Connect with us

ದೇಶ

ಬಿಜೆಪಿ ಸೇರಿದರೆ ಸಾಥ್ ಖೂನ್ ಮಾಫ್: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Case) ಪ್ರಕರಣದ ಇ.ಡಿ ತನಿಖೆಯಲ್ಲಿ ವ್ಯವಸ್ಥಿತ ಸಂಚು ನಡೆದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಆರೋಪಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ, ಡಿಸಿಎಂ ಹೆಸರು ಹೇಳಿ ಎಂದು ಒತ್ತಡ ಹಾಕಲಾಗುತ್ತಿದೆ. ಹಣ ಬಳ್ಳಾರಿ ಚುನಾವಣೆಗೆ ಬಳಕೆಯಾಗಿದೆ ಅಂತಾ ಹೇಳಲು ಒತ್ತಡ ಹಾಕಲಾಗುತ್ತಿದೆ ಎಂದು ದೂರಿದ್ದಾರೆ. ಬೋವಿ ನಿಗಮದಲ್ಲಿ 120 ಕೋಟಿ ಹಗರಣ ಆಗಿದೆ. ಅದರ ಬಗ್ಗೆ ಇ.ಡಿ ಯಾಕೆ ಕಾಳಜಿ ವಹಿಸಿಲ್ಲ? ದೇವರಾಜ ಅರಸು ಟ್ರಕ್ ಟರ್ಮಿನಲ್ ಪ್ರಕರಣದಲ್ಲಿ ಇ.ಡಿ ಯಾಕೆ ಗಮನ ಹರಿಸಿಲ್ಲ. ಕೆಐಎಡಿಬಿ ದುಡ್ಡು ಸೇಲಂಗೆ ಹೋಗಿದೆ. ಇದರ ಬಗ್ಗೆ ಯಾಕೆ ಇ.ಡಿ ಆಸಕ್ತಿ ವಹಿಸಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿಯವರ ಸ್ಟ್ಯಾಂಡರ್ಡ್‌ ಆಪರೇಟಿಂಗ್ ಪ್ರೊಸಿಜರ್ ಇದು. ಕಳೆದ 10 ವರ್ಷಗಳಲ್ಲಿ ಎಷ್ಟು ಸರ್ಕಾರಗಳನ್ನು ಬಿಜೆಪಿಯವರು ಬೀಳಿಸಿದ್ದಾರೆ ನೋಡಿ. 2016ರಲ್ಲಿ ಉತ್ತರಾಖಂಡ, 2019ರಲ್ಲಿ ಕರ್ನಾಟಕ, ಗುಜರಾತ್‌ನಲ್ಲಿ ನಮ್ಮ ಎಂಎಲ್‌ಎಗಳ ಖರೀದಿ ಮಾಡಿದ್ರು. ಸಿಕ್ಕಿಂನಲ್ಲಿ ಎಂಎಲ್‌ಎಗಳ ಖರೀದಿ. 2014 ರಿಂದ 440 ಎಂಎಲ್‌ಎಗಳನ್ನು ಖರೀದಿ ಮಾಡಲಾಗಿದೆ. ಮೆಜಾರಿಟಿ ಇದ್ರೂ ಕೂಡ ಕೇಂದ್ರದ ಏಜೆನ್ಸಿಗಳನ್ನು ಬಳಸಿಕೊಂಡು ಸರ್ಕಾರಗಳನ್ನು ಕೆಡವಲಾಗುತ್ತಿದೆ ಎಂದು ಟೀಕಿಸಿದ್ದಾರೆ.

ಮಣಿಪುರ, ಹಿಮಾಚಲ ಪ್ರದೇಶ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ ಹೀಗೆ 60 ಬಾರಿ ಶಾಸಕರ ಖರೀದಿ ನಡೆದಿದೆ. ಯಾರು ಹೋಗೋದಿಲ್ಲ, ಅವರ ಮೇಲೆ ಹೆಚ್ಚು ಒತ್ತಡ ತರುವುದು. ಮಾಜಿ ಸಿಎಂ ಯಡಿಯೂರಪ್ಪ ಮೇಲೆ ಐಟಿ, ಇ.ಡಿ ಕೇಸ್ ಇದೆ. 2019 ರಿಂದ ಇದುವರೆಗೆ ಯಡಿಯೂರಪ್ಪ ಮೇಲೆ ಯಾವುದೇ ವಿಚಾರಣೆ ಯಾಕೆ ನಡೆಯುತ್ತಿಲ್ಲ. ರೆಡ್ಡಿ ಬ್ರದರ್ಸ್ ಮೇಲೆ ಐಟಿ ಕೇಸ್ ಇತ್ತು. ಆದರೆ ಈಗ ಅವರು ಪಕ್ಷ ಸೇರಿದ ಮೇಲೆ ಯಾವುದೂ ಇಲ್ಲ. ಬಿಜೆಪಿ ಸೇರಿದರೆ ಸಾಥ್ ಖೂನ್ ಮಾಫ್ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಅಪರಾಧ

BAIRATHI BASAVARJU BREAKING NEWS : ಸಿಐಡಿ ಲುಕ್‌ಔಟ್ ನೋಟಿಸ್ ಜಾರಿ, ತನಿಖೆ ತೀವ್ರ

ಬೆಂಗಳೂರು: ರೌಡಿಶೀಟರ್ ಬಿಲ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತೊಂದು ಕಾನೂನು ಹಿನ್ನಡೆ ಎದುರಾಗಿದೆ. ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಅವರ ಬಂಧನದ ಭೀತಿ ಮತ್ತಷ್ಟು ಗಟ್ಟಿಯಾಗಿದೆ.

ಈ ಹಿಂದೆ ಇದೇ ಪ್ರಕರಣದಲ್ಲಿ ಹೈಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅದರ ನಂತರ ಬೈರತಿ ಬಸವರಾಜ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲಿ ಸಹ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ವಿಚಾರಣೆ ವೇಳೆ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿರುವುದು ಗಮನಾರ್ಹ.

ಈ ಬೆಳವಣಿಗೆಯೊಂದಿಗೆ ತನಿಖಾ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಈಗಾಗಲೇ ಸಿಐಡಿ ಪೊಲೀಸರು ಬೈರತಿ ಬಸವರಾಜ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಕಾನೂನು ಕ್ರಮಗಳು ಮತ್ತಷ್ಟು ಗಟ್ಟಿಯಾಗುವ ಸಾಧ್ಯತೆಗಳಿವೆ.

ರಾಜಕೀಯ ವಲಯದಲ್ಲೂ ಈ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಪ್ರಕರಣ ಹೊಸ ತಿರುವು ಪಡೆದಿದೆ.

Continue Reading

ದೇಶ

“ಉರ್ಕೆ ಉಂಡ್ರಾ?”: ಮಧುಗಿರಿಯಲ್ಲಿ ‘ಸಿಎಂ ಆಗಿ’ ಘೋಷಣೆಗೆ ಪರಮೇಶ್ವರ್ ತೆಲುಗಿನಲ್ಲಿ ತಿರುಗೇಟು

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ “ಸಿಎಂ ಆಗಬೇಕು” ಎಂಬ ಘೋಷಣೆ ಕೇಳಿಬಂದ ಘಟನೆ ಚರ್ಚೆಗೆ ಗ್ರಾಸವಾಗಿದೆ. ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಅಭಿಮಾನಿಯೊಬ್ಬರು “ನೀವು ಸಿಎಂ ಆಗಬೇಕು” ಎಂದು ಕೂಗಿದ ಪ್ರಸಂಗ ನಡೆದಿದೆ.

ಭಾಷಣದ ಅಂತ್ಯದಲ್ಲಿ ಈ ಘೋಷಣೆ ಕೇಳಿಬಂದಾಗ, ಪರಮೇಶ್ವರ್ ಅವರು ಕ್ಷಣಮಾತ್ರ ನಿಂತು ಕಾರ್ಯಕರ್ತನ ಮಾತಿಗೆ ತೆಲುಗಿನಲ್ಲಿ ಪ್ರತಿಕ್ರಿಯಿಸಿದರು. “ಉರ್ಕೆ ಉಂಡ್ರ… ನೀನು ಸಿಎಂ ಅಂಟ?” ಎಂದು ಹೇಳಿ, “ನಾನು ಸಿಎಂ ಆಗಬೇಕಂತೆ… ಸುಮ್ಮನಿರು” ಎಂದು ಹಾಸ್ಯಭರಿತವಾಗಿ ಹೇಳಿ ಕಾರ್ಯಕರ್ತನ ಬಾಯಿ ಮುಚ್ಚಿಸಿದರು.

ಈ ದೃಶ್ಯ ಅಲ್ಲಿದ್ದ ಜನರಲ್ಲಿ ನಗೆರಸ ಮೂಡಿಸಿದ್ದು, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ರಾಜಕೀಯ ವಲಯದಲ್ಲೂ ಈ ಘಟನೆ ಚರ್ಚೆಗೆ ಕಾರಣವಾಗಿದ್ದು, ಪರಮೇಶ್ವರ್ ಅವರ ಪ್ರತಿಕ್ರಿಯೆ ಬಗ್ಗೆ ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಅಭಿವೃದ್ಧಿ, ಮೂಲಸೌಕರ್ಯ ಬಲಪಡಿಸುವುದು ಮತ್ತು ಸಾರ್ವಜನಿಕ ಸೇವೆ ಸುಧಾರಣೆ ಕುರಿತು ಗೃಹ ಸಚಿವರು ಮಾತನಾಡಿದರು. ಆದರೆ “ಸಿಎಂ ಆಗಿ” ಘೋಷಣೆಯ ಘಟನೆ ಸಮಾರಂಭದ ಪ್ರಮುಖ ಹೈಲೈಟ್ ಆಗಿದೆ.

