Connect with us

ಚುನಾವಣೆ

ಯೋಗಿ ಕ್ಯಾಬಿನೆಟ್‌ಗೆ ಸರ್ಜರಿ – ಉಪ ಚುನಾವಣೆ ಬೆನ್ನಲ್ಲೇ ಸಂಪುಟ ಪುನರ್‌ ರಚನೆ

ನವದೆಹಲಿ: ಉತ್ತರ ಪ್ರದೇಶದ (Uttar Pradesh) 13 ವಿಧಾನಸಭೆಗಳಿಗೆ ಉಪ ಚುನಾವಣೆ ಬೆನ್ನಲ್ಲೇ ಸಚಿವ ಸಂಪುಟ ಪುನರ್ ರಚನೆಯಾಗುವ ಸಾಧ್ಯತೆಗಳಿವೆ ಎಂದು ಬಿಜೆಪಿ ಉನ್ನತ ಮೂಲಗಳು ಹೇಳಿವೆ. ಈ ಸಂಬಂಧ ರಾಷ್ಟ್ರೀಯ ಅಧ್ಯಕ್ಷ ಜೆ‌.ಪಿ ನಡ್ಡಾ ಜೊತೆಗೆ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಚರ್ಚೆ ನಡೆಸಿದ್ದಾರೆ.

ಮುಂಬರುವ ಉಪ ಚುನಾವಣೆ ತಯಾರಿಗೆ ಸಂಬಂಧಿಸಿದಂತೆ ಉಭಯ ನಾಯಕರ ನಡುವೆ ಚರ್ಚೆ ನಡೆದಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ರಾಜ್ಯದಲ್ಲಿ ಹಿನ್ನಡೆಯಾಗಿದ್ದು, ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಗಳಲ್ಲಿ 13 ರ ಪೈಕಿ 2 ಮಾತ್ರ ಬಿಜೆಪಿ ಗೆದ್ದಿದೆ. ಹೀಗಾಗಿ ಉತ್ತರ ಪ್ರದೇಶದಲ್ಲಿ ನಡೆಯಲಿರುವ ಉಪ ಚುನಾವಣೆ ಮಹತ್ವದಾಗಿದ್ದು, ಗಂಭೀರವಾಗಿ ಪರಿಗಣಿಸಲು ಹೈಕಮಾಂಡ್ ಸೂಚಿಸಿದೆ.

ಮೂಲಗಳ ಪ್ರಕಾರ ಯೋಗಿ ಆದಿತ್ಯನಾಥ್ ಸಂಪುಟದಲ್ಲಿ ದೊಡ್ಡ ಬದಲಾವಣೆಯಾಗುವ ಸಾಧ್ಯತೆ ಇದೆ. ಆದಾಗ್ಯೂ ಸಿಎಂ, ಡಿಸಿಎಂ ಬದಲಾವಣೆ ಬಗ್ಗೆ ಸಭೆಯಲ್ಲಿ ಯಾವುದೇ ಚರ್ಚೆಯನ್ನು ಮಾಡಿಲ್ಲ. ಲೋಕಸಭೆ ಚುನಾವಣಾ ಫಲಿತಾಂಶದ ಆಧಾರದ ಮೇಲೆ ಸಂಪುಟದಲ್ಲಿ ಬದಲಾವಣೆಯಾಗಬಹುದು. ನಡ್ಡಾ ಜೊತೆಗಿನ ಸಭೆಯಲ್ಲಿ ಕೇಶವ್ ಪ್ರಸಾದ್ ಮೌರ್ಯ ಮತ್ತು ಯೋಗಿ ಆದಿತ್ಯನಾಥ್ ನಡುವಿನ ಭಿನ್ನಾಭಿಪ್ರಾಯದ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ.

ಈ ನಡುವೆ ಸಿಎಂ ಯೋಗಿ ಆದಿತ್ಯನಾಥ್ ಅವರು ತಮ್ಮ ಉಸ್ತುವಾರಿ ಸಚಿವರೊಂದಿಗೆ ಸಭೆ ನಡೆಸಿದ್ದಾರೆ. ಪ್ರಾಮಾಣಿಕ ಮತ್ತು ಗೆಲ್ಲಬಹುದಾದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು ಮತ್ತು ಅವರ ಇಮೇಜ್ ಮತ್ತು ಸಾರ್ವಜನಿಕರೊಂದಿಗಿನ ಸಂಪರ್ಕಕ್ಕೆ ಆದ್ಯತೆ ನೀಡಲಾಗುವುದು ಎಂದು ಅವರು ಹೇಳಿದ್ದಾರೆ ಎನ್ನಲಾಗಿದೆ.

