ಕ್ರೀಡೆ
ಕೊಹ್ಲಿ ಮೇಲಿನ ಸಿಟ್ಟಿಗೆ ರಾಹುಲ್ ವಿರುದ್ಧ ದ್ವೇಷ ಸಾಧಿಸಿದ ಗಂಭೀರ್.. ಕನ್ನಡಿಗನಿಗೆ ಭಾರೀ ಅನ್ಯಾಯ!
ಕಳೆದ ವರ್ಷ ಟೀಮ್ ಇಂಡಿಯಾವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಕನ್ನಡಿಗ ಕೆಎಲ್ ರಾಹುಲ್ ಸೌತ್ ಆಫ್ರಿಕಾ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯನ್ನು 2-1 ರಿಂದ ಗೆದ್ದು ಸಂಭ್ರಮಿಸಿದ್ರು. ಈ ಮೂಲಕ ಬರೋಬ್ಬರಿ 21 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ಬಳಿಕ ಹರಿಣಿಗಳ ನಾಡಿನಲ್ಲಿ ಸೌತ್ ಆಫ್ರಿಕಾ ತಂಡವನ್ನು ಮಣಿಸಿದ 2ನೇ ಟೀಮ್ ಇಂಡಿಯಾ ನಾಯಕ ಎಂಬ ದಾಖಲೆ ನಿರ್ಮಿಸಿದ್ರು. ಹಾಗಾಗಿ ರೋಹಿತ್ ಶರ್ಮಾ ಉಪಸ್ಥಿತಿಯಲ್ಲಿ ಶ್ರೀಲಂಕಾ ವಿರುದ್ದ ಕೆ.ಎಲ್ ರಾಹುಲ್ ಅವರೇ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿದ್ದವು.
ಶ್ರೀಲಂಕಾ ವಿರುದ್ಧ ಜೂನ್ 27ನೇ ತಾರೀಕಿನಿಂದ 3 ಟಿ20 ಪಂದ್ಯ ಮತ್ತು 3 ಏಕದಿನ ಪಂದ್ಯಗಳ ಸರಣಿ ಶುರುವಾಗಲಿದೆ. ಈಗಾಗಲೇ ಶ್ರೀಲಂಕಾ ವಿರುದ್ಧದ ಸರಣಿಗೆ ಬಲಿಷ್ಠ ಟೀಮ್ ಇಂಡಿಯಾ ಅನೌನ್ಸ್ ಆಗಿದೆ. ಟೀಮ್ ಇಂಡಿಯಾ ವಿಶ್ವಕಪ್ ಗೆದ್ದ ಬೆನ್ನಲ್ಲೇ ವಿರಾಟ್ ಕೊಹ್ಲಿ, ರೋಹಿತ್ 20 ಅಂತರಾಷ್ಟ್ರೀಯ ಕ್ರಿಕೆಟ್ಗೆ ಗುಡ್ ಬೈ ಹೇಳಿದ್ರು. ಅಷ್ಟೇ ಅಲ್ಲದೇ ಶ್ರೀಲಂಕಾ ಪ್ರವಾಸದಿಂದ ರೆಸ್ಟ್ ಕೂಡ ಕೇಳಿದ್ದರು. ಬಿಸಿಸಿಐ ಕೊಹ್ಲಿ, ರೋಹಿತ್ ಮತ್ತು ಬುಮ್ರಾಗೆ ರೆಸ್ಟ್ ನೀಡಿತ್ತು. ಗಂಭೀರ್ ಕೋಚ್ ಆದ ಬಳಿಕ ಇದು ಮೊದಲ ಸರಣಿ ಆಗಿದ್ದು, ಮೂವರು ಸ್ಟಾರ್ ಆಟಗಾರರು ಶ್ರೀಲಂಕಾ ವಿರುದ್ಧ ಏಕದಿನ ಸೀರೀಸ್ ಆಡಲೇಬೇಕು ಎಂದು ಮನವಿ ಮಾಡಿಕೊಂಡಿದ್ದರು. ಇದಕ್ಕೆ ವಿರಾಟ್ ಕೊಹ್ಲಿ, ರೋಹಿತ್ ಸಮ್ಮತಿಸಿದ್ದು, ಈಗ ತಂಡಕ್ಕೆ ವಾಪಸ್ಸಾಗಿದ್ದಾರೆ. ಇನ್ನು, ಟಿ20 ವಿಶ್ವಕಪ್ನಿಂದ ದೂರ ಉಳಿದಿದ್ದ ಕೆ.ಎಲ್ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಕೂಡ ಏಕದಿನ ಸರಣಿಗೆ ಆಯ್ಕೆಯಾಗಿದ್ದಾರೆ. ಬುಮ್ರಾ ಮಾತ್ರ ರೆಸ್ಟ್ನಲ್ಲಿದ್ದಾರೆ.
