Connect with us

ದೇಶ

ರಾಹುಲ್ ಗಾಂಧಿ ಕೆನ್ನೆಗೆ ಹೊಡೆಯಬೇಕೆಂಬ ಬಿಜೆಪಿ ಶಾಸಕನ ಹೇಳಿಕೆಗೆ ಕಾಂಗ್ರೆಸ್​ ಖಂಡನೆ – Ramanath Rai

Published

on

ಮಂಗಳೂರು: ಸಂಸತ್ತಿನಲ್ಲಿ ಹಿಂದೂ ವಿರೋಧಿ ಭಾಷಣ ಮಾಡಿದ್ದಾರೆ ಎಂದು ಆಪಾದಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ, ರಾಹುಲ್ ಗಾಂಧಿ ಕೆನ್ನೆಗೆ ಹೊಡೆಯಬೇಕು ಎಂದು ನೀಡಿರುವ ಹೇಳಿಕೆಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಶಾಸಕ ಭರತ್ ಶೆಟ್ಟಿ ವಿರುದ್ದ ಸುಮೋಟೋ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದೆ.

ಮಂಗಳೂರಿನ ಕಾವೂರಿನಲ್ಲಿ ಭಾನುವಾರ ನಡೆದ ಪ್ರತಿಭಟನೆಯಲ್ಲಿ ಶಾಸಕ ಡಾ.ವೈ.ಭರತ್ ಶೆಟ್ಟಿ ರಾಹುಲ್ ಗಾಂಧಿ ಹೇಳಿಕೆಯನ್ನು ಟೀಕಿಸುವ ವೇಳೆ, ರಾಹುಲ್ ಗಾಂಧಿಗೆ ಸಂಸತ್ತಿಗೆ ಹೋಗಿ ಕಪಾಳಕ್ಕೆ ಬಾರಿಸಬೇಕು ಎಂದು ಹೇಳಿದ್ದರು.

ಈ ಹೇಳಿಕೆ ಇದೀಗ ಕರಾವಳಿಯಲ್ಲಿ ಚರ್ಚೆಗೆ ಕಾರಣವಾಗಿದೆ. ಶಾಸಕ ಭರತ್ ಶೆಟ್ಟಿ ಅವರ ಹೇಳಿಕೆಯ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ, ಶಾಸಕ ಭರತ್ ಶೆಟ್ಟಿ ವಿರುದ್ಧ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.