ಬಿಜೆಪಿಯನ್ನು ಸಂಘಟನೆಯಾಗಿ ಬಲಪಡಿಸಲು ಬೂತ್ ಸಮಿತಿಗಳಲ್ಲಿ ಕೆಲಸ ಮಾಡುವುದರ ಜೊತೆಗೆ ಪಕ್ಷದ ಸ್ಥಳೀಯ ಕಾರ್ಯಕರ್ತರೊಂದಿಗೆ ಉತ್ತಮ ಹೊಂದಾಣಿಕೆಯನ್ನು ಹೊಂದಲು, ಎಲ್ಲಾ ಸಚಿವರು ತಮ್ಮ ತಮ್ಮ ಕ್ಷೇತ್ರಗಳಿಗೆ ತೆರಳಿ ಸ್ಥಳೀಯ ವಿಷಯಗಳ ಬಗ್ಗೆ ಪ್ರತಿಕ್ರಿಯೆ ಪಡೆಯಲು ಮತ್ತು ಅಭ್ಯರ್ಥಿಗಳ ಮೌಲ್ಯಮಾಪನ ಮಾಡಲು ಆದಿತ್ಯನಾಥ್ ಸೂಚಿಸಿದ್ದಾರೆ ಎಂದು ವರದಿಯಾಗಬಹುದು.

ಚುನಾವಣೆ

BENGALURU : ವಾರ್ಡ್ ಮರುವಿಂಗಡಣೆ ವಿರೋಧಿಸಿ ಶಾಸಕ ಎಂ. ಕೃಷ್ಣಪ್ಪ ಹೈಕೋರ್ಟ್ ಅರ್ಜಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕೆಲವು ವಾರ್ಡುಗಳ ಪ್ರದೇಶಗಳನ್ನು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವಾರ್ಡುಗಳಿಗೆ ಸೇರಿಸಿರುವ ಕ್ರಮವನ್ನು ಪ್ರಶ್ನಿಸಿ, ಬೆಂಗಳೂರು ದಕ್ಷಿಣ ಶಾಸಕ ಎಂ. ಕೃಷ್ಣಪ್ಪ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಮಂಗಳವಾರ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ರಾಜ್ಯ ಸರ್ಕಾರ ಸೇರಿದಂತೆ ಸಂಬಂಧಿತ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದೆ.

ರಾಜ್ಯ ಸರ್ಕಾರ, ಜಿಬಿಎ ಮುಖ್ಯ ಆಯುಕ್ತ, ದಕ್ಷಿಣ ನಗರ ಪಾಲಿಕೆ ಆಯುಕ್ತ, ವಾರ್ಡ್ ಮರುವಿಂಗಡಣೆ ಆಯೋಗ, ರಾಜ್ಯ ಚುನಾವಣಾ ಆಯೋಗ ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ನೋಟಿಸ್ ನೀಡಿರುವ ನ್ಯಾಯಾಲಯ, ಈ ವಿಚಾರದಲ್ಲಿ ಸರ್ಕಾರದಿಂದ ಸ್ಪಷ್ಟನೆ ಪಡೆಯಲು ಸೂಚಿಸಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ವಾರ್ಡುಗಳ ಕೆಲವು ಭಾಗಗಳನ್ನು ಬೊಮ್ಮನಹಳ್ಳಿ ಕ್ಷೇತ್ರದ ವ್ಯಾಪ್ತಿಗೆ ಸೇರಿಸಲಾಗಿದೆಯೇ ಎಂಬುದನ್ನು ವಿವರಿಸುವಂತೆ ಸರ್ಕಾರದ ವಕೀಲರಿಗೆ ನಿರ್ದೇಶನ ನೀಡಿ, ವಿಚಾರಣೆಯನ್ನು ಫೆಬ್ರವರಿ 18ಕ್ಕೆ ಮುಂದೂಡಲಾಗಿದೆ.

