ಆರೋಗ್ಯ
ಡೆಂಗ್ಯೂಗೆ ಗಾಬರಿಯಾಗಬೇಡಿ: ವೈದ್ಯರ ಈ ಸಲಹೆಗಳನ್ನು ಪಾಲಿಸಿ ನಿಮ್ಮ ರಕ್ತದ ಕಣಗಳನ್ನು ಕಾಪಾಡಿಕೊಳ್ಳಿ – Blood platelets
ಬೆಳಗಾವಿ: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿವೆ. ದೇಹದಲ್ಲಿ ಕೆಂಪು ರಕ್ತ ಕಣಗಳ ಪ್ರಾಮುಖ್ಯತೆ ಎಷ್ಟಿದೆಯೋ, ಅಷ್ಟೇ ಪ್ರಾಮುಖ್ಯತೆ ಬಿಳಿ ರಕ್ತ ಕಣಗಳಿಗೆ ಕೂಡ ಇದೆ. ಪ್ರಮುಖವಾಗಿ ದೇಹದ ಸೋಂಕುಗಳ ವಿರುದ್ಧ ಹೋರಾಡುವ ಶಕ್ತಿಯನ್ನು ಬಿಳಿ ರಕ್ತ ಕಣಗಳು ಹೊಂದಿದ್ದು, ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿಯೂ ಇವುಗಳ ಪಾತ್ರ ಪ್ರಮುಖವಾಗಿದೆ. ಬಿಳಿ ರಕ್ತ ಕಣಗಳನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂದು ತಜ್ಞ ವೈದ್ಯರು ಕೆಲವು ಸಲಹೆ ನೀಡಿದ್ದಾರೆ.
ಹೆದರಿಕೆ ಬೇಡ: ಬೆಳಗಾವಿ ಬಿಮ್ಸ್ ಆಸ್ಪತ್ರೆ ನಿರ್ದೇಶಕ ಡಾ. ಅಶೋಕಕುಮಾರ ಶೆಟ್ಟಿ ಈಟಿವಿ ಭಾರತ ಜೊತೆಗೆ ಮಾತನಾಡಿ, ”ಆರೋಗ್ಯವಂತ ವ್ಯಕ್ತಿಯಲ್ಲಿ 1.5 ದಿಂದ 3.5 ಲಕ್ಷದವರೆಗೆ ಪ್ಲೇಟ್ ಲೇಟ್ಸ್ ಇರುತ್ತವೆ. ಯಾವುದೇ ವ್ಯಕ್ತಿ ಡೆಂಗ್ಯೂ ಬಾಧಿತನಾದರೆ ಆತನ ದೇಹದಲ್ಲಿ ಬಿಳಿ ರಕ್ತಕಣಗಳು ಹಂತ ಹಂತವಾಗಿ ಕಡಿಮೆ ಆಗುತ್ತವೆ. ಇಂಥ ಸಂದರ್ಭದಲ್ಲಿ ಯಾರೂ ಗಾಬರಿ ಪಡುವ ಅವಶ್ಯಕತೆ ಇಲ್ಲ. ಹೈಡ್ರೇಶನ್ ಕಡಿಮೆ ಆಗದಂತೆ ನೋಡಿಕೊಳ್ಳಬೇಕಷ್ಟೆ. ಕಿವಿ ಹಣ್ಣು ಮತ್ತು ಪಪ್ಪಾಯಿ ಹಣ್ಣು ಹೆಚ್ಚಿಗೆ ತಿಂದರೆ ರಕ್ತದ ಕಣಗಳು ಏರುತ್ತಾ ಹೋಗುತ್ತವೆ. ಇನ್ನು ಬಿಳಿ ರಕ್ತ ಕಣಗಳು ಕಡಿಮೆಯಾದರೆ ರಕ್ತಸ್ರಾವ ಆಗುತ್ತದೆ. ಬ್ರೆಶ್ ಮಾಡುವಾಗ ಹಲ್ಲಿನ ದವಡೆಯಲ್ಲಿ ರಕ್ತ ಬರುತ್ತದೆ. ಬಹಳ ಕಡಿಮೆಯಾದರೆ ದೇಹದ ಒಳಗೆ ರಕ್ತ ಸ್ರಾವವಾಗುವ ಸಾಧ್ಯತೆ ಇರುತ್ತದೆ. ಹಣ್ಣುಗಳನ್ನು ತಿಂದು ಹೈಡ್ರೇಶನ್ ಕಡಿಮೆ ಆಗದಂತೆ ಸರಿಯಾಗಿ ನೋಡಿಕೊಂಡರೆ ಯಾವುದೇ ಸಮಸ್ಯೆ ಉದ್ಭವಿಸುವುದಿಲ್ಲ” ಎಂದು ವಿವರಿಸಿದರು.
”ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗುವ ರೋಗಿಗಳಿಗೆ ರಕ್ತದ ಕಣಗಳ ಅವಶ್ಯಕತೆ ಇದ್ದರೆ ಹಾಕುತ್ತಿದ್ದೇವೆ. ಬಿಪಿಎಲ್ ಕಾರ್ಡ್ ಹೊಂದಿದ್ದರೆ, ಪೂರ್ಣ ಉಚಿತ ಮತ್ತು ಎಪಿಎಲ್ ಕಾರ್ಡ್ ಇದ್ದವರಿಗೆ ಸರ್ಕಾರದ ನಿಯಮಾನುಸಾರ ಕನಿಷ್ಠ ಶುಲ್ಕ ಪಡೆದು ರಕ್ತದ ಕಣಗಳನ್ನು ಹಾಕಲಾಗುತ್ತಿದೆ. ಶಿಬಿರಗಳಿಂದ ಸಂಗ್ರಹಿಸಿರುವ ರಕ್ತವನ್ನು ನಮ್ಮ ರಕ್ತ ಭಂಡಾರದಲ್ಲಿ ಶೇಖರಿಸಿಡುತ್ತೇವೆ. ಇದರಲ್ಲಿ ರಕ್ತದ ಕಣಗಳನ್ನು ಬೇರ್ಪಡಿಸಿಟ್ಟಿರುತ್ತೇವೆ. ಅವಶ್ಯಕತೆ ಇರುವ ರೋಗಿಗಳಿಗೆ ಅವುಗಳನ್ನು ಉಪಯೋಗಿಸುತ್ತೇವೆ. ಸದ್ಯಕ್ಕೆ ನಮ್ಮಲ್ಲಿ ರಕ್ತದ ಕಣಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯಯಿವೆ. ಹಾಗಾಗಿ, ಡೆಂಗ್ಯೂ ಹೆಚ್ಚಾದರೂ ರೋಗಿಗಳಿಗೆ ಚಿಕಿತ್ಸೆ ನೀಡಲು ಬೆಡ್, ಔಷಧಿ ಸೇರಿ ಎಲ್ಲ ರೀತಿ ವ್ಯವಸ್ಥೆ ಮಾಡಿಕೊಂಡಿದ್ದೇವೆ” ಎಂದು ಡಾ.ಅಶೋಕಕುಮಾರ ಶೆಟ್ಟಿ ಸಾರ್ವಜನಿಕರಿಗೆ ಧೈರ್ಯ ತುಂಬಿದರು.
ಈ ಆಹಾರ ಸೇವಿಸಿ: ಬಿಮ್ಸ್ ಆಸ್ಪತ್ರೆ ಜಿಲ್ಲಾ ಸರ್ಜನ್ ಡಾ.ವಿಠ್ಠಲ ವೆಂಕಪ್ಪ ಶಿಂಧೆ ಮಾತನಾಡಿ, ”ಜ್ವರ ಬಂದಾಗ ಯಾರೂ ಹೆದರಬಾರದು. ಸಮೀಪದ ಸರ್ಕಾರಿ ಆಸ್ಪತ್ರೆಗೆ ಬಂದು ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು. ಹೆಚ್ಚೆಚ್ಚು ನೀರು ಕುಡಿಯಬೇಕು. ಕಿವಿ, ಪಪ್ಪಾಯಿ ಹಣ್ಣುಗಳನ್ನು ತಿನ್ನಬೇಕು. ಓಆರ್ಎಸ್ ಸೇವಿಸಬೇಕು. ಇಲ್ಲದಿದ್ದರೆ, ನೀರಿನಲ್ಲಿ ಉಪ್ಪು, ಲಿಂಬೆ ಹಣ್ಣಿನ ರಸ ಮಿಶ್ರಣ ಮಾಡಿ ಕುಡಿದರೆ ರಕ್ತದ ಕಣಗಳ ಸಂಖ್ಯೆ ಹೆಚ್ಚಾಗುತ್ತದೆ” ಎಂದು ಸಲಹೆ ನೀಡಿದರು.