ರಾಹುಲ್ ಭಾರೀ ಮೋಸ!
ರೋಹಿತ್ ಶರ್ಮಾ ಏಕದಿನ ಸೀರೀಸ್ನಿಂದ ರೆಸ್ಟ್ ತೆಗೆದುಕೊಂಡಿದ್ದಾರೆ ಎನ್ನಲಾಗಿತ್ತು. ಹಾಗಾಗಿ ಏಕದಿನ ಮಾದರಿಯಲ್ಲಿ ಭಾರತ ತಂಡವನ್ನು ರಾಹುಲ್ ಅವರೇ ಮುನ್ನಡೆಸಲಿದ್ದಾರೆ. ಕೋಚ್ ಗೌತಮ್ ಗಂಭೀರ್ ಕೂಡ ಕೆ.ಎಲ್ ರಾಹುಲ್ ಭಾರತ ಏಕದಿನ ತಂಡದ ಕ್ಯಾಪ್ಟನ್ ಆಗಲಿ ಎಂಬ ಅಭಿಪ್ರಾಯ ಕೂಡ ವ್ಯಕ್ತಪಡಿಸಿದ್ದಾರೆ ಅನ್ನೋ ವಿಚಾರ ತಿಳಿದು ಬಂದಿತ್ತು. ಆದರೀಗ, ರೋಹಿತ್ ವಾಪಸ್ ಬಂದಿದ್ದು, ಅವರೇ ಮುನ್ನಡೆಸುತ್ತಿದ್ದಾರೆ. ವಿಚಿತ್ರ ಎಂದರೆ ಶುಭ್ಮನ್ ಗಿಲ್ ಉಪನಾಯಕನ ಪಟ್ಟ ಕಟ್ಟಲಾಗಿದೆ. ಈ ಮೂಲಕ ಟೀಮ್ ಇಂಡಿಯಾ ಮುಂದಿನ ಕ್ಯಾಪ್ಟನ್ ಆಗಬೇಕಿದ್ದ ಕೆ.ಎಲ್ ರಾಹುಲ್ಗೆ ಬಿಗ್ ಶಾಕ್ ನೀಡಲಾಗಿದೆ.
ವಿರಾಟ್ ಕೊಹ್ಲಿ ಮೇಲೆ ಸಿಟ್ಟಿಗೆ ಹೀಗೆ ಮಾಡಿದ್ರಾ ಗಂಭೀರ್..?
ಸದ್ಯ ಗಂಭೀರ್ ಮಾತಾಡಿರೋ ಹಳೆ ವಿಡಿಯೋ ಒಂದು ವೈರಲ್ ಆಗಿದೆ. ನಾನು ಉಪನಾಯಕ ಆಗಿದ್ದೆ, ಧೋನಿ ಕ್ಯಾಪ್ಟನ್ ಇದ್ದರು. ಬಾಂಗ್ಲಾದೇಶ ವಿರುದ್ಧ ಸರಣಿಗೆ ಟೀಮ್ ಇಂಡಿಯಾ ಪ್ರಕಟ ಆಯ್ತು. ಆಗ ಒಂದೇ ಒಂದು ಚೇಂಜಸ್ ಆಗಿದ್ದು, ನನ್ನನ್ನು ಉಪನಾಯಕನ ಸ್ಥಾನದಿಂದ ತೆಗೆದು ಹಾಕಲಾಯ್ತು. ವಿರಾಟ್ ಕೊಹ್ಲಿಗೆ ವೈಎಸ್ ಕ್ಯಾಪ್ಟನ್ಸಿ ನೀಡಲಾಗಿತ್ತು. ಕ್ಯಾಪ್ಟನ್ ಇರುವಾಗ ಉಪನಾಯಕನನ್ನು ಬದಲಿಸಿದ್ದು ಕ್ರಿಕೆಟ್ ಇತಿಹಾಸದಲ್ಲೇ ಅದೇ ಮೊದಲು ಎಂದಿದ್ದರು. ಹಾಗಾಗಿ ಕೊಹ್ಲಿ, ಧೋನಿ ಮೇಲಿನ ಸಿಟ್ಟಿಗಾಗಿ ಗಂಭೀರ್ ಕೆ.ಎಲ್ ರಾಹುಲ್ ಅವರ ಉಪನಾಯಕನ ಪಟ್ಟ ಕಿತ್ತುಕೊಂಡಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿವೆ.
