Connect with us

ದೇಶ

ಅವಿವಾಹಿತರಿಗೆ ಮದುವೆ ಭಾಗ್ಯ: ಉತ್ತರಕನ್ನಡದಲ್ಲಿ ‘ಜೀವನ ಸಂಗಮ’ ಪೋರ್ಟಲ್ ಆರಂಭ – Jeevana Sangama Portal

ಕಾರವಾರ: ಇತ್ತೀಚೆಗೆ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಯುವ ರೈತರೊಬ್ಬರು ತಮಗೆ ಮದುವೆಯಾಗಲು ಕನ್ಯೆ ಹುಡುಕಿಕೊಡುವಂತೆ ಅರ್ಜಿ ಸಲ್ಲಿಸಿರುವ ವಿಷಯ ವ್ಯಾಪಕವಾಗಿ ಸುದ್ದಿಯಾಗಿತ್ತು. ರೈತರು ವಿವಾಹವಾಗಲು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಮಾಜದ ಕಣ್ತೆರೆಸಿತ್ತು. ಇದಕ್ಕೆ ಪರಿಹಾರವೆಂಬಂತೆ ರಾಜ್ಯದಲ್ಲೇ ಪ್ರಥಮ ಬಾರಿಗೆ ಜಿಲ್ಲಾಡಳಿತದ ಮೂಲಕ ರೈತ ಯುವಕರು ಮಾತ್ರವಲ್ಲದೇ, ವಿಕಲಚೇತನರು, ಹೆಚ್​ಐವಿ ಪೀಡಿತರಿಗೆ ವಿವಾಹವಾಗಲು ಸೂಕ್ತ ವೇದಿಕೆ ಒದಗಿಸುವ ವಿನೂತನ ಪ್ರಯತ್ನಕ್ಕೆ ಉತ್ತರ ಕನ್ನಡ ಜಿಲ್ಲಾಡಳಿತ ಮುಂದಾಗಿದೆ.

ಉತ್ತರಕನ್ನಡ ಜಿಲ್ಲಾಡಳಿತದ ವೆಬ್​​ಸೈಟ್ https://uttarakannada.nic.in/ನಲ್ಲಿ ‘ಜೀವನ ಸಂಗಮ’ ಎಂಬ ಪೋರ್ಟಲ್ ಅನ್ನು ಆರಂಭಿಸಲಾಗಿದೆ. ಜಿಲ್ಲೆಯಲ್ಲಿನ ಯುವ ರೈತರು, ವಿಕಲಚೇತನರು ಹಾಗೂ ವಿಧವೆಯರಿಗೆ ಸೂಕ್ತ ಸಂಗಾತಿಯ ಆಯ್ಕೆಯನ್ನು ಪರಿಚಯಿಸಲು ಹಾಗೂ ಹೆಚ್​ಐವಿ ಪೀಡಿತ ವ್ಯಕ್ತಿಗಳಿಗೆ ಅದೇ ಸಮುದಾಯದ ವ್ಯಕ್ತಿಯ ನಡುವೆ ವೈವಾಹಿಕ ಸಂಬಂಧಗಳನ್ನು ಬೆಸೆದು, ಅವರು ವಿವಾಹವಾಗಲು ವೇದಿಕೆ ಸಿಗಲಿದೆ. ಈ ಮೂಲಕ ಅವರ ಬದುಕಿನಲ್ಲಿ ಸುಗಮ, ಅರ್ಥಪೂರ್ಣ ಸಂಬಂಧಗಳು ಏರ್ಪಡುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುತ್ತಿದೆ.

