Connect with us

ಬೆಂಗಳೂರು

Latest News ನೈಸ್ ರಸ್ತೆಯಲ್ಲಿ ಓವರ್ ಸ್ಪೀಡ್ ಆಗಿ ವಾಹನ ಚಲಾಯಿಸುತ್ತೀರಾ? ಸ್ಪೀಡ್ ರಾಡಾರ್, ಕ್ಯಾಮರಾ ಇರುತ್ತೆ ಹುಷಾರ್! – NICE Road

Published

on

ಬೆಂಗಳೂರು: ರಸ್ತೆ ಅಪಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನೈಸ್ ರಸ್ತೆಯಲ್ಲಿ ಆಟೋಮೆಟಿಕ್ ನಂಬರ್‌ಪ್ಲೇಟ್ ರೆಕಗ್ನೈಜೇಷನ್ ಕ್ಯಾಮರಾ (ಎಎನ್‌ಪಿಆರ್) ಹಾಗೂ ಸ್ಪೀಡ್ ರಾಡರ್ ಗನ್ಸ್ ಅಳವಡಿಸಲು ರಾಜ್ಯ ರಸ್ತೆ ಹಾಗೂ ಸುರಕ್ಷತೆ ಇಲಾಖೆ ತೀರ್ಮಾನಿಸಿದೆ.

ಈ ಕ್ಯಾಮರಾ ಅಳವಡಿಸುವುದರಿಂದ ನಿಗದಿತ ಮಿತಿಗಿಂತ ಹೆಚ್ಚು ವೇಗವಾಗಿ ವಾಹನ ಚಲಾಯಿಸಿದರೆ ಅಥವಾ ಇನ್ನಿತರ ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೆ ಸುಲಭವಾಗಿ ಪತ್ತೆ ಹಚ್ಚಬಹುದು. ನಿಯಮ ಉಲ್ಲಂಘಿಸಿದ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬಹುದು. ಈ ಮೂಲಕ ನೈಸ್ ರಸ್ತೆಯಲ್ಲಿ ಅಪಘಾತ ಪ್ರಮಾಣವನ್ನು ಇಳಿಸಲು ಇಲಾಖೆ ಮುಂದಾಗಿದೆ. ಮುಂದಿನ ಕೆಲವೇ ದಿನಗಳಲ್ಲಿ ಎಎನ್‌ಪಿಆರ್ ಕ್ಯಾಮರಾಗಳನ್ನು ಇಲಾಖೆ ಅಳವಡಿಸಲಿದೆ.

ಕಳೆದ ಮೂರು ದಿನಗಳ ಹಿಂದೆ ನೈಸ್ ರಸ್ತೆಯಲ್ಲಿ ನಡೆದಿದ್ದ ಭೀಕರ ರಸ್ತೆ‌ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದರು.

ವೇಗದ ವಾಹನ ಚಾಲನೆ, ರಸ್ತೆಪಥ ಉಲ್ಲಂಘನೆ ಹಾಗೂ ಚಾಲನೆಯ ವೇಳೆ ಮೊಬೈಲ್ ಬಳಕೆಯಿಂದಾಗಿ ಹೆಚ್ಚು ಅಪಘಾತವಾಗುತ್ತಿದೆ. ಕಳೆದ ಆರು ತಿಂಗಳಲ್ಲಿ 65 ಅಪಘಾತ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 13 ಮಂದಿ ಸಾವನ್ನಪ್ಪಿದ್ದಾರೆ. 2023ರಲ್ಲಿ ನಡೆದಿದ್ದ 120 ಅಪಘಾತ ಪ್ರಕರಣಗಳಲ್ಲಿ 37 ಮಂದಿ ಸಾವನ್ನಪ್ಪಿದರೆ, 2022ರಲ್ಲಿ 111 ಪ್ರಕರಣಗಳಲ್ಲಿ 42 ಮಂದಿ ಮೃತಪಟ್ಟಿರುವುದಾಗಿ ಸಂಚಾರ ಇಲಾಖೆಯ ಅಂಕಿ-ಅಂಶಗಳು ತಿಳಿಸುತ್ತವೆ.

