Connect with us

ದೇಶ

ವಯನಾಡ್‌ನಲ್ಲಿ ಪ್ರಿಯಾಂಕಾ ಗಾಂಧಿಗೆ 7 ಲಕ್ಷ ಬಹುಮತ ಕೊಡಿಸಿ’: ಸ್ಥಳೀಯ ನಾಯಕರಿಗೆ ಎಐಸಿಸಿ​ ಟಾರ್ಗೆಟ್​ – Lok Sabha By election

ಕಣ್ಣೂರು(ಕೇರಳ): ವಯನಾಡು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಪ್ರಿಯಾಂಕಾ ಗಾಂಧಿ ಅವರಿಗೆ ಏಳು ಲಕ್ಷ ಬಹುಮತ ಕೊಡಿಸುವ ಗುರಿಯನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ನಿಗದಿಪಡಿಸಿದೆ. ಹೀಗಾಗಿ ಸ್ಥಳೀಯ ಕಾಂಗ್ರೆಸ್ ನಾಯಕರು ವಯನಾಡ್​ನಲ್ಲಿ ಹೈಕಮಾಂಡ್ ಸೂಚನೆಯನ್ನು ಅನುಷ್ಠಾನಕ್ಕೆ ತರಲು ತಮ್ಮ ತಂಡಗಳನ್ನು ಸಜ್ಜುಗೊಳಿಸುತ್ತಿದ್ದಾರೆ.

ಮೊದಲ ಹಂತದಲ್ಲಿ, ವಿಧಾನಸಭಾ ಕ್ಷೇತ್ರ ಸಮಿತಿ ಸಭೆಗಳು ನಡೆಯಲಿವೆ. ಪದಾಧಿಕಾರಿಗಳ ಸಲಹೆ ಮತ್ತು ಅಭಿಪ್ರಾಯಗಳ ಮೇರೆಗೆ ಜಿಲ್ಲಾ, ಮಂಡಲ ಮತ್ತು ಕ್ಷೇತ್ರ ಸಮಿತಿಗಳು ಚುನಾವಣೆಗೆ ಕೆಲಸ ಮಾಡುತ್ತಿವೆ. ಕಳೆದ ಚುನಾವಣೆಯಲ್ಲಿ ಪ್ರಚಾರವನ್ನು ತಡವಾಗಿ ಪ್ರಾರಂಭಿಸಿದ್ದಾಗಿ ಸ್ಥಳೀಯ ನಾಯಕರು ತಪ್ಪು ಒಪ್ಪಿಕೊಂಡಿದ್ದಾರೆ. ಇದರಿಂದ ರಾಹುಲ್​ ಗಾಂಧಿಗೆ ಅಪೇಕ್ಷಿತ ಬಹುಮತ ಗಳಿಸಲು ಸಾಧ್ಯವಾಗಿರಲಿಲ್ಲ. ಪ್ರಿಯಾಂಕಾ ಗಾಂಧಿ ಆರು ಲಕ್ಷಕ್ಕೂ ಹೆಚ್ಚು ಮತಗಳ ಅಂತರದ ಬಹುಮತ ಪಡೆಯುತ್ತಾರೆ ಎಂಬ ಭರವಸೆಯನ್ನು ಕ್ಷೇತ್ರದ ನಾಯಕರು ಹೈಕಮಾಂಡ್​ಗೆ ನೀಡಿದ್ದಾರೆ. ಆದಾಗ್ಯೂ, ಏಳು ಲಕ್ಷ ಬಹುಮತದ ಗುರಿಯ ಸಾಧಿಸುವ ಬಗ್ಗೆ ಎಐಸಿಸಿ ದೃಢ ನಿಲುವು ತಾಳಿದೆ.

