Connect with us

ಬೆಂಗಳೂರು

ಕೇವಲ ನಾಮ್‌ಕಾವಸ್ತೆ ಹೋರಾಟ – ರಾಜ್ಯ ಬಿಜೆಪಿ ವಿರುದ್ಧ ಹೈಕಮಾಂಡ್‌ ಗರಂ

ಬೆಂಗಳೂರು: ರಾಜ್ಯದಲ್ಲಿ ಎರಡು ಅತೀ ದೊಡ್ಡ ಭ್ರಷ್ಟಾಚಾರ (Corruption) ಪ್ರಕರಣಗಳ ಸದ್ದು ಮಾಡುತ್ತಿದ್ದರೂ ನಾಮಕಾವಸ್ತೆಗೆ ಕಾಂಗ್ರೆಸ್ (Congress) ವಿರುದ್ಧ ಆಗೊಂದು ಈಗೊಂದು ಹೋರಾಟ ಮಾಡುತ್ತಿರುವುದಕ್ಕೆ ರಾಜ್ಯ ಬಿಜೆಪಿ (Kanrnataka BJP) ವಿರುದ್ಧ ಹೈಕಮಾಂಡ್ ಗರಂ ಆಗಿದೆ.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) 187 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಾಗಿದ್ದರೆ, ಮುಡಾದಲ್ಲಿ (MUDA) ನಿವೇಶನಗಳ ಅಕ್ರಮ ಹಂಚಿಕೆಯಿಂದ 5 ಸಾವಿರ ಕೋಟಿ ರೂ.ನಷ್ಟು ದೊಡ್ಡ ಹಗರಣ ನಡೆದಿದೆ. ಎರಡು ಪ್ರಬಲ ಅಸ್ತ್ರಗಳು ಸಿಕ್ಕಿದ್ದರೂ ಪ್ರತಿಪಕ್ಷ ಬಿಜೆಪಿಯಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಾಜ್ಯ ಸರ್ಕಾರದ ವಿರುದ್ಧ ಮೈಕೊಡವಿ ಎದ್ದು ಹೋರಾಡುವ ಜೋಷ್ ಮಾಯವಾಗಿದ್ದಕ್ಕೆ ಹೈಕಮಾಂಡ್ (High Command)ಸಿಟ್ಟಾಗಿದೆ.

ಮುಡಾ/ವಾಲ್ಮೀಕಿ ಪ್ರಕರಣಗಳಲ್ಲಿ ಸಮರ್ಥ ಹೋರಾಟ ರೂಪಿಸಲು ವಿಫಲವಾಗಿದ್ದೀರಿ. ಮುಡಾ ಪ್ರಕರಣ ಕಾಂಗ್ರೆಸ್ ಒಳಗಡೆಯೇ ಭಾರೀ ಸುಂಟರಗಾಳಿ ಎಬ್ಬಿಸಿದೆ. ಇಷ್ಟೊಂದು ದೊಡ್ಡ ಸಂಚಲನ ಸೃಷ್ಟಿಸಿದ್ದರೂ ರಾಜ್ಯ ನಾಯಕರ ಉದಾಸೀನಕ್ಕೆ ರಾಜ್ಯ ಕೇಸರಿ ಪಡೆಗೆ ವರಿಷ್ಠರು ತಪರಾಕಿ ಹಾಕಿದ್ದಾರೆ.