ಎಡಿಜಿಪಿ ಅಲೋಕ್ ಕುಮಾರ್ ಪ್ರತಿಕ್ರಿಯೆ: “ಈಗಾಗಲೇ ಬೆಂಗಳೂರು-ಮೈಸೂರು ಹಾಗೂ ಕೆಂಪೇಗೌಡ ವಿಮಾನ ನಿಲ್ದಾಣದ ಹೆದ್ದಾರಿಗಳಲ್ಲಿ ಇಂಥ ಕ್ಯಾಮರಾಗಳನ್ನು ಅಳವಡಿಸಿದ್ದು, ಅಪಘಾತ ಇಳಿಕೆಯಾಗಿದೆ. ನಿಗದಿಂತ ಹೆಚ್ಚು ವೇಗವಾಗಿ ವಾಹನ ಚಾಲನೆ, ಚಾಲನೆಯ ವೇಳೆ ಮೊಬೈಲ್ ಬಳಕೆ ಹಾಗೂ ಸೀಟ್ ಬೆಲ್ಟ್ ಧರಿಸದೇ ಇರುವುದು ಸೇರಿದಂತೆ ಇತರೆ ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೆ ಸ್ವಯಂಪ್ರೇರಿತವಾಗಿ ಕ್ಯಾಮರಾಗಳ ಮೂಲಕ ಸೆರೆಹಿಡಿದು ಪ್ರಕರಣ ದಾಖಲಿಸಲಾಗುವುದು” ಎಂದು ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದ್ದಾರೆ.

ನೈಸ್ ರಸ್ತೆಯಲ್ಲಿ ವೇಗದ ಮಿತಿ ಗಂಟೆಗೆ 100 ಕಿ.ಮೀ ನಿಗದಿಪಡಿಸಿದ್ದರೂ, ವೇಗವಾಗಿ ವಾಹನ ಚಲಾಯಿಸಿ ನಿಯಮ ಉಲ್ಲಂಘಿಸುತ್ತಿರುವುದು ಕಂಡುಬರುತ್ತಿದೆ. ಹೀಗಾಗಿ ಮುಂದಿನ ವಾರದಿಂದ ಮಾರ್ಗದ ನಿರ್ದಿಷ್ಟ ಸ್ಥಳಗಳಲ್ಲಿ ಸ್ಪೀಡ್ ರಾಡರ್​​ಗಳನ್ನು ಹಾಕಲಾಗುವುದು. ಜೊತೆಗೆ, ಎಎನ್‌ಪಿಆರ್ ಕ್ಯಾಮರಾ ನೆರವಿನಿಂದ 100 ಮೀಟರ್ ದೂರದಲ್ಲಿ ಗರಿಷ್ಠ ಪ್ರಮಾಣಕ್ಕಿಂತ ವಾಹನ ಚಲಾಯಿಸುತ್ತಿರುವುದು ಕಂಡುಬಂದರೆ ಫೋಟೊ ಸೆರೆಹಿಡಿದು ಇಂಟಲಿಜೆಂಟ್ ಟ್ಯಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಂಗೆ (ಐಟಿಎಂಸ್) ರವಾನಿಸಲಿದೆ. ಈ ಮೂಲಕ ಪ್ರಕರಣ ದಾಖಲಿಸಲಾಗುವುದು ಎಂದು ಸಂಚಾರಿ ಇಲಾಖೆಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನೈಸ್ ರಸ್ತೆಯಲ್ಲಿ ಅಪಫಾತ ಪ್ರಕರಣಗಳ ವಿವರ (ಜೂನ್ 30 ಅಂತ್ಯಕ್ಕೆ):

ವರ್ಷಮೃತರುಗಾಯಾಳುಒಟ್ಟು ಪ್ರಕರಣ
20224269111
20233783120
2024135265

ದೇಶ

ವೀರಕುಮಾರರ ತಪಸ್ಸು, ಭಕ್ತಿಯ ತೇಜಸ್ಸು: ಕೆಂಗೇರಿ ಕರಗದ ವೈಶಿಷ್ಟ್ಯ

Published

on

By

ಬೆಂಗಳೂರು: ನಗರದ ಕೆಂಗೇರಿಯಲ್ಲಿ ಕ್ಷತ್ರಿಯ (ತಿಗಳ ಕ್ಷತ್ರಿಯ) ಸಮುದಾಯದವರಿಂದ ಆಚರಿಸಲ್ಪಡುವ ದ್ರೌಪದಿ ಅಮ್ಮನವರ ಭವ್ಯ ಕರಗ ಶಕ್ತಿ ಉತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ಅನಾದಿಕಾಲದಿಂದಲೂ ನಡೆಯುತ್ತಿರುವ ಈ ಸಂಪ್ರದಾಯಿಕ ಹಬ್ಬದಲ್ಲಿ ಭಕ್ತಿ, ಶಕ್ತಿ ಮತ್ತು ಸಂಸ್ಕೃತಿಯ ಸಮ್ಮಿಳನ ಕಂಡುಬರುತ್ತದೆ.

