Connect with us

ಬೆಂಗಳೂರು

ವಿಧಾನಸಭೆಯಲ್ಲಿ ವಾಲ್ಮೀಕಿ ನಿಗಮ ಹಗರಣದ ಸದ್ದು: ಆಡಳಿತ – ಪ್ರತಿ ಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ – Valmiki Corporation scam

Published

on

ಬೆಂಗಳೂರು : ವಾಲ್ಮೀಕಿ ನಿಗಮ ಹಗರಣದ ಚರ್ಚೆಗೂ ಮುನ್ನ ಭ್ರಷ್ಟಾಚಾರದ ಕುರಿತಂತೆ ಆಡಳಿತ ಮತ್ತು ಪ್ರತಿ ಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ, ಗದ್ದಲ ಉಂಟಾದ ಪ್ರಸಂಗ ಇಂದು ವಿಧಾನಸಭೆಯಲ್ಲಿ ನಡೆಯಿತು. ಸದನದಲ್ಲಿ ಗದ್ದಲ ತೀವ್ರಗೊಂಡ ಹಿನ್ನೆಲೆ ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಲಾಯಿತು.

ವಿಧಾನಸಭೆಯ ಕಲಾಪದಲ್ಲಿ ಪ್ರಶ್ನೋತ್ತರ ಮತ್ತು ಶೂನ್ಯ ವೇಳೆಯ ನಂತರ ಸಭಾಧ್ಯಕ್ಷ ಯು.ಟಿ.ಖಾದರ್ ಅವರು, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಅವ್ಯವಹಾರ, ಹಣ ವರ್ಗಾವಣೆ ಕುರಿತು ನಿನ್ನೆಯಿಂದ ಆರಂಭವಾಗಿರುವ ಚರ್ಚೆಯನ್ನು ಮುಂದುವರಿಸಲು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರಿಗೆ ಸೂಚನೆ ನೀಡಿದರು.

ಅಶೋಕ್ ಅವರು ಮಾತನಾಡಲು ಎದ್ದು ನಿಂತಾಗ ಆಡಳಿತ ಪಕ್ಷದ ಆಸನದಲ್ಲಿ ಡಿಸಿಎಂ ಡಿ.ಕೆ‌.ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಮಾತ್ರ ಇದ್ದರು. ಆಗ ಆರ್ಥಿಕ ಇಲಾಖೆಯ ಅಧಿಕಾರಿಗಳು ಸದನದಲ್ಲಿ ಇಲ್ಲವೆಂದು ಅಶೋಕ್ ಅವರು ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಬಿಜೆಪಿ ಸದಸ್ಯರಾದ ಅಶ್ವತ್ಥ ನಾರಾಯಣ, ಸುರೇಶ್ ಕುಮಾರ್ ಬೆಂಬಲ ವ್ಯಕ್ತಪಡಿಸಿದರು.

ಈ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಸಿಐಡಿ ಅಧಿಕಾರಿಗಳು ಸದನಕ್ಕೆ ಆಗಮಿಸಿದರು. ಆರ್ಥಿಕ ಇಲಾಖೆ ಅಧಿಕಾರಿಗಳು ಉಪಸ್ಥಿತರಿಲ್ಲದಿರುವುದನ್ನು ಕಂಡು ಪ್ರತಿಪಕ್ಷಗಳ ನಾಯಕರು ಮಾತನಾಡುವಾಗ ಕನಿಷ್ಠ ಆರ್ಥಿಕ ಇಲಾಖೆಯ ಅಧಿಕಾರಿಗಳಾದರು ಹಾಜರಿರಬೇಕು ಎಂದರು. ಆಗ ಸಭಾಧ್ಯಕ್ಷರ ಪೀಠದಲ್ಲಿದ್ದ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರು, ಸಮಯ ವ್ಯರ್ಥ ಮಾಡುವುದು ಬೇಡ ಚರ್ಚೆ ಮುಂದುವರಿಸಿ, ಸಂಬಂಧಪಟ್ಟ ಅಧಿಕಾರಿಗಳು ಬರುತ್ತಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಶ್ವತ್ಥ ನಾರಾಯಣ ಅವರು ಹಠಕ್ಕೆ ಬಿದ್ದಂತೆ ಮುಖ್ಯಮಂತ್ರಿಗಳ ಮೇಲೆ ಆರೋಪ ಬಂದಿದೆ. ಹಾಗಾಗಿ ಅವರು ಹಾಗೂ ಹಣಕಾಸು ಇಲಾಖೆ ಅಧಿಕಾರಿಗಳು ಕಲಾಪದಲ್ಲಿ ಹಾಜರಿರಬೇಕು. ಅವರನ್ನು ಕರೆಸಿ ಎಂದು ಒತಾಯಿಸಿದರು. ಇದರಿಂದ ಎರಡೂ ಕಡೆ ವಾಗ್ವಾದ ನಡೆದವು. ವಾಲ್ಮೀಕಿ ನಿಗಮ ಹಗರಣ ಆರ್ಥಿಕ ಇಲಾಖೆಯ ಆದ್ಯತೆಯನ್ನು ಹೊಂದಿದೆ. ಮುಖ್ಯಮಂತ್ರಿಗಳು ಇದರಲ್ಲಿ ಭಾಗಿಯಾಗಿದ್ದಾರೆ ಎಂದರು.

