ಬೆಂಗಳೂರು
ಬೆಂಗಳೂರು TO ಮೈಸೂರು ಪಾದಯಾತ್ರೆ: ‘ದೋಸ್ತಿ’ಗಳಿಂದ ಕಾಂಗ್ರೆಸ್ ವಿರುದ್ಧ ಬೃಹತ್ ಹೋರಾಟಕ್ಕೆ ಸಿದ್ಧತೆ – BJP JDS Padayatra
ಬೆಂಗಳೂರು: ಮುಡಾ ಹಗರಣ ಹಾಗು ವಾಲ್ಮೀಕಿ ನಿಗಮ ಹಗರಣಗಳನ್ನು ಜನರ ಮುಂದಿಡಲು ಬಿಜೆಪಿ ನಿರ್ಧರಿಸಿದ್ದು, ದೋಸ್ತಿ ಪಕ್ಷ ಜೆಡಿಎಸ್ ಜೊತೆಗೂಡಿ ಬೆಂಗಳೂರು ಟು ಮೈಸೂರು ಪಾದಯಾತ್ರೆಗೆ ಮುಂದಾಗಿದೆ. ಒಂದೂವರೆ ದಶಕದ ನಂತರ ರಾಜ್ಯದಲ್ಲಿ ಮೊದಲ ಬೃಹತ್ ರಾಜಕೀಯ ಹೋರಾಟದ ಪಾದಯಾತ್ರೆ ನಡೆಯುತ್ತಿದೆ.
ಮುಡಾ ಹಾಗು ವಾಲ್ಮೀಕಿ ನಿಗಮ ಹಗರಣ ಕುರಿತು ಸದನದಲ್ಲಿ ಚರ್ಚೆಗೆ ಸರಿಯಾದ ವೇದಿಕೆ ಲಭ್ಯವಾಗದ ಹಿನ್ನೆಲೆಯಲ್ಲಿ ಜನತಾ ನ್ಯಾಯಾಲಯಕ್ಕೆ ಕೊಂಡೊಯ್ಯಲು ಬಿಜೆಪಿ ಮತ್ತು ಜೆಡಿಎಸ್ ನಿರ್ಧರಿಸಿದೆ. ಬೃಹತ್ ಪಾದಯಾತ್ರೆ ಮೂಲಕ ಜನರಿಗೆ ಕಾಂಗ್ರೆಸ್ ಸರ್ಕಾರದ ಹಗರಣಗಳನ್ನು ಮನವರಿಕೆ ಮಾಡಿಕೊಡಲು ತೀರ್ಮಾನಿಸಿದೆ. ಅದಕ್ಕಾಗಿ 140 ಕಿಲೋಮೀಟರ್ಗಳ ಬೃಹತ್ ಪಾದಯಾತ್ರೆಗೆ ನಿರ್ಧರಿಸಲಾಗಿದೆ.
