Connect with us

ಕ್ರೀಡೆ

ಅಮ್ಮ ಕೇರಳ, ಅಪ್ಪ ತಮಿಳುನಾಡು: ಕರ್ನಾಟದಿಂದ ಪ್ಯಾರಿಸ್ ಒಲಿಂಪಿಕ್ಸ್​ಗೆ ಮಗಳು ಆಯ್ಕೆ – Dhinidhi Desingu

Published

on

ಕೋಯಿಕ್ಕೋಡ್(ಕೇರಳ): ಪ್ಯಾರಿಸ್ ಒಲಿಂಪಿಕ್ಸ್​ಗೆ ಕೇರಳ ಮೂಲದ ಈಜುಪಟು ಧಿನಿಧಿ ದೇಸಿಂಗು ತೆರಳುತ್ತಿದ್ದಾರೆ. ಅವರು ದೆಹಲಿಯಲ್ಲಿಂದು ನಡೆದ ಪ್ಯಾರಿಸ್​ಗೆ ತೆರಳುವ ಕ್ರೀಡಾಪಟುಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿದ್ದರು. ಜೊತೆಗೆ ಪ್ರಧಾನಿಯೊಂದಿಗೆ ಸಂವಾದ ಕೂಡಾ ನಡೆಸಿದರು.

ಈ ವೇಳೆ ಮಾತನಾಡಿದ ಈಜುಪಟು ಧಿನಿಧಿ ದೇಸಿಂಗು, “ನಾನು ಧಿನಿಧಿ ದೇಸಿಂಗು, ನನಗೆ ಹದಿನಾಲ್ಕು ವರ್ಷ, ನಾನು ಮೂಲತಃ ಕೇರಳದವನಾದರೂ ಕರ್ನಾಟಕವನ್ನು ಪ್ರತಿನಿಧಿಸುತ್ತಿದ್ದೇನೆ. ಈ ಬಾರಿ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುತ್ತಿದ್ದೇನೆ. ಇದು ನನ್ನ ಕ್ರೀಡಾ ವೃತ್ತಿಜೀವನದ ಆರಂಭವಷ್ಟೇ. ಪ್ರತಿಭಾವಂತ ಆಟಗಾರರನ್ನು ಹೊಂದಿರುವ ಭಾರತ ತಂಡದ ಭಾಗವಾಗಿರುವುದಕ್ಕೆ ನನಗೆ ಹೆಮ್ಮೆಯಾಗುತ್ತಿದೆ. ಖಂಡಿತ, ನಾವು ದೇಶದ ಕೀರ್ತಿಯನ್ನು ಹೆಚ್ಚಿಸುತ್ತೇವೆ ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಧಿನಿಧಿ ದೇಸಿಂಗು ಯಶಸ್ಸಿಗೆ ಶುಭ ಹಾರೈಸಿದರು. ಗುಂಪಿನಲ್ಲಿದ್ದ ಪಿ.ಆರ್.ಶ್ರೀಜೇಶ್, ದೀಪಿಕಾ ಕುಮಾರಿ ಸೇರಿದಂತೆ ಹಿರಿಯ ಅಥ್ಲೀಟ್‌ಗಳು ಚಪ್ಪಾಳೆ ತಟ್ಟಿ ತಮ್ಮ ಗುಂಪಿನ ಯುವ ತಾರೆಯನ್ನು ಪ್ರೋತ್ಸಾಹಿಸಿದರು. ಫೋಟೋ ಸೆಷನ್ ಸಮಯದಲ್ಲಿ, ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷೆ ಪಿಟಿ ಉಷಾ ಅವರು ಧಿನಿಧಿ ದೇಸಿಂಗು ಅವರನ್ನು ಕರೆದು ಮುಂದಿನ ಸಾಲಿನಲ್ಲಿ ತಮ್ಮ ಬಳಿ ನಿಲ್ಲಿಸಿಕೊಂಡರು.

