Connect with us

ದೇಶ

ಮಾವು ಬೆಳೆಗಾರರಿಗೆ ಸಿಹಿ: ಧಾರವಾಡಕ್ಕೆ ಮಾವು ಅಭಿವೃದ್ಧಿ ಕೇಂದ್ರ ಮಂಜೂರು – Mango Development Center

ಧಾರವಾಡ: ಉತ್ತರ ಕರ್ನಾಟಕದ ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರ ಸಂತಸ ಸುದ್ದಿ ನೀಡಿದೆ. ಧಾರವಾಡ ಜಿಲ್ಲೆಯಲ್ಲಿ ಮಾವು ಅಭಿವೃದ್ಧಿ ಕೇಂದ್ರ ಸ್ಥಾಪಿಸಲು ಅನುಮತಿ ನೀಡಿ ಅನುದಾನ ಮಂಜೂರು ಮಾಡಿದೆ. ಇದು ಈ ಭಾಗದಲ್ಲಿ ಮಾವು ಕೃಷಿ ಅಭಿವೃದ್ಧಿಗೆ ಸಹಕಾರಿಯಾಗಲಿದೆ.

ಇತ್ತೀಚೆಗೆ ಹವಾಮಾನ ಬದಲಾವಣೆಯಿಂದಾಗಿ ಸುಸ್ಥಿರ ಮಾರುಕಟ್ಟೆ ಇಲ್ಲದೇ ಮಾವು ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ. ಎಷ್ಟೋ ರೈತರು ಇರುವ ತೋಟಗಳನ್ನೇ ತೆರವುಗೊಳಿಸುವ ನಿರ್ಧಾರಕ್ಕೂ ಬಂದಿದ್ದರು. ಆದರೆ ಧಾರವಾಡ ಆಫೂಸ್ ಮಾವಿಗೆ ವಿದೇಶಗಳಲ್ಲಿಯೂ ಬೇಡಿಕೆ ಇದೆ. ಹೀಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆ ಕಲ್ಪಿಸಲು ಕೇಂದ್ರದ ನಿರ್ಧಾರ ಪೂರಕವಾಗಲಿದೆ.

ಉತ್ತರ ಕರ್ನಾಟಕದಲ್ಲಿ ವಿವಿಧ ಮಾವಿನ ತಳಿಗಳ ಬೆಳೆಯುವ ಅಗತ್ಯತೆ ಇದ್ದು, ಮಾವು ತಳಿಗಳ ಅಭಿವೃದ್ಧಿ, ಸಂಶೋಧನೆ, ಪ್ರಾತ್ಯಕ್ಷಿಕೆ, ರೈತರಿಗೆ ತರಬೇತಿ, ಮಾವಿನ ಹಣ್ಣು ಮತ್ತು ಮಾವಿನ ಕಾಯಿ ರಫ್ತು ವ್ಯವಸ್ಥೆ ಒದಗಿಸುವ ಕೆಲಸಗಳನ್ನು ಈ ಕೇಂದ್ರ ಮಾಡಲಿದೆ.

ಧಾರವಾಡ ಪಕ್ಕದ ಜಿಲ್ಲೆಗಳಿಗೂ ಅನುಕೂಲ: ಧಾರವಾಡ ಜಿಲ್ಲೆಯಲ್ಲಿ 8,400 ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆ ಇದೆ. ಅಕ್ಕಪಕ್ಕದ ಜಿಲ್ಲೆಗಳಾಗಿರುವ ಕೊಪ್ಪಳ, ಉತ್ತರ ಕನ್ನಡ, ಬೆಳಗಾವಿ, ಹಾವೇರಿ ಮತ್ತು ಗದಗ ಭಾಗದಲ್ಲಿ ಮಾವಿನ ತೋಟಗಳು ಹೆಚ್ಚಿನ ಸಂಖ್ಯೆಯಲ್ಲಿದ್ದು ಅಂದಾಜು 30 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಾವಿನ ತೋಟಗಳಿವೆ. ಹೀಗಾಗಿ ಕೇಂದ್ರ ಸರ್ಕಾರ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಕರ್ನಾಟಕಕ್ಕೆ ಮಾವು ಅಭಿವೃದ್ಧಿ ಕೇಂದ್ರ ಮಂಜೂರು ಮಾಡಿದೆ.