ಬೆಂಗಳೂರು ಹೊರವಲಯದ ನೈಸ್ ರೋಡ್ ಜಂಕ್ಷನ್ನಿಂದ ಪಾದಯಾತ್ರೆ ಆರಂಭಿಸಿ ಬಿಡದಿ, ರಾಮನಗರ, ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣದ ಮೂಲಕ ಮೈಸೂರಿಗೆ ಸಾಗಲು ಬಿಜೆಪಿ ಜೆಡಿಎಸ್ ನಾಯಕರು ನಿರ್ಧರಿಸಿದ್ದಾರೆ. ಕೇವಲ ರಾಷ್ಟ್ರೀಯ ಹೆದ್ದಾರಿ ಮಾರ್ಗದಲ್ಲಿ ಸಾಗದೆ ಪ್ರಮುಖ ಪಟ್ಟಣಗಳ ಒಳಹಾದಿ ಮೂಲಕ ಸಾಗಿ ಜನರನ್ನು ತಲುಪಬೇಕು. ಅಲ್ಲಲ್ಲಿ ಸಮಾವೇಶಗಳನ್ನು ಆಯೋಜನೆ ಮಾಡುವ ಮೂಲಕ ಸರ್ಕಾರದ ಹಗರಣಗಳನ್ನು ಎಳೆ ಎಳೆಯಾಗಿ ಜನತೆಯ ಮುಂದೆ ಬಿಚ್ಚಿಡಬೇಕು ಎಂದು ನಿರ್ಧರಿಸಿದ್ದು, ಅದಕ್ಕಾಗಿ ರೂಪುರೇಶೆ ಸಿದ್ದಪಡಿಸಲಾಗುತ್ತಿದೆ. ಯಾವ ಮಾರ್ಗದ ಮೂಲಕ ಸಾಗಬೇಕು. ಯಾವ ಪಟ್ಟಣದಲ್ಲಿ ಒಳಗೆ ಸಾಗಬೇಕು. ಸಮಾವೇಶಗಳು ಎಲ್ಲಿ ನಡೆಸಬೇಕು. ಮೈಸೂರಿನಲ್ಲಿ ಪಾದಯಾತ್ರೆಯ ಸಮಾರೋಪ ಸಮಾರಂಭ ಬೃಹತ್ ಪ್ರಮಾಣದಲ್ಲಿ ನಡೆಸುವ ಕುರಿತು ಅಂತಿಮ ಹಂತದ ಪರಿಶೀಲನೆಗಳು ನಡೆಯುತ್ತಿದೆ.
ಬೆಂಗಳೂರಿನಿಂದ ಮೈಸೂರುವರೆಗೂ ಪಾದಯಾತ್ರೆ ಸಾಗುವ ಇಡೀ ಮಾರ್ಗ ಜನತಾದಳದ ಕಾರಿಡಾರ್ ಆಗಿದೆ. ದಳಪತಿಗಳ ಕೋಟೆಯೊಳಗೆ ಕೇಸರಿ ಪಡೆ ನಡೆಸುತ್ತಿರುವ ಪಾದಯಾತ್ರೆ ಇದಾಗಿದೆ. ಜೆಡಿಎಸ್ ಈಗ ಎನ್ಡಿಎ ಭಾಗವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಪಾದಯಾತ್ರೆಯಲ್ಲಿ ಜನತಾದಳ ಪೂರ್ಣ ಪ್ರಮಾಣದಲ್ಲಿ ಭಾಗಿಯಾಗುತ್ತಿದೆ. ಜನತಾದಳದ ವಿಶ್ವಾಸದೊಂದಿಗೆ ಪಾದಯಾತ್ರೆ ನಡೆಸಲಾಗುತ್ತಿದೆ. ಇದು ಬಿಜೆಪಿಯ ಸಂಘಟಿತ ಕೇಡರ್ ಬೇಸ್ ಅಲ್ಲದ ಭಾಗವಾಗಿರುವ ಕಾರಣ ಪಾದಯಾತ್ರೆ ಕಳೆಗುಂದದಿರಲು ಜೆಡಿಎಸ್ನ ಸಹಕಾರವನ್ನು ಪಡೆದುಕೊಳ್ಳಲಾಗುತ್ತಿದೆ. ಪಾದಯಾತ್ರೆ ಮಾರ್ಗದುದ್ದಕ್ಕೂ ಸ್ಥಳೀಯ ಬಿಜೆಪಿ ಜೆಡಿಎಸ್ ಕಾರ್ಯಕರ್ತರು ಪಾಲ್ಗೊಂಡು ಪಾದಯಾತ್ರೆಯನ್ನು ಸಫಲಗೊಳಿಸಬೇಕು ಎಂದು ನಿರ್ಧರಿಸಿದ್ದು, ಇದಕ್ಕಾಗಿ ಬೂತ್ ಮಟ್ಟದ ಸಿದ್ದತೆಗಳು ಆರಂಭವಾಗಿವೆ. ಉಭಯ ಪಕ್ಷಗಳ ವಿಧಾನಸಭಾವಾರು ನಾಯಕರು ಸಮ್ಮಿಳಿತ ರೀತಿಯಲ್ಲಿ ಕಾರ್ಯಕರ್ತರ ಪಡೆಯನ್ನು ಪಾದಯಾತ್ರೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ನಿರ್ಧಾರ ಮಾಡಲಾಗಿದೆ.
ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸುವ ನಿರ್ಧಾರ ಮಾಡಿದ್ದರೂ ದಿನಾಂಕವನ್ನು ಅಂತಿಮಗೊಳಿಸಿಲ್ಲ. ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ಈಗ ಕೇಂದ್ರ ಸಚಿವರಾಗಿದ್ದು, ದೆಹಲಿಯಲ್ಲಿರುವ ಹಿನ್ನೆಲೆ ಅವರೊಂದಿಗೆ ಚರ್ಚಿಸಲು ಸಾಧ್ಯವಾಗದ ಕಾರಣದಿಂದ ದಿನಾಂಕ ನಿಗದಿ ಬಾಕಿ ಉಳಿದಿದೆ. ಶನಿವಾರ ಹಾಗು ಭಾನುವಾರ ರಾಜ್ಯಕ್ಕೆ ಕುಮಾರಸ್ವಾಮಿ ಆಗಮಿಸಲಿಸಿದ್ದು, ಕುಮಾರಸ್ವಾಮಿ ಉಪಸ್ಥಿತಿಯಲ್ಲಿಯೇ ಉಭಯ ಪಕ್ಷಗಳ ನಾಯಕರು ಜಂಟಿ ಸಭೆ ನಡೆಸಿ ಪಾದಯಾತ್ರೆ ದಿನಾಂಕವನ್ನು ಅಂತಿಮಗೊಳಿಸಲಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, 28 ರಂದು ಎನ್.ಡಿ.ಎ ಸಭೆ ನಡೆಸಿ ಪಾದಯಾತ್ರೆ ದಿನಾಂಕ ಹಾಗು ಮಾರ್ಗ ಸೇರಿದಂತೆ ಇತ್ಯಾದಿ ಕಾರ್ಯಕ್ರಮಗಳ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಪಾದಯಾತ್ರೆಯಲ್ಲಿ ಉಭಯ ಪಕ್ಷಗಳ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದರೂ ಬಿಜೆಪಿ ಹಿರಿಯ ನಾಯಕರಾದ ಬಿ.ಎಸ್.ಯಡಿಯೂರಪ್ಪ, ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಡಿಸಿ ಸದಾನದಗೌಡ, ಜಗದೀಶ್ ಶೆಟ್ಟರ್ ಸಾಂಕೇತಿಕವಾಗಿ ಪಾಲ್ಗೊಂಡು ಸಮಾವೇಶಗಳಲ್ಲಿ ಉಪಸ್ಥಿತರಿರುವಂತೆ ಮಾಡುವ ಲೆಕ್ಕಾಚಾರ ಇದೆ. ಇನ್ನು ಜೆಡಿಎಸ್ನಿಂದ ಕುಮಾರಸ್ವಾಮಿ ಸಂಸತ್ ಅಧಿವೇಶನದ ಕಾರಣದಿಂದ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವುದು ಕಷ್ಟವಾಗಿದ್ದು, ಅವರು ಉದ್ಘಾಟಣೆ, ಸಮಾರೋಪದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಅದು ಕೂಡು ಭಾನುವಾರದ ಸಭೆಯಲ್ಲಿ ಅಂತಿಮವಾಗಲಿದೆ.
