ದೇಶ
ಶಾಲೆ ಬಿಟ್ಟ ಮಕ್ಕಳ ಸಂಖ್ಯೆಯಲ್ಲಿ ರಾಜ್ಯಕ್ಕೆ ಏಳನೇ ಸ್ಧಾನ- ಸರ್ಕಾರದಿಂದ ಸಮೀಕ್ಷೆ!

ಬೆಂಗಳೂರು: ಮೊಬೈಲ್ ಆ್ಯಪ್ ಮೂಲಕ ಶಾಲೆಗಳಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ನಡೆಸಲಾಗುತ್ತಿದೆ, 6 ರಿಂದ 18 ವರ್ಷದೊಳಗಿನ ಮಕ್ಕಳನ್ನು ಪತ್ತೆ ಹಚ್ಚಲು ರಾಜ್ಯ ಸರ್ಕಾರ ಮೊಟ್ಟ ಮೊದಲ ಬಾರಿಗೆ ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸಲಿದೆ,
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಹಯೋಗದೊಂದಿಗೆ ಈ ಸಮೀಕ್ಷೆ ನಡೆಸಲಾಗುತ್ತದೆ, ಮೊಬೈಲ್ ಆ್ಯಪ್ ಬಳಸಿ ಸಮೀಕ್ಷೆ ನಡೆಸಲು ಸ್ವಸಹಾಯ ಗುಂಪುಗಳ ಮಹಿಳೆಯರನ್ನು ಗಣತಿದಾರರನ್ನಾಗಿ ನೇಮಿಸಲಾಗುತ್ತದೆ,
ಜುಲೈ 31 ರ ಒಳಗೆ ಸಮೀಕ್ಷೆ ಪೂರ್ಣಗೊಳಿಸಲು ಅಧಿಕಾರಿಗಳು ಸೂಚನೆ ನೀಡಿದ್ದು 300 ಮನೆಗಳಿಗೆ ಇಬ್ಬರಂತೆ ಸಮೀಕ್ಷೆ ನಡೆಸಲು ಹೇಳಿದ್ದಾರೆ, ಈಗಾಗಲೇ ಈ ಸಂಬಂಧ ಸಭೆ ನಡೆಸಿ ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ,
ಕಳೆದ ವರ್ಷ ಡಿಸೆಂಬರ್ನಲ್ಲಿ ಡಿಎಸ್ಇಎಲ ಒದಗಿಸಿದ ಮಾಹಿತಿಯ ಪ್ರಕಾರ 2022-23 ರ ಅವಧಿಯಲ್ಲಿ ಒಟ್ಟು 18,461 ಮಕ್ಕಳು ಶಾಲೆಯಿಂದ ಹೊರಗುಳೀದಿದ್ದರು, ಅತಿ ಹೆಚ್ಚು ಡ್ರಾಪ್ ಔಟ್ಗಳಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ಏಳನೇ ಸ್ಧಾನದಲ್ಲಿದೆ, 2017-23 ರ ನಡುವೆ ಆರು ವರ್ಷಗಳ ಅವಧಿ 71,945 ವಿದ್ಯಾರ್ಥಿಗಳು ಶಾಲೆಗೆ ಹೋಗುವುದನ್ನು ನಿಲ್ಲಿಸಿದ್ದಾರೆ,