ಬೆಂಗಳೂರು

Latest News ಅಂಗನವಾಡಿ ಶಿಕ್ಷಕಿಯರಿಗೆ ಗುಡ್ ನ್ಯೂಸ್ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಪ್ರತಿಯೊಂದು ಅಂಗನವಾಡಿಗಳಲ್ಲಿಯೂ ಗುಣಮಟ್ಟದ ಶಿಕ್ಷಣ ಮತ್ತು ಪೌಷ್ಠಿಕ ಆಹಾರ ದೊರೆಯಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ, ಸದನದಲ್ಲಿ ಶುಕ್ರವಾರ ಈ ಕುರಿತು ಮಾತನಾಡಿದ ಅವರು ಅಂಗನವಾಡಿಯ ಮೂಲ ಉದ್ದೇಶ, ಉತ್ತಮ ಶಿಕ್ಷಣದ ಜತೆಗೆ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವುದು, ಮುಖ್ಯಮಂತ್ರಿಗಳು ಈಗಾಗಲೇ ಮೌಕಿಕವಾಗಿ ಆದೇಶ ನೀಡಿದ್ದು ಇದೇ 22 ರಿಂದ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ತರಗತಿಗಳನ್ನು ಆರಂಭಸಲಾಗುತ್ತಿದ್ದು ಅಂಗನವಾಡಿ ಕೇಂದ್ರಗಳ ಉನ್ನತಿಕರಣ ಮಾಡಲಾಗುವುದು ಎಂದರು.
ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕಾತಿ ನಡೆಯಲಿದೆ, ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿ ಕರೆದಿದ್ದು, ಜಿಲ್ಲಾಧಿಕಾರಿಗಳ, ಜಿಲ್ಲಾ ಪಂಚಾಯಿತಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಒಳಗೊಂಡ ಜಿಲ್ಲಾ ಮಟ್ಟದ ಸಮಿತಿಯಲ್ಲಿ ನೇಮಕಾತಿ ನಡೆಯಲಿದೆ ಎಂದು ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು,
ಪೌಷ್ಠಿಕ ಆಹಾರ ಯೋಜನೆಯಡಿ ಅಕ್ಕಿ, ಗೋಧಿಯನ್ನು ಕೇಂದ್ರ ಸರ್ಕಾರದ ಎಫ್.ಸಿ.ಐ ಮೂಲಕ, ಹಾಲಿನ ಪುಡಿಯನ್ನು ಕೆ.ಎಂ.ಎಫ್ ಮೂಲಕ ಖರೀದಿಸಲಾಗುತ್ತಿದೆ, ಕೋಳಿ ಮೊಟ್ಟೆಗಳನ್ನು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಸ್ಧಳೀಯವಾಗಿ ಖರೀದಿಸಲಾಗುತ್ತಿದೆ ಎಂದು ಸಚಿವೆ ಮಾಹಿತಿ ನೀಡಿದ್ದಾರೆ,

Trending

Exit mobile version