ದೇಶ
ಉತ್ತರ ಪ್ರದೇಶದಲ್ಲಿ ಹಳಿ ತಪ್ಪಿದ ಎಕ್ಸ್‌ಪ್ರೆಸ್ ರೈಲು: ಇಬ್ಬರ ಸಾವು, ಹಲವರಿಗೆ ಗಾಯ – Train accident

ಗೊಂಡಾ: ಉತ್ತರ ಪ್ರದೇಶದ ಗೊಂಡಾ ಎಂಬಲ್ಲಿ ಎಕ್ಸ್‌ಪ್ರೆಸ್ ರೈಲೊಂದು ಹಳಿತಪ್ಪಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಚಂಡೀಗಢದಿಂದ ಗೋರಖ್‌ಪುರ ಮೂಲಕ ಅಸ್ಸಾಂಗೆ ತೆರಳುತ್ತಿದ್ದ ದಿಬ್ರುಗಢ ಎಕ್ಸ್‌ಪ್ರೆಸ್ ರೈಲಿನ 10 ಬೋಗಿಗಳು ಹಳಿತಪ್ಪಿ ಅಪಘಾತ ಸಂಭವಿಸಿದೆ. ದುರಂತದಲ್ಲಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಗೋರಖ್‌ಪುರ ರೈಲ್ವೆ ವಿಭಾಗದ ಮೋತಿಗಂಜ್ ಗಡಿಯಲ್ಲಿ ಈ ಘಟನೆ ನಡೆದಿದೆ. ಘಟನೆ ಬಗ್ಗೆ ಮಾಹಿತಿ ಲಭಿಸಿದ ಕೂಡಲೇ ರೈಲ್ವೆ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಹಾನಿಗೊಳಗಾದ ಬೋಗಿಗಳಲ್ಲಿ ಸಿಲುಕಿರುವ ಪ್ರಯಾಣಿಕರನ್ನು ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.