Connect with us

ದೇಶ

Budget2024: ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌.. ಯುವ ಜನರಿಗೆ ಬಂಪರ್‌; ಬಜೆಟ್‌ ಹೈಲೈಟ್ಸ್ ಇಲ್ಲಿದೆ

Published

on

ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ದಾಖಲೆಯ 7ನೇ ಬಜೆಟ್‌ ಮಂಡಿಸುತ್ತಿದ್ದಾರೆ. 2024ರ ಕೇಂದ್ರ ಬಜೆಟ್‌ನಲ್ಲಿ ಎಲ್ಲಾ ವಲಯಗಳಿಗೂ ಒತ್ತು ನೀಡಲಾಗಿದೆ. ಪ್ರಮುಖವಾಗಿ ನರೇಂದ್ರ ಮೋದಿ ಸರ್ಕಾರ ಈ ಬಾರಿ ಯುವಸಮುದಾಯಕ್ಕೆ ಆದ್ಯತೆ ನೀಡಿದ್ದು, ಯುವ ಜನರಿಗೆ ಉದ್ಯೋಗಕ್ಕಾಗಿ 5 ಹೊಸ ಸ್ಕೀಮ್​ಗಳನ್ನು ಘೋಷಣೆ ಮಾಡಿದೆ.

2024ರ ಬಜೆಟ್ ಹೈಲೈಟ್ಸ್‌ ಏನು?

ರೈತರಿಗೆ ಬಂಪರ್ ಕೊಡುಗೆ
ಕೃಷಿ ಸಂಬಂಧಿತ ವಲಯಕ್ಕೆ 1.52 ಲಕ್ಷ ಕೋಟಿ ಮೀಸಲು
ಕೃಷಿ ಸಂಶೋಧನೆಯಲ್ಲಿ ಬದಲಾವಣೆಗೆ ಆರ್ಥಿಕ ನೆರವು
ಉತ್ಪಾದನೆಯನ್ನು ಹೆಚ್ಚಿಸಲು ಕೃಷಿ ಸಂಶೋಧನೆಗೆ ಮಹತ್ವ
2 ವರ್ಷದಲ್ಲಿ 1 ಕೋಟಿ ರೈತರಿಗೆ ನ್ಯಾಚುರಲ್ ಫಾರ್ಮಿಂಗ್​ಗೆ ನೆರವು
ತೈಲ ಬೀಜಗಳ ಉತ್ಪಾದನೆಯಲ್ಲಿ ಆತ್ಮನಿರ್ಭರತೆ ಸಾಧಿಸುವ ಗುರಿ
ರೈತರಿಗಾಗಿ 10 ಸಾವಿರ ಬಯೋ ರಿಸರ್ಚ್ ಕೇಂದ್ರಗಳ ಸ್ಥಾಪನೆ
ಖಾರಿಫ್ ಬೆಳೆಗೆ ಡಿಜಿಟಲ್ ಕ್ರಾಪ್ ಸರ್ವೇ ನಡೆಸುವುದು
ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಕ್ರಮ
ರೈತರಿಗೆ ಬೆಳೆ ಬೆಳೆಯಲು ಹೊಸ ಮಾದರಿಯ ಬೀಜಗಳು

