಮಾತನಾಡಲು ಆಗಲ್ಲ. ದರ್ಶನ್ ಜನರಿಗೆ ಸಹಾಯ ಮಾಡುವಂತಹ ವ್ಯಕ್ತಿ. ನಾನು ಆ ರೀತಿಯ ದರ್ಶನ್ ಮಾತ್ರ ನೋಡಿದ್ದೇನೆ. ಬೇರೆ ದರ್ಶನ್‌ನ ನಾನು ನೋಡಿಲ್ಲ. ಮಗನ ರೀತಿಯಲ್ಲಿ ನಾನು ಅವನನ್ನು ನೋಡಿದ್ದೇನೆ. ತಾಯಿಯಾಗಿ ನಾನು ಅವನು ಹೀಗೆ ಮಾಡಿರುವುದನ್ನು ನಂಬಲ್ಲ ಎಂದು ಸುಮಲತಾ ಅಂಬರೀಶ್ ತಿಳಿಸಿದ್ದಾರೆ.

ನಾನು ಒಬ್ಬ ತಾಯಿಯಾಗಿದ್ದು, ರೇಣುಕಾಸ್ವಾಮಿ ತಾಯಿ ಆಳುವುದನ್ನು ನೋಡಿದ್ದೇನೆ. ಆ ಪತ್ನಿ ಆಳುವುದನ್ನು ನೋಡಿದ್ದೇನೆ. ನನಗೂ ಈ ಘಟನೆಯಿಂದ ನೋವಾಗಿದೆ. ಸತ್ಯ ಹೊರಗೆ ಬರಬೇಕು. ಮೊದಲ ದಿನದಿಂದಲೇ ಆರೋಪಿಯಿಂದ ಅಪರಾಧಿ ಮಾಡಲು ಬೇಡ ಎಂಬುದು ನನ್ನ ಅನಿಸಿಕೆ. ಅವರು ಏನು ಮಾಡಿದ್ದಾರೆ, ಏನು ಮಾಡಿಲ್ಲ ಎಂಬುದು ಹೊರಗೆ ಬರಲಿ. ಕಾನೂನು ನಾಳೆ ಏನು ಹೇಳುತ್ತದೆ ಎಂಬುದನ್ನು ನಾವು ಒಪ್ಪಲೇಬೇಕು.

ಯಾರೂ ಇಂತಹ ಸಮಯದಲ್ಲಿ ಹೇಳಿಕೆಗಳನ್ನು ನೀಡಲೇಬಾರದು. ಎಲ್ಲವನ್ನೂ ನಾನು ಒಂದೇ ದಿನ ಹೊರಗೆ ಬಂದು ಮಾತನಾಡಲು ಆಗಲ್ಲ. ಕಾನೂನಿನ ಪ್ರಕಾರ ಏನೇನು ಮಾಡಬೇಕೋ ಅದೆಲ್ಲಾ ಆಗಲಿ. ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಬೇರೆ ಬೇರೆ ಸುದ್ದಿಗಳು ಬರುತ್ತಿದೆ.

ದರ್ಶನ್ ಪರ ವಕೀಲರು ಜಾಮೀನಿಗೆ ಅರ್ಜಿ ಹಾಕದೇ ಇರುವ ವಿಚಾರಕ್ಕೆ ಸುಮಲತಾ ಅಂಬರೀಶ್ ಅವರು ಜಾರ್ಚ್‌ಶೀಟ್ ಆಗುವವರೆಗೂ ಬೇಲ್ ಅರ್ಜಿ ಹಾಕಲು ಅವಕಾಶ ಇಲ್ಲ ಅನ್ನಿಸುತ್ತದೆ. ಹೀಗಾಗಿ ನೇರವಾಗಿ ಬೇಲ್ ಅರ್ಜಿ ಹಾಕಿಲ್ಲ ಅನ್ನಿಸುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಅಪರಾಧ

BAIRATHI BASAVARJU BREAKING NEWS : ಸಿಐಡಿ ಲುಕ್‌ಔಟ್ ನೋಟಿಸ್ ಜಾರಿ, ತನಿಖೆ ತೀವ್ರ

ಬೆಂಗಳೂರು: ರೌಡಿಶೀಟರ್ ಬಿಲ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತೊಂದು ಕಾನೂನು ಹಿನ್ನಡೆ ಎದುರಾಗಿದೆ. ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಅವರ ಬಂಧನದ ಭೀತಿ ಮತ್ತಷ್ಟು ಗಟ್ಟಿಯಾಗಿದೆ.