”ಭರತ್ ಶೆಟ್ಟಿ ಅವರಿಗೆ ತಾಕತ್ತಿದ್ದರೆ, ನಮ್ಮ ಸಾಮಾನ್ಯ ಕಾರ್ಯಕರ್ತನ ಮೇಲೆ ಕೈ ಹಾಕಿ ನೋಡಲಿ. ಆಮೇಲೆ ನೋಡೋಣ. ಸಂಸತ್ತಿನ ವಿಪಕ್ಷ ನಾಯಕರಾಗಿ ಅಧಿಕೃತವಾಗಿ ಆಯ್ಕೆಯಾದ ರಾಹುಲ್ ದೇಶಕ್ಕೆ ಪ್ರಾಣ ಕೊಟ್ಟ ನೆಹರೂ, ಇಂದಿರಾ ಗಾಂಧಿಯವರ ಕುಡಿ. ರಾಹುಲ್ ಹೇಳಿಕೆಯನ್ನು ಕೆಟ್ಟದಾಗಿ ಪ್ರತಿಬಿಂಬಿಸುವ ಕೆಲಸ ಬಿಜೆಪಿ ಮಾಡುತ್ತಿದೆ. ಭರತ್ ಶಾಸಕನಾಗಲು ಯೋಗ್ಯತೆ ಇಲ್ಲದ ಮನುಷ್ಯ. ಅಮರನಾಥ್ ಶೆಟ್ಟಿಯವರ ಕೃಪಾಕಟಾಕ್ಷದಿಂದ ರಾಜಕೀಯದಲ್ಲಿ ಮೇಲೆ ಬಂದು ಅವರಿಗೆ ಕೈ ಕೊಟ್ಟಿದ್ದಾನೆ. ರಾಹುಲ್ ಬಗ್ಗೆ ಏಕವಚನದಲ್ಲಿ ಕೆಟ್ಟದಾಗಿ ಮಾತನಾಡುವುದು ಶೋಭೆ ತರುವುದಿಲ್ಲ. ರಾಹುಲ್ ಅವರನ್ನು ಭರತ್ ಶೆಟ್ಟಿ ಹುಚ್ಚ ಎಂದು ಹೇಳಿದ್ದು, ಆ ಹುಚ್ಚ ಯಾರು ಎಂದು ಅವರ ನಾಯಕರ ಕಟೌಟ್​ನಲ್ಲಿ ಅವರ ವೇಷಭೂಷಣ ನೋಡಿದಾಗ ತಿಳಿಯುತ್ತೆ” ಎಂದು ವಾಗ್ದಾಳಿ ನಡೆಸಿದರು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ, ”ಲೋಕಸಭೆಯಲ್ಲಿ ಪ್ರಧಾನಿ ಎದುರೆ ರಾಹುಲ್ ಗಾಂಧಿ ಮಾತನಾಡಿದ್ದಾರೆ. ಮೋದಿಗೆ ರಾಹುಲ್ ಗಾಂಧಿ ಕೆನ್ನೆಗೆ ಹೊಡೆಯಲು ಆಗಿಲ್ಲ. ಇನ್ನು ಭರತ್ ಶೆಟ್ಟಿ ಯಾವ ಲೆಕ್ಕ. ಅವರು ಚಿಲ್ಲರೆ ರಾಜಕಾರಣಿ. ಅವರು ಶಾಸಕರುಗಳ ಮಾನ ಮರ್ಯಾದೆ ಹರಾಜು ಹಾಕಿದ್ದಾರೆ. ಅವರಿಗೆ ಸಮಾಜ ಬಹಿಷ್ಕಾರ ಹಾಕಬೇಕು. ವೈದ್ಯರಾಗಿ ಅವರು ನೀಡಿರುವ ಹೇಳಿಕೆ ಘೋರ ಅಪರಾಧ. ಶಸ್ತ್ರಾಸ್ತ್ರ ತೆಗೆಯಲಾಗುವುದು ಎಂದು ಹೇಳಿಕೆ ನೀಡಿರುವ ಭರತ್ ಶೆಟ್ಟಿ ವಿರುದ್ದ ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಮೋಟೋ ಪ್ರಕರಣ ದಾಖಲಿಸಿ ಬಂಧಿಸಬೇಕು” ಎಂದು ಆಗ್ರಹಿಸಿದರು.

ಕೆಪಿಸಿಸಿ ರಾಜ್ಯ ವಕ್ತಾರ ಎಂ.ಜಿ.ಹೆಗ್ಡೆ ಮಾತನಾಡಿ, ”ರಾಹುಲ್ ಗಾಂಧಿ ಹಿಂದು ಧರ್ಮ ದ್ವೇಷ, ಹಿಂಸೆ ಹೇಳುವುದಿಲ್ಲ. ಅದು ಅಭಯ ಕೊಡುತ್ತದೆ. ಬಿಜೆಪಿಯವರು ಪ್ರಚೋದಿಸುತ್ತೀರಿ ಎಂದು ಹೇಳಿದ್ದರು. ಅದನ್ನು ಭರತ್ ಶೆಟ್ಟಿ ಪ್ರೂವ್ ಮಾಡಿದ್ದಾರೆ. ಶಸ್ತ್ರಾಸ್ತ್ರ ಹಿಡಿಯುವ ಹೇಳಿಕೆ ನೀಡಿದ ನಿಮ್ಮ ಹಿಂದುತ್ವದ ಬಗ್ಗೆ ನಾವು ಕೇಳಬೇಕಾಗುತ್ತದೆ. ರಾಹುಲ್ ಗಾಂಧಿ ಅವರಿಗೆ ಹೊಡೆಯಲು ಹೋಗುವುದಿದ್ದರೆ, ಅದರ ಮೊದಲು ಆಸ್ಪತ್ರೆಯಲ್ಲಿ ಬೆಡ್ ಬುಕ್ ಮಾಡಿ” ಎಂದು ಹೇಳಿದರು.