ಪೇಸಿಎಂ/40% ಕಮೀಷನ್ ಆರೋಪದಲ್ಲಿ ಕಾಂಗ್ರೆಸ್ ಉಗ್ರ ಹೋರಾಟ ನಡೆಸಿತ್ತು. ಯಾವುದೇ ದಾಖಲೆಗಳು ಇಲ್ಲದೇ ಇದ್ದರೂ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಿ ಯಶಸ್ವಿಯಾಗಿತ್ತು. ಅವರ ಹೋರಾಟ ಹೇಗಿತ್ತು? ನಿಮ್ಮ ಹೋರಾಟ ಹೇಗಿದೆ? ಸಿಎಂ ಮತ್ತು ಅವರ ಕುಟುಂಬದ ಮೇಲೆಯೇ ಗಂಭೀರ ಆರೋಪ ಬಂದಿದೆ. ಸಿಎಂ ಕುರ್ಚಿಯನ್ನೇ ಅಲುಗಾಡಿಸುವಂತಹ ಅವಕಾಶ ನಿಮ್ಮ ಮುಂದಿದೆ. ಆದರೆ ನೀವು ಕೇವಲ ನಾಮ್‌ಕಾವಸ್ತೆ ಹೋರಾಟ ಮಾಡುತ್ತಿದ್ದೀರಿ. ಇದೆಲ್ಲ ನಡೆಯುವುದಿಲ್ಲ, ಇಷ್ಟೇ ಸಾಕಾಗುವುದಿಲ್ಲ. ಸಿಎಂ ರಾಜೀನಾಮೆಗೆ ಸನ್ನಿವೇಶ ಸೃಷ್ಟಿ ಆಗುವಂಥ ಹೋರಾಟ ಮಾಡಿ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ.

ಈ ಎರಡೂ ಪ್ರಕರಣಗಳಿಂದ ಜನ ಸಾಮಾನ್ಯರಿಗೆ ಸರ್ಕಾರದ ಮೇಲೆ ಅಪನಂಬಿಕೆ ಶುರುವಾಗಿದೆ. ಈ ಅವಕಾಶ ಬಳಸಿಕೊಂಡು ಜನಾಭಿಪ್ರಾಯ ರೂಪಿಸಿ. ಜನಾಕ್ರೋಶಕ್ಕೆ ಮಾತ್ರವೇ ಯಾವುದೇ ಸರ್ಕಾರ ಭಯ ಪಡಲಿದೆ. ನಿಮ್ಮ ಹೋರಾಟ ಮೂಲಕ ಅಂಥ ಸಂದರ್ಭಕ್ಕೆ ಪ್ರತಿಪಕ್ಷ ಆಗಿ ನೀವೇ ನಾಂದಿ ಹಾಡಿ. ಒಳ ಕಚ್ಚಾಟ ಬಿಟ್ಟು ಒಗ್ಗಟ್ಟಿನಲ್ಲಿ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಿ ಎಂದು ಖಡಕ್ ಕ್ಲಾಸ್ ತೆಗೆದುಕೊಳ್ಳುವ ಮೂಲಕ ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಚಳಿ ಬಿಡಿಸಿದೆ.

ಬೆಂಗಳೂರು

ಇಂದಿನಿಂದ ಮೂರು ದಿನಗಳ ಕಾಲ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಬಳ್ಳಾಪುರ: ಜೂ.19ರಂದು ನಂದಿಗಿರಿಧಾಮದಲ್ಲಿ (Nandi Hills) ರಾಜ್ಯ ಸಚಿವ ಸಂಪುಟ (Cabinet Meeting) ಸಭೆ ನಡೆಯಲಿರುವ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಈ ಕುರಿತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶ ಹೊರಡಿಸಿದ್ದು, ಇಂದು ಸಂಜೆ 5 ಗಂಟೆಯಿಂದ ಜೂ.20ರ ಬೆಳಿಗ್ಗೆ 5 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಜೊತೆಗೆ ನಂದಿಗಿರಿಧಾಮದ ಮೇಲ್ಭಾಗದಲ್ಲಿರುವ ವಸತಿ ಕೊಠಡಿಗಳ ಬುಕಿಂಗ್‌ಗೂ ನಿಷೇಧ ವಿಧಿಸಿದ್ದಾರೆ.

ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ನಡೆಯಲಿದ್ದು, ಸಭೆಗೆ ಬೇಕಾದ ಅಗತ್ಯ ಸಿದ್ಧತೆ ಸಲುವಾಗಿ ಮೂರು ದಿನಗಳ ಮೊದಲೇ ಪ್ರವಾಸಿಗರ ಪ್ರವೇಶ ಹಾಗೂ ವಾಹನಗಳ ಸಂಚಾರಕ್ಕೂ ಬ್ರೇಕ್ ಹಾಕಲಾಗಿದೆ.

ಸಚಿವ ಸಂಪುಟ ಸಭೆಗೆ ಸಿಎಂ, ಡಿಸಿಎಂ ಹಾಗೂ ಕರ್ನಾಟಕ ಸರ್ಕಾರದ ಸಚಿವ ಸಂಪುಟ ದರ್ಜೆಯ ಎಲ್ಲಾ ಮಂತ್ರಿಗಳು, ಶಾಸನ ಸಭಾ ಹಾಗೂ ವಿಧಾನಸಭಾ ಸದಸ್ಯರು, ಇಲಾಖಾ ಮುಖ್ಯಸ್ಥರು ಹಾಗೂ ಪತ್ರಕರ್ತರು ಆಗಮಿಸುತ್ತಿದ್ದಾರೆ. ಆದ್ದರಿಂದ ನಂದಿಗಿರಿಧಾಮಕ್ಕೆ ಹೋಗಲು ಮತ್ತು ಬರಲು ಒಂದೇ ರಸ್ತೆ ಇರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಜೊತೆಗೆ ನಂದಿಬೆಟ್ಟದಲ್ಲಿ ಕಡಿದಾದ ತಿರುವುಗಳಿಂದ ಕೂಡಿದ ರಸ್ತೆಗಳಲ್ಲಿ ವಾಹನ ಮತ್ತು ಪ್ರವಾಸಿಗರನ್ನು ನಿಯಂತ್ರಿಸುವುದು ಅತಿ ಕಷ್ಟಕರವಾಗಿರುತ್ತದೆ. ಅಪಘಾತಗಳಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Continue Reading

ಬೆಂಗಳೂರು

ನಮ್ಮ ಹೊಟ್ಟೆಯ ಮೇಲೆ ಹೊಡೆಯಬೇಡಿ ರಾಹುಲ್ ಗಾಂಧಿಗೆ ಅಸೋಸಿಯೇಷನ್ ಪತ್ರ!

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧಗೊಂಡಿದೆ, ಈ ಹಿನ್ನೆಲೆ ನಮ್ಮ ಬೈಕ್ ಟ್ಯಾಕ್ಸಿ ಅಸೋಸಿಯೇಷನ್ ಅಧ್ಯಕ್ಷ ಮೊಹಮ್ಮದ್ ಸಲೀಂ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದು ನಿಷೇಧ ಮಾಡಿದರುವಂತೆ ಮನವಿ ಮಾಡಿದ್ದಾರೆ,
ಲಕ್ಷಾಂತರ ಮಂದಿ ವಿದ್ಯಾರ್ಥಿಗಳು, ನಿರುದ್ಯೋಗಿಗಳು, ಪೋಷಕರು ಹಾಗೂ ದಿನಗೂಲಿ ಕಾರ್ಮಿಕರು ಬೈಕ್ ಟ್ಯಾಕ್ಸಿ ಸೇವೆಯಿಂದ ದಿನನಿತ್ಯ ಹೊಟ್ಟೆ ಹೊರೆದುಕೊಳ್ಳುತ್ತಿದ್ದಾರೆ, ಇವು ನಮ್ಮ ಬಿಡುವಿನ ವೇಳೆಯ ಕೆಲಸವಾಗಿರದೇ ಮೂಲ ಉದ್ಯೋಗವೇ ಆಗಿದೆ, ಈ ರೀತಿ ಏಕಾಏಕಿ ನಿಷೇಧ ಮಾಡುವುದರಿಂದ ನಮ್ಮ ಕುಟುಂಬಗಳು ಬೀದಿಗೆ ಬೀಳುತ್ತವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ,
ಸುರಕ್ಷತೆ, ವಿಮೆ ನಿಯಮ ಹಾಗೂ ತರಬೇತಿ ನಿಯಮಗಳನ್ನು ಜಾರಿಗೆ ತಂದು ನಮ್ಮನ್ನು ಅಧಿಕೃತ ಉದ್ಯೋಗಿಗಳನ್ನಾಗಿ ಮಾಡುವ ಬದಲು ನಿಷೇಧಗೊಳಿಸುವುದು ಎಷ್ಟು ಸರಿ ಎಂದು ಪತ್ರದಲ್ಲಿ ಪ್ರಶ್ನಿಸಲಾಗಿದ್ದು, ಗಿಗ್ ಕಾರ್ಮಿಕರಾದ ನಮಗೆ ನೀವು ಚುನಾವಣೆಯ ಮುನ್ನ ನೀಡಿದ್ದ ಭರವಸೆಯನ್ನು ಮರೆತಿದ್ದೀರಿ ಎಂದು ಹೇಳಲಾಗಿದೆ,

