Connect with us

ರಾಜಕೀಯ

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ: ವಿಧೇಯಕ ಮಂಡನೆಗೆ ಸಂಪುಟ ಸಭೆ ಒಪ್ಪಿಗೆ – JOB RESERVATION FOR KANNADIGAS

ಬೆಂಗಳೂರು: ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ನೀಡುವ ವಿಧೇಯಕವನ್ನು ವಿಧಾನ ಮಂಡಲದಲ್ಲಿ ಮಂಡಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ನಡೆದ ಸಂಪುಟ ಸಭೆಯಲ್ಲಿ ಈ ಮಹತ್ವದ ವಿಧೇಯಕ ಮಂಡನೆಗೆ ಒಪ್ಪಿಗೆ ಕೊಡಲಾಗಿದೆ.

‘ದಿ ಕರ್ನಾಟಕ ಸ್ಟೇಟ್ ಎಂಪ್ಲಾಯ್​​ಮೆಂಟ್ ಆಫ್ ಲೋಕಲ್ ಕ್ಯಾಡಿಡೇಟ್ಸ್ ಇನ್ ದಿ ಇಂಡಸ್ಟ್ರೀಸ್, ಫ್ಯಾಕ್ಟರೀಸ್ ಆ್ಯಂಡ್ ಲೋಕಲ್ ಎಷ್ಟಾಬ್ಲಿಷ್‌ಮೆಂಟ್ ಬಿಲ್-2024 ವಿಧೇಯಕದಂತೆ ಮ್ಯಾನೇಜ್‌ಮೆಂಟ್ ಹುದ್ದೆಗಳು ಶೇ.50 ಹಾಗೂ ನಾನ್ ಮ್ಯಾನೇಜ್‌ಮೆಂಟ್ ಶೇ.75ರಷ್ಟು ಹುದ್ದೆಗಳು ಸ್ಥಳೀಯರಿಗೆ ಮೀಸಲಿಡಲಾಗುತ್ತದೆ.

ಕರ್ನಾಟಕದಲ್ಲಿಯೇ ಹುಟ್ಟಿದವರು, ಕರ್ನಾಟಕದಲ್ಲಿ 15 ವರ್ಷದಿಂದ ವಾಸಿಸುತ್ತಿರುವವರು, ಕನ್ನಡ ಓದಲು, ಬರೆಯಲು ಮತ್ತು ಮಾತನಾಡಲು ಬರುವವರು, ನೋಡಲ್ ಏಜೆನ್ಸಿ ನಡೆಸುವ ಕನ್ನಡ ಕುರಿತು ಪರೀಕ್ಷೆಯಲ್ಲಿ ಪಾಸಾದವರನ್ನು ಸ್ಥಳೀಯರು ಎಂದು ಪರಿಗಣಿಸಲಾಗುವುದು. ಮ್ಯಾನೇಜ್‌ಮೆಂಟ್​​ನಲ್ಲಿ ಸೂಪರ್‌ವೈಸ‌ರ್, ಮ್ಯಾನೇಜಿರಿಯಲ್, ಟೆಕ್ನಿಕಲ್, ಆಪರೇಷನಲ್, ಆಡಳಿತ ಸೇರಿ ಉನ್ನತ ಹುದ್ದೆಗಳಲ್ಲಿ ಶೇ.50 ಉದ್ಯೋಗ ಸ್ಥಳೀಯರಿಗೆ ಮೀಸಲಿಡಲಾಗುವುದು. ಇನ್ನು ನಾನ್-ಮ್ಯಾನೇಜ್‌ಮೆಂಟ್​​ನಲ್ಲಿ ಕ್ಲರ್ಕ್‌ಗಳು, ಕೌಶಲ, ಕೌಶಲ ರಹಿತ ಹಾಗೂ ಅರೆಕೌಶಲ, ಗುತ್ತಿಗೆ ನೌಕರ ಹಾಗೂ ಐಟಿ ಹುದ್ದೆಗಳಲ್ಲಿ ಶೇ.75 ಮೀಸಲು ಸ್ಥಳೀಯರಿಗೆ ನೀಡುವ ವಿಧೇಯಕ ಇದಾಗಿದೆ.