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌
ಯುವ ಜನರಿಗೆ ಉದ್ಯೋಗಕ್ಕಾಗಿ 5 ಹೊಸ ಸ್ಕೀಮ್​ಗಳು
4 ವರ್ಷಗಳ ಪಿಎಫ್ ಬೆಂಬಲದ ಸ್ಕೀಮ್​​ಗಳು ಘೋಷಣೆ
ಉದ್ಯೋಗದಾತರಿಗೆ ನೆರವು ನೀಡಲು ಪಿಎಫ್ ಬೆಂಬಲ ಸ್ಕೀಮ್
ಎಂಪ್ಲಾಯ್ಮೆಂಟ್ ಲಿಂಕ್ಡ್​ ಸ್ಕೀಮ್​​ಗಳು ಘೋಷಣೆ
1 ಸಾವಿರ ಇಂಡಸ್ಟ್ರಿಯಲ್ ತರಬೇತಿ ಕೇಂದ್ರಗಳ ಉನ್ನತೀಕರಣ
20 ಲಕ್ಷ ಯುವ ಜನರಿಗೆ ಕೌಶಲ್ಯ ತರಬೇತಿ ನೀಡಲು ಯೋಜನೆ
ಮಹಿಳೆಯರಿಗಾಗಿ ವಿಶೇಷ ಕೌಶಲ್ಯ ತರಬೇತಿ ಕಾರ್ಯಕ್ರಮಗಳು
10 ಲಕ್ಷದವರೆಗೆ ಉನ್ನತ ಶಿಕ್ಷಣಕ್ಕೆ ಎಜುಕೇಷನ್ ಲೋನ್​
ಸರ್ಕಾರಿ ಸೌಲಭ್ಯವನ್ನು ಪಡೆಯುವ ವಿದ್ಯಾರ್ಥಿಗಳಿಗೆ ಶಿಕ್ಷಣ ಸಾಲ
ವಾರ್ಷಿಕ 1 ಲಕ್ಷ ವಿದ್ಯಾರ್ಥಿಗಳಿಗೆ ಶೇ.3ರಷ್ಟು ಬಡ್ಡಿ ದರದಲ್ಲಿ ಸಾಲ
ಇಪಿಎಫ್​ ನೋಂದಣಿ ಆಧರಿಸಿ ಎಂಪ್ಲಾಯ್ಮೆಂಟ್ ಲಿಂಕ್ಡ್ ಇನ್ಸೆಂಟಿವ್
ಹೊಸದಾಗಿ ಕೆಲಸಕ್ಕೆ ಸೇರುವ ನೌಕರರಿಗೆ ಒಂದು ತಿಂಗಳ ವೇತನ
1 ತಿಂಗಳ ವೇತನ ಅಥವಾ 15 ಸಾವಿರ ರೂಪಾಯಿವರೆಗೆ ಇನ್ಸೆಂಟಿವ್
1 ಲಕ್ಷದೊಳಗಿನ ಮಾಸಿಕ ವೇತನ ಇರುವವರಿಗೆ ಈ ಇನ್ಸೆಂಟಿವ್ ಲಭ್ಯ
ಇದರಿಂದ ಭಾರತದ 2 ಕೋಟಿ 10 ಲಕ್ಷ ಯುಜನರಿಗೆ ಅನುಕೂಲ

ಬಿಹಾರಕ್ಕೆ ಬಂಪರ್‌!
ಬಿಹಾರಕ್ಕೆ ವಿಶೇಷವಾಗಿ 26 ಸಾವಿರ ಕೋಟಿ ರೂ. ಘೋಷಣೆ
ಬಿಹಾರದ ಸರ್ವತೋಮುಖ ಅಭಿವೃದ್ಧಿಗಾಗಿ ಪೂರ್ವೋದಯ
ಪಟ್ನಾ-ಪೂರ್ಣ್ಯಾ ಎಕ್ಸ್​ಪ್ರೆಸ್ ವೇ, ಬಕ್ಸಾರ್-ಬಗಲ್ಪುರ ಎಕ್ಸ್​ಪ್ರೆಸ್ ವೇ
ಬೋಧಗಯಾ-ರಾಜ್​ಗಿರ್-ವೈಶಾಲಿ-ದರ್ಬಂಗಾ ಎಕ್ಸ್​ಪ್ರೆಸ್ ವೇ
ಬಕ್ಸಾರ್​ನಲ್ಲಿ ಗಂಗಾ ನದಿಯ ಮೇಲೆ 2 ಲೇನ್ ಸೇತುವೆ ನಿರ್ಮಾಣ
ಪಿರ್ ಪಯಂತಿಯಲ್ಲಿ 2,400 ಮೆಗಾ ವ್ಯಾಟ್​ನ ಪವರ್ ಪ್ಲಾಂಟ್

ಮುದ್ರಾ ಯೋಜನೆ ಮಿತಿ ಏರಿಕೆ
ಮುದ್ರಾ ಯೋಜನೆ ಸಾಲ ಮಿತಿ 10 ಲಕ್ಷದಿಂದ 20 ಲಕ್ಷಕ್ಕೆ ಏರಿಕೆ
ಎಂಎಸ್​ಎಂಇಗಳಿಗೆ ಉತ್ತೇಜನ ನೀಡಲು ಕ್ರೆಡಿಟ್ ಗ್ಯಾರಂಟಿ ಯೋಜನೆ
ಅಗತ್ಯ ಮೆಷಿನರಿ, ಉಪಕರಣಗಳ ಖರೀದಿಗಾಗಿ ಕ್ರೆಡಿಟ್ ಗ್ಯಾರಂಟಿ
100 ಕೋಟಿ ರೂಪಾಯಿವರೆಗೂ ಕ್ರೆಡಿಟ್ ಗ್ಯಾರಂಟಿ ಇರಲಿದೆ