ಡಾ.ಸಿದ್ದಾರ್ಥ ನಿನ್ನೇಕರ್ ಸಲಹೆ: ಆಹಾರ, ಪೌಷ್ಟಿಕ, ಪ್ರಾಕೃತಿಕ ಚಿಕಿತ್ಸೆ ವೈದ್ಯ ಡಾ. ಸಿದ್ದಾರ್ಥ ನಿನ್ನೇಕರ್ ಪ್ರತಿಕ್ರಿಯಿಸಿ, ”ರಕ್ತದ ಕಣಗಳ ವೃದ್ಧಿಗೆ ಪೌಷ್ಠಿಕಾಂಶಯುಕ್ತ ಆಹಾರ ಸೇವಿಸಬೇಕು. ಉದಾಹರಣೆಗೆ ಪ್ರೊಟಿನ್ ಆಹಾರಗಳಾದ ಹಾಲು, ಮೊಸರು, ಮಜ್ಜಿಗೆ, ಮೊಳಕೆ ಕಾಳುಗಳು, ಪನ್ನೀರ, ಮೊಟ್ಟೆ, ಚಿಕನ್, ಫಿಶ್, ಪ್ರಾನ್ಸ್ ತಿನ್ನಬೇಕು. ವಿಟಮಿನ್ ಸಿ ಯುಕ್ತ ಕಿವಿ ಹಣ್ಣು, ಲಿಂಬು, ಸಂತ್ರಾ, ಮೊಸಂಬಿ, ಅನಾನಸ್ ತಿನ್ನಬೇಕು. ವಿಟಮಿನ್ ಎ ಪಪ್ಪಾಯಿ, ಮಾವಿನಹಣ್ಣು, ಗಜ್ಜರಿ(ಬೀಟಾ ಕೆರೊಟಿನ್), ಬಿ ಕಾಂಪ್ಲೇಕ್ಸ್ ಯುಕ್ತ ಹಸಿರು ಸೊಪ್ಪು ತರಕಾರಿ, ಮಟನ್ ಲೀವರ್ ನಂಥ ಆಹಾರಗಳನ್ನು ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿ ಡೆಂಗ್ಯೂ ವೈರಸ್ ನಿಯಂತ್ರಿಸಲು ಸಹಾಯಕಾರಿಯಾಗಿದೆ. ಇದರ ಜೊತೆಗೆ ಪಪ್ಪಾಯಿ ಎಲೆ, ವೀಟ್ ಗ್ರಾಸ್ (ಗೋಧಿಯ ಹಸಿರು ಎಲೆ), ಕುಂಬಳಕಾಯಿ ಬೀಜ, ಅಲೊವೇರಾ ಬಳಸುವುದು ಸೂಕ್ತ” ಎಂದು ಸಲಹೆ ನೀಡಿದರು.
ಆರೋಗ್ಯ
ಮೂತ್ರಪಿಂಡದ ಕಲ್ಲು: ಮೂತ್ರಕೋಶದಲ್ಲಿ ಸಿಲುಕಿದರೆ ಏನಾಗುತ್ತದೆ?
ಬೆಂಗಳೂರು: ಮೂತ್ರಪಿಂಡದ ಕಲ್ಲು (Kidney Stone) ಮೂತ್ರಕೋಶಕ್ಕೆ ತಲುಪಿದ ಬಳಿಕ ಸುಲಭವಾಗಿ ಹೊರಹೋಗುತ್ತದೆ ಎಂಬುದು ಸಾಮಾನ್ಯ ನಂಬಿಕೆ. ಆದರೆ ಕೆಲವೊಮ್ಮೆ ಈ ಕಲ್ಲುಗಳು ಮೂತ್ರಕೋಶದಲ್ಲೇ ಸಿಲುಕಿಕೊಳ್ಳುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ.