ಸ್ಥಳೀಯರಿಗೆ ಉದ್ಯೋಗ ನೀಡದಿದ್ದರೆ ದಂಡ ವಿಧಿಸುವ ಅಂಶವನ್ನೂ ವಿಧೇಯಕದಲ್ಲಿ ಸೇರಿಸಲಾಗಿದೆ. ಕನಿಷ್ಠ 10 ಸಾವಿರ ರೂ. ಹಾಗೂ 25 ಸಾವಿರ ರೂ.ಗಳ ವರೆಗೆ ದಂಡ ವಿಸ್ತರಣೆ ಮಾಡಲು ಅವಕಾಶ ನೀಡಲಾಗುತ್ತದೆ. ಆ ನಂತರವೂ ಉದ್ಯೋಗ ನೀಡದೇ ಹೋದರೆ ದಿನಕ್ಕೆ 100 ರೂ. ದಂಡ ವಿಧಿಸಲಾಗುತ್ತದೆ.

ಶಾಲಿನಿ ರಜನೀಶ್ ಮುಂದಿನ ಮುಖ್ಯಕಾರ್ಯದರ್ಶಿ?: ಸಚಿವ ಸಂಪುಟ ಸಭೆಯಲ್ಲಿ ಮುಂದಿನ ಮುಖ್ಯ ಕಾರ್ಯದರ್ಶಿ ನೇಮಕದ ಅಧಿಕಾರವನ್ನು ಸಿಎಂಗೆ ನೀಡಲಾಗಿದೆ. ಜೇಷ್ಠತೆ ಆಧಾರದಲ್ಲಿ ರಾಜ್ಯದ ಮುಂದಿನ ಮುಖ್ಯಕಾರ್ಯದರ್ಶಿಯಾಗಿ ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್ ನೇಮಕವಾಗುವುದು ಬಹುತೇಕ ಖಚಿತವಾಗಿದೆ. ಹಣಕಾಸು ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್ ಹೆಸರು ಮುಖ್ಯಕಾರ್ಯದರ್ಶಿ ರೇಸ್‌ನಲ್ಲಿ ಇತ್ತಾದರೂ ಬಹುತೇಕ ಶಾಲಿನಿ ರಜನೀಶ್ ಅವರಿಗೆ ಅವಕಾಶ ಒಲಿಯುವುದು ನಿಚ್ಚಳವಾಗಿದೆ. ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಸೇವಾವಧಿ ಜುಲೈ 31ಕ್ಕೆ ಅಂತ್ಯವಾಗಲಿದೆ.

ವಾಲ್ಮೀಕಿ ನಿಗಮದ ಅಕ್ರಮ ಬಗ್ಗೆ ಚರ್ಚೆ: ಸಂಪುಟ ಸಭೆಯಲ್ಲಿ ವಾಲ್ಮೀಕಿ ನಿಗಮದ ಅಕ್ರಮದ ಬಗ್ಗೆ ಚರ್ಚೆ ನಡೆಸಲಾಯಿತು. ಪ್ರತಿಪಕ್ಷಗಳ ಆರೋಪಕ್ಕೆ ಗಟ್ಟಿಯಾಗಿ ನಿಂತು ತಕ್ಕ ಉತ್ತರ ನೀಡುವಂತೆ ಸಿಎಂ ಸಂಪುಟ ಸಹದ್ಯೋಗಿಗಳಿಗೆ ಸೂಚಿಸಿದರು. ಈ ಪ್ರಕರಣದಲ್ಲಿ ಸರ್ಕಾರದ ಪಾತ್ರವಿಲ್ಲ. ಪ್ರಕರಣದ ಕುರಿತು ವಿವರವಾದ ಮಾಹಿತಿಯನ್ನು ಲಿಖಿತವಾಗಿ ಸಿದ್ಧಪಡಿಸಿಕೊಂಡಿದ್ದ ಸಿಎಂ, ಸಂಪುಟ ಸಹೋದ್ಯೋಗಿಗಳಿಗೆ ವಿತರಿಸಿ, ಒಟ್ಟಾಗಿ ನಿಲ್ಲುವಂತೆ ಕೋರಿದರು ಎನ್ನಲಾಗಿದೆ.‌