ನೋಂದಣಿಗೆ ಶುಲ್ಕವಿಲ್ಲ: ಜೀವನ ಸಂಗಮ ಪೋರ್ಟಲ್​ಗೆ ಅರ್ಜಿ ಸಲ್ಲಿಸುವ ಎಲ್ಲ ಅರ್ಹ ಬಳಕೆದಾರರಿಗೆ ಅವರ ವಿವಾಹ ಸಂಬಂಧಗಳಲ್ಲಿ ಸುರಕ್ಷಿತ ಮತ್ತು ಗೌರವಾನ್ವಿತ ವಾತಾವರಣವನ್ನು ಖಾತ್ರಿಪಡಿಸುವ ಜೊತೆಗೆ, ವ್ಯಕ್ತಿಯ ಹಿನ್ನೆಲೆಯನ್ನು ಲೆಕ್ಕಿಸದೆ, ಸಂಬಂಧಗಳನ್ನು ಬಯಸುವ ವ್ಯಕ್ತಿಗಳಿಗೆ ಸೇತುವೆಯಾಗಿ ಕಾರ್ಯನಿರ್ವಹಿಸಲಿದೆ. ಈ ಪೋರ್ಟಲ್ ಸೇವೆ ಪಡೆಯಲು ಬಳಕೆದಾರರು ಯಾವುದೇ ಶುಲ್ಕಗಳಿಲ್ಲದೇ ನೋಂದಾಯಿಸಿಕೊಳ್ಳಬಹುದು. ಆರ್ಥಿಕವಾಗಿ ಹಿಂದುಳಿದ ವರ್ಗದವರೂ ಒಳಗೊಂಡಂತೆ, ಶಿಕ್ಷಣದ ಕೊರತೆ ಮತ್ತು ಯಾವುದೇ ಉದ್ಯೋಗವಿಲ್ಲದ ಕಾರಣ ಸೂಕ್ತ ಜೀವನ ಸಂಗಾತಿ ಸಿಗದ ರೈತ ಯುವಕರಿಗೆ ಉತ್ತಮ ವೇದಿಕೆ ಒದಗಿಸಲಿದೆ.

ಇದು ಎಲ್ಲ ಬಳಕೆದಾರರಿಗೆ ಅತ್ಯಂತ ಸುರಕ್ಷಿತ ಪೋರ್ಟಲ್ ಆಗಿದ್ದು, ಹೊಂದಾಣಿಕೆಯ ಪ್ರಕ್ರಿಯೆಯಲ್ಲಿ ಎಲ್ಲರ ಗೌಪ್ಯತೆ ಮತ್ತು ಘನತೆಗೆ ಆದ್ಯತೆ ನೀಡಲಾಗಿದೆ. ವಿವಾಹ ಹೊಂದಾಣಿಕೆಯ ಉದ್ದೇಶಕ್ಕಾಗಿ ಮಾತ್ರ ಮಾಹಿತಿಯನ್ನು ಬಳಸಲಾಗುತ್ತದೆ. ವಿವಾಹವಾಗಲು ಸಲ್ಲಿಸುವ ಅರ್ಜಿ ಮತ್ತು ಪ್ರೊಫೈಲ್​ಗಳನ್ನು ವ್ಯಕ್ತಿಯು ವಾಸವಾಗಿರುವ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಸೇರಿದಂತೆ ಉತ್ತರ ಕನ್ನಡ ಜಿಲ್ಲಾಡಳಿತದ ವಿವಿಧ ಅಧಿಕಾರಿಗಳು ಪರಿಶೀಲಿಸಲಿದ್ದಾರೆ. ಅರ್ಜಿದಾರರ ಪ್ರೊಫೈಲ್​ಗಳಲ್ಲಿನ ನೈಜತೆ ಮತ್ತು ವಿಶ್ವಾಸಾರ್ಹತೆಯನ್ನು ಅವರು ಖಚಿತಪಡಿಸುತ್ತಾರೆ.