ಸಾಮಾನ್ಯವಾಗಿ 4–5 ಮಿಮೀ ಗಾತ್ರದ ಕಲ್ಲುಗಳು ಸಹಜವಾಗಿ ಮೂತ್ರದ ಮೂಲಕ ಹೊರಹೋಗುತ್ತವೆ. ಆದರೆ 7 ಮಿಮೀಗಿಂತ ದೊಡ್ಡದಾದ ಅಥವಾ ಅಸಮ ಆಕಾರ ಹೊಂದಿರುವ ಕಲ್ಲುಗಳು ಮೂತ್ರನಾಳದಲ್ಲಿ ಸಿಲುಕಿಕೊಳ್ಳಬಹುದು. ಇದರಿಂದ ಕೆಳ ಹೊಟ್ಟೆ ನೋವು, ಮೂತ್ರ ವಿಸರ್ಜನೆ ವೇಳೆ ಉರಿ, ಮೂತ್ರದಲ್ಲಿ ರಕ್ತ ಹಾಗೂ ದುರ್ವಾಸನೆ ಕಾಣಿಸಬಹುದು.
ಮೂತ್ರಕೋಶ ಸರಿಯಾಗಿ ಖಾಲಿಯಾಗದಿರುವುದು ಕೂಡ ಪ್ರಮುಖ ಕಾರಣ. ಮೂತ್ರದ ಹರಿವು ಕಡಿಮೆಯಾಗುವ ಸ್ಥಿತಿ ಅಥವಾ ವೃದ್ಧರಾದ ಪುರುಷರಲ್ಲಿ ಕಾಣಿಸುವ ಪ್ರಾಸ್ಟೇಟ್ ವಿಸ್ತರಣೆ (BPH) ಸಮಸ್ಯೆಯಿಂದ ಕಲ್ಲುಗಳು ಸಿಲುಕಿಕೊಳ್ಳಬಹುದು. ಜೊತೆಗೆ ಮಧುಮೇಹ ಅಥವಾ ನರ ಸಮಸ್ಯೆಗಳೂ ಪರಿಣಾಮ ಬೀರುತ್ತವೆ.
ಕಲ್ಲುಗಳು ಹೆಚ್ಚು ಕಾಲ ಸಿಲುಕಿಕೊಂಡಿದ್ದರೆ ಸೋಂಕು (UTI), ಮೂತ್ರ ಧಾರಣ ತೊಂದರೆ ಹಾಗೂ ಮೂತ್ರಕೋಶದ ಉರಿಯೂತದಂತಹ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಜ್ವರ, ತೀವ್ರ ನೋವು, ಮೂತ್ರವಿಸರ್ಜನೆ ಅಸಾಧ್ಯತೆ ಕಂಡುಬಂದರೆ ತಕ್ಷಣ ವೈದ್ಯಕೀಯ ಚಿಕಿತ್ಸೆ ಅಗತ್ಯ.
ತಜ್ಞರ ಪ್ರಕಾರ, ಸಾಕಷ್ಟು ನೀರು ಕುಡಿಯುವುದು, ಮೂತ್ರಕೋಶವನ್ನು ಸಂಪೂರ್ಣ ಖಾಲಿ ಮಾಡುವುದು ಹಾಗೂ ಆರೋಗ್ಯಕರ ಆಹಾರ ಪದ್ಧತಿಯನ್ನು ಅನುಸರಿಸುವುದರಿಂದ ಈ ಸಮಸ್ಯೆಯನ್ನು ತಪ್ಪಿಸಬಹುದು. “ಡಬಲ್ ವಾಯ್ಡ್” ಎಂಬ ವಿಧಾನವು ಮೂತ್ರಕೋಶ ಸಂಪೂರ್ಣ ಖಾಲಿಯಾಗಲು ಸಹಕಾರಿಯಾಗುತ್ತದೆ.
ಒಟ್ಟಿನಲ್ಲಿ, ಮೂತ್ರಪಿಂಡದ ಕಲ್ಲುಗಳ ಸಮಸ್ಯೆಯನ್ನು ನಿರ್ಲಕ್ಷಿಸದೇ ಆರಂಭಿಕ ಲಕ್ಷಣಗಳಲ್ಲೇ ಚಿಕಿತ್ಸೆ ಪಡೆಯುವುದು ಅತ್ಯಂತ ಮುಖ್ಯವಾಗಿದೆ.
