ಅಪರಾಧ
ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಹೊಸ ಟ್ವಿಸ್ಟ್.. ಕೊನೆಗೂ ವಿಚಾರಣೆಗೆ ಬಂದ ದರ್ಶನ್ ಆಪ್ತ ಮೋಹನ್ ರಾಜ್!
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. 13 ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರೇ, 4 ಆರೋಪಿಗಳನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲಾಗಿದೆ. ನಟ ದರ್ಶನ್ ಜೈಲು ಪಾಲಾದ ದಿನದಿಂದ ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಹೊಸ, ಹೊಸ ಟ್ವಿಸ್ಟ್ ಸಿಗುತ್ತಿದೆ. ಇದೀಗ ದರ್ಶನ್ ಅವರಿಗೆ 40 ಲಕ್ಷ ರೂಪಾಯಿ ಹಣ ಕೊಟ್ಟ ಆರೋಪ ಎದುರಿಸುತ್ತಿದ್ದ ಮೋಹನ್ ರಾಜ್ ಅವರು ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ.
ಚಿತ್ರರ್ದುಗದ ಯುವಕ ರೇಣುಕಾಸ್ವಾಮಿ ಕೊಲೆ ಕೇಸ್ ಬಗ್ಗೆ ಪೊಲೀಸ್ ಅಧಿಕಾರಿಗಳು ಎಲ್ಲ ರೀತಿಯ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ. ಈ ಕೊಲೆ ಕೇಸ್ ಅನ್ನು ಮುಚ್ಚಿ ಹಾಕಲು ನಟ ದರ್ಶನ್ಗೆ ಮೋಹನ್ ರಾಜ್ ಎಂಬುವವರು ಹಣ ನೀಡಿದ್ದರು ಅನ್ನೋ ಮಾಹಿತಿ ಕೇಳಿ ಬಂದಿದೆ. ಇದೀಗ ಹಣ ನೀಡಿದ್ದಕ್ಕೆ ಮಾಜಿ ಉಪಮೇಯರ್ ಮೋಹನ್ರಾಜ್ ಅವರಿಗೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರು.
ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧಪಟ್ಟಂತೆ ಮೋಹನ್ ರಾಜ್ ಅವರಿಗೆ ನೋಟಿಸ್ ಕೊಡಲಾಗಿದೆ. ಈ ಬೆನ್ನಲ್ಲೇ ಮೋಹನ್ ರಾಜ್ ಅವರು ವಿಚಾರಣೆಗಾಗಿ ಬಸವೇಶ್ವರ ನಗರ ಠಾಣೆಗೆ ಬಂದಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿ ನಾಶಕ್ಕಾಗಿ ನಟ ದರ್ಶನ್ಗೆ ಮೋಹನ್ ರಾಜ್ ಅವರು 40 ಲಕ್ಷ ರೂಪಾಯಿ ಹಣ ನೀಡಿದ್ದರು. ಹೀಗಾಗಿ ಮೋಹನ್ ರಾಜ್ ಅವರು ಪೊಲೀಸರು ನೋಟಿಸ್ ಕೊಟ್ಟ ಬೆನ್ನಲ್ಲೇ ವಿಚಾರಣೆಗೆ ಬಂದಿದ್ದಾರೆ.
ಯಾರು ಈ ಮೋಹನ್ರಾಜ್?