ಇದನ್ನೂ ಓದಿ: ಗಂಭೀರ್ ಆಡಿದ ಗೇಮ್ಗೆ ಬೆಂಡ್ ಆದ ಕೊಹ್ಲಿ.. ಆರಂಭದಲ್ಲೇ ಜುಟ್ಟು ಹಿಡಿದು ಬಿಗಿಗೊಳಿಸಿದ ಗೌತಿ..!
ಕ್ರೀಡೆ
ಗ್ಯಾಸ್‌ಗಾಗಿ ಜನ ಸಾಲು, ಟಿಕೆಟ್‌ಗಾಗಿ ಪಿಎ ಸಾಲು: ಶಾಸಕರಿಗೆ ಟೀಕೆ!
ಬೆಂಗಳೂರು: ರಾಜ್ಯದಲ್ಲಿ ಅಡುಗೆ ಅನಿಲ ಕೊರತೆಯಿಂದ ಜನರು ಸಂಕಷ್ಟ ಅನುಭವಿಸುತ್ತಿರುವ ನಡುವೆ, ಜನಪ್ರತಿನಿಧಿಗಳ ವರ್ತನೆ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಒಂದು ಕಡೆ ಆಟೋ ಚಾಲಕರು ಗ್ಯಾಸ್‌ಗಾಗಿ ರಾತ್ರಿಯಿಡೀ ಸಾಲಿನಲ್ಲಿ ನಿಲ್ಲುತ್ತಿರುವಾಗ, ಇನ್ನೊಂದು ಕಡೆ ಶಾಸಕರು IPL 2026 ಟಿಕೆಟ್ ಪಡೆಯಲು ತಮ್ಮ ಪಿಎಗಳನ್ನು ಕ್ಯೂನಲ್ಲಿ ನಿಲ್ಲಿಸಿರುವುದು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಮಾಹಿತಿಯ ಪ್ರಕಾರ, ಸರ್ಕಾರ ಮತ್ತು Karnataka State Cricket Association (KSCA) ನಡುವೆ ಪ್ರತಿ ಐಪಿಎಲ್ ಪಂದ್ಯಕ್ಕೆ ಶಾಸಕರಿಗೆ ಉಚಿತವಾಗಿ 3 ಟಿಕೆಟ್ ನೀಡುವ ಕುರಿತು ಒಪ್ಪಂದವಾಗಿದೆ. ಇದರ ಹಿನ್ನೆಲೆಯಲ್ಲಿ, Royal Challengers Bengaluru ಮತ್ತು Chennai Super Kings ನಡುವಿನ ಪಂದ್ಯಕ್ಕೆ ಟಿಕೆಟ್ ಪಡೆಯಲು ಶಾಸಕರ ಪಿಎಗಳು ಸ್ಪೀಕರ್ ಕಚೇರಿ ಮುಂದೆ ಸಾಲಿನಲ್ಲಿ ನಿಂತಿರುವ ದೃಶ್ಯಗಳು ಗಮನ ಸೆಳೆದಿವೆ.
ಸ್ಪೀಕರ್ ಕಚೇರಿಯಲ್ಲೇ ಟಿಕೆಟ್ ವಿತರಣೆ ನಡೆಯುತ್ತಿರುವುದರಿಂದ, ಶಾಸಕರ ಸೂಚನೆ ಮೇರೆಗೆ ಪಿಎಗಳು ಟಿಕೆಟ್ ಪಡೆಯಲು ಕ್ಯೂನಲ್ಲಿ ನಿಂತಿದ್ದಾರೆ ಎಂದು ತಿಳಿದುಬಂದಿದೆ.