Note: This information is provided by Dr. Venkatswamy and the Hosasuddi.in health team. Before publishing, Hosasuddi.in follows medical guidelines and expert advice.
ಆರೋಗ್ಯ
ಮಧುಮೇಹ-ಬೊಜ್ಜಿಗೆ GLP-1 ಔಷಧ: ಪ್ರಯೋಜನದ ಜೊತೆ ಅಪಾಯವೂ!
ನವದೆಹಲಿ: ಟೈಪ್ 2 ಮಧುಮೇಹ ಮತ್ತು ಸ್ಥೂಲಕಾಯತೆಗೆ ಚಿಕಿತ್ಸೆ ನೀಡಲು ಬಳಸಲಾಗುತ್ತಿರುವ GLP-1 ಔಷಧಗಳ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ಎಚ್ಚರಿಕೆ ನೀಡಿದೆ. ಈ ಔಷಧಗಳು ಪರಿಣಾಮಕಾರಿ ಆಗಿದ್ದರೂ, ಅವುಗಳನ್ನು ವೈದ್ಯರ ಸಲಹೆಯಿಲ್ಲದೆ ಬಳಸುವುದು ಅಪಾಯಕಾರಿ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.
ಆರೋಗ್ಯ ಇಲಾಖೆ ಹೇಳುವಂತೆ, GLP-1 ಔಷಧಗಳು ರಕ್ತದಲ್ಲಿನ ಸಕ್ಕರೆ ನಿಯಂತ್ರಣ ಮತ್ತು ತೂಕ ಇಳಿಕೆಗೆ ಸಹಕಾರಿ. ಆದರೆ ವಾಕರಿಕೆ, ವಾಂತಿ ಮುಂತಾದ ಸಾಮಾನ್ಯ ಅಡ್ಡಪರಿಣಾಮಗಳಿಂದ ಹಿಡಿದು ಮೂತ್ರಪಿಂಡ ಹಾನಿ, ಮೇದೋಜ್ಜೀರಕ ಗ್ರಂಥಿಯ ಉರಿಯೂತ, ಕರುಳಿನ ಅಡಚಣೆಗಳಂತಹ ಗಂಭೀರ ಸಮಸ್ಯೆಗಳಿಗೂ ಕಾರಣವಾಗಬಹುದು.
Type 2 Diabetes ಮತ್ತು Obesity ಹೊಂದಿರುವವರು ಈ ಔಷಧಗಳನ್ನು ಕಡ್ಡಾಯವಾಗಿ ನೋಂದಾಯಿತ ವೈದ್ಯರ ಮೇಲ್ವಿಚಾರಣೆಯಲ್ಲೇ ಬಳಸಬೇಕು ಎಂದು ಸೂಚಿಸಲಾಗಿದೆ. ಅನಧಿಕೃತ ಮಾರಾಟ ಮತ್ತು ಮೇಲ್ವಿಚಾರಣೆಯಿಲ್ಲದ ಬಳಕೆಯನ್ನು ತಡೆಯಲು ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿಸಲಾಗಿದೆ.
ಸಚಿವಾಲಯದ ಪ್ರಕಾರ, ಹೆಚ್ಚಿನ ತೂಕ, ವ್ಯಾಯಾಮದ ಕೊರತೆ ಮತ್ತು ಹೆಚ್ಚು ಸಕ್ಕರೆ ಸೇವನೆ ಟೈಪ್ 2 ಮಧುಮೇಹದ ಪ್ರಮುಖ ಕಾರಣಗಳಾಗಿವೆ. ಆರೋಗ್ಯಕರ ಜೀವನಶೈಲಿ, ಸಮತೋಲನ ಆಹಾರ ಮತ್ತು ನಿಯಮಿತ ವ್ಯಾಯಾಮದ ಮೂಲಕ ಈ ರೋಗವನ್ನು ತಡೆಗಟ್ಟಬಹುದು.