ಧಿನಿಧಿ ಹಿನ್ನೆಲೆ ಏನು?: ಧಿನಿಧಿ ಕೋಯಿಕ್ಕೋಡ್​ನ ಪುತ್ಯಂಗಡಿ ಮೂಲದ ಜೆಸಿತಾ ವಿಜಯನ್ ಮತ್ತು ತಮಿಳುನಾಡು ಮೂಲದ ದೇಸಿಂಗು ಅವರ ಪುತ್ರಿ. ಒಂಬತ್ತನೇ ತರಗತಿ ಓದುತ್ತಿರುವ ಧಿನಿಧಿ, ಬೆಂಗಳೂರಿನ ತಮ್ಮ ಫ್ಲಾಟ್‌ ಲೈಫ್‌ನಲ್ಲಿ ಬೋರಿಂಗ್​ನಿಂದ ಪಾರಾಗಲು ಈಜುಕೊಳದಲ್ಲಿ ಈಜಲು ಪ್ರಾರಂಭಿಸಿದ್ದರು. ಈಗ ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಲು ಸಜ್ಜಾಗಿದ್ದಾರೆ. ಇದಕ್ಕಾಗಿ ಸಾಕಷ್ಟು ತ್ಯಾಗ ಮಾಡಬೇಕಾಯಿತು ಎನ್ನುತ್ತಾರೆ ಧಿನಿಧಿ.

ಭಾರತೀಯ ಆಟಗಾರರು ಎ ಮತ್ತು ಬಿ ಅರ್ಹತಾ ಸುತ್ತಿನಲ್ಲೇ ಹೊರ ಬೀಳುತ್ತಾರೆ. ಆದರೆ ಧಿನಿಧಿ ಅಜೇಯರಾಗಿ ಉಳಿದಿದ್ದಾರೆ. ಧಿನಿಧಿ ರಾಷ್ಟ್ರೀಯ ಕ್ರೀಡಾಕೂಟ ಮತ್ತು ಹಿರಿಯ ರಾಷ್ಟ್ರೀಯ ಚಾಂಪಿಯನ್ ಶಿಪ್​ಗಳಲ್ಲಿ ಪದಕಗಳನ್ನು ಗೆದ್ದಿದ್ದಾರೆ. ಈ ಸೀಸನ್​ನಲ್ಲಿ ಈಜು ಫೆಡರೇಶನ್​ನ ಅತ್ಯುತ್ತಮ ಮಹಿಳಾ ಈಜುಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಸದ್ಯ ಧಿನಿಧಿ ಮಹಿಳೆಯರ 200 ಮೀಟರ್ ಫ್ರೀಸ್ಟೈಲ್ ವಿಭಾಗದಲ್ಲಿ ಭಾಗವಹಿಸುತ್ತಿದ್ದಾರೆ. ಅವರು 2028 ಮತ್ತು 2032ರ ಒಲಿಂಪಿಕ್ಸ್ ನಲ್ಲಿ ಭಾಗವಹಿಸುವ ಗುರಿ ಹೊಂದಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅನುಭವಗಳಿಸಲು ಮತ್ತು ವಿಶ್ವ ದರ್ಜೆಯ ಕ್ರೀಡಾಪಟುಗಳಿಂದ ಕಲಿಯಲು ಎದುರು ನೋಡುತ್ತಿದ್ದಾರೆ.

ಏಳು ಬಾರಿ ಒಲಿಂಪಿಕ್ ಚಿನ್ನದ ಪದಕ ವಿಜೇತ ಈಜುಗಾರ್ತಿ ಕೇಟಿ ಲೆಡೆಕಿ ಅವರನ್ನು ಭೇಟಿಯಾಗಲು ಧಿನಿಧಿ ಉತ್ಸುಕರಾಗಿದ್ದಾರೆ. ಅವಳು ಕಳೆದ ವರ್ಷ ಲೆಡೆಕಿಗಾಗಿ ಗ್ರೀಟಿಂಗ್ ಕಾರ್ಡ್ ಅನ್ನು ಸಿದ್ಧಪಡಿಸಿದ್ದರು ಮತ್ತು ಅದನ್ನು ವೈಯಕ್ತಿಕ ಅವರಿಗೆ ಕೊಡಲು ಕಾಯುತ್ತಿದ್ದಾರೆ.