ಇದರಿಂದ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಜನಪ್ರತಿನಿಧಿಗಳು ತಮ್ಮ ವೈಯಕ್ತಿಕ ಆಸಕ್ತಿಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ ಎಂಬ ಟೀಕೆಗಳು ಕೇಳಿಬರುತ್ತಿವೆ. ಗ್ಯಾಸ್ ಕೊರತೆ, ದೈನಂದಿನ ಸಮಸ್ಯೆಗಳ ನಡುವೆ ಈ ರೀತಿಯ ಘಟನೆಗಳು ಸಾರ್ವಜನಿಕರ ಅಸಮಾಧಾನವನ್ನು ಮತ್ತಷ್ಟು ಹೆಚ್ಚಿಸಿವೆ.
ರಾಜಕೀಯ ವಲಯದಲ್ಲಿಯೂ ಈ ಘಟನೆ ಚರ್ಚೆಗೆ ಕಾರಣವಾಗಿದ್ದು, ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿಗಳನ್ನು ಮರೆಯಬಾರದು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
ಅಪರಾಧ
ಐಪಿಎಲ್ ಟಿಕೆಟ್ ಕ್ರೇಜ್ ನಡುವೆ ದೊಡ್ಡ ಮೋಸ: ಟೆಕ್ಕಿಗೆ ₹1.46 ಲಕ್ಷ ನಷ್ಟ!
ಬೆಂಗಳೂರು, ಏಪ್ರಿಲ್ 04: ನಗರದಲ್ಲಿ IPL 2026 ಟಿಕೆಟ್ ಕ್ರೇಜ್ ಜೋರಾಗಿರುವ ನಡುವೆ ಆನ್‌ಲೈನ್ ಮೋಸದ ಪ್ರಕರಣವೂ ಬೆಳಕಿಗೆ ಬಂದಿದೆ. ಅನಧಿಕೃತ ಪ್ಲಾಟ್‌ಫಾರ್ಮ್ ಮೂಲಕ ಟಿಕೆಟ್ ಖರೀದಿಸಲು ಯತ್ನಿಸಿದ ಟೆಕ್ಕಿ ಒಬ್ಬರು ₹1.46 ಲಕ್ಷ ಕಳೆದುಕೊಂಡಿರುವ ಘಟನೆ ಕ್ರಿಕೆಟ್ ಅಭಿಮಾನಿಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ.
Bengaluruನ ಬಿ. ನಾರಾಯಣಪುರ ನಿವಾಸಿಯಾದ 25 ವರ್ಷದ ಟೆಕ್ಕಿ, Instagramನಲ್ಲಿ ಪರಿಚಯವಾದ ವ್ಯಕ್ತಿಯಿಂದ ಮೋಸಕ್ಕೆ ಒಳಗಾಗಿದ್ದಾರೆ. ಆತ ತನ್ನನ್ನು M. Chinnaswamy Stadium ಟಿಕೆಟ್ ಕೌಂಟರ್ ಹಿರಿಯ ಮೇಲ್ವಿಚಾರಕ ಸುಮಿತ್ ಬಿಸ್ವಾಲ್ ಎಂದು ಪರಿಚಯಿಸಿಕೊಂಡು ನಂಬಿಕೆ ಮೂಡಿಸಿದ್ದಾನೆ.
ಮೊದಲಿಗೆ ಎರಡು ಟಿಕೆಟ್‌ಗಳಿಗೆ ₹3,700 ಕೇಳಿದ ಆರೋಪಿಯು, ಬಳಿಕ ಭದ್ರತಾ ಠೇವಣಿ, ಐಡಿ ಕಾರ್ಡ್ ಮತ್ತು ಫುಡ್ ಕೂಪನ್ ಹೆಸರಿನಲ್ಲಿ ಹಂತ ಹಂತವಾಗಿ ಹಣ ಪಡೆದುಕೊಂಡಿದ್ದಾನೆ. ಪಂದ್ಯದ ದಿನ ಗೇಟ್ ನಂ.10 ಬಳಿ ಬರಲು ಹೇಳಿ ನಕಲಿ ಇಮೇಲ್ ದೃಢೀಕರಣವನ್ನೂ ಕಳುಹಿಸಿದ್ದಾನೆ.