2010 ರಲ್ಲಿ ಅಕ್ರಮ ಗಣಿಗಾರಿಕೆ ವಿರೋಧಿಸಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಿದಂತೆ ಈಗ ಬಿಜೆಪಿ ಜೆಡಿಎಸ್ ಒಟ್ಟಾಗಿ ಕಾಂಗ್ರೆಸ್ ವಿರುದ್ಧ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸುತ್ತಿದೆ. ಇದು 14 ವರ್ಷದ ನಂತರ ನಡೆಯುತ್ತಿರುವ ರಾಜ್ಯದ ಬೃಹತ್ ರಾಜಕೀಯ ಪಾದಯಾತ್ರೆಯಾಗಿದೆ. ಹಿಂದಿನ ಬಿಜೆಪಿ ಸರ್ಕಾರದ ವೇಳೆ ಕಾಂಗ್ರೆಸ್ ಕಾವೇರಿ ಸಂಗಮದಿಂದ ಮೇಕೆದಾಟು ಪಾದಯಾತ್ರೆ ನಡೆಸಿತ್ತಾದರೂ ಇದು ನೂರು ಕಿಲೋಮೀಟರ್ಗೂ ಹೆಚ್ಚಿನ ದೂರ ಕ್ರಮಿಸುವ ಬೃಹತ್ ಪಾದಯಾತ್ರೆಯಾಗಿದೆ.
ಕೇವಲ ಪಾದಯಾತ್ರೆ ನಡೆಸಿ ಸುಮ್ಮನಾಗದೆ ವಿಷಯವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಬೇಕು, ಸಿಎಂ ರಾಜೀನಾಮೆ ನೀಡಬೇಕು. ಅಲ್ಲಿಯವರೆಗೂ ಒಂದಲ್ಲಾ ಒಂದು ರೀತಿಯ ಹೋರಾಟವನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲು ಉಭಯ ಪಕ್ಷಗಳು ನಿರ್ಧರಿಸಿವೆ. ಹಾಗಾಗಿ ಪಾದಯಾತ್ರೆ ಹೋರಾಟದ ಆರಂಭ ಮಾತ್ರವಾಗಿದ್ದು, ಸಿಎಂ ರಾಜೀನಾಮೆವರೆಗೂ ನಿರಂತರ ಹೋರಾಟ ಇರಲಿವೆ. ಈ ಕುರಿತು ಬಿಜೆಪಿ ನಾಯಕ ಸಿಟಿ ರವಿ ಮಾಹಿತಿ ನೀಡಿದ್ದು, ಹಗರಣ ಆರೋಪದ ವಿಷಯಗಳನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವವರೆಗೂ ನಿರಂತರ ಹೋರಾಟ ಮಾಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
ಒಟ್ಟಿನಲ್ಲಿ ಸದನದ ಒಳಗೆ ಮುಡಾ, ವಾಲ್ಮೀಕಿ ಹಗರಣ ಹೋರಾಟ ನಡೆಸಿರುವ ಬಿಜೆಪಿ ಜೆಡಿಎಸ್ ದೋಸ್ತಿಗಳು ಇದೀಗ ಸದನದ ಹೊರಗೆ ಪಾದಯಾತ್ರೆ ಮೂಲಕ ಬೃಹತ್ ಹೋರಾಟಕ್ಕೆ ನಿರ್ಧರಿಸಿವೆ. ಹಳೆ ಮೈಸೂರು ಭಾಗದಲ್ಲಿ ಪಕ್ಷ ಬಲವರ್ದನೆಗೂ ಈ ಪಾದಯಾತ್ರೆ ಸಹಕಾರಿಯಾಗಲಿದ್ದು, ಮಿತ್ರಪಕ್ಷಗಳ ಒಗ್ಗಟ್ಟು ಬಲಗೊಳ್ಳಲಿದೆ ಎನ್ನುವ ವಿಶ್ವಾಸ ಉಭಯ ನಾಯಕರದ್ದಾಗಿದೆ.