ಧಿನಿಧಿಗೆ ಶುಭ ಕೋರಿದ ಡಿಸಿಎಂ: ಮತ್ತೊಂದೆಡೆ, ಜುಲೈ 26 ರಿಂದ ಆರಂಭವಾಗಲಿರುವ ಪ್ಯಾರಿಸ್ ಒಲಿಂಪಿಕ್ಸ್’ಗೆ ಆಯ್ಕೆಯಾಗಿರುವ ಬೆಂಗಳೂರು ಮೂಲದ ಈಜುಪಟುಗಳಾದ ಶ್ರೀಹರಿ ನಟರಾಜ್ ಹಾಗೂ ಧಿನಿಧಿ ದೇಸಿಂಗು ಅವರಿಗೆ ತುಂಬು ಹೃದಯದ ಅಭಿನಂದನೆಗಳು. 14 ವರ್ಷದ ಧಿನಿಧಿ ಅವರು ಮಹಿಳೆಯರ ವಿಭಾಗದಲ್ಲಿ, 23ರ ವರ್ಷದ ಶ್ರೀಹರಿ ಅವರು ಪುರುಷರ ವಿಭಾಗದಲ್ಲಿ ಆಯ್ಕೆಯಾಗುವ ಮೂಲಕ ಇಬ್ಬರು ಕನ್ನಡ ನೆಲದ ಪ್ರತಿಭೆಗಳು ಭಾರತವನ್ನು ಪ್ರತಿನಿಸುತ್ತಿದ್ದಾರೆ. ಇಬ್ಬರೂ ಕೂಡ ಗೆಲುವು ಸಾಧಿಸಿ ದೇಶಕ್ಕೆ ಕೀರ್ತಿ ತರಲಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್​ ಶುಭ ಹಾರೈಸಿದ್ದಾರೆ.

ಕ್ರೀಡೆ

ಚಿನ್ನಸ್ವಾಮಿಯಲ್ಲಿ ರನ್ ಮಳೆ: ಆರ್ಸಿಬಿ 250 ರನ್ ಸಿಡಿತ!

Published

on

By

ಬೆಂಗಳೂರುದ ಎಂ. ಚಿನ್ನಸ್ವಾಮಿ ಕ್ರೀಡಾಂಗಣನಲ್ಲಿ ನಡೆಯುತ್ತಿರುವ Indian Premier League ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದೆ.

ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರುತುರಾಜ್ ಗಾಯಕ್ವಾಡ್ ಮೊದಲು ಆರ್ಸಿಬಿಗೆ ಬ್ಯಾಟಿಂಗ್ ಆಹ್ವಾನಿಸಿದರು. ಆರಂಭದಲ್ಲಿ ವಿರಾಟ್ ಕೊಹ್ಲಿ (28) ಬೇಗ ಔಟ್ ಆದರೂ, ಫಿಲ್ ಸಾಲ್ಟ್ (46) ತಂಡಕ್ಕೆ ವೇಗ ನೀಡಿದರು.

ಆದರೆ, ನಂತರದ ಹಂತದಲ್ಲಿ ಆರ್ಸಿಬಿ ಬ್ಯಾಟಿಂಗ್ ಭರ್ಜರಿಯಾಗಿ ಸಿಡಿಯಿತು. ದೇವದತ್ತ ಪಡಿಕಲ್ (50) ಅರ್ಧಶತಕ ಸಿಡಿಸಿ ತಂಡಕ್ಕೆ ಬಲ ನೀಡಿದರೆ, ನಾಯಕ ರಜತ್ ಪಾಟೀದಾರ್ (48*) ವೇಗದ ಇನ್ನಿಂಗ್ಸ್ ಆಡಿದರು. ಅಂತಿಮವಾಗಿ ಟಿಮ್ ಡೇವಿಡ್ (70*) ಬ್ಯಾಕ್ ಟು ಬ್ಯಾಕ್ ಸಿಕ್ಸರ್‌ಗಳಿಂದ ಚೆನ್ನೈ ಬೌಲರ್ಗಳನ್ನು ಕಂಗೆಡಿಸಿದರು.

ಪವರ್ಪ್ಲೇಯಲ್ಲೇ ವಿಕೆಟ್ ಪಡೆಯಲು ವಿಫಲವಾದ ಸಿಎಸ್ಕೆ ಬೌಲರ್ಗಳು ಮತ್ತೆ ಅದೇ ತಪ್ಪನ್ನು ಮುಂದುವರೆಸಿದರು. ಪರಿಣಾಮವಾಗಿ, ಆರ್ಸಿಬಿ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಭಾರೀ 250 ರನ್ ಗಳಿಸಿತು.

ಈ ಬೃಹತ್ ಗುರಿಯನ್ನು ಬೆನ್ನತ್ತುತ್ತಿರುವ ಸಿಎಸ್ಕೆ, ತನ್ನ ಮೊದಲ ಗೆಲುವು ದಾಖಲಿಸಬಹುದೇ ಎಂಬುದು ಈಗ ಕುತೂಹಲ ಮೂಡಿಸಿದೆ.