ಸಂಪುಟದ ಪ್ರಮುಖ ತೀರ್ಮಾನಗಳೇನು?:

  • ಸಿನಿಮಾ ಕ್ಷೇತ್ರದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಭದ್ರತೆ ನೀಡುವ ಮಂಡಳಿ ಸ್ಥಾಪನೆಗೆ ಸಂಪುಟ ಒಪ್ಪಿಗೆ
  • ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 25,000 ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್, ಜೆಇಇ, ಸಿಇಟಿ ತರಬೇತಿಯನ್ನು 12.50 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ
  • ರಾಜ್ಯದ 10 ಜಿಲ್ಲಾಸ್ಪತ್ರೆಗಳಲ್ಲಿ ಡಿಜಿಟಲ್ ಮ್ಯಾಮೊಗ್ರಾಫಿ ಯಂತ್ರ, 4 ಜಿಲ್ಲಾಸ್ಪತ್ರೆಗಳಲ್ಲಿ ಕೋಲ್ಪೋಸ್ಕೋಪಿ ಉಪಕರಣ 10 ಕೋಟಿ ರೂ. ಅಂದಾಜು ಮೊತ್ತದಲ್ಲಿ ಖರೀದಿ
  • 2012ರಲ್ಲಿ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಪೊಲೀಸ್ ಸಿಬ್ಬಂದಿ, ವಕೀಲರು ಮತ್ತು ಮಾಧ್ಯಮದವರ ನಡುವೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳ ವಿರುದ್ಧ ಕೇಂದ್ರ ತನಿಖಾ ಸಂಸ್ಥೆಯ ಅಭಿಯೋಜನಾ ಮಂಜೂರಾತಿ ಕೋರಿಕೆ ತಿರಸ್ಕಾರ
  • ಕರ್ನಾಟಕ ಲೋಕಾಯುಕ ಸಂಸ್ಥೆಯ 2022-23ನೇ ಸಾಲಿನ 37ನೇ ಸಂಚಿತ ವಾರ್ಷಿಕ ವರದಿ ಅಂಗೀಕಾರ
  • ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿಗೆ ಎತ್ತಿನಹೊಳೆ ಯೋಜನೆಯ ಮಧುಗಿರಿ ಗುರುತ್ವಾ ಕಾಲುವೆಯಿಂದ 62 ಕೆರೆಗಳಿಗೆ ನೀರನ್ನು ತುಂಬಿಸುವ 299 ಕೋಟಿ ರೂ. ಮೊತ್ತದ ಕಾಮಗಾರಿಗೆ ಅನುಮೋದನೆ
  • ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಅಂತರ್ಜಲ ಎತ್ತಿನಹೊಳೆ ಅಭಿವೃದ್ಧಿ ಸಲುವಾಗಿ ಯೋಜನೆಯ ಮಧುಗಿರಿ ಗುರುತ್ವಾ ಕಾಲುವೆಯಿಂದ ನೀರನ್ನು 45 ಕೆರೆಗಳಿಗೆ ತುಂಬಿಸುವ ಕಾಮಗಾರಿಯ 302 ಕೋಟಿ ರೂ. ಮೊತ್ತದ ಅಂದಾಜಿಗೆ ಒಪ್ಪಿಗೆ
  • ಕರ್ನಾಟಕ (ತಿದ್ದುಪಡಿ) ಉಪಖನಿಜ ನಿಯಮಗಳು, ಅನುಮೋದನೆ
  • ಕರ್ನಾಟಕ ಸರಕು ಮತ್ತು ಸೇವೆಗಳು (ತಿದ್ದುಪಡಿ) ವಿಧೇಯಕಕ್ಕೆ ಅನುಮೋದನೆ