ಪ್ರಿಯಾಂಕಾ ಗಾಂಧಿ ಅವರನ್ನು ಅಭ್ಯರ್ಥಿಯಾಗಿ ಘೋಷಣೆಯೊಂದಿಗೆ ಕಾಂಗ್ರೆಸ್‌ನ ಕೆಳಹಂತದಿಂದ ಜಿಲ್ಲಾ ಮಟ್ಟದ ವರೆಗಿನ ಎಲ್ಲಾ ಘಟಕಗಳು ಸಕ್ರಿಯವಾಗಿವೆ. ರೈತ ಕಾಂಗ್ರೆಸ್, ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ನಿತ್ಯ ಸಭೆ ನಡೆಸುತ್ತಿವೆ. ಐದ ಮಂದಿ ಜಿಲ್ಲಾ ಕಾರ್ಯದರ್ಶಿಗಳಿಗೆ ಘಟಕಗಳ ಸಲಹೆಗಳನ್ನು ಆಲಿಸಿಸುವ ಜವಾಬ್ದಾರಿ ವಹಿಸಲಾಗಿದೆ. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಈಗಾಗಲೇ ನಿಗದಿಪಡಿಸಲಾದ ಬಹುಮತ ಕೊಡಿಸಲು ಪ್ರಯತ್ನಗಳನ್ನು ಪ್ರಾರಂಭಿಸಿವೆ. ಭಾರಿ ಮಳೆ ಹೊರತಾಗಿಯೂ, ಪ್ರಿಯಾಂಕಾ ಅವರನ್ನು ಸ್ವಾಗತಿಸುವ ಬ್ಯಾನರ್​ಗಳನ್ನು ಎಲ್ಲಾ ಪ್ರಮುಖ ಕೇಂದ್ರಗಳಲ್ಲಿ ಹಾಕಲಾಗಿದೆ.

2019ರ ಚುನಾವಣೆಯಲ್ಲಿ, ರಾಹುಲ್ ಗಾಂಧಿ ಒಟ್ಟು 7,06,367 ಮತ ಗಳಿಸಿ, 4,31,770 ಬಹುಮತದಿಂದ ಜಯಗಳಿಸಿದ್ದರು. ಆದರೆ, ಇತ್ತೀಚಿಗೆ ನಡೆದ ಚುನಾವಣೆಗಳಲ್ಲಿ, ಅವರ ಬಹುಮತ ಸ್ವಲ್ಪ ಕಡಿಮೆಯಾಗಿತ್ತು. ರಾಹುಲ್ ಒಟ್ಟು 6,47,445 ಮತಗ ಗಳಿಸಿ, 3,64,422 ಬಹುಮತ ಪಡೆದಿದ್ದರು.

ಬರುವ ಉಪಚುನಾವಣೆಯಲ್ಲಿ, ಲೋಕಸಭಾ ಕ್ಷೇತ್ರದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ನಾಯಕರು ಪ್ರಿಯಾಂಕಾ ಗಾಂಧಿ ಅವರ ಬಹುಮತವು ಆರು ಲಕ್ಷ ಮತಗಳನ್ನು ಮೀರಬೇಕು ಎಂದು ಹೇಳಿದೆ. ಕಳೆದ ಬಾರಿ ರಾಹುಲ್ ಗಾಂಧಿ ಪರ ಪ್ರಚಾರ ತಡವಾಗಿ ಆರಂಭವಾಗಿತ್ತು. ಈ ಬಾರಿ, ಕಾಂಗ್ರೆಸ್ ಮತ್ತು ಯುಡಿಎಫ್ ಪ್ರಚಾರವನ್ನು ಬೇಗನೆ ಆರಂಭಿಸಲು ನಿರ್ಧರಿಸಿವೆ.

ದೇಶ

ಪಿಎಂ ಮೋದಿ ಆಗಸ್ಟ್ 10ರಂದು ಬೆಂಗಳೂರಿಗೆ: ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ

ಬೆಂಗಳೂರು: ನಮ್ಮ ಮೆಟ್ರೋ (Namma Metro) ಹಳದಿ ಮಾರ್ಗದ (Yellow Line) ಉದ್ಘಾಟನೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Modi) ಆಗಸ್ಟ್ 10ರಂದು ಬೆಂಗಳೂರಿಗೆ ಬರುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಧಾನಿಯವರು ಆಗಸ್ಟ್ 10ರಂದು ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟನೆ ಮಾಡುವ ಉದ್ದೇಶದಿಂದ ಬರುತ್ತಿದ್ದಾರೆ. ಅವರ ಭೇಟಿಗೆ ಸಿದ್ಧತೆಗಳು ನಡೆಯುತ್ತಿವೆ. ಟೈಮ್ ಟು ಟೈಮ್ ಕಾರ್ಯಕ್ರಮಗಳ ಬಗ್ಗೆ ಇನ್ನೂ ವಿವರ ಬಾಕಿಯಿದೆ,” ಎಂದು ಹೇಳಿದರು.