ಈ ಹಿಂದೆ ಇದೇ ಪ್ರಕರಣದಲ್ಲಿ ಹೈಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅದರ ನಂತರ ಬೈರತಿ ಬಸವರಾಜ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲಿ ಸಹ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ವಿಚಾರಣೆ ವೇಳೆ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿರುವುದು ಗಮನಾರ್ಹ.

ಈ ಬೆಳವಣಿಗೆಯೊಂದಿಗೆ ತನಿಖಾ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಈಗಾಗಲೇ ಸಿಐಡಿ ಪೊಲೀಸರು ಬೈರತಿ ಬಸವರಾಜ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಕಾನೂನು ಕ್ರಮಗಳು ಮತ್ತಷ್ಟು ಗಟ್ಟಿಯಾಗುವ ಸಾಧ್ಯತೆಗಳಿವೆ.

ರಾಜಕೀಯ ವಲಯದಲ್ಲೂ ಈ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಪ್ರಕರಣ ಹೊಸ ತಿರುವು ಪಡೆದಿದೆ.

Continue Reading

ಅಪರಾಧ

CRIME : ಬೆಂಗಳೂರಿನಲ್ಲಿ ಮತ್ತೆ ರೋಡ್‌ ರೇಜ್‌: ಬಾನೆಟ್‌ ಮೇಲೆ ವ್ಯಕ್ತಿ ಇದ್ದರೂ 1 ಕಿ.ಮೀ ಕಾರು ಚಲಾಯಿಸಿದ ಚಾಲಕ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ರೋಡ್‌ ರೇಜ್‌ ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ ಫೆ.11ರಂದು ಮತ್ತೊಂದು ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹೆಚ್ಎಎಲ್ ರಸ್ತೆಯಲ್ಲಿ ಮಧ್ಯಾಹ್ನ ಸುಮಾರು 12.45ರ ವೇಳೆಗೆ ಕಾರು ಮತ್ತು ಗೂಡ್ಸ್ ವಾಹನ ಟಚ್ ಆದ ವಿಚಾರಕ್ಕೆ ಚಾಲಕರ ನಡುವೆ ವಾಗ್ವಾದ ನಡೆದಿದೆ.

ಈ ವೇಳೆ ಗೂಡ್ಸ್ ವಾಹನ ಚಾಲಕ ನಂಜುಂಡ ಕಾರಿನ ಮುಂದೆ ನಿಂತು ನಷ್ಟಪೂರೈಕೆ ಕೇಳಿದ್ದಾನೆ. ಆದರೆ ಕಾರು ಚಾಲಕ ಏಕಾಏಕಿ ವಾಹನ ಚಲಾಯಿಸಿದ್ದು, ನಂಜುಂಡ ಬಾನೆಟ್ ಮೇಲೆ ಬಿದ್ದರೂ ಸುಮಾರು 1 ಕಿ.ಮೀ ಹೆಚ್ಚು ದೂರ ಕಾರು ನಿಲ್ಲಿಸದೆ ಚಲಾಯಿಸಿದ್ದಾನೆ. ಟ್ರಿನಿಟಿ ಜಂಕ್ಷನ್‌ನಿಂದ ಸಿಬಿ ಜಂಕ್ಷನ್ ಹಾಗೂ ASC ಸೆಂಟರ್ ಕಾಲೇಜು ವರೆಗೆ ಕಾರು ಸಾಗಿದ ದೃಶ್ಯ ರಸ್ತೆಬದಿ ಜನರನ್ನು ಬೆಚ್ಚಿಬೀಳುವಂತೆ ಮಾಡಿತು. ಕೆಲವರು ಮೊಬೈಲ್‌ನಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಇತರೆ ವಾಹನ ಚಾಲಕರು ಅಡ್ಡಹಾಕಿದ ಬಳಿಕ ಕಾರು ನಿಲ್ಲಿಸಲಾಯಿತು.