ಇದರಿಂದ ಸಿಟ್ಟಾದ ಡಿ.ಕೆ. ಶಿವಕುಮಾರ್ ಅವರು, ಏಕವಚನದಲ್ಲಿ ‘ನೀನು ಭ್ರಷ್ಟಾಚಾರದ ಪಿತಾಮಹ’ ಎಂದು ಆಶ್ವತ್ಥನಾರಾಯಣ ವಿರುದ್ಧ ವಾಗ್ದಾಳಿ ನಡೆಸಿದರು. ಇದು ಬಿಜೆಪಿ ಶಾಸಕರನ್ನು ಕೆರಳಿಸಿತು. ಬಿಜೆಪಿ ಸದಸ್ಯರು ಎದ್ದು ನಿಂತು ಗದ್ದಲ ಆರಂಭಿಸಿದರು. ಇದಕ್ಕೆ ಜೆಡಿಎಸ್ ನಾಯಕ ಸದಸ್ಯರು ಕೈಜೋಡಿಸಿದರು. ನನ್ನ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಸೂಕ್ತ ಸಮಜಾಯಿಸಿ ನೀಡಬೇಕು. ಕ್ಷಮೇ ಕೇಳಬೇಕು ಎಂದು ಅಶ್ವತ್ಥನಾರಾಯಣ ಪಟ್ಟು ಹಿಡಿದರು. ಆರೋಪ ಮಾಡಲಾದ ಪದಗಳನ್ನು ಕಡತದಿಂದ ತೆಗೆಯಬೇಕು ಎಂದು ಒತ್ತಾಯಿಸಿದರು.

ಇದರಲ್ಲಿ ಮುಖ್ಯಮಂತ್ರಿ ಅವರ ಪಾತ್ರವಿದೆ ಎಂದು ಹೇಳಿರುವುದು ಸರಿ ಇದೆಯೇ? ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದರು. ಯಾವುದೇ ನೋಟಿಸ್ ನೀಡದೇ ನಮ್ಮ ಪಕ್ಷದ ಶಾಸಕರ ಹೆಸರನ್ನು ಪ್ರಸ್ತಾಪಿಸಿದ್ದಾರೆ ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್ ಆಕ್ಷೇಪಿಸಿದರು. ನಿಯಮಾವಳಿಗಳನ್ನು ಮೀರಿ ಸದಸ್ಯರ ಹೆಸರು ಹೇಳಬಹುದೇ?. ನಾನು ನಿಮ್ಮ ಹೆಸರನ್ನು ಹೇಳಬಹುದೇ ಎಂದು ಡಿಕೆಶಿಗೆ ತಿರುಗೇಟು ನೀಡಿದರು.

ಈ ಸಂದರ್ಭದಲ್ಲಿ ವಾದ, ಪ್ರತಿವಾದ ನಡೆದು ಗದ್ದಲ ಉಂಟಾಗಿದ್ದರಿಂದ ಸಮಯ ವ್ಯರ್ಥ ಮಾಡುವುದು ಬೇಡ ಚರ್ಚೆ ಮುಂದುವರಿಸಿ ಎಂದು ಉಪಸಭಾಧ್ಯಕ್ಷರು ಸಲಹೆ ನೀಡಿದರು. ಆಗ ಬಿಜೆಪಿ ಶಾಸಕರು, ಕಾಂಗ್ರೆಸ್​​ನವರು ದಲಿತರ ಹಣವನ್ನು ಲೂಟಿ ಮಾಡಿದ್ದಾರೆ ಎಂದು ಕಿಡಿಕಾರಿದರು. ಈ ವೇಳೆ ಕಾಂಗ್ರೆಸ್ ಸದಸ್ಯರು, ಆಪರೇಷನ್ ಕಮಲದ ಮೂಲಕ ಯಾರು ಲೂಟಿ ಮಾಡಿದ್ದು ಎಂದು ಪ್ರತಿ ದಾಳಿ ನಡೆಸಿದರು. ಅಷ್ಟರಲ್ಲೇ ಪೀಠಕ್ಕೆ ಆಗಮಿಸಿದ ಸ್ಪೀಕರ್ ಯು.ಟಿ. ಖಾದರ್, ಪರಿಸ್ಥಿತಿಯನ್ನು ತಿಳಿಗೊಳಿಸಲು ಯತ್ನಿಸಿದರು. ಆದರೆ ಎರಡು ಕಡೆಯಿಂದಲೂ ಗದ್ದಲ ಹೆಚ್ಚಾಗಿದ್ದರಿಂದ ಸದನವನ್ನು 10 ನಿಮಿಷಗಳ ಕಾಲ ಮುಂದೂಡಿದರು.