2019ರಿಂದ ನಟ ದರ್ಶನ್ ಹಾಗೂ ಮಾಜಿ ಮೇಯರ್ ರಾಮ್ ಮೋಹನ್ ರಾಜ್ ಗೆಳತನ ಇತ್ತು. ಕಳೆದ ಲೋಕಸಭೆ ಚುನಾವಣೆಯಲ್ಲಿ ರಾಮ್ ಮೋಹನ್ ರಾಜ್ ಅವರು ದರ್ಶನ್ ಜೊತೆ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ರಾಮ್ ಮೋಹನ್ ರಾಜ್ ಹಾಗೂ ದರ್ಶನ್ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಚುನಾವಣೆ ಪ್ರಚಾರದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಆಗಾಗ ಬಿಬಿಎಂಪಿ ಮಾಜಿ ಉಪಮೇಯರ್ ತಮ್ಮ ವಾರ್ಡ್ನ ಹಲವು ಕಾರ್ಯಕ್ರಮಗಳಿಗೂ ದರ್ಶನ್ರನ್ನು ಅತಿಥಿಯಾಗಿ ಆಹ್ವಾನಿಸುತ್ತಿದ್ದರು. ಇದೇ ವರ್ಷ ಫೆಬ್ರವರಿ 20ರಂದು ತಮ್ಮ ವಾರ್ಡ್ ಕಾರ್ಯಕ್ರಮದಲ್ಲಿ ನಟ ದರ್ಶನ್ ಅವರ ಬಗ್ಗೆ ಹಾಡಿ ಹೊಗಳಿದ್ದರು. ನಮ್ಮೆಲ್ಲ ಒಂದು ದಿನದ ಆಯಸ್ಸು ನಿಮಗೆ ನೀಡಬೇಕು ಅಂತ ಹೇಳಿದ್ದರಂತೆ ರಾಮ್ ಮೋಹನ್ ರಾಜ್. ರೇಣುಕಾಸ್ವಾಮಿ ಕೊಲೆ ಕೇಸ್ ನಂತರ ದರ್ಶನ್ಗೆ ಪ್ಲಾನ್ ಆಫ್ ಆಕ್ಷನ್ ಹೇಳಿ ಕೊಟ್ಟಿದ್ದೇ ರಾಮ್ ಮೋಹನ್ ರಾಜ್ ಎನ್ನುವ ಆರೋಪ ಇದೆ.
ಮೋಹನ್ ರಾಜ್ ಅವರು ಕೊಲೆಯಾದ ದಿನದಂದು ನಟ ದರ್ಶನ್ ಅವರನ್ನು ದಿನವಿಡೀ ತಮ್ಮ ವಾಹನದಲ್ಲಿ ಕೋರಿಸಿಕೊಂಡು ಓಡಾಡಿದ್ದರಂತೆ. ಅಷ್ಟೇ ಅಲ್ಲದೇ ರೇಣುಕಾಸ್ವಾಮಿಯನ್ನು ನಾವೇ ಕೊಲೆ ಮಾಡಿರೋದಾಗಿ ಎಂದು ಹೇಳಿದ್ದ ಆರೋಪಿಗಳಿಗೆ ಹಣ ನೀಡಲು ದರ್ಶನ್ಗೆ 40 ಲಕ್ಷ ರೂಪಾಯಿ ಕೊಟ್ಟಿದ್ದಾರೆ ಎಂಬ ಆರೋಪ ಇದೆ. ದರ್ಶನ್ ಹಾಗೂ ರಾಮ್ ಮೋಹನ್ ರಾಜ್ ಸ್ನೇಹ ಶುರುವಾಗಲು ಶಾಸಕ ಸತೀಶ್ ರೆಡ್ಡಿ ಅವರೇ ಮುಖ್ಯ ಕಾರಣವಂತೆ. ಹಿಂದಿನಿಂದಲೂ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಅವರಿಗೆ ದರ್ಶನ್ ಆಪ್ತರಾಗಿದ್ದರು. ತಮ್ಮ ನಾಯಕರ ಸ್ನೇಹಿತ ಆಗಿದ್ದರಿಂದ ಜೊತೆಯಲ್ಲೇ ರಾಮ್ ಮೋಹನ್ ರಾಜ್ ಇದ್ದರು. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ತನಿಖೆಗೆ ಹಾಜರಾಗುವಂತೆ ಮೋಹನ್ ರಾಜ್ ಅವರಿಗೆ ನೋಟಿಸ್ ಕೊಟ್ಟಿದ್ದರು.
ಅಪರಾಧ
ಐಪಿಎಲ್ ಟಿಕೆಟ್ ಕ್ರೇಜ್ ನಡುವೆ ದೊಡ್ಡ ಮೋಸ: ಟೆಕ್ಕಿಗೆ ₹1.46 ಲಕ್ಷ ನಷ್ಟ!