ಮಾವು ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ಧಾರವಾಡ ಜಿಲ್ಲೆಯಲ್ಲಿರುವ ಕುಂಭಾಪುರ ಫಾರ್ಮ್​ನಲ್ಲಿ ಈಗಾಗಲೇ ಒಂದು ಎಕರೆ ಜಾಗ ಗುರುತಿಸಲಾಗಿದೆ. ಒಟ್ಟು 7.5 ಕೋಟಿ ರೂಪಾಯಿ ಅನುದಾನ ಕೇಂದ್ರದಿಂದ ಮಂಜೂರಾಗಿದ್ದು, ಇನ್ನೆರಡು ತಿಂಗಳಿನಲ್ಲಿ ಕೇಂದ್ರ ಸ್ಥಾಪನೆಯ ಕಾರ್ಯಗಳು ಆರಂಭವಾಗಲಿವೆ.

ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಹೇಳಿಕೆ: “ಈ ಭಾಗದ ಮಾವು ರೈತರಿಗೆ ಅನುಕೂಲವಾಗಲಿ ಎಂದು ನಮ್ಮ ಇಲಾಖೆಯಿಂದ ಮಾವು ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೆವು. ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿತ್ತು. ಇದಕ್ಕೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಮಾವು ಅಭಿವೃದ್ಧಿ ಕೇಂದ್ರಕ್ಕೆ ಕೇಂದ್ರ ಅನುಮತಿ ನೀಡಿ, ಅನುದಾನ ಮಂಜೂರು ಮಾಡಿದೆ. ಮಾವು ಇಳುವರಿ ಹೆಚ್ಚಿಸಲು, ಸಂಶೋಧನೆ, ಕೋಲ್ಡ್ ಸ್ಟೋರೇಜ್, ಮಾರುಕಟ್ಟೆ ಸೌಲಭ್ಯ ಸೇರಿದಂತೆ ಇನ್ನಿತರೆ ಅನುಕೂಲಗಳನ್ನು ಬೆಳೆಗಾರರಿಗೆ ಈ ಕೇಂದ್ರದ ಮೂಲಕ ಒದಗಿಸಲಾಗುವುದು” ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಕಾಶಿನಾಥ ಭದ್ರಣ್ಣವರ ಮಾಹಿತಿ ನೀಡಿದರು.

ಸಂತಸ ವ್ಯಕ್ತಪಡಿಸಿದ ರೈತ: “ಜಿಲ್ಲೆಯ ಮಾವು ಬೆಳೆಗಾರರಿಗೆ ಮಾರುಕಟ್ಟೆ, ರಫ್ತು ಸೇರಿ ಹಲವು ಅನುಕೂಲಗಳನ್ನು ಮಾಡಿಕೊಡಲು ಮಾವು ಅಭಿವೃದ್ಧಿ ಕೇಂದ್ರ ಸ್ಥಾಪನೆ ಮಾಡುತ್ತಿರುವುದು ಒಳ್ಳೆಯದು. ಈ ರೀತಿಯ ಕೆಲಸಗಳು ಹೀಗೇ ಮುಂದುವರಿಯಬೇಕು” ಎಂದು ರೈತ ಮಂಜುನಾಥ ನಡಟ್ಟಿ ಪ್ರತಿಕ್ರಿಯಿಸಿದರು.

ದೇಶ

ಪಿಎಂ ಮೋದಿ ಆಗಸ್ಟ್ 10ರಂದು ಬೆಂಗಳೂರಿಗೆ: ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ

ಬೆಂಗಳೂರು: ನಮ್ಮ ಮೆಟ್ರೋ (Namma Metro) ಹಳದಿ ಮಾರ್ಗದ (Yellow Line) ಉದ್ಘಾಟನೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Modi) ಆಗಸ್ಟ್ 10ರಂದು ಬೆಂಗಳೂರಿಗೆ ಬರುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಧಾನಿಯವರು ಆಗಸ್ಟ್ 10ರಂದು ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟನೆ ಮಾಡುವ ಉದ್ದೇಶದಿಂದ ಬರುತ್ತಿದ್ದಾರೆ. ಅವರ ಭೇಟಿಗೆ ಸಿದ್ಧತೆಗಳು ನಡೆಯುತ್ತಿವೆ. ಟೈಮ್ ಟು ಟೈಮ್ ಕಾರ್ಯಕ್ರಮಗಳ ಬಗ್ಗೆ ಇನ್ನೂ ವಿವರ ಬಾಕಿಯಿದೆ,” ಎಂದು ಹೇಳಿದರು.