ದೇಶ

ಪೊಲೀಸ್ ವಾಹನವೇ ಪ್ರವೇಶಿಸದ ಗ್ರಾಮ: ಶಾಂತಿಯುತ ಬದುಕಿನ ಅದ್ಭುತ ಕಥೆ

Published

on

By

ಇತ್ತೀಚಿನ ದಿನಗಳಲ್ಲಿ ಸಣ್ಣ ವಿಷಯಕ್ಕೂ ಜಗಳ-ಕೇಸು ಸಾಮಾನ್ಯವಾಗಿರುವ ಸಂದರ್ಭದಲ್ಲೇ, ಬಿಹಾರದ ಒಂದು ಹಳ್ಳಿ ದೇಶಕ್ಕೆ ಮಾದರಿಯಾಗಿ ಹೊರಹೊಮ್ಮಿದೆ. ಕಲಿಯಾಚಕ್ ಗ್ರಾಮ ಕಳೆದ 118 ವರ್ಷಗಳಿಂದ ಯಾವುದೇ ಅಪರಾಧ ದಾಖಲಾಗದೇ ಶಾಂತಿಯುತ ಜೀವನ ನಡೆಸುತ್ತಿರುವುದು ವಿಶೇಷ.

ನಳಂದ ಜಿಲ್ಲೆಯ ಈ ಗ್ರಾಮದಲ್ಲಿ ಸ್ಥಾಪನೆಯಾದ ದಿನದಿಂದಲೂ ಗಂಭೀರ ಅಪರಾಧಗಳೇ ನಡೆದಿಲ್ಲ. ಅಷ್ಟೇ ಅಲ್ಲ, ಇಷ್ಟು ವರ್ಷಗಳಲ್ಲಿ ಪೊಲೀಸ್ ಸೈರನ್ ಕೂಡ ಕೇಳಿಸಿಲ್ಲ ಎಂಬುದು ಆಶ್ಚರ್ಯಕರ ಸಂಗತಿ. ಗ್ರಾಮದಲ್ಲಿ ಯಾವುದೇ ಸಣ್ಣಪುಟ್ಟ ವಿವಾದಗಳು ಉಂಟಾದರೂ, ಹಿರಿಯರು ಕೂತು ಸಮಸ್ಯೆಯನ್ನು ಪರಿಹರಿಸುತ್ತಾರೆ.

ಈ ಗ್ರಾಮ ಹಿಲ್ಸಾ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುತ್ತದೆ. ಆದರೆ ಪೊಲೀಸ್ ದಾಖಲೆಗಳಲ್ಲಿ ಈ ಗ್ರಾಮದಿಂದ ಒಂದೇ ಒಂದು ದೂರು ಕೂಡ ಇಲ್ಲದಿರುವುದು ಅಧಿಕಾರಿಗಳನ್ನೇ ಅಚ್ಚರಿಗೊಳಿಸಿದೆ.

ಗ್ರಾಮದಲ್ಲಿ ಸುಮಾರು 60 ಕುಟುಂಬಗಳು, 500 ಜನರು ವಾಸಿಸುತ್ತಿದ್ದು, ವಿವಿಧ ಜಾತಿ-ವರ್ಗಗಳ ಜನರು ಸಹೋದರತ್ವದಿಂದ ಬದುಕುತ್ತಿದ್ದಾರೆ. “ಗ್ರಾಮದ ಸಮಸ್ಯೆಗಳನ್ನು ಗ್ರಾಮದಲ್ಲೇ ಬಗೆಹರಿಸಬೇಕು” ಎಂಬುದು ಇವರ ಮೂಲ ತತ್ವವಾಗಿದೆ.

ಈ ಶಾಂತಿಯುತ ವಾತಾವರಣಕ್ಕೆ ಪ್ರಮುಖ ಕಾರಣ ಮಾಜಿ ಪಂಚಾಯಿತಿ ಅಧ್ಯಕ್ಷ ಸಾಧು ಶರಣ್ ಸಿಂಗ್ ಅವರ ಮಾರ್ಗದರ್ಶನ. ಅವರ ಪ್ರಯತ್ನದಿಂದ ಈ ಗ್ರಾಮ ಮಾದರಿಯಾಗಿ ರೂಪುಗೊಂಡಿದೆ.

ಇಲ್ಲಿನ ಯುವಕರು ಕೆಟ್ಟ ಅಭ್ಯಾಸಗಳಿಂದ ದೂರವಿದ್ದು ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳತ್ತ ಗಮನ ಹರಿಸುತ್ತಿದ್ದಾರೆ.

ಗಮನಿಸಿ: ಮೇಲಿನ ವಿವರಗಳು ಬಿಹಾರದ ಕಲಿಯಾಚಕ್ ಗ್ರಾಮದ ಕುರಿತು ಸ್ಥಳೀಯರು ಮತ್ತು ಪೊಲೀಸ್ ಅಧಿಕಾರಿಗಳು ಒದಗಿಸಿದ ಮಾಹಿತಿಯನ್ನು ಆಧರಿಸಿವೆ. ಇದು ಅಪರಾಧ ಮುಕ್ತ ಗ್ರಾಮವಾಗಿ ದೇಶದಲ್ಲಿ ವಿಶೇಷ ಮನ್ನಣೆಯನ್ನು ಗಳಿಸಿದೆ.