ಬೆಂಗಳೂರು, ಏಪ್ರಿಲ್ 04: ನಗರದಲ್ಲಿ IPL 2026 ಟಿಕೆಟ್ ಕ್ರೇಜ್ ಜೋರಾಗಿರುವ ನಡುವೆ ಆನ್‌ಲೈನ್ ಮೋಸದ ಪ್ರಕರಣವೂ ಬೆಳಕಿಗೆ ಬಂದಿದೆ. ಅನಧಿಕೃತ ಪ್ಲಾಟ್‌ಫಾರ್ಮ್ ಮೂಲಕ ಟಿಕೆಟ್ ಖರೀದಿಸಲು ಯತ್ನಿಸಿದ ಟೆಕ್ಕಿ ಒಬ್ಬರು ₹1.46 ಲಕ್ಷ ಕಳೆದುಕೊಂಡಿರುವ ಘಟನೆ ಕ್ರಿಕೆಟ್ ಅಭಿಮಾನಿಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ.
Bengaluruನ ಬಿ. ನಾರಾಯಣಪುರ ನಿವಾಸಿಯಾದ 25 ವರ್ಷದ ಟೆಕ್ಕಿ, Instagramನಲ್ಲಿ ಪರಿಚಯವಾದ ವ್ಯಕ್ತಿಯಿಂದ ಮೋಸಕ್ಕೆ ಒಳಗಾಗಿದ್ದಾರೆ. ಆತ ತನ್ನನ್ನು M. Chinnaswamy Stadium ಟಿಕೆಟ್ ಕೌಂಟರ್ ಹಿರಿಯ ಮೇಲ್ವಿಚಾರಕ ಸುಮಿತ್ ಬಿಸ್ವಾಲ್ ಎಂದು ಪರಿಚಯಿಸಿಕೊಂಡು ನಂಬಿಕೆ ಮೂಡಿಸಿದ್ದಾನೆ.
ಮೊದಲಿಗೆ ಎರಡು ಟಿಕೆಟ್‌ಗಳಿಗೆ ₹3,700 ಕೇಳಿದ ಆರೋಪಿಯು, ಬಳಿಕ ಭದ್ರತಾ ಠೇವಣಿ, ಐಡಿ ಕಾರ್ಡ್ ಮತ್ತು ಫುಡ್ ಕೂಪನ್ ಹೆಸರಿನಲ್ಲಿ ಹಂತ ಹಂತವಾಗಿ ಹಣ ಪಡೆದುಕೊಂಡಿದ್ದಾನೆ. ಪಂದ್ಯದ ದಿನ ಗೇಟ್ ನಂ.10 ಬಳಿ ಬರಲು ಹೇಳಿ ನಕಲಿ ಇಮೇಲ್ ದೃಢೀಕರಣವನ್ನೂ ಕಳುಹಿಸಿದ್ದಾನೆ.
ಆತನ ಮಾತು ನಂಬಿದ ಟೆಕ್ಕಿ, ತನ್ನ ಹಾಗೂ ತಾಯಿಯ ಖಾತೆಯಿಂದ ಯುಪಿಐ ಮೂಲಕ ಒಟ್ಟು ₹1.46 ಲಕ್ಷ ವರ್ಗಾವಣೆ ಮಾಡಿದ್ದಾರೆ. ಆದರೆ ಹಣ ಪಡೆದ ಬಳಿಕ ಆರೋಪಿಯು ಟಿಕೆಟ್ ನೀಡದೆ ಸಂಪರ್ಕ ಕಡಿತಗೊಳಿಸಿದ್ದಾನೆ.
ಈ ಕುರಿತು ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ಐಪಿಎಲ್ ಟಿಕೆಟ್ ಖರೀದಿಸುವಾಗ ಅಧಿಕೃತ ವೆಬ್‌ಸೈಟ್ ಅಥವಾ ಮಾನ್ಯ ಮಾರಾಟಗಾರರ ಮೂಲಕವೇ ಖರೀದಿಸಲು ಸಲಹೆ ನೀಡಿದ್ದಾರೆ. ಅನಧಿಕೃತ ಲಿಂಕ್‌ಗಳು ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವ್ಯವಹಾರ ಮಾಡುವುದರಿಂದ ಇಂತಹ ಮೋಸಗಳಿಗೆ ಒಳಗಾಗುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿಸಿದ್ದಾರೆ.