ಅರ್ಜಿಯಲ್ಲಿ, ಬೆಂಗಳೂರು ದಕ್ಷಿಣ ಕ್ಷೇತ್ರದ ಎಳೇನಹಳ್ಳಿ ವಾರ್ಡಿನ ಅಕ್ಷಯನಗರ ಹಾಗೂ ಅದರ ಸುತ್ತಲಿನ ಪ್ರದೇಶಗಳು ಮತ್ತು ಕೊತ್ತನೂರು ವಾರ್ಡಿನ ಕ್ಲಾಸಿಕ್ ಆರ್ಚರ್ಡ್ ಪ್ರದೇಶವನ್ನು ಕ್ರಮವಾಗಿ ಬೊಮ್ಮನಹಳ್ಳಿ ಕ್ಷೇತ್ರದ ವಿಜಯಾ ಬ್ಯಾಂಕ್ ಲೇಔಟ್ ಮತ್ತು ದೊರೆಸಾನಿಪಾಳ್ಯ ವಾರ್ಡುಗಳಿಗೆ ಸೇರಿಸಿರುವುದನ್ನು ಆಕ್ಷೇಪಿಸಲಾಗಿದೆ. ಒಂದು ವಾರ್ಡನ್ನು ಎರಡು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೆ ಸೇರಿಸುವುದು ಜಿಬಿಎ ಕಾಯ್ದೆ ಮತ್ತು ವಾರ್ಡ್ ಮರುವಿಂಗಡಣೆ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಹೊರಡಿಸಿರುವ ಅಧಿಸೂಚನೆಯನ್ನು ರದ್ದುಪಡಿಸಿ, ಬೊಮ್ಮನಹಳ್ಳಿ ಕ್ಷೇತ್ರಕ್ಕೆ ಸೇರಿಸಿರುವ ಪ್ರದೇಶಗಳನ್ನು ಮರುವಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ವಾರ್ಡುಗಳಿಗೆ ಸೇರಿಸಬೇಕೆಂದು ಹೈಕೋರ್ಟ್‌ಗೆ ಮನವಿ ಮಾಡಲಾಗಿದೆ.

ಈ ನಡುವೆ, ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆ ಹಿನ್ನೆಲೆ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಐದು ನಗರ ಪಾಲಿಕೆಗಳ 369 ವಾರ್ಡುಗಳಲ್ಲಿ ಒಟ್ಟು 88,91,411 ಮತದಾರರು ಇದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

Continue Reading

ಚುನಾವಣೆ

ವಿಜಯ್ ರಾಜಕೀಯ ಪ್ರವೇಶಕ್ಕೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯೆ

ನವದೆಹಲಿ: ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಹೊಸ ಪಕ್ಷ ಸ್ಥಾಪಿಸಿ ರಾಜಕೀಯಕ್ಕೆ ಕಾಲಿಟ್ಟಿರುವ ಸೂಪರ್ ಸ್ಟಾರ್ ದಳಪತಿ ವಿಜಯ್ (Thalapathy Vijay) ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಎನ್‌ಡಿಟಿವಿ ಪ್ರಾಫಿಟ್ ಕಾನ್ಕ್ಲೇವ್‌ನಲ್ಲಿ ಮಾತನಾಡಿದ ಅವರು, ವಿಜಯ್ ರಾಜಕೀಯ ಪ್ರವೇಶ ತಮಿಳುನಾಡು ರಾಜಕಾರಣಕ್ಕೆ ಹೊಸ ತಿರುವು ನೀಡಲಿದೆ ಎಂದು ಅಭಿಪ್ರಾಯಪಟ್ಟರು.

“ದಳಪತಿ ವಿಜಯ್ ಖಂಡಿತವಾಗಿಯೂ ಚುನಾವಣೆಯ ಮೇಲೆ ಪ್ರಭಾವ ಬೀರುತ್ತಾರೆ. ಆದರೆ ಅವರು ಯಾವ ಮಟ್ಟಿಗೆ, ಯಾವ ಪಕ್ಷಗಳ ಮತಗಳನ್ನು ಕಸಿದುಕೊಳ್ಳುತ್ತಾರೆ ಎಂಬುದು ಇನ್ನೂ ನೋಡಬೇಕಿದೆ. ವಿಶೇಷವಾಗಿ ಮಹಿಳಾ ಮತಗಳ ಮೇಲೆ ಅವರ ಪ್ರಭಾವ ಎಷ್ಟಿರುತ್ತದೆ ಎಂಬುದೇ ಮುಖ್ಯ ಅಂಶ” ಎಂದು ಸೀತಾರಾಮನ್ ಹೇಳಿದರು. ತಮಿಳುನಾಡು ರಾಜಕೀಯದಲ್ಲಿ ಮಹಿಳೆಯರು ಶಕ್ತಿಶಾಲಿ ಹಾಗೂ ನಿರ್ಧಾರಾತ್ಮಕ ಪಾತ್ರ ವಹಿಸುತ್ತಾರೆ. ಆ ಕಾರಣದಿಂದ ಮುಂದಿನ ಚುನಾವಣೆ ಅತ್ಯಂತ ಆಸಕ್ತಿದಾಯಕವಾಗಲಿದೆ ಎಂದರು.