ವೈಭವದಿಂದ ಕಾರ್ಯಕ್ರಮ?
ಆದರೆ, ಮೂಲ ಯೋಜನೆಗೆ ಬದಲಾವಣೆ ಆಗಿದೆ. ಈಗ ಪ್ರಧಾನಿಯವರು ಕೇವಲ ಹಳದಿ ಮಾರ್ಗದ ಮೆಟ್ರೋ ಮತ್ತು ವಂದೇ ಭಾರತ್ ರೈಲು ಉದ್ಘಾಟನೆಗೆ ಮಾತ್ರ ಭಾಗಿಯಾಗಲಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ರೋಡ್ ಶೋ ಕಾರ್ಯಾಚರಣೆಗಳು ರದ್ದುಪಡಿಸಲಾಗಿದೆ.

ಇದರ ಪರಿಣಾಮವಾಗಿ, ಒಂದು ವರ್ಷದಿಂದ ಮೋದಿಯವರ ಆಗಮನದ ನಿರೀಕ್ಷೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರು ನಿರಾಸೆಗೊಳಗಾಗಿದ್ದಾರೆ ಎಂದು ವರದಿಯಾಗಿದೆ.

Continue Reading

ದೇಶ

ಭಾರತ vs ಅಮೆರಿಕ: ರಷ್ಯಾದ ತೈಲದ ಬಗ್ಗೆ ಉದ್ವಿಗ್ನತೆ, ಸೇನೆಯಿಂದ ತಿರುಗೇಟು

ಬೆಂಗಳೂರು: ರಷ್ಯಾದಿಂದ ಕಚ್ಚಾ ತೈಲ ಖರೀದಿಯ ಕುರಿತು ಭಾರತ-ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತಾಗಿದೆ. ಭಾರತ ರಷ್ಯಾದಿಂದ ತೈಲ ಆಮದು ಮಾಡುತ್ತಿರುವುದಕ್ಕೆ ಅಮೆರಿಕ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ಭಾರತೀಯ ಸೇನೆ ಅಮೆರಿಕದ ದ್ವೇಧಾಚರಣೆ ವಿರುದ್ಧ ತಿರುಗೇಟು ನೀಡಿದೆ.

ಸೋಷಿಯಲ್ ಮೀಡಿಯಾದಲ್ಲಿ “ಈ ದಿನ ಆ ವರ್ಷ – ಯುದ್ಧದ ನಿರ್ಮಾಣ – 05 ಆಗಸ್ಟ್ 1971” ಎಂಬ ಶೀರ್ಷಿಕೆಯಡಿ ಸೇನೆಯು 1971ರ ಯುದ್ಧದ ಕಾಲದ ಪತ್ರಿಕಾ ಕಟಿಂಗ್‌ ಹಂಚಿಕೊಂಡಿದೆ. 1954ರಿಂದ 1971ರವರೆಗೆ ಅಮೆರಿಕ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಪೂರೈಸಿದ ಬಗ್ಗೆ ಪೇಪರ್ ಕಟಿಂಗ್‌ ಉಲ್ಲೇಖಿಸುತ್ತಾ, “ಅಮೆರಿಕ ಪಾಕ್ ಪರ ಕೆಲಸ ಮಾಡಿತ್ತಲ್ಲವೆ?” ಎಂದು ಪ್ರಶ್ನಿಸಿದೆ.

ಇದು ಉಕ್ರೇನ್ ವಿರುದ್ಧದ ಯುದ್ಧಕ್ಕೆ ಭಾರತ ಹಣ ಒದಗಿಸುತ್ತಿದೆ ಎಂಬ ಅಮೆರಿಕದ ಆರೋಪಕ್ಕೆ ಪ್ರತಿಕ್ರಿಯೆಯಾಗಿದೆ. ಭಾರತವು ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದ ಟೀಕೆಗಳನ್ನು ‘ಅಸಮರ್ಥನೀಯ ಹಾಗೂ ಅಸಮಂಜಸ’ವೆಂದು ತಿರಸ್ಕರಿಸಿದೆ. ಭಾರತ ತನ್ನ ತೈಲ ನೀತಿಯನ್ನು ಆರ್ಥಿಕ ಶಕ್ತಿಯ ದೃಷ್ಟಿಯಿಂದ ಮುಂದುವರಿಸುತ್ತಿದೆ.