ಅಪರಾಧ
ಶಿಡ್ಲಘಟ್ಟದಲ್ಲಿ ರೌಡಿ ಶೀಟರ್‌ಗಳಿಗೆ ಕಟ್ಟೆಚ್ಚರ: ಗೈರುಹಾಜರಾದರೆ ಕಠಿಣ ಕ್ರಮ
ಶಿಡ್ಲಘಟ್ಟ: ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ರೌಡಿ ಶೀಟರ್‌ಗಳ ಮೇಲೆ ನಿಗಾವಣೆಯನ್ನು ಮತ್ತಷ್ಟು ಬಲಪಡಿಸಲಾಗಿದೆ.
ರೌಡಿ ಶೀಟರ್‌ಗಳ ಪರೇಡ್
ನಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಡಿವೈಎಸ್ಪಿ ಮುರಳಿಧರ್ ನೇತೃತ್ವದಲ್ಲಿ ಶುಕ್ರವಾರ ರೌಡಿ ಶೀಟರ್‌ಗಳ ಪರೇಡ್ ನಡೆಯಿತು. ಠಾಣಾ ವ್ಯಾಪ್ತಿಯ ಎಲ್ಲಾ ರೌಡಿ ಶೀಟರ್‌ಗಳನ್ನು ಕಡ್ಡಾಯವಾಗಿ ಹಾಜರುಪಡಿಸಿ ಪರಿಶೀಲನೆ ನಡೆಸಲಾಯಿತು.
ಗೈರುಹಾಜರಾದರೆ ಕಾನೂನು ಕ್ರಮ
ಪರೇಡ್‌ಗೆ ಗೈರುಹಾಜರಾಗುವ ರೌಡಿ ಶೀಟರ್‌ಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿವೈಎಸ್ಪಿ ಮುರಳಿಧರ್ ಎಚ್ಚರಿಕೆ ನೀಡಿದ್ದಾರೆ.
ಅಪರಾಧ ನಿಯಂತ್ರಣಕ್ಕೆ ಕ್ರಮ
ಶಿಡ್ಲಘಟ್ಟ ನಗರ, ಗ್ರಾಮಾಂತರ ಹಾಗೂ ದಿಬ್ಬೂರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಚಟುವಟಿಕೆಗಳನ್ನು ತಡೆಯುವುದು ಪ್ರಮುಖ ಗುರಿಯಾಗಿದೆ. ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಸಾರ್ವಜನಿಕರಿಗೆ ಭದ್ರತೆ
ಇಂತಹ ನಿಯಮಿತ ಪರೇಡ್‌ಗಳ ಮೂಲಕ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವುದರ ಜೊತೆಗೆ ಸಾರ್ವಜನಿಕರಲ್ಲಿ ಭದ್ರತಾ ಭಾವನೆ ಮೂಡಿಸುವುದು ಪೊಲೀಸರ ಉದ್ದೇಶವಾಗಿದೆ.