ದೇಶ

ಅಶೋಕ್ ರೈ ಕಂಬಳಕ್ಕೆ ಸಿದ್ಧ, ಯದುವೀರ್-ಪ್ರತಾಪ್ ಸಿಂಹ ವಿರೋಧ; ದಸರಾದಲ್ಲಿ ಹೊಸ ವಿವಾದ

Published

on

ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಮಹೋತ್ಸವದ ಸಿದ್ಧತೆಗಳು ಆರಂಭವಾಗುತ್ತಿದ್ದಂತೆಯೇ ಈ ಬಾರಿ ದಸರಾ ಕಾರ್ಯಕ್ರಮದಲ್ಲಿ ಕಂಬಳ (Kambala) ಆಯೋಜನೆ ಮಾಡುವ ವಿಚಾರ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಒಂದೆಡೆ ಪುತ್ತೂರು ಶಾಸಕ ಅಶೋಕ್ ರೈ (Ashok Rai) ಕಂಬಳ ಆಯೋಜನೆಗೆ ಸಿದ್ಧತೆ ಆರಂಭಿಸಿರುವುದಾಗಿ ತಿಳಿಸಿದ್ದರೆ, ಮತ್ತೊಂದೆಡೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Wadiyar) ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ ನಡೆದ ದಸರಾ ಉನ್ನತ ಮಟ್ಟದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ನೇತೃತ್ವದಲ್ಲಿ ಮಹೋತ್ಸವದ ಸಿದ್ಧತೆ ಕುರಿತು ಚರ್ಚೆ ನಡೆಯಿತು. ಆಗಸ್ಟ್ 26ರಂದು ಗಜಪಯಣ ಆರಂಭವಾಗಲಿದ್ದು, ಅಕ್ಟೋಬರ್ 11ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆಯಾಗಲಿದೆ. ಅಕ್ಟೋಬರ್ 21ರಂದು ವಿಜಯದಶಮಿಯಂದು ಮಧ್ಯಾಹ್ನ 4:10ಕ್ಕೆ ಮೀನಾ ಲಗ್ನದಲ್ಲಿ ಐತಿಹಾಸಿಕ ಜಂಬೂ ಸವಾರಿ ನಡೆಯಲಿದೆ.

ಸಭೆಯಲ್ಲಿ ಕಂಬಳ ಆಯೋಜನೆ ವಿಚಾರವೂ ಪ್ರಸ್ತಾಪವಾಗಿದ್ದು, ಅಂತಿಮ ನಿರ್ಧಾರವನ್ನು ಮುಂದಿನ ಸಭೆಯಲ್ಲಿ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ. ಅಶೋಕ್ ರೈ ಅವರ ಪ್ರಕಾರ, ಕಂಬಳ ಆಯೋಜನೆಗೆ ಸುಮಾರು ₹5 ರಿಂದ ₹6 ಕೋಟಿ ವೆಚ್ಚವಾಗಲಿದ್ದು, ಜುಲೈ 15ರಿಂದಲೇ ಸಿದ್ಧತೆ ಆರಂಭಿಸಲು ಯೋಜಿಸಲಾಗಿದೆ. ಕಂಬಳದ ಮೂಲಕ ಕರಾವಳಿಯ ಸಾಂಸ್ಕೃತಿಕ ಪರಂಪರೆಯನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಉದ್ದೇಶವಿದೆ ಎಂದು ಅವರು ಹೇಳಿದ್ದಾರೆ.