ದೇಶ

ಬೆಂಗಳೂರಿನಲ್ಲಿ ಎಲ್‌ಪಿಜಿ ಸಂಕಷ್ಟ: ಆಟೊ ಚಾಲಕರ ಬದುಕು ಸಂಕಷ್ಟಕ್ಕೆ

Published

on

By

ಬೆಂಗಳೂರು: ನಗರದಲ್ಲಿ ಉಂಟಾಗಿರುವ ಎಲ್‌ಪಿಜಿ ಕೊರತೆಯಿಂದ ಆಟೊ ಚಾಲಕರ ಸಮಸ್ಯೆಗಳು ದಿನೇ ದಿನೇ ಗಂಭೀರವಾಗುತ್ತಿವೆ. ಗ್ಯಾಸ್‌ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದಾಗಿ ಲಭ್ಯವಿರುವ ಬಂಕ್‌ಗಳ ಬಳಿ ಆಟೊ ಚಾಲಕರು ಗಂಟೆಗಟ್ಟಲೆ ಕಾದು ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವಾರು ಬಂಕ್‌ಗಳು ತಾತ್ಕಾಲಿಕವಾಗಿ ಬಾಗಿಲು ಮುಚ್ಚಿದ್ದು, ಉಳಿದ ಬಂಕ್‌ಗಳಲ್ಲೂ ‘ನೋ ಸ್ಟಾಕ್’ ಫಲಕಗಳು ಸಾಮಾನ್ಯ ದೃಶ್ಯವಾಗಿವೆ.

ರಾಜಾಜಿನಗರ, ಮತ್ತೀಕೆರೆ, ದಾಸರಹಳ್ಳಿ, ಗುಟ್ಟಹಳ್ಳಿ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಸಮಸ್ಯೆ ತೀವ್ರಗೊಂಡಿದೆ. ಬಂಕ್‌ಗಳ ಬಳಿ ಆಟೊಗಳು ಸಾಲುಗಟ್ಟಿ ನಿಲ್ಲುವುದರಿಂದ ಸಂಚಾರ ದಟ್ಟಣೆಗೂ ಕಾರಣವಾಗುತ್ತಿದೆ. ಎಲ್‌ಪಿಜಿ ಕೊರತೆಯಿಂದ ಸಾವಿರಾರು ಆಟೊಗಳು ರಸ್ತೆಗಿಳಿಯಲು ಸಾಧ್ಯವಾಗದೇ, ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಮೇಲೂ ಒತ್ತಡ ಹೆಚ್ಚಾಗಿದೆ.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಗ್ಯಾಸ್‌ ಪೂರೈಕೆಗೆ ತೀವ್ರ ಹೊಡೆತ ಬಿದ್ದಿದ್ದು, ಆಟೊ ಚಾಲಕರ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಗ್ಯಾಸ್‌ ಬೆಲೆ ಏರಿಕೆಯಿಂದಾಗಿ ಚಾಲಕರು ಕಡಿಮೆ ದೂರಕ್ಕೂ ಪ್ರಯಾಣಿಕರಿಂದ ಹೆಚ್ಚು ಬಾಡಿಗೆ ವಸೂಲು ಮಾಡುತ್ತಿದ್ದಾರೆ. ಇದರಿಂದ ಪ್ರಯಾಣಿಕರಿಗೂ ಹೆಚ್ಚುವರಿ ಹೊರೆ ಬೀಳುತ್ತಿದೆ.

ಗ್ಯಾಸ್‌ ಲಭ್ಯವಿರುವ ಮಾಹಿತಿ ಸಿಕ್ಕ ತಕ್ಷಣ ನೂರಾರು ಆಟೊಗಳು ಬಂಕ್‌ಗಳತ್ತ ಧಾವಿಸುತ್ತಿವೆ. ಪರಿಣಾಮ, ಕೆಲವೇ ಗಂಟೆಗಳಲ್ಲಿ ಸ್ಟಾಕ್‌ ಖಾಲಿಯಾಗುತ್ತಿದೆ. ಸಿಎನ್‌ಜಿ ಕೊರತೆಯೂ ಕಾಣಿಸಿಕೊಂಡಿರುವುದರಿಂದ ಸಮಸ್ಯೆ ಇನ್ನಷ್ಟು ಸಂಕೀರ್ಣವಾಗಿದೆ.

ಇದರಿಂದಾಗಿ ವಿದ್ಯುತ್‌ ಚಾಲಿತ ಆಟೊಗಳ ಬಳಕೆ ಹೆಚ್ಚಾಗುತ್ತಿದ್ದು, ಪ್ರಯಾಣಿಕರು ಇವುಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಪರಿಸ್ಥಿತಿ ಮುಂದುವರಿದರೆ ಅನೇಕ ಆಟೊ ಚಾಲಕರು ವೃತ್ತಿ ತೊರೆಯುವ ಸ್ಥಿತಿ ಎದುರಾಗುವ ಸಾಧ್ಯತೆ ಇದೆ.