ಈ ಮಹೋತ್ಸವದ ಅಂಗವಾಗಿ ಹಸಿ ಕರಗವನ್ನು ಮುನ್ನಡೆಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಸಮುದಾಯದವರು Draupadi Amman ಅವರನ್ನು ಕುಲದೇವತೆಯಾಗಿ ಆರಾಧಿಸುತ್ತಾರೆ. ಕರಗ ಪೂಜೆಯಲ್ಲಿ ಕುಲಪುರೋಹಿತರು, ವೀರಕುಮಾರರು ಮತ್ತು ಭಕ್ತರು ಭಾಗವಹಿಸಿ ವಿಶೇಷ ವಿಧಿವಿಧಾನಗಳನ್ನು ನೆರವೇರಿಸುತ್ತಾರೆ.

ಹಬ್ಬದ ವಿಶೇಷವೆಂದರೆ ವೀರಕುಮಾರರು ಕೈಯಲ್ಲಿ ಖಡ್ಗಗಳನ್ನು ಹಿಡಿದು ಭಕ್ತಿಯ ಸಂಕೇತವಾಗಿ ತಮ್ಮ ಎದೆಗೆ ತಾವೇ ಪ್ರಹಾರ ಮಾಡಿಕೊಳ್ಳುವುದು. ಗಾಯವಾದಲ್ಲಿ ಔಷಧಿಯ ಬದಲು ಅರಿಶಿನವನ್ನು ಬಳಸಿ ದೇವಿಯ ಮೇಲಿನ ಭಕ್ತಿಯನ್ನು ತೋರಿಸುತ್ತಾರೆ.

ರಾತ್ರಿ ಸುಮಾರು ಮೂರು ಗಂಟೆಗೆ ಹೂವಿನ ಕರಗ ಸಿದ್ಧವಾಗುತ್ತಿದ್ದು, ಕೆಂಪು ವಸ್ತ್ರ ಮತ್ತು ಮಂಗಳ ದ್ರವ್ಯಗಳಿಂದ ಅಲಂಕರಿಸಲಾಗುತ್ತದೆ. ಪೂಜಾರಿ ಮಲ್ಲಿಗೆ ಹೂಗಳಿಂದ ಸಿಂಗರಿಸಿಕೊಂಡು ಕರಗವನ್ನು ಹೊತ್ತು ಭಕ್ತಿಭಾವದಿಂದ ನರ್ತನ ಮಾಡುತ್ತಾ ಸಾಗುತ್ತಾರೆ.

ಈ ಕರಗವು ಕೆಂಗೇರಿ ಸುತ್ತಮುತ್ತಲಿನ ಬಡಾವಣೆಗಳಲ್ಲಿ ಸಂಚರಿಸಿ, ನಂತರ ದೇವಸ್ಥಾನಕ್ಕೆ ಮರಳಿ ಪೂಜೆ ಸ್ವೀಕರಿಸುವ ಮೂಲಕ ಮಹೋತ್ಸವ ಮುಕ್ತಾಯಗೊಳ್ಳುತ್ತದೆ.

ಈ ಸಂದರ್ಭದಲ್ಲಿ ಸಮುದಾಯದ ಅನೇಕ ಮುಖಂಡರು ಹಾಗೂ ಭಕ್ತರು ಭಾಗವಹಿಸಿ ಉತ್ಸವಕ್ಕೆ ಭಕ್ತಿ ಭಾವ ತುಂಬಿದರು.

