ದೇಶ

ಕ್ಷಿಪಣಿ ದಾಳಿ ತಡೆಯಲು ಬ್ಯಾಲೆಸ್ಟಿಕ್ ಗುರಾಣಿ-ಸ್ಧಳೀಯ ತಂತ್ರಜ್ಞಾನ ಅಭಿವೃದ್ಧಿಪಡಿಸಿದ DRDO!

ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಧೆ ಎರಡನೇ ಹಂತದ ಬ್ಯಾಲಿಸ್ಟಿಕ್ ಕ್ಷಿಪಣಿ ರಕ್ಷಣಾ ವ್ಯವಸ್ಧೆಯನ್ನು ಇತ್ತೀಚಿಗೆ ಯಶಸ್ವಿಯಾಗಿ ಪರೀಕ್ಷಿಸಿದೆ, ಇದು ಸುಮಾರು 5,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿಯ ದಾಳಿಯನ್ನು ತಡೆಯುವ ಸಾಮಧ್ರ್ಯ ಹೊಂದಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ,
ಪರೀಕ್ಷೆಯು 5,000 ಕಿಮೀ ವರ್ಗದ ಬ್ಯಾಲಿಸ್ಟಿಕ್ ಕ್ಷಿಪಣಿಗಳ ವಿರುದ್ಧ ರಕ್ಷಿಸುವ ಸ್ಧಳೀಯ ಸಾಮಥ್ರ್ಯವನ್ನು ಪ್ರದರ್ಶಿಸಿದೆ, ರೇಂಜ್ ಟ್ರ್ಯಾಕಿಂಗ್ ಉಪಕರಣಗಳ ಮೂಲಕ ಸೆರೆಹಿಡಿಯಲಾದ ಡೇಟಾದಿಂದ ಕ್ಷಿಪಣಿಯ ಕಾರ್ಯಕ್ಷಮತೆಯನ್ನು ಮೇಲ್ವಿಚಾರಣೆ ಮಾಡಲಾಗಿದೆ,
ಯಶಸ್ವಿ ಪರೀಕ್ಷೆ ನಡೆಸಿದ ಡಿಆರ್‍ಡಿಒಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಿನಂದನೆ ಸಲ್ಲಿಸಿದ್ದಾರೆ, ಇದು ಭಾರತದ ಬ್ಯಾಲಿಸ್ಟಿಕ್ ಕ್ಷಿಪಣಿ ರಕ್ಷಣಾ ಸಾಮಥ್ರ್ಯವನ್ನು ಮತ್ತೊಮ್ಮೆ ಪ್ರದರ್ಶಿಸಿದೆ ಎಂದು ಹೇಳಿದ್ದಾರೆ ,

Trending

Exit mobile version