ರಾಜ್ಯ
ಅವಮಾನಿತರಿಂದಲೇ ಸನ್ಮಾನ: ರೈತನಿಗೆ ಕ್ಷಮೆ ಕೇಳಿ ಸನ್ಮಾನಿಸಿದ ಬೆಂಗಳೂರಿನ ಜಿ ಟಿ ಮಾಲ್!ನ್ಅವಮಾನಿತರಿಂದಲೇ ಸಮ್ಮಾನ: ರೈತನಿಗೆ ಕ್ಷಮೆ ಕೇಳಿ ಸನ್ಮಾನಿಸಿದ ಬೆಂಗಳೂರಿನ ಜಿ ಟಿ ಮಾಲ್!
ಬೆಂಗಳೂರು: ಧರಿಸಿದ ಬಟ್ಟೆ ನೋಡಿ ಮನುಷ್ಯನಿಗೆ ಮಣೆ ಹಾಕಬಾರದು ಎಂಬ ಮಾತಿಗೆ ಈ ಘಟನೆ ಉದಾಹರಣೆ.
ಬೆಂಗಳೂರಿನ ಜಿಟಿ ಮಾಲ್‌ಗೆ 60 ವರ್ಷ ವಯಸ್ಸಿನ ಫಕೀರಪ್ಪ ಎಂಬ ರೈತರು ಸಾಂಪ್ರದಾಯಿಕ ಧೋತಿ ಮತ್ತು ಶರ್ಟ್ ಧರಿಸಿದ ಬಂದಿದ್ದರು ಎಂಬ ಕಾರಣಕ್ಕೆ ಒಳಗೆ ಬಿಡಲಿಲ್ಲ. ನಿನ್ನೆ ಅವರು ತಮ್ಮ ಮಗ ಮತ್ತು ಇಡೀ ಕುಟುಂಬದೊಂದಿಗೆ ಕಲ್ಕಿ ಸಿನಿಮಾ ವೀಕ್ಷಣೆಗೆ ಬಂದಿದ್ದರು. ರೈತ ಮತ್ತು ಅವರ ಮಗ ಮಂಗಳವಾರ ಚಲನಚಿತ್ರವನ್ನು ವೀಕ್ಷಿಸಲು ಮಾಲ್‌ಗೆ ಹೋಗಿದ್ದಾರೆ, ಆದರೆ ಭದ್ರತಾ ಸಿಬ್ಬಂದಿ ಅವರ ಪ್ರವೇಶಕ್ಕೆ ಸೂಕ್ತವಲ್ಲ ಎಂದು ಪರಿಗಣಿಸಿದ್ದಾರೆ.
ನಡೆದ ಘಟನೆಯೇನು?: ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಹಾವೇರಿಯ ನಾಗರಾಜ್ ತನ್ನ ತಂದೆಯೊಂದಿಗೆ ಮಾಗಡಿ ರಸ್ತೆಯ ಜಿಟಿ ಮಾಲ್‌ಗೆ ಸಿನಿಮಾ ವೀಕ್ಷಿಸಲು ತೆರಳಿದ್ದ ವೇಳೆ ಘಟನೆ ನಡೆದಿದೆ. ಇವರು ಹಾವೇರಿ ಮೂಲದವರಾಗಿದ್ದು, ರೈತ ನಾಗರಾಜ್ ಅವರ ತಂದೆ ಸಾಂಪ್ರದಾಯಿಕ ರೈತ ಉಡುಗೆ ತೊಟ್ಟಿದ್ದ ಕಾರಣ ಮಾಲ್ ಸಿಬ್ಬಂದಿ ಇಬ್ಬರನ್ನು ಮುಖ್ಯ ಪ್ರವೇಶಕ್ಕೆ ತಡೆದಿದ್ದಾರೆ. ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಸಿಬ್ಬಂದಿಗೆ ಮನವಿ ಮಾಡಿದರೂ ಪ್ರವೇಶ ನಿರಾಕರಿಸಲಾಯಿತು. ನಾಗರಾಜ್ ಮೇಲ್ವಿಚಾರಕರನ್ನು ಪ್ರಶ್ನಿಸಿದಾಗ, ಉನ್ನತ ಅಧಿಕಾರಿಗಳು ಇಂತಹ ಬಟ್ಟೆ ಧರಿಸಿದವರನ್ನು ಒಳಗೆ ಬಿಡಬಾರದು ಎಂದು ಆದೇಶ ನೀಡಿದ್ದಾರೆ ಎಂದಿದ್ದಾರೆ.