ದೇಶ
ಕಾಂಗ್ರೆಸ್‌ನಲ್ಲಿ ಭಾರಿ ಶಿಸ್ತು ಕ್ರಮ: ನಟಿ ಭಾವನಾ ರಾಮಣ್ಣ ಸೇರಿ ಹಲವರಿಗೆ ಶಾಕ್
ಬೆಂಗಳೂರು: Karnataka Pradesh Congress Committee ಪ್ರಮುಖ ಸಭೆಗೆ ಗೈರಾಗಿದ್ದ ಪದಾಧಿಕಾರಿಗಳ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ D. K. Shivakumar ಭಾರೀ ಶಿಸ್ತು ಕ್ರಮ ಕೈಗೊಂಡಿದ್ದಾರೆ. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SSR) ಕುರಿತ ಮಹತ್ವದ ಸಭೆಯನ್ನು ನಿರ್ಲಕ್ಷ್ಯ ಮಾಡಿದ ಆರೋಪದ ಮೇಲೆ ಹಲವು ಹಿರಿಯ ನಾಯಕರನ್ನು ಪಕ್ಷದ ಹುದ್ದೆಗಳಿಂದ ತಕ್ಷಣದಿಂದಲೇ ವಜಾಗೊಳಿಸಲಾಗಿದೆ.
ಈ ಕ್ರಮದಡಿ ಕೆಪಿಸಿಸಿ ವಕ್ತಾರರಾದ Niketh Raj Maurya, Bhavana Ramanna ಸೇರಿದಂತೆ ಶಿವಮೂರ್ತಿ ನಾಯಕ್, ಎಂ.ಸಿ. ವೇಣುಗೋಪಾಲ್, ಷಣ್ಮುಖ ಶಿವಳ್ಳಿ ಹಾಗೂ ಸಿ.ಆರ್. ಮನೋಹರ್ ಅವರಿಗೆ ಪಕ್ಷದಿಂದ “ಗೇಟ್ ಪಾಸ್” ನೀಡಲಾಗಿದೆ. ಇವರ ಜೊತೆಗೆ ಮೂವರು ಉಪಾಧ್ಯಕ್ಷರು ಮತ್ತು 29 ಪ್ರಧಾನ ಕಾರ್ಯದರ್ಶಿಗಳನ್ನೂ ಹುದ್ದೆಗಳಿಂದ ಕೈಬಿಡಲಾಗಿದೆ.
ಬೆಂಗಳೂರಿನಲ್ಲಿ ನಡೆದ ಈ ಮಹತ್ವದ ಸಭೆಗೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ Randeep Singh Surjewala ಕೂಡ ಭಾಗವಹಿಸಿದ್ದರು. ಪಕ್ಷದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದ್ದ ಸಭೆಗೆ ಇಷ್ಟೊಂದು ಪ್ರಮಾಣದಲ್ಲಿ ನಾಯಕರು ಗೈರಾಗಿರುವುದನ್ನು ಅವರು ಗಂಭೀರವಾಗಿ ಪರಿಗಣಿಸಿದ್ದರು ಎನ್ನಲಾಗಿದೆ.
ಸಭೆಯನ್ನು ಲಘುವಾಗಿ ತೆಗೆದುಕೊಂಡವರ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳುವಂತೆ ಸುರ್ಜೇವಾಲಾ ಸೂಚನೆ ನೀಡಿದ ಬೆನ್ನಲ್ಲೇ ಡಿಕೆ ಶಿವಕುಮಾರ್ ಆಕ್ಷನ್ ಮೋಡ್‌ಗೆ ಇಳಿದಿದ್ದಾರೆ. ಈ ಮೂಲಕ ಪಕ್ಷದಲ್ಲಿ ಶಿಸ್ತು ಉಲ್ಲಂಘನೆ ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರೆ.
ಇದೇ ವೇಳೆ ರಾಜ್ಯ ರಾಜಕೀಯದಲ್ಲಿ Siddaramaiah ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆಯ ಚರ್ಚೆಗಳು ಜೋರಾಗಿರುವ ಸಂದರ್ಭದಲ್ಲಿ ಈ ಕ್ರಮ ಕಾಂಗ್ರೆಸ್ ಪಾಳಯದಲ್ಲಿ ಮತ್ತಷ್ಟು ಸಂಚಲನ ಸೃಷ್ಟಿಸಿದೆ.