Continue Reading

ದೇಶ

ಸುಪ್ರೀಂ ಕೋರ್ಟ್ ಆದೇಶ ಬಳಿಕ ಬೀದಿ ನಾಯಿಗಳ ಲೆಕ್ಕಾಚಾರ: ನಗರದಲ್ಲಿ ಆತಂಕ

Published

on

By

ಬೆಂಗಳೂರು ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿರುವ ಬೀದಿ ನಾಯಿಗಳ ಸಮಸ್ಯೆ ಗಂಭೀರವಾಗುತ್ತಿರುವ ಹಿನ್ನೆಲೆ, Bruhat Bengaluru Mahanagara Palike ಸರ್ವೆ ಕಾರ್ಯ ಆರಂಭಿಸಿದೆ. Supreme Court of India ನೀಡಿದ ನಿರ್ದೇಶನದಂತೆ ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಶಾಲೆ, ಕಾಲೇಜು, ಆಸ್ಪತ್ರೆ, ಬಸ್ ನಿಲ್ದಾಣ, ಕ್ರೀಡಾಂಗಣ ಹಾಗೂ ಆಟದ ಮೈದಾನಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಒಟ್ಟು 2,670 ಬೀದಿ ನಾಯಿಗಳು ಪತ್ತೆಯಾಗಿವೆ. ಕೇಂದ್ರ ವಲಯದಲ್ಲಿ 504, ಉತ್ತರ ವಲಯದಲ್ಲಿ 875, ಪಶ್ಚಿಮ ವಲಯದಲ್ಲಿ 591, ದಕ್ಷಿಣ ವಲಯದಲ್ಲಿ 331 ಹಾಗೂ ಪೂರ್ವ ವಲಯದಲ್ಲಿ 369 ನಾಯಿಗಳಿವೆ ಎಂದು ಮಾಹಿತಿ ನೀಡಲಾಗಿದೆ.

ಆದರೆ, ಈ ಅಂಕಿ-ಅಂಶಗಳ ನಿಖರತೆ ಬಗ್ಗೆ ಪ್ರಶ್ನೆಗಳು ಮೂಡಿವೆ. ಕೆಲವು ವಲಯಗಳಲ್ಲಿ ಪೂರ್ಣ ಮಾಹಿತಿ ಲಭ್ಯವಾಗಿಲ್ಲ ಎನ್ನಲಾಗಿದ್ದು, ಕೆಲವು ಸಂಸ್ಥೆಗಳು ತಮ್ಮ ವ್ಯಾಪ್ತಿಯ ಲೆಕ್ಕ ನೀಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಬೀದಿ ನಾಯಿಗಳ ಸ್ಥಳಾಂತರಕ್ಕಾಗಿ ಆನೇಕಲ್ ವ್ಯಾಪ್ತಿಯ ಬಿಂಗೀಪುರದಲ್ಲಿ 5 ಎಕರೆ ಜಾಗ ಗುರುತಿಸಲಾಗಿದ್ದು, ಸುಮಾರು 500 ನಾಯಿಗಳಿಗೆ ಆಶ್ರಯ ನೀಡುವ ಸಾಮರ್ಥ್ಯದ ಶೆಲ್ಟರ್ ನಿರ್ಮಾಣಕ್ಕೆ 2 ಕೋಟಿ ರೂ. ವೆಚ್ಚದ ಯೋಜನೆ ರೂಪಿಸಲಾಗಿದೆ.

ಇದೇ ವೇಳೆ, ಉತ್ತರ ಹಾಗೂ ಪಶ್ಚಿಮ ವಲಯಗಳಲ್ಲಿ ಹೆಚ್ಚುವರಿ ಆಶ್ರಯ ತಾಣ ನಿರ್ಮಾಣದ ಕಾರ್ಯ ಕೂಡ ಪ್ರಗತಿಯಲ್ಲಿದೆ.

ಒಟ್ಟಿನಲ್ಲಿ, ಬೀದಿ ನಾಯಿಗಳ ಸಮಸ್ಯೆ ನಿಯಂತ್ರಣಕ್ಕೆ ಈ ಕ್ರಮ ಕೈಗೊಳ್ಳಲಾಗುತ್ತಿದ್ದರೂ, ಅಂಕಿ-ಅಂಶಗಳ ಸ್ಪಷ್ಟತೆ ಹಾಗೂ ಅನುಷ್ಠಾನದ ಪರಿಣಾಮಕಾರಿತ್ವ ಬಗ್ಗೆ ಇನ್ನೂ ಅನುಮಾನಗಳು ಉಳಿದಿವೆ.