ವಿವಾಹವಾಗಲು ಅರ್ಜಿ ಸಲ್ಲಿಸುವ ವ್ಯಕ್ತಿಯ ಹಿನ್ನೆಲೆ, ವಾಸಸ್ಥಳ, ಉದ್ಯೋಗ, ಕೌಟುಂಬಿಕ ಪರಿಸ್ಥಿತಿ, ಆತನ ಆದಾಯ, ಮಾನಸಿಕ ಮತ್ತು ದೈಹಿಕ ಆರೋಗ್ಯ ಸ್ಥಿತಿಗತಿ ಬಗ್ಗೆ ಜಿಲ್ಲೆಯ ವಿವಿಧ ಅಧಿಕಾರಿಗಳು ಖುದ್ದು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಲಿದ್ದಾರೆ. ಅರ್ಹ ವ್ಯಕ್ತಿಗಳಿಗೆ ಮಾತ್ರ ಹೊಂದಾಣಿಕೆಯ ಮುಂದಿನ ಪ್ರಕ್ರಿಯೆಯಲ್ಲಿ ಮುಂದುವರೆಯಲು ಅವಕಾಶ ನೀಡಲಾಗುತ್ತದೆ.

ಉತ್ತರ ಕನ್ನಡದವರಿಗೆ ಮಾತ್ರ: ಈ ಸೇವೆಯು ಎಲ್ಲ ಧರ್ಮದವರಿಗೂ ಮುಕ್ತವಾಗಿದ್ದು, ಸಾರ್ವಜನಿಕರು ತಮ್ಮ ಧಾರ್ಮಿಕ ಅದ್ಯತೆಗಳನ್ನು ಮ್ಯಾಚ್ ಮೇಕಿಂಗ್‌ಗೆ ನಿರ್ದಿಷ್ಟಪಡಿಸಲು ಅವಕಾಶ ನೀಡುವುದರ ಜೊತೆಗೆ, ತಮ್ಮದೇ ಆದ ಜಾತಿಯೊಳಗೆ ಹೊಂದಾಣಿಕೆಗಳನ್ನು ಆಯ್ಕೆ ಮಾಡಬಹುದು. ಜೊತೆಗೆ, ಅಂತರ್ಜಾತಿ ಆಯ್ಕೆಗಳಿಗೂ ಅವಕಾಶವಿದ್ದು, ವೈಯಕ್ತಿಕ ಆದ್ಯತೆಗಳ ಆಧಾರದ ಮೇಲೆ ತಮಗೆ ಇಚ್ಚಿಸುವ ಹೊಂದಾಣಿಕೆಯನ್ನು ಆಯ್ಕೆ ಮಾಡಬಹುದು. ಉತ್ತರ ಕನ್ನಡ ಜಿಲ್ಲೆಯ ಸ್ಥಳೀಯ ಅರ್ಹ ಯುವಕ – ಯುವತಿಯರಿಗೆ ಮಾತ್ರ ಈ ವಿವಾಹ ಹೊಂದಾಣಿಕೆಗೆ ಅವಕಾಶವಿದೆ.

ಅಂತರ್ಜಾತಿ ಮತ್ತು ವಿಕಲಚೇತನರನ್ನು ವಿವಾಹವಾಗುವವರಿಗೆ ಸರ್ಕಾರದಿಂದ ದೊರೆಯುವ ಪ್ರೋತ್ಸಾಹ ಧನ ಸೇರಿದಂತೆ ಎಲ್ಲ ರೀತಿಯ ನೆರವು ಒದಗಿಸಲಾಗುವುದು. 10ಕ್ಕಿಂತ ಹೆಚ್ಚು ಜೋಡಿಗಳು ಒಪ್ಪಿಗೆ ನೀಡಿದಲ್ಲಿ ವಿವಿಧ ಸಂಘ – ಸಂಸ್ಥೆಗಳ ನೆರವಿನಿಂದ ಸಾಮೂಹಿಕ ವಿವಾಹ ಏರ್ಪಡಿಸುವ ಚಿಂತನೆ ಇದೆ. ಜಿಲ್ಲೆಯ ಅನಾಥಾಶ್ರಮಗಳಲ್ಲಿನ ಯುವತಿಯರಿಗೂ ಸಹ ಈ ಪೋರ್ಟಲ್ ಮೂಲಕ ಸೂಕ್ತ ಜೀವನ ಸಂಗಾತಿ ಒದಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶ

ನವರಾತ್ರಿ ಸಮಯದಲ್ಲಿ ವಿಮಾನ ನಿಲ್ದಾಣಗಳಲ್ಲಿ ಭಯೋತ್ಪಾದಕ ದಾಳಿ ಎಚ್ಚರಿಕೆ – ಭದ್ರತೆ ಬಿಗಿ ಕ್ರಮ

ಭಾರತದ ಪ್ರಮುಖ ವಿಮಾನ ನಿಲ್ದಾಣಗಳ ಮೇಲೆ ನವರಾತ್ರಿಯ ವೇಳೆ ಭಯೋತ್ಪಾದಕ ದಾಳಿಯ ಅಪಾಯವಿರುವ ಬಗ್ಗೆ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದ್ದು, ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮ ಜಾರಿಯಲ್ಲಿದೆ.

ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS) ಆಗಸ್ಟ್ 4ರಂದು ಎಚ್ಚರಿಕೆ ಪ್ರಕಟಿಸಿ, ಸೆಪ್ಟೆಂಬರ್ 22ರಿಂದ ಅಕ್ಟೋಬರ್ 2ರವರೆಗೆ ಭಯೋತ್ಪಾದನೆ ಅಥವಾ ಸಮಾಜ ವಿರೋಧಿ ಶಕ್ತಿಗಳಿಂದ ದಾಳಿ ಸಂಭವಿಸಬಹುದೆಂದು ಸೂಚಿಸಿದೆ.

🕵️ ಗುಪ್ತಚರ ಮೂಲದ ಮಹತ್ವದ ಎಚ್ಚರಿಕೆ:

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳು ದಾಳಿಗೆ ಸಿದ್ಧತೆ ನಡೆಸುತ್ತಿವೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ವಿಮಾನ ನಿಲ್ದಾಣಗಳು, ಏರ್‌ಸ್ಟ್ರಿಪ್‌ಗಳು, ಹೆಲಿಪ್ಯಾಡ್‌ಗಳು ಮತ್ತು ತರಬೇತಿ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳಾಗಿ ಈ ಕೆಳಗಿನ ಕ್ರಮಗಳು ಜಾರಿಗೆ ಬಂದಿವೆ:

  • ಸಿಬ್ಬಂದಿ ಮತ್ತು ಸಂದರ್ಶಕರ ಗುರುತಿನ ಪರಿಶೀಲನೆ
  • ಸಿಸಿಟಿವಿ ಕಣ್ಗಾವಲು ಬಿಗಿತ
  • ಸರಕು, ಪಾರ್ಸೆಲ್ ಮತ್ತು ಮೇಲ್‌ಗಳ ತಪಾಸಣೆ
  • ಸ್ಥಳೀಯ ಪೊಲೀಸ್ ಮತ್ತು ಭದ್ರತಾ ಸಂಸ್ಥೆಗಳೊಂದಿಗೆ ಸಹಕಾರ

🇮🇳 ರಾಷ್ಟ್ರೀಯ ಭದ್ರತೆಗೆ ಒತ್ತು:

ದೆಹಲಿ, ಮುಂಬೈ, ಬೆಂಗಳೂರು ಮತ್ತು ಚೆನ್ನೈ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳು ಈ ಕ್ರಮಗಳನ್ನು ಜಾರಿಗೊಳಿಸುತ್ತಿದ್ದು, ಪ್ರಯಾಣಿಕರು ತಮ್ಮ ಗುರುತಿನ ದಾಖಲೆಗಳನ್ನು ಸಿದ್ಧವಾಗಿಡಬೇಕು. ತಪಾಸಣೆ ವಿಳಂಬದ ಸಾಧ್ಯತೆಯಿರುವುದರಿಂದ ಸಹಕಾರ ನೀಡುವಂತೆ BCAS ಮನವಿ ಮಾಡಿದೆ.