ಇದಕ್ಕೆ ಬೇಸರದಿಂದ ನಾಗರಾಜ್ ತಮ್ಮ ಮೊಬೈಲ್ ನಲ್ಲಿ ವಿಡಿಯೊ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದರು. ಅದು ವೈರಲ್ ಆಗಿ ರೈತಪರ ಸಂಘಟನೆಗಳು ಮತ್ತು ಕನ್ನಡ ಪರ ಸಂಘಟನೆಗಳ ಸದಸ್ಯರ ಕಣ್ಣಿಗೆ ಬಿದ್ದಿದೆ. ಅವರು ಇಂದು ಬೆಳಗ್ಗೆ ಮಾಲ್ ನ ಮುಂದೆ ಬಂದು ಪ್ರತಿಭಟನೆ ನಡೆಸಿದ್ದರು.
ಸುದ್ದಿ ಮಾಧ್ಯಮಗಳಲ್ಲಿ ಇಂದು ವ್ಯಾಪಕವಾಗಿ ಸುದ್ದಿಯಾಗುತ್ತಿದ್ದಂತೆ ಎಚ್ಚೆತ್ತ ಮಾಲ್ ಮಾಲೀಕರು ಒಳಗೆ ಬಿಡದ ವಾಚ್ ಮೆನ್ ನ್ನು ಕೆಲಸದಿಂದ ವಜಾ ಮಾಡಿದ್ದಲ್ಲದೆ ರೈತ ಫಕೀರಪ್ಪನನ್ನು ಕರೆದು ಮಾಲ್ ನಲ್ಲಿ ಇಂದು ಸನ್ಮಾನಿಸಿದ್ದಾರೆ. ಮಾಲ್ ಇನ್ಚಾರ್ಜ್ ಸುರೇಶ್ ಅವರು ಫಕೀರಪ್ಪಗೆ ಕ್ಷಮೆಯಾಚಿಸಿದ್ದಾರೆ.
ರೈತ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಈ ಬಗ್ಗೆ ಮಾತನಾಡಿದ, ಜಿ.ಟಿ.ಮಾಲ್ ನಲ್ಲಿ ವೇಷಭೂಷಣದ ಕಾರಣಕ್ಕೆ ರೈತರೊಬ್ಬರಿಗೆ ಪ್ರವೇಶ ನಿರಾಕರಿಸಿರುವ ಘಟನೆ ನಾಚಿಕೆಗೇಡಿನ ಸಂಗತಿ. ಬೆಂಗಳೂರು ಪೊಲೀಸರು ಕೂಡಲೇ ಮಾಲ್ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮಾಲ್ ಮಾಲೀಕರು ರೈತನ ಕ್ಷಮೆ ಕೇಳಬೇಕು; ಇಲ್ಲದಿದ್ದರೆ ರಾಜ್ಯದ ನೂರಾರು ರೈತರು ಮಾಲ್‌ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ರೈತರಿಲ್ಲದೆ ಮಾಲ್ ನಡೆಸಲು ಸಾಧ್ಯವೇ ಎಂದು ಪ್ರಶ್ನಿಸಿದರು. ಮಾಲ್ ಮಾಲೀಕರು ಆಹಾರ ಸೇವಿಸುತ್ತಿದ್ದರೆ, ಅವರು ಈ ರೀತಿ ವರ್ತಿಸುತ್ತಿರಲಿಲ್ಲ. ರೈತರು ದೇಶದ ಬೆನ್ನೆಲುಬು ಎಂದು ಹೇಳಿದ್ದರು.