ಪಕ್ಷದಲ್ಲಿ ಹಿರಿಯರಾಗಿರಲಿ ಅಥವಾ ಪ್ರಮುಖ ಹುದ್ದೆಯಲ್ಲಿರಲಿ, ಜವಾಬ್ದಾರಿ ಮತ್ತು ಶಿಸ್ತು ಪಾಲನೆ ಕಡ್ಡಾಯ ಎಂಬುದನ್ನು ಡಿಕೆ ಶಿವಕುಮಾರ್ ಈ ನಿರ್ಧಾರದ ಮೂಲಕ ಸ್ಪಷ್ಟಪಡಿಸಿದ್ದಾರೆ.
ದೇಶ
“ಭಗವಂತ ನನ್ನ ಆಸೆ ಈಡೇರಿಸಿದ್ದಾನೆ”: ಇಕ್ಬಾಲ್ ಹುಸೇನ್ ಭಾವನಾತ್ಮಕ ಮಾತು
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ತೀವ್ರಗೊಂಡಿರುವ ನಡುವೆಯೇ Iqbal Hussain ನೀಡಿರುವ ಹೇಳಿಕೆ ಹೊಸ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ. ಉಪಮುಖ್ಯಮಂತ್ರಿ D. K. Shivakumar ಅವರಿಗೆ ಮುಖ್ಯಮಂತ್ರಿ ಪಟ್ಟ ಸಿಗುವ ವಿಚಾರವಾಗಿ ಮಾತನಾಡಿದ ಅವರು, “ಭಗವಂತ ನನ್ನ ಆಸೆ ಈಡೇರಿಸಿದ್ದಾನೆ” ಎಂದು ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಇಕ್ಬಾಲ್ ಹುಸೇನ್, “ಭಗವಂತನ ದಯೆಯಿಂದ ಒಳ್ಳೆ ಕಾಲ ಬಂದಿದೆ. ನಮ್ಮ ನಾಯಕರಿಗೆ ರಾಜ್ಯದ ಜನರು ಬಯಸಿದ್ದನ್ನು ಭಗವಂತ ನೆರವೇರಿಸಿದ್ದಾನೆ. ಅವನಿಗೆ ಕೋಟಿ ಕೋಟಿ ನಮಸ್ಕಾರಗಳು” ಎಂದು ಹೇಳಿದ್ದಾರೆ.
“ಎಲ್ಲದಕ್ಕೂ ಒಂದು ಇತಿಮಿತಿ ಇರುತ್ತದೆ. ಪಕ್ಷದ ವರಿಷ್ಠರು ಶಿಸ್ತಿನಿಂದ ಇರಲು ಸೂಚಿಸಿದ್ದರು. ಕಾಲ ಬಂದಾಗ ಮಾತನಾಡಿ ಎಂದಿದ್ದರು. ಈಗ ಆ ಸಮಯ ಬಂದಿದೆ” ಎಂದು ಹೇಳುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರ ತೆಗೆದುಕೊಂಡಿರುವ ಸುಳಿವನ್ನೂ ನೀಡಿದ್ದಾರೆ.