Continue Reading

ದೇಶ

ಬೆಂಗಳೂರಿನಲ್ಲಿ ಎಲ್‌ಪಿಜಿ ಸಂಕಷ್ಟ: ಆಟೊ ಚಾಲಕರ ಬದುಕು ಸಂಕಷ್ಟಕ್ಕೆ

Published

on

By

ಬೆಂಗಳೂರು: ನಗರದಲ್ಲಿ ಉಂಟಾಗಿರುವ ಎಲ್‌ಪಿಜಿ ಕೊರತೆಯಿಂದ ಆಟೊ ಚಾಲಕರ ಸಮಸ್ಯೆಗಳು ದಿನೇ ದಿನೇ ಗಂಭೀರವಾಗುತ್ತಿವೆ. ಗ್ಯಾಸ್‌ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದಾಗಿ ಲಭ್ಯವಿರುವ ಬಂಕ್‌ಗಳ ಬಳಿ ಆಟೊ ಚಾಲಕರು ಗಂಟೆಗಟ್ಟಲೆ ಕಾದು ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವಾರು ಬಂಕ್‌ಗಳು ತಾತ್ಕಾಲಿಕವಾಗಿ ಬಾಗಿಲು ಮುಚ್ಚಿದ್ದು, ಉಳಿದ ಬಂಕ್‌ಗಳಲ್ಲೂ ‘ನೋ ಸ್ಟಾಕ್’ ಫಲಕಗಳು ಸಾಮಾನ್ಯ ದೃಶ್ಯವಾಗಿವೆ.

ರಾಜಾಜಿನಗರ, ಮತ್ತೀಕೆರೆ, ದಾಸರಹಳ್ಳಿ, ಗುಟ್ಟಹಳ್ಳಿ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಸಮಸ್ಯೆ ತೀವ್ರಗೊಂಡಿದೆ. ಬಂಕ್‌ಗಳ ಬಳಿ ಆಟೊಗಳು ಸಾಲುಗಟ್ಟಿ ನಿಲ್ಲುವುದರಿಂದ ಸಂಚಾರ ದಟ್ಟಣೆಗೂ ಕಾರಣವಾಗುತ್ತಿದೆ. ಎಲ್‌ಪಿಜಿ ಕೊರತೆಯಿಂದ ಸಾವಿರಾರು ಆಟೊಗಳು ರಸ್ತೆಗಿಳಿಯಲು ಸಾಧ್ಯವಾಗದೇ, ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಮೇಲೂ ಒತ್ತಡ ಹೆಚ್ಚಾಗಿದೆ.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಗ್ಯಾಸ್‌ ಪೂರೈಕೆಗೆ ತೀವ್ರ ಹೊಡೆತ ಬಿದ್ದಿದ್ದು, ಆಟೊ ಚಾಲಕರ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಗ್ಯಾಸ್‌ ಬೆಲೆ ಏರಿಕೆಯಿಂದಾಗಿ ಚಾಲಕರು ಕಡಿಮೆ ದೂರಕ್ಕೂ ಪ್ರಯಾಣಿಕರಿಂದ ಹೆಚ್ಚು ಬಾಡಿಗೆ ವಸೂಲು ಮಾಡುತ್ತಿದ್ದಾರೆ. ಇದರಿಂದ ಪ್ರಯಾಣಿಕರಿಗೂ ಹೆಚ್ಚುವರಿ ಹೊರೆ ಬೀಳುತ್ತಿದೆ.

ಗ್ಯಾಸ್‌ ಲಭ್ಯವಿರುವ ಮಾಹಿತಿ ಸಿಕ್ಕ ತಕ್ಷಣ ನೂರಾರು ಆಟೊಗಳು ಬಂಕ್‌ಗಳತ್ತ ಧಾವಿಸುತ್ತಿವೆ. ಪರಿಣಾಮ, ಕೆಲವೇ ಗಂಟೆಗಳಲ್ಲಿ ಸ್ಟಾಕ್‌ ಖಾಲಿಯಾಗುತ್ತಿದೆ. ಸಿಎನ್‌ಜಿ ಕೊರತೆಯೂ ಕಾಣಿಸಿಕೊಂಡಿರುವುದರಿಂದ ಸಮಸ್ಯೆ ಇನ್ನಷ್ಟು ಸಂಕೀರ್ಣವಾಗಿದೆ.

ಇದರಿಂದಾಗಿ ವಿದ್ಯುತ್‌ ಚಾಲಿತ ಆಟೊಗಳ ಬಳಕೆ ಹೆಚ್ಚಾಗುತ್ತಿದ್ದು, ಪ್ರಯಾಣಿಕರು ಇವುಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಪರಿಸ್ಥಿತಿ ಮುಂದುವರಿದರೆ ಅನೇಕ ಆಟೊ ಚಾಲಕರು ವೃತ್ತಿ ತೊರೆಯುವ ಸ್ಥಿತಿ ಎದುರಾಗುವ ಸಾಧ್ಯತೆ ಇದೆ.