ಕೃಷ್ಣ ಭೈರೇಗೌಡ ಪ್ರತಿಕ್ರಿಯೆ
ಈ ಘಟನೆ ಸಂಬಂಧ ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಪ್ರತಿಕ್ರಿಯೆ ನೀಡಿದ್ದು, ಮುಖ ನೋಡಿ, ಬಟ್ಟೆ ನೋಡಿ ಒಬ್ಬ ವ್ಯಕ್ತಿಯನ್ನು ಅಳೆಯಬಾರದು. ಇದೊಂದು ಬ್ರಿಟಿಷರ ಮನಸ್ಥಿತಿ, ನಮ್ಮನ್ನು ಆಳಿದವರ ಮೈಂಡ್ಸೆಟ್. ಜಿ.ಟಿ.ಮಾಲ್ ಅಷ್ಟೇ ಅಲ್ಲ, ಬೇರೆ ಕಡೆಯೂ ಇಂತಹ ರೀತಿ ನಡೆದಿವೆ. ಅರಿವಿನ ಕೊರತೆ ಇದೆಯೋ, ದುರಹಂಕಾರದಿಂದ ಮಾಡುತ್ತಿದ್ದಾರೋ? ಜಿ.ಟಿ.ಮಾಲ್ನವರು ಹಾಗೇ ನಡೆದುಕೊಂಡಿದ್ದು ತಪ್ಪು, ಖಂಡನೀಯ. ಮುಖ ನೋಡಿ ಗೌರವ ಕೊಡುವುದು ಖಂಡನೀಯ ಎಂದರು.
ಇತ್ತೀಚಿಗೆ ರೈತನೊಬ್ಬನಿಗೆ ನಮ್ಮ ಮೆಟ್ರೋದಲ್ಲಿ ಪ್ರವೇಶ ನಿರಾಕರಿಸಲಾಗಿತ್ತು. ಭದ್ರತಾ ಸಿಬ್ಬಂದಿ ಅವರ ಉಡುಪು ಕಂಡು ಪ್ರಯಾಣಕ್ಕೆ ಅನುಚಿತ ಎಂದು ಬಿಟ್ಟಿರಲಿಲ್ಲ. ಈ ಘಟನೆಯ ನಂತರ ಭದ್ರತಾ ಮೇಲ್ವಿಚಾರಕನನ್ನು ವಜಾಗೊಳಿಸಲಾಗಿತ್ತು.
ಅಪರಾಧ
ಬಿಕ್ಲು ಶಿವ ಕೊಲೆ ಪ್ರಕರಣ: ಸುಪ್ರೀಂಕೋರ್ಟ್ ಮೊರೆ ಹೋದ ಶಾಸಕ ಬೈರತಿ ಬಸವರಾಜ್
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ (Bairati Basavaraj) ಇದೀಗ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಅವರು ಅರ್ಜಿ ಸಲ್ಲಿಸಿದ್ದಾರೆ.
ನಿನ್ನೆ ಮಾತ್ರ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆದ ವಿಚಾರಣೆಯಲ್ಲಿ ನ್ಯಾಯಮೂರ್ತಿ ನ್ಯಾಸುನೀಲ್ ದತ್ ಯಾದವ್ ಅವರು ಅರ್ಜಿಯನ್ನು ತಿರಸ್ಕರಿಸಿದರು. ಈ ಬೆಳವಣಿಗೆಯ ಬೆನ್ನಲ್ಲೇ ಬೈರತಿ ಬಸವರಾಜ್ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬಿಕ್ಲು ಶಿವ ಭೀಕರ ಹತ್ಯೆ ಪ್ರಕರಣದಲ್ಲಿ ಈಗಾಗಲೇ 20 ಆರೋಪಿಗಳ ಪೈಕಿ ಎ-1 ಆರೋಪಿ ಜಗದೀಶ್ ಸೇರಿ 18 ಮಂದಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಡೀಫಾಲ್ಟ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ತಿರಸ್ಕರಿಸಿತ್ತು.