ಬೆಂಗಳೂರು

ವೇತನ ವಿವಾದದಲ್ಲಿ ಸಿಎಂ ಸ್ಪಷ್ಟನೆ: 14 ತಿಂಗಳ ಹಿಂಬಾಕಿಗೆ ಮಾತ್ರ ಸರ್ಕಾರ ಸಿದ್ಧ

ಬೆಂಗಳೂರು: ಸಾರಿಗೆ ನೌಕರರ 38 ತಿಂಗಳ ವೇತನ ಹಿಂಬಾಕಿ ಪಾವತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. “ಈ ಬೇಡಿಕೆ ಸಮಂಜಸವಲ್ಲ. ಸರ್ಕಾರ ಕೇವಲ 14 ತಿಂಗಳ ಹಿಂಬಾಕಿಗೆ ಸಿದ್ಧ” ಎಂದು ಅವರು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಂಧಾನ ಸಭೆಯಲ್ಲಿ ತಿಳಿಸಿದ್ದಾರೆ.

2020ರಿಂದ 2023ರ ಫೆಬ್ರವರಿವರೆಗಿನ ಬಾಕಿ ವೇತನ ಪಾವತಿಗೆ ನೌಕರ ಸಂಘಗಳು ಒತ್ತಾಯಿಸಿದ್ದರೊಂದಿಗೆ, 2024ರಿಂದ ನೂತನ ವೇತನವನ್ನೂ ಜಾರಿಗೆ ತರುವಂತೆ ಒತ್ತಾಯಿಸಲಾಗಿದೆ. ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, “ನಿಗಮಗಳ ಆರ್ಥಿಕ ಪರಿಸ್ಥಿತಿ ಮತ್ತು ಹಿಂದಿನ ಸರ್ಕಾರದ ಆದೇಶಗಳ ದೋಷಗಳನ್ನು ಪರಿಗಣಿಸಿ 14 ತಿಂಗಳ ವೇತನ ಹಿಂಬಾಕಿಗೆ ಸಮ್ಮತಿಯಿದೆ,” ಎಂದು ಸ್ಪಷ್ಟಪಡಿಸಿದರು.

ವೇತನ ಪರಿಷ್ಕರಣೆ ಪಶ್ಚಾತ್ಪಟ
2016ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 12.5% ವೇತನ ಹೆಚ್ಚಳ ಜಾರಿಗೆ ಬಂದಿತ್ತು. ಆದರೆ 2020ರ ಕೋವಿಡ್ ಕಾರಣದಿಂದ ಆ ವೇಳೆಗೆ ಯಾವುದೇ ಪರಿಷ್ಕರಣೆ ಆಗಿರಲಿಲ್ಲ. ನಂತರದ ಕಾಂಗ್ರೆಸ್ ಸರ್ಕಾರದಲ್ಲಿ ಶ್ರೀನಿವಾಸ ಮೂರ್ತಿ ಸಮಿತಿ ಶಿಫಾರಸ್ಸಿನಂತೆ 2022ರ ಜೂನ್‌ 01ರಿಂದ 2023ರ ಫೆಬ್ರವರಿವರೆಗೆ ಹಿಂಬಾಕಿ ಪಾವತಿ ಮಾಡಲು ತೀರ್ಮಾನಿಸಲಾಗಿತ್ತು.