ಆರೋಗ್ಯ
ಜಂಕ್ ಫುಡ್ ಬೇಡ! ಹಣ್ಣುಗಳಿಂದ ಆರೋಗ್ಯಕರವಾಗಿ ತೂಕ ಹೆಚ್ಚಿಸಿಕೊಳ್ಳಿ
ಬೆಂಗಳೂರು: ಇಂದಿನ ಜೀವನಶೈಲಿಯಲ್ಲಿ ತೂಕ ಇಳಿಸುವುದು ಎಷ್ಟು ಕಷ್ಟವೋ, ಅತಿಯಾಗಿ ಸಪೂರ ಮೈಕಟ್ಟು ಹೊಂದಿರುವವರಿಗೆ ಆರೋಗ್ಯಕರವಾಗಿ ತೂಕ ಹೆಚ್ಚಿಸಿಕೊಳ್ಳುವುದು ಕೂಡ ಅಷ್ಟೇ ಸವಾಲಾಗಿದೆ. ತೂಕ ಹೆಚ್ಚಿಸುವುದು ಎಂದರೆ ಕೇವಲ ಕೊಬ್ಬು ಹೆಚ್ಚಿಸುವುದಲ್ಲ; ಬದಲಾಗಿ ದೇಹದಲ್ಲಿ ಸದೃಢ ಸ್ನಾಯುಗಳ (ಮಸಲ್ಸ್) ವೃದ್ಧಿ ಮುಖ್ಯ.
ಜಂಕ್ ಫುಡ್‌ಗಳಿಗೆ ಅವಲಂಬನೆ ಕಡಿಮೆ ಮಾಡಿ, ನೈಸರ್ಗಿಕ ಹಣ್ಣುಗಳನ್ನು ದಿನನಿತ್ಯದ ಆಹಾರದಲ್ಲಿ ಸೇರಿಸುವುದು ಉತ್ತಮ ವಿಧಾನವಾಗಿದೆ. ಕೆಲವು ಹಣ್ಣುಗಳು ದೇಹಕ್ಕೆ ಅಗತ್ಯ ಕ್ಯಾಲರಿ, ಪೋಷಕಾಂಶಗಳನ್ನು ನೀಡುವುದರ ಮೂಲಕ ತೂಕ ಹೆಚ್ಚಿಸಲು ಸಹಾಯ ಮಾಡುತ್ತವೆ.
ಬಾಳೆಹಣ್ಣು (Banana): ಕಾರ್ಬೋಹೈಡ್ರೇಟ್ ಮತ್ತು ಕ್ಯಾಲರಿಗಳಿಂದ ಸಮೃದ್ಧವಾಗಿರುವ ಬಾಳೆಹಣ್ಣು ತೂಕ ಹೆಚ್ಚಿಸಲು ಪರಿಣಾಮಕಾರಿ. ದಿನಕ್ಕೆ 2–3 ಬಾಳೆಹಣ್ಣು ತಿನ್ನುವುದು ಅಥವಾ ಹಾಲಿನೊಂದಿಗೆ ಬನಾನಾ ಶೇಕ್ ಸೇವಿಸುವುದು ವೇಗವಾಗಿ ಫಲ ನೀಡುತ್ತದೆ.
ಅವಕಾಡೋ (Avocado): ಆರೋಗ್ಯಕರ ಕೊಬ್ಬಿನ ಮೂಲವಾಗಿರುವ ಈ ಹಣ್ಣು ದೇಹಕ್ಕೆ ಅಗತ್ಯ ಪೋಷಕಾಂಶಗಳನ್ನು ಒದಗಿಸಿ, ತೂಕವನ್ನು ಸಮತೋಲನದಿಂದ ಹೆಚ್ಚಿಸುತ್ತದೆ.
ಮಾವಿನ ಹಣ್ಣು (Mango): ನೈಸರ್ಗಿಕ ಸಕ್ಕರೆ ಮತ್ತು ಹೆಚ್ಚಿನ ಕ್ಯಾಲರಿಗಳಿಂದ ಕೂಡಿದ ಮಾವಿನ ಹಣ್ಣು ತೂಕ ಹೆಚ್ಚಿಸುವುದರ ಜೊತೆಗೆ ರೋಗನಿರೋಧಕ ಶಕ್ತಿಯನ್ನೂ ವೃದ್ಧಿಸುತ್ತದೆ.
ಒಣಹಣ್ಣುಗಳು (Dry Fruits): ಅಂಜೂರ, ಖರ್ಜೂರ, ಒಣ ದ್ರಾಕ್ಷಿ ಮುಂತಾದವು ತೂಕ ಹೆಚ್ಚಿಸಲು ಅತ್ಯುತ್ತಮ. ರಾತ್ರಿ ನೆನೆಸಿಟ್ಟು ಬೆಳಗ್ಗೆ ಸೇವಿಸಿದರೆ ಹೆಚ್ಚು ಲಾಭಕರ.