ಆರ್ಸಿಬಿ ಬ್ಯಾಟಿಂಗ್ ವಿವರ:

  • ವಿರಾಟ್ ಕೊಹ್ಲಿ – 28 (18)
  • ಫಿಲ್ ಸಾಲ್ಟ್ – 46 (30)
  • ದೇವದತ್ತ ಪಡಿಕಲ್ – 50 (29)
  • ರಜತ್ ಪಾಟೀದಾರ್ – 48* (19)
  • ಟಿಮ್ ಡೇವಿಡ್ – 70* (25)
Continue Reading

ಕ್ರೀಡೆ

ಐಪಿಎಲ್ ಟಿಕೆಟ್ ದುರ್ಬಳಕೆ: ಶಾಸಕರ ಪಾಸ್ ಸ್ನೇಹಿತರ ಕೈಗೆ!

Published

on

By

ಬೆಂಗಳೂರುದಲ್ಲಿ ಐಪಿಎಲ್ ಕ್ರೇಜ್ ಗರಿಷ್ಠ ಮಟ್ಟಕ್ಕೆ ಏರಿರುವ ನಡುವೆಯೇ, ಶಾಸಕರಿಗೆ ನೀಡಲಾದ ಉಚಿತ ಟಿಕೆಟ್ ಪಾಸ್‌ಗಳ ದುರ್ಬಳಕೆಯ ಆರೋಪ ದೊಡ್ಡ ವಿವಾದಕ್ಕೆ ಕಾರಣವಾಗಿದೆ. Indian Premier League ಪಂದ್ಯಗಳಿಗೆ ಸಂಬಂಧಿಸಿದ ಈ ಘಟನೆ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.

ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನ ಕೆಲವು ಶಾಸಕರು ತಮ್ಮ ಹಾಗೂ ಕುಟುಂಬ ಸದಸ್ಯರಿಗೆ ಉಚಿತ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ Karnataka State Cricket Association ವಿಶೇಷ ಅಕ್ರೆಡೆಷನ್ ಕಾರ್ಡ್ ಮಾದರಿಯ ಪಾಸ್‌ಗಳನ್ನು ವಿತರಿಸಿತ್ತು.

ಆದರೆ, ಈ ಪಾಸ್‌ಗಳು ಈಗ ಶಾಸಕರ ಕುಟುಂಬದವರಿಗಷ್ಟೇ ಸೀಮಿತವಾಗದೆ, ಅವರ ಮಕ್ಕಳ ಸ್ನೇಹಿತರ ಕೈಗೆ ಸೇರಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಪೊಲೀಸರು ತಪಾಸಣೆ ನಡೆಸಿದ ವೇಳೆ, ಶಾಸಕರ ಕುಟುಂಬದ ಹೆಸರಿನ ಪಾಸ್ ಹಿಡಿದು ಬಂದಿದ್ದ ಕೆಲ ಯುವಕರ ಮೇಲೆ ಅನುಮಾನ ಮೂಡಿದೆ.

ಪರಿಶೀಲನೆ ವೇಳೆ ಯುವಕರು ತಡಬಡಾಯಿಸಿದ್ದು, ಕೊನೆಯಲ್ಲಿ ತಾವು ಶಾಸಕರ ಮಗನ ಸ್ನೇಹಿತರು ಎಂದು ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆ ಪೊಲೀಸರು ಅವರನ್ನು ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಈ ಘಟನೆ ಹಲವಾರು ಪ್ರಶ್ನೆಗಳನ್ನು ಎಬ್ಬಿಸಿದೆ. ಜನಪ್ರತಿನಿಧಿಗಳಿಗಾಗಿ ನೀಡಲಾದ ಸೌಲಭ್ಯವನ್ನು ಅನರ್ಹರು ಬಳಸುವುದು ಸರಿಯೇ? ಎಂಬ ಪ್ರಶ್ನೆ ಕೇಳಿಬರುತ್ತಿದೆ.

ಸಾಮಾನ್ಯ ಜನರು ಟಿಕೆಟ್‌ಗಾಗಿ ಪರದಾಡುತ್ತಿರುವಾಗ, ಉಚಿತ ಪಾಸ್‌ಗಳು ದುರ್ಬಳಕೆಯಾಗುತ್ತಿರುವುದು ಜನರಲ್ಲಿ ಆಕ್ರೋಶಕ್ಕೂ ಕಾರಣವಾಗಿದೆ. ಇದೀಗ KSCA ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಒತ್ತಡ ಹೆಚ್ಚಾಗಿದೆ.