ಆತನ ಮಾತು ನಂಬಿದ ಟೆಕ್ಕಿ, ತನ್ನ ಹಾಗೂ ತಾಯಿಯ ಖಾತೆಯಿಂದ ಯುಪಿಐ ಮೂಲಕ ಒಟ್ಟು ₹1.46 ಲಕ್ಷ ವರ್ಗಾವಣೆ ಮಾಡಿದ್ದಾರೆ. ಆದರೆ ಹಣ ಪಡೆದ ಬಳಿಕ ಆರೋಪಿಯು ಟಿಕೆಟ್ ನೀಡದೆ ಸಂಪರ್ಕ ಕಡಿತಗೊಳಿಸಿದ್ದಾನೆ.
ಈ ಕುರಿತು ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ಐಪಿಎಲ್ ಟಿಕೆಟ್ ಖರೀದಿಸುವಾಗ ಅಧಿಕೃತ ವೆಬ್‌ಸೈಟ್ ಅಥವಾ ಮಾನ್ಯ ಮಾರಾಟಗಾರರ ಮೂಲಕವೇ ಖರೀದಿಸಲು ಸಲಹೆ ನೀಡಿದ್ದಾರೆ. ಅನಧಿಕೃತ ಲಿಂಕ್‌ಗಳು ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವ್ಯವಹಾರ ಮಾಡುವುದರಿಂದ ಇಂತಹ ಮೋಸಗಳಿಗೆ ಒಳಗಾಗುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿಸಿದ್ದಾರೆ.
ಕ್ರೀಡೆ
“ಆ ಮಾತುಗಳು ನನ್ನದಲ್ಲ”: ಯುವಿ ಸ್ಪಷ್ಟನೆ, ಧೋನಿ-ಕಪಿಲ್‌ಗೆ ಕ್ಷಮೆ
ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ Yuvraj Singh ಅವರು ವಿಶ್ವಕಪ್ ವಿಜೇತ ನಾಯಕರುಗಳಾದ Mahendra Singh Dhoni ಮತ್ತು Kapil Dev ಅವರಿಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.
ಇತ್ತೀಚಿನ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ ಯುವರಾಜ್, ತಮ್ಮ ತಂದೆ Yograj Singh ನೀಡಿದ್ದ ವಿವಾದಾತ್ಮಕ ಹೇಳಿಕೆಗಳಿಗೆ ಸಂಬಂಧಿಸಿದಂತೆ ಈ ಕ್ಷಮೆಯಾಚನೆ ಮಾಡಿದ್ದಾರೆ. “ನನ್ನ ತಂದೆಯ ಮಾತುಗಳಿಗಾಗಿ ನಾನು ಹೃತ್ಪೂರ್ವಕವಾಗಿ ಕ್ಷಮೆ ಕೇಳುತ್ತೇನೆ. ಆ ಮಾತುಗಳು ನನ್ನವು ಅಲ್ಲ ಎಂಬುದು ನಿಮಗೆ ತಿಳಿದಿದೆ. ನೀವು ಇಬ್ಬರೂ ಭಾರತಕ್ಕೆ ನೀಡಿದ ಕೊಡುಗೆ ಅಪಾರ” ಎಂದು ಯುವರಾಜ್ ಹೇಳಿದ್ದಾರೆ.
ಈ ಹಿಂದೆ ಯೋಗರಾಜ್ ಸಿಂಗ್ ಹಲವಾರು ಬಾರಿ ಧೋನಿ ಮತ್ತು ಕಪಿಲ್ ದೇವ್ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದರು. ವಿಶೇಷವಾಗಿ, ಯುವರಾಜ್ ಅವರ ವೃತ್ತಿಜೀವನದ ಸಂಕಷ್ಟದ ಸಂದರ್ಭದಲ್ಲಿ ಕೆಲವು ಆಟಗಾರರು ಬೆಂಬಲ ನೀಡಲಿಲ್ಲ ಎಂದು ಆರೋಪಿಸಿದ್ದರು. 2011ರ ವಿಶ್ವಕಪ್ ವೇಳೆ ತಂಡದ ಆಯ್ಕೆ ವಿಚಾರದಲ್ಲಿ ಧೋನಿ ವಿರುದ್ಧವೂ ಯೋಗರಾಜ್ ಟೀಕಿಸಿದ್ದರು.