ಇದಲ್ಲದೆ ಸಪೋಟ, ಹಲಸಿನ ಹಣ್ಣುಗಳೂ ಸಹ ಸಹಾಯಕ. ಆದರೆ ಕೇವಲ ಆಹಾರ ಸೇವನೆ ಸಾಕಾಗುವುದಿಲ್ಲ; ಲಘು ವ್ಯಾಯಾಮ ಮತ್ತು ಯೋಗಾಭ್ಯಾಸದಿಂದ ಆಹಾರ ಸ್ನಾಯುವಾಗಿ ಪರಿವರ್ತನೆಗೊಳ್ಳಲು ಸಹಾಯವಾಗುತ್ತದೆ.
ನಿಯಮಿತ ಆಹಾರ ಮತ್ತು ತಾಳ್ಮೆಯೊಂದಿಗೆ ಈ ಕ್ರಮ ಪಾಲಿಸಿದರೆ ಆರೋಗ್ಯಕರ ತೂಕ ಹೆಚ್ಚಿಸಿಕೊಳ್ಳುವುದು ಸಾಧ್ಯ. ಈ ಮಾಹಿತಿಯನ್ನು ಆರೋಗ್ಯ ತಜ್ಞರು ಹಂಚಿಕೊಂಡಿದ್ದು, ಅದರ ಆಧಾರದ ಮೇಲೆ ಹೊಸ ಸುದ್ದಿ (Hosasuddi) ತಂಡವು ಈ ಲೇಖನವನ್ನು ಪ್ರಕಟಿಸಿದೆ.
-
ದೇಶ11 hours ago“ಚಾಮರಾಜಪೇಟೆಗೆ ಬಂದ್ರೆ ಸುಮ್ಮನೆ ಇರ್ತಿನಾ?”: ಜಮೀರ್ ಟಾಂಗ್, ದಾವಣಗೆರೆ ರಾಜಕೀಯ ಕುತೂಹಲ
-
ದೇಶ11 hours agoಕಾಗದ-ಇಂಕ್ ಬೆಲೆ ಏರಿಕೆ: ಪ್ರಿಂಟಿಂಗ್ ಪ್ರೆಸ್ಗಳಿಗೆ ಶಾಕ್
-
ದೇಶ10 hours agoಪೊಲೀಸ್ ವಾಹನವೇ ಪ್ರವೇಶಿಸದ ಗ್ರಾಮ: ಶಾಂತಿಯುತ ಬದುಕಿನ ಅದ್ಭುತ ಕಥೆ
-
ಕ್ರೀಡೆ8 hours agoಚಿನ್ನಸ್ವಾಮಿಯಲ್ಲಿ ರನ್ ಮಳೆ: ಆರ್ಸಿಬಿ 250 ರನ್ ಸಿಡಿತ!
-
ದೇಶ11 hours agoIndian Railways: ರೈಲಲ್ಲೇ ಮದುವೆ ಸಂಭ್ರಮ: Indian Railwaysನಲ್ಲಿ ಹೊಸ ಟ್ರೆಂಡ್!
-
ದೇಶ11 hours ago‘I Love My Daughter’ ಟೀ ಶರ್ಟ್ನಲ್ಲಿ ಸಂಭ್ರಮ: ವಿಚ್ಛೇದನಕ್ಕೆ ಹೊಸ ಅರ್ಥ ನೀಡಿದ ಕುಟುಂಬ
-
ದೇಶ11 hours agoಎನ್ಎಂಎಸಿಸಿ ವೇದಿಕೆಯಲ್ಲಿ ನೀತಾ ಅಂಬಾನಿ ಸೀರೆ ಸದ್ದು: ಐವರಿ-ಗೋಲ್ಡ್ ಲುಕ್ ವೈರಲ್
-
ದೇಶ11 hours agoಟ್ರಂಪ್ ದೇಶದಲ್ಲಿ ಭಾರತೀಯರ ಸದ್ದು: ಮೇಯರ್ ರೇಸ್ನಲ್ಲಿ ತಮಿಳುನಾಡಿನ ಕುವರಿ