Continue Reading

ಕ್ರೀಡೆ

ಗ್ಯಾಸ್‌ಗಾಗಿ ಜನ ಸಾಲು, ಟಿಕೆಟ್‌ಗಾಗಿ ಪಿಎ ಸಾಲು: ಶಾಸಕರಿಗೆ ಟೀಕೆ!

Published

on

ಬೆಂಗಳೂರು: ರಾಜ್ಯದಲ್ಲಿ ಅಡುಗೆ ಅನಿಲ ಕೊರತೆಯಿಂದ ಜನರು ಸಂಕಷ್ಟ ಅನುಭವಿಸುತ್ತಿರುವ ನಡುವೆ, ಜನಪ್ರತಿನಿಧಿಗಳ ವರ್ತನೆ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಒಂದು ಕಡೆ ಆಟೋ ಚಾಲಕರು ಗ್ಯಾಸ್‌ಗಾಗಿ ರಾತ್ರಿಯಿಡೀ ಸಾಲಿನಲ್ಲಿ ನಿಲ್ಲುತ್ತಿರುವಾಗ, ಇನ್ನೊಂದು ಕಡೆ ಶಾಸಕರು IPL 2026 ಟಿಕೆಟ್ ಪಡೆಯಲು ತಮ್ಮ ಪಿಎಗಳನ್ನು ಕ್ಯೂನಲ್ಲಿ ನಿಲ್ಲಿಸಿರುವುದು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಮಾಹಿತಿಯ ಪ್ರಕಾರ, ಸರ್ಕಾರ ಮತ್ತು Karnataka State Cricket Association (KSCA) ನಡುವೆ ಪ್ರತಿ ಐಪಿಎಲ್ ಪಂದ್ಯಕ್ಕೆ ಶಾಸಕರಿಗೆ ಉಚಿತವಾಗಿ 3 ಟಿಕೆಟ್ ನೀಡುವ ಕುರಿತು ಒಪ್ಪಂದವಾಗಿದೆ. ಇದರ ಹಿನ್ನೆಲೆಯಲ್ಲಿ, Royal Challengers Bengaluru ಮತ್ತು Chennai Super Kings ನಡುವಿನ ಪಂದ್ಯಕ್ಕೆ ಟಿಕೆಟ್ ಪಡೆಯಲು ಶಾಸಕರ ಪಿಎಗಳು ಸ್ಪೀಕರ್ ಕಚೇರಿ ಮುಂದೆ ಸಾಲಿನಲ್ಲಿ ನಿಂತಿರುವ ದೃಶ್ಯಗಳು ಗಮನ ಸೆಳೆದಿವೆ.

ಸ್ಪೀಕರ್ ಕಚೇರಿಯಲ್ಲೇ ಟಿಕೆಟ್ ವಿತರಣೆ ನಡೆಯುತ್ತಿರುವುದರಿಂದ, ಶಾಸಕರ ಸೂಚನೆ ಮೇರೆಗೆ ಪಿಎಗಳು ಟಿಕೆಟ್ ಪಡೆಯಲು ಕ್ಯೂನಲ್ಲಿ ನಿಂತಿದ್ದಾರೆ ಎಂದು ತಿಳಿದುಬಂದಿದೆ.

ಇದರಿಂದ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಜನಪ್ರತಿನಿಧಿಗಳು ತಮ್ಮ ವೈಯಕ್ತಿಕ ಆಸಕ್ತಿಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ ಎಂಬ ಟೀಕೆಗಳು ಕೇಳಿಬರುತ್ತಿವೆ. ಗ್ಯಾಸ್ ಕೊರತೆ, ದೈನಂದಿನ ಸಮಸ್ಯೆಗಳ ನಡುವೆ ಈ ರೀತಿಯ ಘಟನೆಗಳು ಸಾರ್ವಜನಿಕರ ಅಸಮಾಧಾನವನ್ನು ಮತ್ತಷ್ಟು ಹೆಚ್ಚಿಸಿವೆ.

ರಾಜಕೀಯ ವಲಯದಲ್ಲಿಯೂ ಈ ಘಟನೆ ಚರ್ಚೆಗೆ ಕಾರಣವಾಗಿದ್ದು, ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿಗಳನ್ನು ಮರೆಯಬಾರದು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

Continue Reading

Trending