ಆದರೆ, ಯದುವೀರ್ ಒಡೆಯರ್ ದಸರಾದಲ್ಲಿ ಕಂಬಳ ಸೇರಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಮಾಜಿ ಸಂಸದ ಪ್ರತಾಪ್ ಸಿಂಹ ಕೂಡ ದಸರಾ, ಕಂಬಳ ಮತ್ತು ಇತರೆ ಜಾತ್ರೆಗಳಿಗೆ ತಮ್ಮದೇ ಆದ ವೈಶಿಷ್ಟ್ಯವಿದ್ದು, ಪ್ರತಿಯೊಂದು ಆಚರಣೆಯೂ ತನ್ನ ಸಾಂಪ್ರದಾಯಿಕ ಸ್ವರೂಪದಲ್ಲೇ ನಡೆಯಬೇಕು ಎಂದು ಹೇಳಿದ್ದಾರೆ. ಕಂಬಳದ ಬಗ್ಗೆ ವಿರೋಧವಿಲ್ಲದಿದ್ದರೂ ದಸರಾದ ಮೂಲ ಪರಂಪರೆಯಲ್ಲಿ ಬದಲಾವಣೆ ಬೇಡ ಎಂಬುದು ಅವರ ನಿಲುವಾಗಿದೆ.

Continue Reading

ದೇಶ

ಮೈಸೂರು ದಸರಾ ದಿನಾಂಕ ಘೋಷಣೆ: ಸಿಎಂ ನೇತೃತ್ವದ ಸಭೆಯಲ್ಲಿ ಮಹತ್ವದ ನಿರ್ಧಾರ

Published

on

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) 2026 ಉತ್ಸವದ ದಿನಾಂಕವನ್ನು ರಾಜ್ಯ ಸರ್ಕಾರ ಅಂತಿಮಗೊಳಿಸಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ದಸರಾ ಉತ್ಸವದ ಸಿದ್ಧತೆಗಳು ಹಾಗೂ ಕಾರ್ಯಕ್ರಮಗಳ ವೇಳಾಪಟ್ಟಿಗೆ ಅನುಮೋದನೆ ನೀಡಲಾಗಿದೆ.

ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ, ಅಕ್ಟೋಬರ್ 11ರಂದು ಮೈಸೂರು ದಸರಾ ಉತ್ಸವಕ್ಕೆ ಅಧಿಕೃತ ಚಾಲನೆ ದೊರೆಯಲಿದ್ದು, ಇದೇ ದಿನದಿಂದ ನವರಾತ್ರಿ (Navaratri) ಆಚರಣೆ ಆರಂಭವಾಗಲಿದೆ. ಹತ್ತು ದಿನಗಳ ಕಾಲ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಕಲಾ ಕಾರ್ಯಕ್ರಮಗಳು ನಡೆಯಲಿವೆ.

ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾಗಿರುವ **ಜಂಬೂಸವಾರಿ (Jumboo Savari)**ಯನ್ನು ಅಕ್ಟೋಬರ್ 21ರಂದು ವಿಜಯದಶಮಿ ದಿನ ಅದ್ದೂರಿಯಾಗಿ ಆಯೋಜಿಸಲು ಸರ್ಕಾರ ತೀರ್ಮಾನಿಸಿದೆ. ಸಂಪ್ರದಾಯದಂತೆ ಅಲಂಕೃತ ಅಂಬಾರಿಯಲ್ಲಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ ಮೆರವಣಿಗೆಯಲ್ಲಿ ಸಾಗಲಿದ್ದು, ಸಾವಿರಾರು ಭಕ್ತರು ಹಾಗೂ ದೇಶ-ವಿದೇಶಗಳಿಂದ ಆಗಮಿಸುವ ಪ್ರವಾಸಿಗರು ಈ ಐತಿಹಾಸಿಕ ಉತ್ಸವಕ್ಕೆ ಸಾಕ್ಷಿಯಾಗಲಿದ್ದಾರೆ.

ಸಭೆಯಲ್ಲಿ ಭದ್ರತೆ, ಸಂಚಾರ ವ್ಯವಸ್ಥೆ, ಪ್ರವಾಸೋದ್ಯಮ, ಸ್ವಚ್ಛತೆ, ವಿದ್ಯುತ್, ಕುಡಿಯುವ ನೀರು ಹಾಗೂ ಸಾರ್ವಜನಿಕ ಸೌಲಭ್ಯಗಳ ಕುರಿತು ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಗಿದೆ. ಪ್ರವಾಸಿಗರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

ಮೈಸೂರು ದಸರಾ ಕರ್ನಾಟಕದ ಅತ್ಯಂತ ದೊಡ್ಡ ಸಾಂಸ್ಕೃತಿಕ ಉತ್ಸವಗಳಲ್ಲಿ ಒಂದಾಗಿದ್ದು, ರಾಜ್ಯದ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಮಹತ್ವದ ವೇದಿಕೆಯಾಗಿದೆ. ಈ ಬಾರಿ ಉತ್ಸವವನ್ನು ಇನ್ನಷ್ಟು ವೈಭವದಿಂದ ಆಯೋಜಿಸಲು ಸರ್ಕಾರ ಸಿದ್ಧತೆ ಆರಂಭಿಸಿದೆ.