Continue Reading

ದೇಶ

ಇರಾನ್‌ಗೆ ಟ್ರಂಪ್ ಮತ್ತೊಂದು ಗಡುವು: 24 ಗಂಟೆ ವಿಸ್ತರಣೆ ಘೋಷಣೆ

Published

on

By

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ನೀಡಿದ್ದ ಗಡುವನ್ನು ಮತ್ತೊಂದು 24 ಗಂಟೆಗಳಷ್ಟು ವಿಸ್ತರಿಸಿದಂತೆ ಸೂಚನೆ ನೀಡಿದ್ದು, ಮಧ್ಯಪ್ರಾಚ್ಯ ಉದ್ವಿಗ್ನತೆಗೆ ಹೊಸ ತಿರುವು ದೊರಕಿದೆ.

ಹಾರ್ಮುಜ್ ಜಲಸಂಧಿಯನ್ನು ತಕ್ಷಣ ಮುಕ್ತಗೊಳಿಸಿ ಶಾಂತಿ ಒಪ್ಪಂದಕ್ಕೆ ಬರಬೇಕೆಂದು ಗಡವು ನೀಡಿದ್ದ ಟ್ರಂಪ್, ಈಗ ಹೊಸ ಸಮಯವನ್ನು ಘೋಷಿಸಿದ್ದಾರೆ. ತಮ್ಮ Truth Social ಖಾತೆಯಲ್ಲಿ “ಮಂಗಳವಾರ ರಾತ್ರಿ 8:00 (Eastern Time)” ಎಂದು ಪೋಸ್ಟ್ ಮಾಡಿದ್ದು, ಇದು ಜಿಎಂಟಿ ಪ್ರಕಾರ ಬುಧವಾರ ಮಧ್ಯರಾತ್ರಿ ಮತ್ತು ಭಾರತೀಯ ಸಮಯದ ಪ್ರಕಾರ ಬೆಳಗ್ಗೆ 5:30 ಆಗುತ್ತದೆ.

ಈ ಹಿಂದೆ 48 ಗಂಟೆಗಳ ಗಡುವು ನೀಡಿದ್ದ ಟ್ರಂಪ್, “ಒಪ್ಪಂದವಾಗದಿದ್ದರೆ ಭಾರೀ ಪರಿಣಾಮ ಎದುರಿಸಬೇಕಾಗುತ್ತದೆ” ಎಂದು ಎಚ್ಚರಿಸಿದ್ದರು. ಈಗ ಹೆಚ್ಚುವರಿ ಸಮಯ ನೀಡಿರುವುದು, ಮಾತುಕತೆಗೆ ಅವಕಾಶ ನೀಡಿದಂತಾಗಿದೆ.

ಹಾರ್ಮುಜ್ ಜಲಸಂಧಿ ವಿವಾದ ಜಾಗತಿಕ ಮಟ್ಟದಲ್ಲಿ ಆತಂಕ ಸೃಷ್ಟಿಸಿದೆ. ಫೆಬ್ರವರಿ 28ರಿಂದ ಅಮೆರಿಕಾ-ಇಸ್ರೇಲ್ ದಾಳಿ ಆರಂಭವಾದ ನಂತರ, ಇರಾನ್ ಈ ಪ್ರಮುಖ ತೈಲ ಸಾಗಣೆ ಮಾರ್ಗವನ್ನು ಬಂದ್ ಮಾಡಿದೆ.

ಇದರ ಮಧ್ಯೆ, ಫಾಕ್ಸ್ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಟ್ರಂಪ್, “ಒಪ್ಪಂದಕ್ಕೆ ಉತ್ತಮ ಅವಕಾಶ ಇದೆ. ಆದರೆ ಮಾತುಕತೆ ವಿಫಲವಾದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ” ಎಂದು ಹೇಳಿದ್ದಾರೆ.

ಇರಾನ್ ಇದಕ್ಕೆ ಪ್ರತಿಕ್ರಿಯಿಸಿ, ಅಮೆರಿಕದ ಬೆದರಿಕೆಯನ್ನು “ಯುದ್ಧ ಅಪರಾಧ” ಎಂದು ಕರೆದಿದೆ.

ಒಟ್ಟಿನಲ್ಲಿ, ಗಡುವು ವಿಸ್ತರಣೆ ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿಯನ್ನು ತಾತ್ಕಾಲಿಕವಾಗಿ ಕಡಿಮೆ ಮಾಡಿದರೂ, ಪರಿಸ್ಥಿತಿ ಇನ್ನೂ ಸೂಕ್ಷ್ಮವಾಗಿಯೇ ಉಳಿದಿದೆ.

Continue Reading

Trending