ಇದೇ ವೇಳೆ, ಆಡಳಿತಾರೂಢ ಡಿಎಂಕೆಗೆ (DMK) ಈ ಬಾರಿ ಎನ್‌ಡಿಎ ಮೈತ್ರಿಕೂಟ (NDA Alliance) ಪ್ರಬಲ ಪೈಪೋಟಿ ನೀಡಲಿದೆ ಎಂದು ಅವರು ಪ್ರತಿಪಾದಿಸಿದರು. “ಬೃಹತ್ ಎನ್‌ಡಿಎ ಒಕ್ಕೂಟವನ್ನು ಎದುರಿಸುತ್ತಿರುವ ಡಿಎಂಕೆ ತನ್ನ ಗೆಲುವಿನ ಬಗ್ಗೆ ಆತ್ಮವಿಶ್ವಾಸದಲ್ಲಿಲ್ಲ. ಕಳೆದ ಒಂದು ವರ್ಷದಲ್ಲಿ ಅವರ ನಡೆ-ನುಡಿಗಳು ಆತಂಕ ಮತ್ತು ಅಸ್ಥಿರತೆಯನ್ನು ತೋರಿಸುತ್ತಿವೆ” ಎಂದು ಟೀಕಿಸಿದರು.

ಡಿಎಂಕೆ ಮಂತ್ರಿಗಳ ವಿವಾದಾತ್ಮಕ ಹೇಳಿಕೆಗಳು, ಉಚಿತ ಕೊಡುಗೆಗಳ ಘೋಷಣೆ, ದೇವಾಲಯ ಬೇಟಿ ಮುಂತಾದ ಕ್ರಮಗಳು ಪಕ್ಷದ ಆತಂಕವನ್ನು ಸ್ಪಷ್ಟಪಡಿಸುತ್ತವೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು. “ತಮಿಳುನಾಡಿನ ಅಭಿವೃದ್ಧಿ ಬಗ್ಗೆ ಮಾತನಾಡುವುದರಿಂದ ಮಾತ್ರ ಮತಗಳನ್ನು ಗಳಿಸಲು ಸಾಧ್ಯವಿಲ್ಲ. ಇದು ಡಿಎಂಕೆಯ ಪ್ರಮುಖ ಮಿತಿ. ಈ ಸತ್ಯವನ್ನು ಡಿಎಂಕೆಯೂ ಅರಿತಿದೆ” ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ದಳಪತಿ ವಿಜಯ್ ರಾಜಕೀಯ ಪ್ರವೇಶ, ಮಹಿಳಾ ಮತಗಳ ಪಾತ್ರ ಮತ್ತು ಎನ್‌ಡಿಎ–ಡಿಎಂಕೆ ನಡುವಿನ ಪೈಪೋಟಿ ತಮಿಳುನಾಡು ಚುನಾವಣೆಯನ್ನು ಮತ್ತಷ್ಟು ಕುತೂಹಲಕಾರಿಯಾಗಿಸುತ್ತಿದೆ.

Continue Reading

ಚುನಾವಣೆ

BENGALURU ಜಿಬಿಎ ಚುನಾವಣೆ ಮುನ್ನ ಶಿವನಪಾಳ್ಯ ವಾರ್ಡ್‌ನಲ್ಲಿ ಮತಗಟ್ಟೆ ಗೊಂದಲ

ಬೆಂಗಳೂರು, ಫೆಬ್ರವರಿ 7, 2026: ಬೃಹತ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ, ಯಶವಂತಪುರ ವಿಧಾನಸಭಾ ಕ್ಷೇತ್ರದ ಶಿವನಪಾಳ್ಯ ವಾರ್ಡ್ (ಸಂಖ್ಯೆ 19) ವ್ಯಾಪ್ತಿಯಲ್ಲಿ ಮತಗಟ್ಟೆಗಳ ವಿಂಗಡಣೆಯಲ್ಲಿ ಭಾರೀ ಅವ್ಯವಸ್ಥೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಜಿಬಿಎ ಚುನಾವಣೆ ಆಕಾಂಕ್ಷಿ ಅಭ್ಯರ್ಥಿಯಾಗಿರುವ ಸಿ.ಎಂ. ಸತ್ಯನಾರಾಯಣ್ (CMC) ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತಗಟ್ಟೆಗಳ ಪಟ್ಟಿಯಲ್ಲಿ ಗಂಭೀರ ತಪ್ಪುಗಳಿರುವುದನ್ನು ಉಲ್ಲೇಖಿಸಿ, ಬಿಜೆಪಿಯ ಬಿಎಲ್‍ಎ1 ದೀಪಕ್ ಕುಮಾರ್ ಅವರ ಮೂಲಕ ಕಂದಾಯ ಅಧಿಕಾರಿಗಳಿಗೆ ಅಧಿಕೃತ ದೂರು ಸಲ್ಲಿಸಲಾಗಿದೆ. ದೂರಿನಲ್ಲಿ, ಸ್ಥಳ ಪರಿಶೀಲನೆ ನಡೆಸದೇ ಮತಗಟ್ಟೆಗಳ ಮಾಹಿತಿಯನ್ನು ಅಪ್‌ಲೋಡ್ ಮಾಡಿರುವುದೇ ಗೊಂದಲಕ್ಕೆ ಕಾರಣವಾಗಿದೆ ಎಂದು ತಿಳಿಸಲಾಗಿದೆ.