Continue Reading

ದೇಶ

ಅಮೆರಿಕ-ರಷ್ಯಾ ವ್ಯವಹಾರ: ಭಾರತದ ಟೀಕೆಗೆ ಟ್ರಂಪ್ ನುಣುಚು ಪ್ರತಿಕ್ರಿಯೆ

ವಾಷಿಂಗ್ಟನ್: ರಷ್ಯಾದಿಂದ ಈಗಲೂ ವ್ಯವಹಾರ ನಡೆಸುತ್ತಿರುವ ಅಮೆರಿಕದ ಕುರಿತಾಗಿ ಭಾರತ ಮಾಡಿರುವ ಗಂಭೀರ ಆರೋಪಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನುಣುಚು ಪ್ರತಿಕ್ರಿಯೆ ನೀಡಿದ್ದಾರೆ.

ಭಾರತ ಆರೋಪಿಸಿದಂತೆ, ಅಮೆರಿಕ 2024ರಲ್ಲಿ 1.1 ಶತಕೋಟಿ ಡಾಲರ್‌ ಮೌಲ್ಯದ ರಸಗೊಬ್ಬರ, 878 ಮಿಲಿಯನ್ ಡಾಲರ್‌ ಮೌಲ್ಯದ ಪಲ್ಲಾಡಿಯಮ್‌ ಸೇರಿದಂತೆ ಹಲವು ಅಮೂಲ್ಯ ಲೋಹಗಳನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಯುರೇನಿಯಂ ಹೆಕ್ಸಾಫ್ಲೋರೈಡ್‌ನಂತಹ ಪರಮಾಣು ಉತ್ಪನ್ನಗಳ ಆಮದು ಕೂಡ ಮುಂದುವರಿದಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಟ್ರಂಪ್, “ನನಗೆ ಈ ವ್ಯಾಪಾರದ ವಿವರಗಳು ತಿಳಿದಿಲ್ಲ, ನಾನು ಪರಿಶೀಲನೆ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಭಾರತದ ಖಡಕ್ ಪ್ರತಿಕ್ರಿಯೆ:
ಭಾರತ, ತನ್ನ ರಷ್ಯಾ ತೈಲ ಆಮದು ಬಗ್ಗೆ ಅಮೆರಿಕದ ಟೀಕೆಗೆ ಅಂಕಿ-ಅಂಶಗಳೊಂದಿಗೆ ತಿರುಗೇಟು ನೀಡಿದೆ. ಯುರೋಪ್ ದೇಶಗಳೇ ರಷ್ಯಾದಿಂದ ಭಾರಿ ಪ್ರಮಾಣದಲ್ಲಿ ಎಲ್‌ಎನ್‌ಜಿ, ರಸಗೊಬ್ಬರ, ಲೋಹಗಳನ್ನು ಆಮದು ಮಾಡಿಕೊಳ್ಳುತ್ತಿವೆ. 2024ರಲ್ಲಿ ಯುರೋಪಿಯನ್ ಒಕ್ಕೂಟವು 67.5 ಬಿಲಿಯನ್ ಯುರೋಗಳಷ್ಟು ಸರಕು ವ್ಯಾಪಾರ ಹಾಗೂ 17.2 ಬಿಲಿಯನ್ ಯುರೋಗಳಷ್ಟು ಸೇವಾ ವ್ಯಾಪಾರವನ್ನು ರಷ್ಯಾ ಜೊತೆ ನಡೆಸಿದೆ.

ಟ್ರಂಪ್ ಅವರ ಆರೋಪ:
ಟ್ರಂಪ್ ಹೇಳುವಂತೆ, ಭಾರತ ರಷ್ಯಾದ ತೈಲವನ್ನು ಖರೀದಿ ಮಾಡುತ್ತಿದ್ದು, ಅದನ್ನು ಮುಕ್ತ ಮಾರುಕಟ್ಟೆಯಲ್ಲಿ ಲಾಭಕ್ಕಾಗಿ ಮಾರಾಟ ಮಾಡುತ್ತಿದೆ. ಅವರು ಈ ಕಾರಣಕ್ಕಾಗಿ ಭಾರತದಿಂದ ಸಂಗ್ರಹಿಸಬೇಕಾದ ಸುಂಕವನ್ನು ಹೆಚ್ಚಿಸುವುದಾಗಿ ಹೇಳಿದ್ದಾರೆ.