ವೈಭವದಿಂದ ಕಾರ್ಯಕ್ರಮ?
ಆದರೆ, ಮೂಲ ಯೋಜನೆಗೆ ಬದಲಾವಣೆ ಆಗಿದೆ. ಈಗ ಪ್ರಧಾನಿಯವರು ಕೇವಲ ಹಳದಿ ಮಾರ್ಗದ ಮೆಟ್ರೋ ಮತ್ತು ವಂದೇ ಭಾರತ್ ರೈಲು ಉದ್ಘಾಟನೆಗೆ ಮಾತ್ರ ಭಾಗಿಯಾಗಲಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ರೋಡ್ ಶೋ ಕಾರ್ಯಾಚರಣೆಗಳು ರದ್ದುಪಡಿಸಲಾಗಿದೆ.

ಇದರ ಪರಿಣಾಮವಾಗಿ, ಒಂದು ವರ್ಷದಿಂದ ಮೋದಿಯವರ ಆಗಮನದ ನಿರೀಕ್ಷೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರು ನಿರಾಸೆಗೊಳಗಾಗಿದ್ದಾರೆ ಎಂದು ವರದಿಯಾಗಿದೆ.

Continue Reading

ದೇಶ

ಭಾರತ vs ಅಮೆರಿಕ: ರಷ್ಯಾದ ತೈಲದ ಬಗ್ಗೆ ಉದ್ವಿಗ್ನತೆ, ಸೇನೆಯಿಂದ ತಿರುಗೇಟು

ಬೆಂಗಳೂರು: ರಷ್ಯಾದಿಂದ ಕಚ್ಚಾ ತೈಲ ಖರೀದಿಯ ಕುರಿತು ಭಾರತ-ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತಾಗಿದೆ. ಭಾರತ ರಷ್ಯಾದಿಂದ ತೈಲ ಆಮದು ಮಾಡುತ್ತಿರುವುದಕ್ಕೆ ಅಮೆರಿಕ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ಭಾರತೀಯ ಸೇನೆ ಅಮೆರಿಕದ ದ್ವೇಧಾಚರಣೆ ವಿರುದ್ಧ ತಿರುಗೇಟು ನೀಡಿದೆ.

ಸೋಷಿಯಲ್ ಮೀಡಿಯಾದಲ್ಲಿ “ಈ ದಿನ ಆ ವರ್ಷ – ಯುದ್ಧದ ನಿರ್ಮಾಣ – 05 ಆಗಸ್ಟ್ 1971” ಎಂಬ ಶೀರ್ಷಿಕೆಯಡಿ ಸೇನೆಯು 1971ರ ಯುದ್ಧದ ಕಾಲದ ಪತ್ರಿಕಾ ಕಟಿಂಗ್‌ ಹಂಚಿಕೊಂಡಿದೆ. 1954ರಿಂದ 1971ರವರೆಗೆ ಅಮೆರಿಕ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಪೂರೈಸಿದ ಬಗ್ಗೆ ಪೇಪರ್ ಕಟಿಂಗ್‌ ಉಲ್ಲೇಖಿಸುತ್ತಾ, “ಅಮೆರಿಕ ಪಾಕ್ ಪರ ಕೆಲಸ ಮಾಡಿತ್ತಲ್ಲವೆ?” ಎಂದು ಪ್ರಶ್ನಿಸಿದೆ.

ಇದು ಉಕ್ರೇನ್ ವಿರುದ್ಧದ ಯುದ್ಧಕ್ಕೆ ಭಾರತ ಹಣ ಒದಗಿಸುತ್ತಿದೆ ಎಂಬ ಅಮೆರಿಕದ ಆರೋಪಕ್ಕೆ ಪ್ರತಿಕ್ರಿಯೆಯಾಗಿದೆ. ಭಾರತವು ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದ ಟೀಕೆಗಳನ್ನು ‘ಅಸಮರ್ಥನೀಯ ಹಾಗೂ ಅಸಮಂಜಸ’ವೆಂದು ತಿರಸ್ಕರಿಸಿದೆ. ಭಾರತ ತನ್ನ ತೈಲ ನೀತಿಯನ್ನು ಆರ್ಥಿಕ ಶಕ್ತಿಯ ದೃಷ್ಟಿಯಿಂದ ಮುಂದುವರಿಸುತ್ತಿದೆ.