ಇನ್ನೂ ನಾಯಕರು ಬೆಂಗಳೂರಿಗೆ ಬಂದ ಬಳಿಕ ಅವರೊಂದಿಗೆ ಚರ್ಚೆ ನಡೆಸುವುದಾಗಿ ಹೇಳಿದ ಅವರು, ಕಾರ್ಯಕರ್ತರು ಹಾಗೂ ನಾಯಕರ ಜೊತೆ ಮಾತುಕತೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ದೆಹಲಿಯಲ್ಲಿ ನಡೆದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡಿದ ಇಕ್ಬಾಲ್ ಹುಸೇನ್, “ರಾತ್ರಿ ನನಗೆ ನಿದ್ದೆ ಬರಲಿಲ್ಲ. ದೆಹಲಿಯಲ್ಲಿ ಮಾತನಾಡಬೇಕಾದವರ ಜೊತೆ ಮಾತನಾಡುತ್ತಿದ್ದೆ. ಕ್ಷಣಕ್ಷಣದ ಮಾಹಿತಿಯನ್ನು ಪಡೆಯುತ್ತಿದ್ದೆ” ಎಂದು ಹೇಳಿದ್ದಾರೆ.
ಈ ಹೇಳಿಕೆ ಇದೀಗ ಕಾಂಗ್ರೆಸ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ ನೀಡಿದೆ.
ಬೆಂಗಳೂರು
“ನಾಳೆ ಎಲ್ಲ ಹೇಳುತ್ತೇನೆ”: ರಾಜಕೀಯ ಪ್ರಶ್ನೆಗಳಿಗೆ ಸಿದ್ದರಾಮಯ್ಯ ಸಸ್ಪೆನ್ಸ್ ಉತ್ತರ!
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳು ತೀವ್ರವಾಗಿರುವ ನಡುವೆಯೇ Siddaramaiah ಅವರು “ನಾಳೆ ಮಾತನಾಡುತ್ತೇನೆ” ಎನ್ನುವ ಮೂಲಕ ರಾಜಕೀಯ ವಲಯದಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದ್ದಾರೆ.
ಮಾಜಿ ಪ್ರಧಾನಿ Jawaharlal Nehru ಅವರ 62ನೇ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ, ನೆಹರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು. ಬಳಿಕ ನೆಹರು ಅವರು ದೇಶಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿದರು.
ಕಾರ್ಯಕ್ರಮದ ವೇಳೆ ಮಾಧ್ಯಮ ಪ್ರತಿನಿಧಿಗಳು ದೆಹಲಿ ಪ್ರವಾಸ, ಕಾಂಗ್ರೆಸ್ ಹೈಕಮಾಂಡ್ ಸಭೆ ಹಾಗೂ ಸಿಎಂ ಬದಲಾವಣೆ ಕುರಿತ ಪ್ರಶ್ನೆಗಳನ್ನು ಕೇಳಿದಾಗ ಸಿದ್ದರಾಮಯ್ಯ ಯಾವುದೇ ವಿವರವಾದ ಪ್ರತಿಕ್ರಿಯೆ ನೀಡಲಿಲ್ಲ. “ಏನೇ ಇದ್ದರೂ ನಾಳೆ ಮಾತನಾಡುತ್ತೇನೆ” ಎಂದು ಒಂದೇ ಸಾಲಿನಲ್ಲಿ ಉತ್ತರಿಸಿ ಅಲ್ಲಿಂದ ತೆರಳಿದರು.
ಸಾಮಾನ್ಯವಾಗಿ ಮಾಧ್ಯಮಗಳ ಪ್ರಶ್ನೆಗಳಿಗೆ ಗಟ್ಟಿಯಾಗಿ ಪ್ರತಿಕ್ರಿಯಿಸುವ ಸಿದ್ದರಾಮಯ್ಯ, ಇಂದು ಮಾತ್ರ ಮೌನವಾಗಿದ್ದದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಅವರ ಮುಖಭಾವದಲ್ಲೂ ಬೇಸರ ಸ್ಪಷ್ಟವಾಗಿ ಕಾಣಿಸುತ್ತಿತ್ತು ಎಂದು ಕಾರ್ಯಕ್ರಮದಲ್ಲಿ ಭಾಗಿಯಾದವರು ಹೇಳುತ್ತಿದ್ದಾರೆ.