Continue Reading

ದೇಶ

GBA ಚುನಾವಣೆ, ಒತ್ತುವರಿ ತೆರವು, ಮೋಡ ಬಿತ್ತನೆ: CM ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ

Published

on

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಹೊಸ ಮಹಾನಗರ ಪಾಲಿಕೆಗಳ ಚುನಾವಣೆಯನ್ನು ಆಗಸ್ಟ್ ತಿಂಗಳೊಳಗೆ ನಡೆಸುವ ವಿಚಾರದಲ್ಲಿ ಕೆಲವು ತಾಂತ್ರಿಕ ಸವಾಲುಗಳಿದ್ದು, ಸರ್ಕಾರವು ಸುಪ್ರೀಂ ಕೋರ್ಟ್ (Supreme Court) ನೀಡುವ ನಿರ್ದೇಶನಗಳಿಗೆ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಬಿಎ ವ್ಯಾಪ್ತಿಯ ಪಾಲಿಕೆ ಚುನಾವಣೆಗಳಿಗೆ ಸರ್ಕಾರ ಅಗತ್ಯ ಸಿದ್ಧತೆ ನಡೆಸಿದೆ. ಆದರೆ ಚುನಾವಣಾ ಆಯೋಗ (Election Commission) ರಾಜ್ಯಾದ್ಯಂತ ನಡೆಸುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಕಾರ್ಯದಿಂದಾಗಿ ಚುನಾವಣಾ ಪ್ರಕ್ರಿಯೆಯಲ್ಲಿ ಸ್ವಲ್ಪ ವಿಳಂಬ ಉಂಟಾಗಿದೆ ಎಂದು ವಿವರಿಸಿದರು.

ಸುಪ್ರೀಂ ಕೋರ್ಟ್ ಈ ಹಿಂದೆ ಆಗಸ್ಟ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ಸೂಚನೆ ನೀಡಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಗಡುವನ್ನು ಡಿಸೆಂಬರ್‌ವರೆಗೆ ವಿಸ್ತರಿಸುವಂತೆ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಸಿಎಂ, “ನಾನು ಈ ವಿಚಾರದಲ್ಲಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ. ಅಧಿಕಾರಿಗಳು ಮತ್ತು ನ್ಯಾಯಾಲಯದ ಪ್ರಕ್ರಿಯೆಯಂತೆ ಮುಂದಿನ ಕ್ರಮ ನಡೆಯಲಿದೆ” ಎಂದು ಹೇಳಿದರು.

ಇದೇ ವೇಳೆ, ಬೆಂಗಳೂರಿನಲ್ಲಿ ಸಂಚಾರಕ್ಕೆ ಅಡ್ಡಿಯಾಗಿರುವ ಒತ್ತುವರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ತಿಳಿಸಿದರು. ನಗರದಲ್ಲಿ ಸುಮಾರು 60,000 ಬೀದಿಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದ್ದು, ಅವರಲ್ಲಿ 30,000 ಮಂದಿಗೆ ತಳ್ಳುಗಾಡಿ ಹಾಗೂ ವ್ಯಾಪಾರಕ್ಕೆ ಅಗತ್ಯ ವಾಹನಗಳನ್ನು ವಿತರಿಸಲು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದರು.

ಮುಖ್ಯ ರಸ್ತೆಗಳಲ್ಲಿ ಶಾಶ್ವತ ಶೆಡ್ ಅಥವಾ ಟೆಂಟ್‌ಗಳನ್ನು ನಿರ್ಮಿಸಲು ಸುಪ್ರೀಂ ಕೋರ್ಟ್ ನಿರ್ಬಂಧವಿದ್ದು, ಸರ್ಕಾರ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ವ್ಯಾಪಾರ ನಡೆಸಬೇಕು ಎಂದು ಸಿಎಂ ಸ್ಪಷ್ಟಪಡಿಸಿದರು. ಜೊತೆಗೆ, ಮೋಡ ಬಿತ್ತನೆ, ಬೆಳಗಾವಿಗೆ ವಿಶೇಷ ಪ್ಯಾಕೇಜ್ ಹಾಗೂ ಮುಜರಾಯಿ ದೇವಸ್ಥಾನಗಳ ಹುಂಡಿ ಹಣದ ಭದ್ರತೆ ಕುರಿತು ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದರು.

Continue Reading

Trending