ದೂರು ಪ್ರಕಾರ, ಲಿಂಗಾಯತರ ಬೀದಿ, ಅಂಗಡಿ ಬೀದಿ, ಹಸಿ ಕರಗ ಮಂಟಪ ಹಾಗೂ ಹರ್ಷ ಲೇಔಟ್ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 21 ರಿಂದ 31 ರವರೆಗಿನ ಪ್ರದೇಶಗಳು ವಾಸ್ತವವಾಗಿ ಕೆಂಗೇರಿ ವಾರ್ಡ್‌ಗೆ ಸೇರಬೇಕಿದ್ದರೂ, ತಪ್ಪಾಗಿ ಶಿವನಪಾಳ್ಯ ವಾರ್ಡ್‌ಗೆ ಸೇರಿಸಲಾಗಿದೆ. ಇದೇ ರೀತಿ, ಬಾಬಾ ಸಾಬ್ ಪಾಳ್ಯ ಗ್ರಾಮಕ್ಕೆ ಸೇರಿದ ಮತಗಟ್ಟೆ ಸಂಖ್ಯೆ 32 ಮತ್ತು 33 ಕೂಡ ಶಿವನಪಾಳ್ಯ ಪಟ್ಟಿಯಲ್ಲಿ ಕಾಣಿಸಿಕೊಂಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.

ಇದಲ್ಲದೆ, ಬಂಡೆ ಮಠ ರಸ್ತೆಯ ಮತಗಟ್ಟೆ ಸಂಖ್ಯೆ 34 ಮತ್ತು 35 ಕೆಂಗಲ್ ಹನುಮಂತಯ್ಯ ವಾರ್ಡ್‌ಗೆ (ವಾರ್ಡ್ 18) ಸೇರಬೇಕಿದ್ದರೂ, ಶಿವನಪಾಳ್ಯ ವಾರ್ಡ್‌ಗೆ ಸೇರಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಜಿಬಿಎ ಅಧಿಕೃತ ವೆಬ್‌ಸೈಟ್‌ನಲ್ಲಿ ಮತಗಟ್ಟೆ ಸಂಖ್ಯೆ 19ರ ಮಾಹಿತಿ ಲಭ್ಯವಿಲ್ಲದಿರುವುದು ಮತದಾರರಲ್ಲಿ ಗೊಂದಲ ಮತ್ತು ಆತಂಕವನ್ನು ಹೆಚ್ಚಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಸಿ.ಎಂ. ಸತ್ಯನಾರಾಯಣ್, “ಕ್ಷೇತ್ರ ಸಮೀಕ್ಷೆ ಇಲ್ಲದೆ ಮತದಾರರ ಪಟ್ಟಿ ಸಿದ್ಧಪಡಿಸಿರುವುದು ಪ್ರಜಾಪ್ರಭುತ್ವದ ಪ್ರಕ್ರಿಯೆಗೆ ಧಕ್ಕೆ ತರುತ್ತದೆ. ಕೂಡಲೇ ತಪ್ಪುಗಳನ್ನು ಸರಿಪಡಿಸಿ, ಭೌಗೋಳಿಕ ವ್ಯಾಪ್ತಿಗೆ ಅನುಗುಣವಾಗಿ ಮತಗಟ್ಟೆ ಮರುಹಂಚಿಕೆ ಮಾಡಬೇಕು,” ಎಂದು ಆಗ್ರಹಿಸಿದರು. ಅಧಿಕಾರಿಗಳು ಸ್ಪಂದಿಸದಿದ್ದರೆ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.

Continue Reading

Trending