ಸರ್ಕಾರದ ಆರ್ಥಿಕ ಹೊಣೆಗಾರಿಕೆ
ಸಿದ್ದರಾಮಯ್ಯ ಅವರು ಹೇಳಿದ್ದಾರೆ: “ನಾವು ಅಧಿಕಾರಕ್ಕೆ ಬಂದಾಗ ನಿಗಮಗಳಿಗೆ ಒಟ್ಟಾರೆ ₹4000 ಕೋಟಿ ಸಾಲ ಇತ್ತು. 2018 ರಲ್ಲಿ ಈ ಮೊತ್ತ ಕೇವಲ ₹14 ಕೋಟಿ ಮಾತ್ರ ಇತ್ತು. ಯಾವುದೇ ನಿಗಮ ಲಾಭದಲ್ಲಿ ಇಲ್ಲ.” ಅಂತಹ ಪರಿಸ್ಥಿತಿಯಲ್ಲಿ ಎಲ್ಲಾ ನೌಕರರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಘದ ಚುನಾವಣೆ ಮತ್ತು ಮುಂದಿನ ಕ್ರಮ
ಸಾರಿಗೆ ನೌಕರರ ಸಂಘದ ಚುನಾವಣೆ ಹಾಗೂ ಬೇಡಿಕೆಗಳ ಕುರಿತಂತೆ ಸರ್ಕಾರ ಪರಿಶೀಲನೆ ನಡೆಸಲಿದ್ದು, ಮಾತುಕತೆ ಮೂಲಕ ಎಲ್ಲ ಅಹವಾಲುಗಳನ್ನು ಬಗೆಹರಿಸಲು ಸಿದ್ಧವಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.

Continue Reading

ಬೆಂಗಳೂರು

ಸಾರಿಗೆ ನೌಕರರ ಮುಷ್ಕರ ಆರಂಭ: ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ – “ಹಠವಿಲ್ಲದೆ ಸಹಕಾರ ನೀಡಿ”

ಬೆಂಗಳೂರು: ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಸಾರಿಗೆ ನೌಕರರು ಮುಷ್ಕರಕ್ಕೆ (Transport Employees Strike) ಇಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಸಾರಿಗೆ ನೌಕರರು ಕೇಳಿರುವ ಬೇಡಿಕೆಯಲ್ಲಿ ತಪ್ಪಿಲ್ಲ. ಆದರೆ ಸರ್ಕಾರದ ಪರಿಸ್ಥಿತಿಯನ್ನೂ ಅವರು ಗಮನದಲ್ಲಿಟ್ಟುಕೊಳ್ಳಬೇಕು. ಹಠವಿಲ್ಲದೆ ಸಹಕಾರ ನೀಡಬೇಕು” ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಸಚಿವರು ನೌಕರರೊಂದಿಗೆ ಸಭೆ ನಡೆಸಿದ್ದಾರೆ ಎಂಬುದನ್ನು ಅವರು ನೆನಪಿಸಿದ್ದಾರೆ.

“ಸಾರ್ವಜನಿಕರ ಹಿತವೇ ಮೊದಲಾದ್ದು. ಕೆಲವು ನೌಕರರು ಈಗಾಗಲೇ ಕೆಲಸಕ್ಕೆ ಹಾಜರಾಗಿದ್ದಾರೆ. ಅವರಿಗೆ ಅಭಿನಂದನೆ” ಎಂದು ಡಿಸಿಎಂ ಹೇಳಿದ್ದಾರೆ.

ಇತ್ತ, ಹಳದಿ ಮೆಟ್ರೊ ಮಾರ್ಗದ (Yellow Metro Line) ಉದ್ಘಾಟನೆಯ ಕುರಿತು ಮಾತನಾಡಿದ ಡಿ.ಕೆ.ಶಿವಕುಮಾರ್, “ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಸ್ಟ್ 10ರಂದು ಬರುವ ಸಾಧ್ಯತೆ ಇದೆ. ನಾವು ಈಗಾಗಲೇ ತಯಾರಿ ಪರಿಶೀಲನೆ ಆರಂಭಿಸಿದ್ದೇವೆ. ಕಾರ್ಯಕ್ರಮದ ಅಧಿಕೃತ ಸಮಯ ಇನ್ನೂ ಘೋಷಣೆಯಾಗಿಲ್ಲ” ಎಂದು ತಿಳಿಸಿದ್ದಾರೆ.