ಭಾರತದ ನಿಲುವು:
ಭಾರತ, ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ ಕಚ್ಚಾ ತೈಲವನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಇಂಧನದ ದರಗಳನ್ನು ಜನತೆಗೆ ಕೈಗೆಟುಕುವಂತೆ ಇರಿಸಲು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

Continue Reading

ಕ್ರೀಡೆ

ರಿಷಭ್ ಪಂತ್ ಮಾನವೀಯತೆ: ಬಡ ವಿದ್ಯಾರ್ಥಿನಿಗೆ BCA ಪ್ರವೇಶಕ್ಕೆ ₹40,000 ನೆರವು!

ಬಾಗಲಕೋಟೆ: ಟೀಂ ಇಂಡಿಯಾದ ವಿಕೆಟ್ ಕೀಪರ್ ಹಾಗೂ ತೀಕ್ಷ್ಣ ಬ್ಯಾಟ್ಸ್‌ಮನ್ ರಿಷಭ್ ಪಂತ್ ಅವರು ಕ್ರೀಡಾಕ್ಷೇತ್ರದಷ್ಟೇ ದಾನಶೀಲತೆಯಲ್ಲೂ ಮಾದರಿಯಾಗಿದ್ದಾರೆ. ಇತ್ತೀಚೆಗೆ ಅವರು ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿನಿಯೊಬ್ಬಳಿಗೆ ಆರ್ಥಿಕ ನೆರವು ನೀಡಿ ಜನಮನ ಗೆದ್ದಿದ್ದಾರೆ.

ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ ದ್ವಿತೀಯ ಪಿಯುಸಿಯಲ್ಲಿ 85% ಅಂಕ ಗಳಿಸಿದ್ದರೂ, ಮನೆ ಪರಿಸ್ಥಿತಿಯಿಂದ BCA ಕೋರ್ಸ್‌ಗೆ ಸೇರುವ ಕನಸು ತೊಡೆತಗೊಂಡಿತ್ತು. ತಂದೆ ಚಿಕ್ಕ ಟೀ ಅಂಗಡಿ ನಡೆಸುವವರಾಗಿದ್ದು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ.

ಇದನ್ನು ಗುತ್ತಿಗೆದಾರ ಅನಿಲ್ ಹುಣಸಿಕಟ್ಟಿ ಅವರು ಗಮನಿಸಿ, ತಮ್ಮ ಸಂಪರ್ಕಗಳಿಂದ ರಿಷಭ್ ಪಂತ್ ಅವರ ಗಮನಕ್ಕೆ ತಂದರು. ಇದನ್ನು ಕೇಳಿದ ಪಂತ್, ಜುಲೈ 17ರಂದು ₹40,000 ನೇರವಾಗಿ BLDE ಕಾಲೇಜಿನ ಖಾತೆಗೆ ವರ್ಗಾಯಿಸಿ, ಜ್ಯೋತಿಯ ಮೊದಲ ಸೆಮಿಸ್ಟರ್ ಶುಲ್ಕವನ್ನು ಭರಿಸಿದರು.

ಜ್ಯೋತಿ ಎಮೋಶನಲ್ ಆಗಿ, “ರಿಷಭ್ ಪಂತ್ ಸಹಾಯದಿಂದ ನನ್ನ ಕನಸು ಸಾಧ್ಯವಾಯಿತು. ಅವರಿಗೆ ದೇವರು ಆಯುಷ್ಯ ಕೊಡಲಿ,” ಎಂದಿದ್ದಾರೆ.

Continue Reading

Trending