ಇಂದು ಮುಖ್ಯಮಂತ್ರಿ ಅವರಿಗೆ ಯಾವುದೇ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಿರಲಿಲ್ಲ. ಹೀಗಾಗಿ ವಿಧಾನಸೌಧದಿಂದ ನೇರವಾಗಿ ತಮ್ಮ ಸರ್ಕಾರಿ ನಿವಾಸ ‘ಕಾವೇರಿ’ಗೆ ತೆರಳಿದ್ದಾರೆ.
ಇದೀಗ ನಾಳೆ ಬೆಳಗ್ಗೆ ತಮ್ಮ ಆಪ್ತ ಸಚಿವರು ಹಾಗೂ ಶಾಸಕರೊಂದಿಗೆ ಬ್ರೇಕ್‌ಫಾಸ್ಟ್ ಸಭೆ ನಡೆಸಲಿರುವ ಸಿದ್ದರಾಮಯ್ಯ, ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ. ಬಳಿಕ ಸುದ್ದಿಗೋಷ್ಠಿ ನಡೆಸಿ ಎಲ್ಲಾ ರಾಜಕೀಯ ಬೆಳವಣಿಗೆಗಳ ಬಗ್ಗೆ ಸ್ಪಷ್ಟನೆ ನೀಡುವ ನಿರೀಕ್ಷೆಯಿದೆ.
-
ದೇಶ7 hours agoಕರ್ನಾಟಕಕ್ಕೆ ಹೊಸ ಸಿಎಂ? ಡಿಕೆ ಶಿವಕುಮಾರ್ ಪಾಲಿಗೆ ‘ಶುಭ ಶುಕ್ರವಾರ’ ಫಿಕ್ಸ್!
-
ದೇಶ10 hours agoಬಸ್ ಕಂಡಕ್ಟರ್ನಿಂದ ಸೂಪರ್ ಸ್ಟಾರ್ ತನಕ: ರಜನಿಕಾಂತ್ ಅಪರೂಪದ ಫೋಟೋ ವೈರಲ್
-
ಬೆಂಗಳೂರು7 hours ago“ನಾಳೆ ಎಲ್ಲ ಹೇಳುತ್ತೇನೆ”: ರಾಜಕೀಯ ಪ್ರಶ್ನೆಗಳಿಗೆ ಸಿದ್ದರಾಮಯ್ಯ ಸಸ್ಪೆನ್ಸ್ ಉತ್ತರ!
-
ಕ್ರೀಡೆ7 hours ago“That’s a silly question!”: ಆರ್ಸಿಬಿ ಸೋಲಿನ ಬಳಿಕ ಪತ್ರಕರ್ತರ ಮೇಲೆ ಫಿಲಿಪ್ಸ್ ಸಿಡಿತ
-
ದೇಶ9 hours agoಸಿಎಂ ಬದಲಾವಣೆಯ ಬೆನ್ನಲ್ಲೇ ಡಿಕೆಶಿಗೆ ಮತ್ತೊಂದು ಶಾಕ್?
-
ದೇಶ9 hours agoಅಯ್ಯನ ಕೆರೆ ಕಲುಷಿತಗೊಳಿಸಲು ಯತ್ನ: ಸಿಬ್ಬಂದಿಯ ದಿಟ್ಟ ಕ್ರಮಕ್ಕೆ ಭಾರಿ ಮೆಚ್ಚುಗೆ
-
ಅಪರಾಧ11 hours agoಪಿಣರಾಯಿ ವಿಜಯನ್ ನಿವಾಸದ ಮೇಲೆ ಇಡಿ ದಾಳಿ: ಕೇರಳ ರಾಜಕೀಯದಲ್ಲಿ ಭಾರೀ ಸಂಚಲನ!
-
ಕ್ರೀಡೆ10 hours ago‘ಈ ಸಲ ಕಪ್ ನಮ್ದೇ’ ಘೋಷಣೆ ಜೋರಾಗಿದೆ: ಆರ್ಸಿಬಿ ಫೈನಲ್ಗೆ ಎಂಟ್ರಿ