Continue Reading

ದೇಶ

ಸುಪ್ರೀಂ ಕೋರ್ಟ್ ಆದೇಶ ಬಳಿಕ ಬೀದಿ ನಾಯಿಗಳ ಲೆಕ್ಕಾಚಾರ: ನಗರದಲ್ಲಿ ಆತಂಕ

Published

on

By

ಬೆಂಗಳೂರು ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿರುವ ಬೀದಿ ನಾಯಿಗಳ ಸಮಸ್ಯೆ ಗಂಭೀರವಾಗುತ್ತಿರುವ ಹಿನ್ನೆಲೆ, Bruhat Bengaluru Mahanagara Palike ಸರ್ವೆ ಕಾರ್ಯ ಆರಂಭಿಸಿದೆ. Supreme Court of India ನೀಡಿದ ನಿರ್ದೇಶನದಂತೆ ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಶಾಲೆ, ಕಾಲೇಜು, ಆಸ್ಪತ್ರೆ, ಬಸ್ ನಿಲ್ದಾಣ, ಕ್ರೀಡಾಂಗಣ ಹಾಗೂ ಆಟದ ಮೈದಾನಗಳಂತಹ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಒಟ್ಟು 2,670 ಬೀದಿ ನಾಯಿಗಳು ಪತ್ತೆಯಾಗಿವೆ. ಕೇಂದ್ರ ವಲಯದಲ್ಲಿ 504, ಉತ್ತರ ವಲಯದಲ್ಲಿ 875, ಪಶ್ಚಿಮ ವಲಯದಲ್ಲಿ 591, ದಕ್ಷಿಣ ವಲಯದಲ್ಲಿ 331 ಹಾಗೂ ಪೂರ್ವ ವಲಯದಲ್ಲಿ 369 ನಾಯಿಗಳಿವೆ ಎಂದು ಮಾಹಿತಿ ನೀಡಲಾಗಿದೆ.

ಆದರೆ, ಈ ಅಂಕಿ-ಅಂಶಗಳ ನಿಖರತೆ ಬಗ್ಗೆ ಪ್ರಶ್ನೆಗಳು ಮೂಡಿವೆ. ಕೆಲವು ವಲಯಗಳಲ್ಲಿ ಪೂರ್ಣ ಮಾಹಿತಿ ಲಭ್ಯವಾಗಿಲ್ಲ ಎನ್ನಲಾಗಿದ್ದು, ಕೆಲವು ಸಂಸ್ಥೆಗಳು ತಮ್ಮ ವ್ಯಾಪ್ತಿಯ ಲೆಕ್ಕ ನೀಡಿಲ್ಲ ಎಂಬ ಆರೋಪ ಕೇಳಿಬಂದಿದೆ.

ಬೀದಿ ನಾಯಿಗಳ ಸ್ಥಳಾಂತರಕ್ಕಾಗಿ ಆನೇಕಲ್ ವ್ಯಾಪ್ತಿಯ ಬಿಂಗೀಪುರದಲ್ಲಿ 5 ಎಕರೆ ಜಾಗ ಗುರುತಿಸಲಾಗಿದ್ದು, ಸುಮಾರು 500 ನಾಯಿಗಳಿಗೆ ಆಶ್ರಯ ನೀಡುವ ಸಾಮರ್ಥ್ಯದ ಶೆಲ್ಟರ್ ನಿರ್ಮಾಣಕ್ಕೆ 2 ಕೋಟಿ ರೂ. ವೆಚ್ಚದ ಯೋಜನೆ ರೂಪಿಸಲಾಗಿದೆ.

ಇದೇ ವೇಳೆ, ಉತ್ತರ ಹಾಗೂ ಪಶ್ಚಿಮ ವಲಯಗಳಲ್ಲಿ ಹೆಚ್ಚುವರಿ ಆಶ್ರಯ ತಾಣ ನಿರ್ಮಾಣದ ಕಾರ್ಯ ಕೂಡ ಪ್ರಗತಿಯಲ್ಲಿದೆ.

ಒಟ್ಟಿನಲ್ಲಿ, ಬೀದಿ ನಾಯಿಗಳ ಸಮಸ್ಯೆ ನಿಯಂತ್ರಣಕ್ಕೆ ಈ ಕ್ರಮ ಕೈಗೊಳ್ಳಲಾಗುತ್ತಿದ್ದರೂ, ಅಂಕಿ-ಅಂಶಗಳ ಸ್ಪಷ್ಟತೆ ಹಾಗೂ ಅನುಷ್ಠಾನದ ಪರಿಣಾಮಕಾರಿತ್ವ ಬಗ್ಗೆ ಇನ್ನೂ ಅನುಮಾನಗಳು ಉಳಿದಿವೆ.

Continue Reading

Trending