Continue Reading

ಬೆಂಗಳೂರು

ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕಾರಿಯಪ್ಪ ಹೆಸರು-ಡಿಸಿಎಂ ಡಿಕೆಶಿ

ಬೆಂಗಳೂರು: ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹೆಸರಿಡುವ ಬಗ್ಗೆ ನಾನು ಹಾಗೂ ಮುಖ್ಯಮಂತ್ರಿಗಳು ಚರ್ಚೆ ಮಾಡಿ ತೀರ್ಮಾನಿಸುತ್ತೇವೆ, ಕಾರ್ಯಪ್ಪ ಹೆಸರಿಡುವುದು ನಮ್ಮ ಭಾಗ್ಯ ಎಂದು ಡಿಸಿಎಂ ಡಿಕೆ ಶಿಮಕುಮಾರ್ ಅವರು ಹೇಳಿದರು,
ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ಏಳು ಎಕರೆ ಭೂಮಿ ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಕೊಡವ ಸಮಾಜದವರು ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಅಭಿನಂದನಾ ಸಮಾರಂಭ ಉದ್ದೇಶಿಸಿ ಡಿಸಿಎಂ ಡಿಕೆಶಿ ಅವರು ಮಾತನಾಡಿದರು,
ಈ ವಿಚಾರವಾಗಿ ನಾವು ಮುಕ್ತ ಮನಸ್ಸು ಹೊಂದಿದ್ದೇವೆ, ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಹಾಗೂ ಈ ಡಿಕೆ ಶಿವಕುಮಾರ್ ಸೇರಿ ಕಾರ್ಯಪ್ಪ ಅವರ ಹೆಸರನ್ನು ಉಳಿಸುವ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು,
ಇಡೀ ದೇಶಕ್ಕೆ ಕೊಡಗು ಹಾಗೂ ಕೊಡವರು ಆಭರಣವಿದ್ದಂತೆ, ಇತಿಹಾಸ ನೋಡಿದಾಗ ನಿಮಗೆ ಯಾವುದೇ ಜವಾಬ್ದಾರಿ ಕೊಟ್ಟರೂ ಅದನ್ನು ಸಮರ್ಥವಾಗಿ ನಿಭಾಯಿಸಿದ್ದೀರಿ, ರಾಜಕೀಯ ಮಾತ್ರವಲ್ಲ ಕ್ರೀಡೆ, ಕಾನೂನು ವ್ಯವಸ್ಧೆ ಸೇನೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಕೊಡವರ ಕೊಡುಗೆ ಅಪಾರ, ದೇಶದ ಸ್ವಾತಂತ್ರ್ಯ ಹೋರಾಟಕ್ಕೂ ನಿಮ್ಮ ಕೊಡುಗೆ ಇದೆ, ಎಂದು ಬಣ್ಣೀಸಿದರು,

Continue Reading

Trending