ಇದೇ ವೇಳೆ, 1983ರ ವಿಶ್ವಕಪ್ ಸಮಯದಲ್ಲಿ ಕಪಿಲ್ ದೇವ್ ವಿರುದ್ಧವೂ ಗಂಭೀರ ಆರೋಪಗಳನ್ನು ಮಾಡಿದ್ದರಿಂದ ಈ ವಿಚಾರ ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು. ಈ ಎಲ್ಲಾ ಹೇಳಿಕೆಗಳಿಂದ ಕ್ರಿಕೆಟ್ ವಲಯದಲ್ಲಿ ವಿವಾದ ಉಂಟಾಗಿತ್ತು.
ಈಗ ಯುವರಾಜ್ ಸಿಂಗ್ ಸ್ವತಃ ಮುಂದಾಗಿ ಕ್ಷಮೆ ಕೇಳಿರುವುದು ವಿವಾದಕ್ಕೆ ತೆರೆ ಬೀಳುವ ಸೂಚನೆ ನೀಡಿದೆ. ಕ್ರೀಡಾ ವಲಯದಲ್ಲಿ ಪರಸ್ಪರ ಗೌರವ ಮುಖ್ಯ ಎಂಬ ಸಂದೇಶವನ್ನು ಅವರು ಈ ಮೂಲಕ ನೀಡಿದ್ದಾರೆ ಎಂದು ಅಭಿಪ್ರಾಯ ವ್ಯಕ್ತವಾಗುತ್ತಿದೆ.
-
ದೇಶ21 hours agoಹಳೆಯ ವಾಹನಗಳಿಗೆ HSRP ಕಡ್ಡಾಯವೇ? ಸಾರಿಗೆ ಇಲಾಖೆಯ ಸ್ಪಷ್ಟನೆ ಏನು ಗೊತ್ತಾ?
-
ದೇಶ23 hours agoಕಾಂಗ್ರೆಸ್ ಒಳಜಗಳ ಬಯಲು: ರಾಹುಲ್ ನಿಲುವಿಗೆ ಹಿರಿಯರ ವಿರೋಧ
-
ಚುನಾವಣೆ21 hours agoTN 2026 ಟೀಸರ್ಗೆ ರಾಜಕೀಯ ಕಿಚ್ಚು! ವಿಜಯ್ ಟಾರ್ಗೆಟ್ ಆರೋಪ – ತಮಿಳುನಾಡಿನಲ್ಲಿ ಬಿಗುವಿನ ವಾತಾವರಣ
-
ದೇಶ23 hours agoಇರಾನ್-ಅಮೆರಿಕಾ ಮಾತುಕತೆ ವಿಫಲ: ಪಾಕಿಸ್ತಾನಕ್ಕೆ ಮುಖಭಂಗ!
-
ಅಪರಾಧ22 hours agoಐಪಿಎಲ್ ಟಿಕೆಟ್ ಕ್ರೇಜ್ ನಡುವೆ ದೊಡ್ಡ ಮೋಸ: ಟೆಕ್ಕಿಗೆ ₹1.46 ಲಕ್ಷ ನಷ್ಟ!
-
ಕ್ರೀಡೆ22 hours agoಗ್ಯಾಸ್‌ಗಾಗಿ ಜನ ಸಾಲು, ಟಿಕೆಟ್‌ಗಾಗಿ ಪಿಎ ಸಾಲು: ಶಾಸಕರಿಗೆ ಟೀಕೆ!
-
ದೇಶ21 hours agoK. Govindraj ಸೇರಿ ಗಣ್ಯರಿಗೆ ಗೌರವ ಡಾಕ್ಟರೇಟ್ – ಬಿಸಿಯು ಘಟಿಕೋತ್ಸವ ಸಂಭ್ರಮ