Continue Reading

ದೇಶ

ಸೇನೆ ಕುರಿತ ಹೇಳಿಕೆ: ಸುಪ್ರೀಂ ಕೋರ್ಟ್ ಟೀಕೆಗೆ ಪ್ರಿಯಾಂಕಾ ಗಾಂಧಿಯಿಂದ ಕಠಿಣ ಪ್ರತಿಕ್ರಿಯೆ

ನವದೆಹಲಿ: ಭಾರತೀಯ ಸೇನೆ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಇದೀಗ ಅವರ ಸಹೋದರಿ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.

ರಾಹುಲ್ ಗಾಂಧಿಯ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ಟೀಕೆಗೆ ಪ್ರತಿಕ್ರಿಯಿಸಿ ಪ್ರಿಯಾಂಕಾ ಗಾಂಧಿ,

“ಯಾರು ನಿಜವಾದ ಭಾರತೀಯರು ಎಂಬುದನ್ನು ನಿರ್ಧರಿಸಲು ನ್ಯಾಯಾಧೀಶರು ಯೋಗ್ಯರಲ್ಲ. ರಾಹುಲ್ ಗಾಂಧಿಗೆ ಭಾರತೀಯ ಸೇನೆಯ ಬಗ್ಗೆ ಅಪಾರ ಗೌರವವಿದೆ. ಅವರು ಎಂದಿಗೂ ಸೇನೆಯ ವಿರುದ್ಧ ಕೆಟ್ಟ ಮಾತುಗಳನ್ನು ಮಾತನಾಡಲ್ಲ,” ಎಂದು ತಿಳಿಸಿದ್ದಾರೆ.

ಗಲ್ವಾನ್ ಕಣಿವೆ ಸಂಘರ್ಷ ಕುರಿತು ಮಾತನಾಡಿದ ವೇಳೆ ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ‘ಅನುಚಿತ’ ಎಂದು ಖಂಡಿಸಿದ್ದು, “ನಿಜವಾದ ಭಾರತೀಯರು ಈ ರೀತಿ ಮಾತನಾಡುವುದಿಲ್ಲ” ಎಂದು ಹೇಳಿದ್ದಾರೆ. ಇದನ್ನು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದು, “ವಿರೋಧ ಪಕ್ಷದ ನಾಯಕರಾಗಿ ಸರ್ಕಾರವನ್ನು ಪ್ರಶ್ನಿಸುವುದು ರಾಹುಲ್ ಅವರ ಕರ್ತವ್ಯ. ನ್ಯಾಯಮೂರ್ತಿಗಳು ಇಂತಹ ಹೇಳಿಕೆ ನೀಡುವುದು ಸರಿಯಲ್ಲ,” ಎಂದಿದ್ದಾರೆ.

ಅದೇ ರೀತಿ, ಪ್ರಿಯಾಂಕಾ ಗಾಂಧಿ ಸರ್ಕಾರದ ನಡೆಗೆ ಶಂಕೆ ವ್ಯಕ್ತಪಡಿಸಿ,

“ರಾಹುಲ್ ಗಾಂಧಿಯ ಪ್ರಶ್ನೆಗಳಿಗೆ ಸರ್ಕಾರದ ಬಳಿ ಉತ್ತರಗಳಿಲ್ಲ. ಅವರು ಚರ್ಚೆಗೆ ತಯಾರಿಲ್ಲ. ಸಂಸತ್ತನ್ನು ಸರಿಯಾಗಿ ನಡೆಸಲಾಗುತ್ತಿಲ್ಲ. ಇದನ್ನೆಲ್ಲಾ ಮರೆಮಾಚಲು ಈ ರೀತಿಯ ತಂತ್ರಗಳನ್ನು ಬಳಸುತ್ತಿದ್ದಾರೆ,” ಎಂದು ವಾಗ್ದಾಳಿ ನಡೆಸಿದ್ದಾರೆ.

Continue Reading

Trending