ಕಾರು ಚಾಲಕ ಬಂಧನ

ಪೊಲೀಸರು ಕಾರು ಚಾಲಕನನ್ನು ಪುಲಕೇಶಿ ನಗರದ 52 ವರ್ಷದ ಸುರೇಶ್ ಎಂದು ಗುರುತಿಸಿದ್ದಾರೆ. ಘಟನೆಯ ವೇಳೆ ಕಾರಿನಲ್ಲಿ ಪತ್ನಿಯೂ ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಯತ್ನ (Attempt to Murder) ಅಡಿಯಲ್ಲಿ ಆರೋಪಿಯನ್ನು ಬಂಧಿಸಿ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ತನಿಖೆಯಲ್ಲಿ ಸುರೇಶ್ ವಿರುದ್ಧ ಈ ಹಿಂದೆಯೂ ಅತಿವೇಗ ಚಾಲನೆ ಹಾಗೂ ಮೋಟಾರು ವಾಹನ ಕಾಯ್ದೆ ಉಲ್ಲಂಘನೆ ಪ್ರಕರಣಗಳು ಇರುವುದಾಗಿ ತಿಳಿದುಬಂದಿದೆ.

ರಾಜಧಾನಿಯಲ್ಲಿ ಹೆಚ್ಚುತ್ತಿರುವ ರೋಡ್‌ ರೇಜ್‌

ಇತ್ತೀಚೆಗೆ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮತ್ತೊಂದು ರೋಡ್‌ ರೇಜ್‌ ಪ್ರಕರಣದಲ್ಲಿ ಕಾರು ಚಾಲಕ ತನ್ನ ಸ್ನೇಹಿತನನ್ನೇ ಗೋಡೆ ಹಾಗೂ ಮರಕ್ಕೆ ಡಿಕ್ಕಿ ಹೊಡೆದು ಸಾವಿಗೆ ಕಾರಣನಾಗಿದ್ದ ಘಟನೆ ಸ್ಮರಣೀಯವಾಗಿದೆ.

ನಗರದಲ್ಲಿ ಹೆಚ್ಚುತ್ತಿರುವ ರೋಡ್‌ ರೇಜ್‌ ಘಟನೆಗಳು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿವೆ.

Continue Reading

ಅಪರಾಧ

ಬಿಕ್ಲು ಶಿವ ಕೊಲೆ ಪ್ರಕರಣ: ಸುಪ್ರೀಂಕೋರ್ಟ್ ಮೊರೆ ಹೋದ ಶಾಸಕ ಬೈರತಿ ಬಸವರಾಜ್

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ (Bairati Basavaraj) ಇದೀಗ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಅವರು ಅರ್ಜಿ ಸಲ್ಲಿಸಿದ್ದಾರೆ.

ನಿನ್ನೆ ಮಾತ್ರ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆದ ವಿಚಾರಣೆಯಲ್ಲಿ ನ್ಯಾಯಮೂರ್ತಿ ನ್ಯಾಸುನೀಲ್ ದತ್ ಯಾದವ್ ಅವರು ಅರ್ಜಿಯನ್ನು ತಿರಸ್ಕರಿಸಿದರು. ಈ ಬೆಳವಣಿಗೆಯ ಬೆನ್ನಲ್ಲೇ ಬೈರತಿ ಬಸವರಾಜ್ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬಿಕ್ಲು ಶಿವ ಭೀಕರ ಹತ್ಯೆ ಪ್ರಕರಣದಲ್ಲಿ ಈಗಾಗಲೇ 20 ಆರೋಪಿಗಳ ಪೈಕಿ ಎ-1 ಆರೋಪಿ ಜಗದೀಶ್ ಸೇರಿ 18 ಮಂದಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಡೀಫಾಲ್ಟ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ತಿರಸ್ಕರಿಸಿತ್ತು.

ಇದಕ್ಕೂ ಮುನ್ನ ಬೆಳಗಾವಿ ಅಧಿವೇಶನದ ಸಮಯದಲ್ಲಿ ನಾಪತ್ತೆಯಾಗಿದ್ದ ಬೈರತಿ ಬಸವರಾಜ್ ಬಂಧನಕ್ಕೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಮಧ್ಯಂತರ ಜಾಮೀನು ಮಂಜೂರಾದರೂ, ನಂತರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬೇಲ್ ರದ್ದುಪಡಿಸಿತ್ತು.

ಇದೀಗ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಯಾವಾಗ ನಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

Continue Reading

Trending