ಕ್ರೀಡೆ
Paris Olympics 2024: ಭಾರತಕ್ಕೆ ಮೊದಲ ಪದಕ – ಐತಿಹಾಸಿಕ ಗೆಲುವಿನೊಂದಿಗೆ ಕಂಚು ಗೆದ್ದ ಮನು ಭಾಕರ್

ಪ್ಯಾರಿಸ್: 2024ರ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಆರಂಭವಾಗಿದೆ. 10 ಮೀಟರ್ ಏರ್ ಪಿಸ್ತೂಲ್ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಮನು ಭಾಕರ್ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ.
ಶನಿವಾರ ಫೈನಲ್ ಪ್ರವೇಶಿಸಿದ್ದ ಮನು ಭಾಕರ್ ಇಂದು ಮೂರನೇ ಸ್ಥಾನ ಪಡೆದಿದ್ದಾರೆ. ಈ ಮೂಲಕ ಶೂಟಿಂಗ್‌ನಲ್ಲಿ ಭಾರತದ ಪರ ಪದಕ ಗೆದ್ದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.
ಫೈನಲ್‌ನಲ್ಲಿ ದಕ್ಷಿಣ ಕೊರಿಯಾದ ಓಹ್ ಯೇ ಜಿನ್ 243.2, ಕಿಮ್ ಯೇಜಿ 241.3 ಅಂಕ ಪಡೆದರೆ ಮನು ಭಾಕರ್ 221.7 ಅಂಕ ಪಡೆದು ಮೂರನೇ ಸ್ಥಾನ ಪಡೆದರು. ಈ ಮೂಲಕ ಕಂಚಿನ ಪದಕಕ್ಕೆ ಕೊರಳೊಡ್ಡಿದರು.