Continue Reading

ದೇಶ

ಸೇನೆ ಕುರಿತ ಹೇಳಿಕೆ: ಸುಪ್ರೀಂ ಕೋರ್ಟ್ ಟೀಕೆಗೆ ಪ್ರಿಯಾಂಕಾ ಗಾಂಧಿಯಿಂದ ಕಠಿಣ ಪ್ರತಿಕ್ರಿಯೆ

ನವದೆಹಲಿ: ಭಾರತೀಯ ಸೇನೆ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಇದೀಗ ಅವರ ಸಹೋದರಿ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.

ರಾಹುಲ್ ಗಾಂಧಿಯ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ಟೀಕೆಗೆ ಪ್ರತಿಕ್ರಿಯಿಸಿ ಪ್ರಿಯಾಂಕಾ ಗಾಂಧಿ,

“ಯಾರು ನಿಜವಾದ ಭಾರತೀಯರು ಎಂಬುದನ್ನು ನಿರ್ಧರಿಸಲು ನ್ಯಾಯಾಧೀಶರು ಯೋಗ್ಯರಲ್ಲ. ರಾಹುಲ್ ಗಾಂಧಿಗೆ ಭಾರತೀಯ ಸೇನೆಯ ಬಗ್ಗೆ ಅಪಾರ ಗೌರವವಿದೆ. ಅವರು ಎಂದಿಗೂ ಸೇನೆಯ ವಿರುದ್ಧ ಕೆಟ್ಟ ಮಾತುಗಳನ್ನು ಮಾತನಾಡಲ್ಲ,” ಎಂದು ತಿಳಿಸಿದ್ದಾರೆ.

ಗಲ್ವಾನ್ ಕಣಿವೆ ಸಂಘರ್ಷ ಕುರಿತು ಮಾತನಾಡಿದ ವೇಳೆ ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ‘ಅನುಚಿತ’ ಎಂದು ಖಂಡಿಸಿದ್ದು, “ನಿಜವಾದ ಭಾರತೀಯರು ಈ ರೀತಿ ಮಾತನಾಡುವುದಿಲ್ಲ” ಎಂದು ಹೇಳಿದ್ದಾರೆ. ಇದನ್ನು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದು, “ವಿರೋಧ ಪಕ್ಷದ ನಾಯಕರಾಗಿ ಸರ್ಕಾರವನ್ನು ಪ್ರಶ್ನಿಸುವುದು ರಾಹುಲ್ ಅವರ ಕರ್ತವ್ಯ. ನ್ಯಾಯಮೂರ್ತಿಗಳು ಇಂತಹ ಹೇಳಿಕೆ ನೀಡುವುದು ಸರಿಯಲ್ಲ,” ಎಂದಿದ್ದಾರೆ.

ಅದೇ ರೀತಿ, ಪ್ರಿಯಾಂಕಾ ಗಾಂಧಿ ಸರ್ಕಾರದ ನಡೆಗೆ ಶಂಕೆ ವ್ಯಕ್ತಪಡಿಸಿ,

“ರಾಹುಲ್ ಗಾಂಧಿಯ ಪ್ರಶ್ನೆಗಳಿಗೆ ಸರ್ಕಾರದ ಬಳಿ ಉತ್ತರಗಳಿಲ್ಲ. ಅವರು ಚರ್ಚೆಗೆ ತಯಾರಿಲ್ಲ. ಸಂಸತ್ತನ್ನು ಸರಿಯಾಗಿ ನಡೆಸಲಾಗುತ್ತಿಲ್ಲ. ಇದನ್ನೆಲ್ಲಾ ಮರೆಮಾಚಲು ಈ ರೀತಿಯ ತಂತ್ರಗಳನ್ನು ಬಳಸುತ್ತಿದ್ದಾರೆ,” ಎಂದು ವಾಗ್ದಾಳಿ ನಡೆಸಿದ್ದಾರೆ.

Continue Reading

Trending