ಬೆಂಗಳೂರು

ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ರೆ ಇನ್ಮೇಲೆ ದಂಡ ಗ್ಯಾರಂಟಿ!

ಬೆಂಗಳೂರು; ಇನ್ಮುಂದೆ ವಾಹನ ಚಾಲನೆ ಮಾಡವಾಗ ಸಂಚಾರಿ ನಿಯಮ ಉಲ್ಲಂಘನೆ ಮಾಡುವವರು ದಂಡದಿಂದ ತಪ್ಪಿಸಿಕೊಳ್ಳು ಸಾಧ್ಯವೇ ಇಲ್ಲ, ಫೈನ್ ಗ್ಯಾರಂಟಿ, ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಆಗಸ್ಟ್ ತಿಂಗಳಿನಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಳ್ಳುವಂತೆ ಸಂಚಾರ ಮತ್ತು ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ,
ಹೈ ಬೀಮ್ ಲೈಟ್, ಕಣ್ಣು ಕುಕ್ಕುವ ಎಲ್‍ಇಡಿ ಲೈಟ್ ಬಳಕೆ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಜೊತೆಗೆ ಒನ್ ವೇ, ಫುಟ್ ಪಾತ್ ಮೇಲೆ ವಾಹನ ಚಾಲನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ,
ಒನ್ ವೇ ವಾಹನ ಚಾಲನೆ ಮಾಡುವವರ ಮೇಲೆ ಬಿಎನ್‍ಎಸ್ 281, 184 ಐಎಂವಿ ಕಾಯ್ದೆಯಡಿ ಎಫ್‍ಐಆರ್ ದಾಖಲಿಸಲು ಆದೇಶ ನೀಡಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ,

Leave a Reply

Your email address will not be published. Required fields are marked *

Trending

Exit mobile version