ಒಟ್ಟಿನಲ್ಲಿ, ಕಲಿಯಾಚಕ್ ಗ್ರಾಮವು ಒಗ್ಗಟ್ಟು, ಸಹೋದರತ್ವ ಮತ್ತು ಶಾಂತಿಯುತ ಬದುಕಿನ ನಿಜವಾದ ಮಾದರಿಯಾಗಿ ಇಡೀ ದೇಶಕ್ಕೆ ಪ್ರೇರಣೆಯಾಗಿದೆ.

Continue Reading

ದೇಶ

ಯುದ್ಧ ಮಧ್ಯೆ ಸಾಹಸ ಕಾರ್ಯಾಚರಣೆ: ಅಮೆರಿಕಾ ಪೈಲಟ್ ರಕ್ಷಣೆ ಘೋಷಣೆ

Published

on

By

Continue Reading

ಚುನಾವಣೆ

“ಟ್ರಂಪ್ ಅನುಮತಿ ಇಲ್ಲದೆ ತೈಲ ಖರೀದಿ ಸಾಧ್ಯವಿಲ್ಲ”: ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

Published

on

By

ಅಸ್ಸಾಂ ರಾಜ್ಯದ ಗೋಲಾಘಾಟ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕುರಿತು ಉಲ್ಲೇಖಿಸಿದ ಅವರು, “ಟ್ರಂಪ್ ಅನುಮತಿ ಇಲ್ಲದೆ ಭಾರತ ಯಾವುದೇ ದೇಶದಿಂದ ತೈಲ ಖರೀದಿಸಲು ಸಾಧ್ಯವಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಆರೋಪಿಸಿದರು.

ರ‍್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಟ್ರಂಪ್ ಬಹಿರಂಗವಾಗಿ ಮೋದಿ ಬಗ್ಗೆ ಹೇಳಿಕೆ ನೀಡಿದ್ದಾರೆ. ನರೇಂದ್ರ ಮೋದಿ ಭಾರತದ ಇಂಧನ ಭದ್ರತೆ ಮತ್ತು ಪ್ರಮುಖ ಮಾಹಿತಿಯನ್ನು ಅಮೆರಿಕದ ಕೈಗೆ ಒಪ್ಪಿಸಿದ್ದಾರೆ,” ಎಂದು ಗಂಭೀರ ಆರೋಪ ಮಾಡಿದರು.

ಇದೇ ವೇಳೆ ಅವರು ಎಪ್ಸ್ಟೀನ್ ಫೈಲ್ ಕುರಿತು ಉಲ್ಲೇಖಿಸಿ, ಟ್ರಂಪ್ ಬಳಿ ಮೋದಿ ಬಗ್ಗೆ ಮಾಹಿತಿಯಿದೆ ಎಂದು ಹೇಳಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ. ಜೊತೆಗೆ, ಉದ್ಯಮಿ ಅದಾನಿ ವಿರುದ್ಧ ಅಮೆರಿಕದಲ್ಲಿ ಪ್ರಕರಣ ದಾಖಲಾಗಿರುವುದನ್ನೂ ಅವರು ಪ್ರಸ್ತಾಪಿಸಿದರು.

ಈ ನಡುವೆ ದೇಶದ ವಿವಿಧ ರಾಜ್ಯಗಳಲ್ಲಿ ಚುನಾವಣೆ ಸನ್ನಾಹಗಳು ಜೋರಾಗಿದ್ದು, ಅಸ್ಸಾಂ ಸೇರಿದಂತೆ ಹಲವೆಡೆ ರಾಜಕೀಯ ತಾಪಮಾನ ಏರಿಕೆಯಾಗಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಟಿಎಂಸಿ ಪ್ರಚಾರ ತೀವ್ರಗೊಳಿಸಿದ್ದು, ಬಿಜೆಪಿ ಕೂಡ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ತೀವ್ರ ಪ್ರಚಾರ ನಡೆಸುತ್ತಿದೆ.

ಒಟ್ಟಿನಲ್ಲಿ, ಈ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಬಿಜೆಪಿ-ಕಾಂಗ್ರೆಸ್ ನಡುವಿನ ಮಾತಿನ ಸಮರ ಮತ್ತಷ್ಟು ತೀವ್ರಗೊಳ್ಳುವ ಸೂಚನೆ ನೀಡಿದೆ.

Continue Reading

Trending