ಅಧಿಕಾರಿಗಳ ಉಪಸ್ಥಿತಿ
ಈ ಸಂದರ್ಭದಲ್ಲಿ ಸಿಪಿಐ ಆನಂದ್, ಪಿಎಸ್‌ಐ ವೇಣುಗೋಪಾಲ್, ಸುನಿಲ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
ಅಪರಾಧ
ಕಲಬುರಗಿಯಲ್ಲಿ ಭೀಕರ ಹತ್ಯೆ: ಮಾಜಿ ಸಚಿವರ ಸಂಬಂಧಿ ಫೈನಾನ್ಸ್ ಕಚೇರಿಯಲ್ಲೇ ಕೊಚ್ಚಿ ಕೊಲೆ
ಕಲಬುರಗಿ: ನಗರದಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿರುವ ಬೆನ್ನಲ್ಲೇ ಮತ್ತೊಂದು ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳು ಫೈನಾನ್ಸ್ ಕಚೇರಿಗೆ ನುಗ್ಗಿ ಮಾಜಿ ಸಚಿವರ ಸಂಬಂಧಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಫೈನಾನ್ಸ್ ಕಚೇರಿಯಲ್ಲೇ ಹತ್ಯೆ
ಪಿ & ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್‌ನಲ್ಲಿ ನಡೆದ ಈ ಘಟನೆದಲ್ಲಿ 45 ವರ್ಷದ ಅನೀಲ್ ರಾಠೋಡ್ ಎಂಬವರು ಸಾವನ್ನಪ್ಪಿದ್ದಾರೆ. ಅವರು ಸಿದ್ದೇಶ್ವರ ಬಡಾವಣೆಯ ನಿವಾಸಿಯಾಗಿದ್ದು, ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದರು.
ಹಣಕಾಸು ವ್ಯವಹಾರವೇ ಕಾರಣ?
ಘಟನೆ ನಡೆದ ರಾತ್ರಿ, ಆಟೋದಲ್ಲಿ ಬಂದ ಮೂವರು ದುಷ್ಕರ್ಮಿಗಳು ಕಚೇರಿಗೆ ನುಗ್ಗಿ ಅನೀಲ್ ಜೊತೆ ವಾಗ್ವಾದಕ್ಕೆ ಇಳಿದಿದ್ದಾರೆ. ಹಣಕಾಸಿನ ವಿಚಾರಕ್ಕೆ ಜಗಳ ತೀವ್ರಗೊಂಡಿದ್ದು, ಬಳಿಕ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆಗೈದು ಪರಾರಿಯಾಗಿದ್ದಾರೆ. ಸಾಲ ನೀಡಿದ ಹಣ ವಾಪಸ್ ಕೇಳಿದ್ದಕ್ಕೆ ಈ ಕೃತ್ಯ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ತಪ್ಪಿಸಿಕೊಳ್ಳಲು ಯತ್ನಿಸಿದರೂ ಸಾವು
ಹಠಾತ್ ದಾಳಿ ನಡೆದಾಗ ಅನೀಲ್ ರಾಠೋಡ್ ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಆದರೆ ಕಚೇರಿ ಬಾಗಿಲು ಬಳಿ ಅವರನ್ನು ಬೆನ್ನಟ್ಟಿ ಕೊಚ್ಚಿ ಕೊಲೆ ಮಾಡಲಾಗಿದೆ.
ಪೊಲೀಸರ ತನಿಖೆ
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ ಮತ್ತು ಬೆರಳಚ್ಚು ತಜ್ಞರನ್ನು ಬಳಸಿಕೊಂಡು ಸಾಕ್ಷ್ಯ ಸಂಗ್ರಹಿಸಲಾಗಿದೆ. ಹಂತಕರ ಬಂಧನಕ್ಕಾಗಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ.
ಕುಟುಂಬದ ಆರೋಪ
ಮೃತನ ಕುಟುಂಬಸ್ಥರು, “ಹಣಕಾಸಿನ ವಿಚಾರಕ್ಕೆ ನಮ್ಮ ಮಗನನ್ನು ಕೊಲೆ ಮಾಡಿದ್ದಾರೆ. ಜೀವ ಬೆದರಿಕೆ ಇದೆ ಎಂದು ಮೊದಲು ಹೇಳಿಕೊಂಡಿದ್ದ” ಎಂದು ಆರೋಪಿಸಿದ್ದಾರೆ.
ಹೆಚ್ಚುತ್ತಿರುವ ಅಪರಾಧ
ನಗರದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಸರಣಿ ಹತ್ಯೆಗಳು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದೆ. ಈ ಪ್ರಕರಣದ ನಿಖರ ಕಾರಣ ತನಿಖೆಯ ಬಳಿಕವೇ ಬಹಿರಂಗವಾಗಲಿದೆ.