Continue Reading

ದೇಶ

ACTOR SRI LEELA : ಬಹುಭಾಷಾ ನಟಿ ಶ್ರೀಲೀಲಾ ಎಂಬಿಬಿಎಸ್ ಪದವಿ ಪೂರ್ಣ

ಬೆಂಗಳೂರು/ಮುಂಬೈ: ಬಹುಭಾಷಾ ನಟಿ ಶ್ರೀಲೀಲಾ ತಮ್ಮ ಎಂಬಿಬಿಎಸ್ ಪದವಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಮುಂಬೈನ ಡಿ.ವೈ. ಪಾಟೀಲ್ ವಿಶ್ವವಿದ್ಯಾಲಯದಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಅವರು ಅಧಿಕೃತವಾಗಿ ಪದವಿ ಸ್ವೀಕರಿಸಿದ್ದಾರೆ. ಫೆಬ್ರವರಿ 10ರಂದು ನಡೆದ ಸಮಾರಂಭದ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ದೇಶಾದ್ಯಂತ ಅಭಿಮಾನಿಗಳಿಂದ ಪ್ರಶಂಸೆಯ ಸುರಿಮಳೆ ಹರಿದುಬಂದಿದೆ.

24 ವರ್ಷದ ನಟಿ ಮೆರೂನ್ ಬಣ್ಣದ ಪದವಿ ಗೌನ್ ಮತ್ತು ಕ್ಯಾಪ್ ಧರಿಸಿ ವೇದಿಕೆಯ ಮೇಲೆ ಹೆಜ್ಜೆ ಹಾಕಿದ ದೃಶ್ಯಗಳು ಅಭಿಮಾನಿಗಳ ಮನಸೆಳೆದಿವೆ. ಒಂದು ವಿಡಿಯೋದಲ್ಲಿ ತಮ್ಮ ಹೆಸರನ್ನು ಘೋಷಿಸುವ ಮೊದಲು ಸಹಪಾಠಿಗಳೊಂದಿಗೆ ಸಾಲಿನಲ್ಲಿ ನಿಂತು ಕಾಯುತ್ತಿರುವುದು ಕಾಣಿಸುತ್ತದೆ. ನಂತರ ಪ್ರಮಾಣಪತ್ರವನ್ನು ನಗುಮೊಗದಿಂದ ಸ್ವೀಕರಿಸಿದ ಅವರು, ವೇದಿಕೆಯಿಂದ ಇಳಿಯುವಾಗ ಕುಟುಂಬ ಸದಸ್ಯರನ್ನು ಅಪ್ಪಿಕೊಂಡು ಸಂತಸ ವ್ಯಕ್ತಪಡಿಸಿದರು.

ಬಿಡುವಿಲ್ಲದ ಚಿತ್ರರಂಗದ ವೃತ್ತಿಜೀವನದ ನಡುವೆಯೂ ವೈದ್ಯಕೀಯ ಶಿಕ್ಷಣವನ್ನು ಸಮತೋಲನಗೊಳಿಸಿರುವ ಶ್ರೀಲೀಲಾ ಅವರ ಸಾಧನೆಗೆ ಅಭಿಮಾನಿಗಳು ಹಾಗೂ ಸಿನಿ ವಲಯದ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಹಲವು ಭಾಷೆಗಳ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರೂ ವಿದ್ಯಾಭ್ಯಾಸವನ್ನು ಕಡೆಗಣಿಸದೇ ಯಶಸ್ವಿಯಾಗಿ ಮುಗಿಸಿರುವುದು ಯುವಜನತೆಗೆ ಸ್ಪೂರ್ತಿಯಾಗಿದೆ.

ನಟನೆ ಜೊತೆಗೆ ವೈದ್ಯಕೀಯ ಕ್ಷೇತ್ರದಲ್ಲೂ ತಮ್ಮ ಹೆಜ್ಜೆ ಇಟ್ಟಿರುವ ಶ್ರೀಲೀಲಾ ಅವರ ಈ ಸಾಧನೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯ ವಿಷಯವಾಗಿದ್ದು, “ಡಾಕ್ಟರ್ ಶ್ರೀಲೀಲಾ” ಎಂದು ಅಭಿಮಾನಿಗಳು ಕರೆದಾಡುತ್ತಿದ್ದಾರೆ.

Continue Reading

Trending