ಇದಕ್ಕೂ ಮುನ್ನ ಬೆಳಗಾವಿ ಅಧಿವೇಶನದ ಸಮಯದಲ್ಲಿ ನಾಪತ್ತೆಯಾಗಿದ್ದ ಬೈರತಿ ಬಸವರಾಜ್ ಬಂಧನಕ್ಕೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಮಧ್ಯಂತರ ಜಾಮೀನು ಮಂಜೂರಾದರೂ, ನಂತರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬೇಲ್ ರದ್ದುಪಡಿಸಿತ್ತು.
ಇದೀಗ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಯಾವಾಗ ನಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.
ಅಪರಾಧ
BENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಶಾಲಾ ಬಸ್ ಹರಿದು ಇಬ್ಬರು ಪುಟ್ಟ ಮಕ್ಕಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ (Bengaluru Accident) ಹೆಣ್ಣೂರು ಸಂಚಾರ ಠಾಣಾ ವ್ಯಾಪ್ತಿಯ ಥಣಿಸಂದ್ರದಲ್ಲಿ ನಡೆದಿದೆ.
ಮೃತರನ್ನು ನಗರದ ಸಿಎಆರ್ ವಿಭಾಗದ ಕಾನ್ಸ್‌ಟೇಬಲ್ ನಾಗನಗೌಡ ಅವರ ಮಕ್ಕಳಾದ ವರ್ಷ (2) ಮತ್ತು ಭಾನು (4) ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ ನಾಗನಗೌಡ ಅವರು ಸ್ಕೂಟರ್‌ನಲ್ಲಿ ಇಬ್ಬರು ಮಕ್ಕಳನ್ನು ಕೂರಿಸಿಕೊಂಡು ಹಾಲು ತರಲು ತೆರಳಿದ್ದರು. ಥಣಿಸಂದ್ರ ಮುಖ್ಯರಸ್ತೆಯ ಬಳಿ ಎದುರುಗಡೆಯಿಂದ ಬಂದ ಅಜ್ ಮೋನಿ ಶಾಲೆಯ ಬಸ್ ಏಕಾಏಕಿ ತಿರುವು ಪಡೆದುಕೊಂಡಿದೆ. ಈ ವೇಳೆ ಸ್ಕೂಟರ್ ಮೇಲೆ ಬಸ್ ಹರಿದ ಪರಿಣಾಮ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ನಂತರ ಸ್ಥಳಕ್ಕೆ ಉತ್ತರ ವಿಭಾಗದ ಸಂಚಾರ ಪೊಲೀಸ್ ಡಿಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಣ್ಣೂರು ಸಂಚಾರ ಪೊಲೀಸರು ಮಹಜರು ನಡೆಸಿ, ಶಾಲಾ ಬಸ್ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಅಜಾಗರೂಕತೆಯಿಂದ ಬಸ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.
ನಗರದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದು, ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿಯ ಅವಶ್ಯಕತೆ ಮತ್ತೆ ಒತ್ತಿ ಹೇಳಲಾಗಿದೆ.
ದೇಶ
638 ಕನ್ನಡ ಶಾಲೆ ಮುಚ್ಚಿದ ಸರ್ಕಾರದ ವಿರುದ್ಧ ಬೊಮ್ಮಾಯಿ ಆಕ್ರೋಶ
ನವದೆಹಲಿ: ರಾಜ್ಯದಾದ್ಯಂತ 638 ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಿರುವುದು ಕನ್ನಡ ಮತ್ತು ಕನ್ನಡ ಶಿಕ್ಷಣದ ವಿರುದ್ಧದ ಕ್ರಮವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಗಂಭೀರವಾಗಿ ಹದಗೆಟ್ಟಿದೆ ಎಂದು ಆರೋಪಿಸಿದರು. “ಸರ್ಕಾರಿ ನೌಕರರಿಗೆ ಸರಿಯಾಗಿ ಸಂಬಳ ನೀಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಕಾರಣದಿಂದ ಕನ್ನಡ ಶಾಲೆಗಳನ್ನು ಮುಚ್ಚಲಾಗುತ್ತಿದೆ” ಎಂದು ಹೇಳಿದರು. ಈ ನಿರ್ಧಾರದಿಂದ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ದೊಡ್ಡ ಹೊಡೆತ ಬಿದ್ದಿದೆ ಎಂದು ಅವರು ಅಭಿಪ್ರಾಯಪಟ್ಟರು.
ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಸರ್ಕಾರ ಬದ್ಧವಾಗಿರಬೇಕು. ಆದರೆ ಪ್ರಸ್ತುತ ಸರ್ಕಾರದ ನಡೆ ಕನ್ನಡ ವಿರೋಧಿ ಧೋರಣೆಯಾಗಿದೆ ಎಂದು ಟೀಕಿಸಿದ ಬೊಮ್ಮಾಯಿ, ಕೂಡಲೇ ಮುಚ್ಚಿರುವ ಎಲ್ಲಾ ಕನ್ನಡ ಶಾಲೆಗಳನ್ನು ಪುನಾರಂಭಿಸಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಜೊತೆಗೆ, ಲೋಕಸಭೆ ಸ್ಪೀಕರ್ ವಿರುದ್ಧ ಕಾಂಗ್ರೆಸ್ ಪಕ್ಷ ಅವಿಶ್ವಾಸ ನಿರ್ಣಯ ಮಂಡಿಸಿರುವ ವಿಚಾರಕ್ಕೂ ಪ್ರತಿಕ್ರಿಯಿಸಿದ ಅವರು, “ನಿರಂತರ ಚುನಾವಣಾ ಸೋಲುಗಳಿಂದ ಕಾಂಗ್ರೆಸ್ ಹತಾಶಗೊಂಡಿದೆ” ಎಂದು ಹೇಳಿದರು. ಸಂಸತ್ತಿನಲ್ಲಿ ಬೆಂಚ್‌ಗಳ ಮೇಲೆ ನಿಂತು ಗದ್ದಲ ಮಾಡುವುದು, ಸ್ಪೀಕರ್ ವಿರುದ್ಧ ದಾಳಿ ನಡೆಸುವುದು ಹಾಗೂ ಪ್ರಧಾನಮಂತ್ರಿಯ ಆಸನದವರೆಗೆ ತೆರಳಿ ತಡೆ ಮಾಡುವ ಪ್ರಯತ್ನ ಮಿತಿಮೀರಿದ ವರ್ತನೆ ಎಂದು ಅವರು ಆರೋಪಿಸಿದರು.
ರಾಜಕೀಯದಲ್ಲಿ ಆರೋಗ್ಯಕರ ಚರ್ಚೆ ನಡೆಯಬೇಕು. ಗದ್ದಲ ಹಾಗೂ ಅಶಾಂತಿಯಿಂದ ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ ಎಂದು ಬೊಮ್ಮಾಯಿ ಎಚ್ಚರಿಸಿದರು.
-
ದೇಶ18 hours agoರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಹಾಡುವುದು ಕಡ್ಡಾಯ
-
ದೇಶ16 hours agoBIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ
-
ಕ್ರೀಡೆ17 hours agoT20 WORLD CUP : ಡಬಲ್ ಸೂಪರ್ ಓವರ್ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು
-
ದೇಶ15 hours agoLATEST : ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ? ರಿಜುಜು ಕಿಡಿ
-
ಅಪರಾಧ16 hours agoBENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
-
ದೇಶ15 hours agoಎಪ್ಸ್ಟೀನ್ ಫೈಲ್ಸ್ನಲ್ಲಿ ಹರ್ದೀಪ್ ಪುರಿ ಹೆಸರು? ಸಂಸತ್ತಿನಲ್ಲಿ ಗದ್ದಲ, ಸಚಿವರ ಸ್ಪಷ್ಟನೆ
-
ದೇಶ17 hours agoPOK-ಅಕ್ಸಾಯ್ ಚಿನ್ ಭಾರತದ ಭಾಗ ಎಂದ US… ನಂತರ ಡಿಲೀಟ್!
-
ದೇಶ17 hours agoಅಧಿಕಾರ ಹಂಚಿಕೆ ವಿವಾದ: “ಹೈಕಮಾಂಡ್ ತೀರ್ಮಾನವೇ ಅಂತಿಮ” – ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