ಇದೇ ದಿನ ಬಿಜೆಪಿ ವತಿಯಿಂದ ರೈಲ್ವೆ ಸಂಬಂಧಿತ ಕಾರ್ಯಕ್ರಮವೂ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

Continue Reading

ಬೆಂಗಳೂರು

ಕೆಆರ್‌ಎಸ್ ಡ್ಯಾಂ ಕಟ್ಟಲು ಮೈಸೂರಿನ ರಾಜಮಾತೆಯ ತ್ಯಾಗ: ಟಿಪ್ಪು ವಿವಾದದ ನಡುವೆ ಪೀಠಾಧಿಪತಿಯ ಸ್ಪಷ್ಟನೆ!

ರಾಯಚೂರು: ಕಾವೇರಿ ನದೀಪ್ರಾಂತ್ಯದ ಜನರಿಗೆ ನೀರಿನ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಮೈಸೂರಿನ ರಾಜಮಾತೆ ತಮ್ಮ ಆಭರಣಗಳನ್ನು ಮಾರಾಟ ಮಾಡಿ ಕೆಆರ್‌ಎಸ್ ಡ್ಯಾಂವನ್ನು ನಿರ್ಮಿಸಿದರು ಎಂದು ಗುರುರಾಘವೇಂದ್ರ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಮಂತ್ರಾಲಯದಲ್ಲಿ ಮಾತನಾಡಿದ ಅವರು, ಕೆಆರ್‌ಎಸ್ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ದಾರೆ ಎಂಬ ಸಚಿವ ಮಹಾದೇವಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, “ಇದು ರಾಜಮನೆತನದ ತ್ಯಾಗದ ಫಲ. ಇತಿಹಾಸವನ್ನು ನಿಖರವಾಗಿ ತಿಳಿದುಕೊಳ್ಳಬೇಕಾದದ್ದು ಇತಿಹಾಸ ತಜ್ಞರ ಕೆಲಸ” ಎಂದು ಹೇಳಿದರು.

ಇದೇ ವೇಳೆ ಧರ್ಮಸ್ಥಳದ ತಾತ್ಕಾಲಿಕ ವಿವಾದಗಳ ಕುರಿತು ಮಾತನಾಡಿದ ಶ್ರೀಗಳು, “ಧಾರ್ಮಿಕ ಕ್ಷೇತ್ರಗಳ ಪಾವಿತ್ರ್ಯತೆಗಿಂತ ವ್ಯವಸ್ಥೆ ಬಗ್ಗೆ ಚರ್ಚೆ ಮಾಡಬೇಕು. ಜನ ಭಕ್ತಿಯಿಂದ ನಂಬುವ ಕ್ಷೇತ್ರಗಳನ್ನು ರಾಜಕೀಯವಾಗಿಸಬಾರದು” ಎಂದು ಎಚ್ಚರಿಸಿದರು.

ಸಾರಿಗೆ ನೌಕರರ ಮುಷ್ಕರದ ವಿಚಾರಕ್ಕೂ ಪ್ರತಿಕ್ರಿಯೆ ನೀಡಿದ ಅವರು, “ಅವರ ಬೇಡಿಕೆಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಭಕ್ತರಿಗೆ ತೊಂದರೆಯಾಗದಂತೆ ಸೂಕ್ತ ಪರಿಹಾರ ಒದಗಿಸಲಿ” ಎಂದಿದ್ದಾರೆ.

ಇದಕ್ಕೂ ಮುನ್ನ ಸಚಿವ ಎಚ್.ಸಿ. ಮಹಾದೇವಪ್ಪ ಟಿಪ್ಪು ಸುಲ್ತಾನ್ ಕನ್ನಂಬಾಡಿ ಡ್ಯಾಂಗೆ ಅಡಿಗಲ್ಲು ಹಾಕಿದರೆಂದು ಹೇಳಿಕೆ ನೀಡಿದ್ದರು. ಆದರೆ, ಇತಿಹಾಸವನ್ನ ತಿರುವುಮಾಡುವುದು ಸರಿಯಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Continue Reading

Trending